ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸತತ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ಅನ್ನು (Union Budget 2024) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮಂಗಳವಾರ (ಜುಲೈ 22) ಮಂಡಿಸಲಿದ್ದಾರೆ. ಉದ್ಯೋಗಿಗಳು, ಬಡವರು, ಉದ್ಯಮಿಗಳಿಂದ ಹಿಡಿದು ಪ್ರತಿಯೊಬ್ಬರ ಗಮನವೂ ಕೇಂದ್ರ ಸರ್ಕಾರದ ಬಜೆಟ್ ಮೇಲಿದೆ. ಮಂಗಳವಾರ ಬೆಳಗ್ಗೆ 11 ಗಂಟೆಗೇ ನಿರ್ಮಲಾ ಸೀತಾರಾಮನ್ ಅವರು ಏಳನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಇನ್ನು, ಬಜೆಟ್‌ನ ಪ್ರತಿಕ್ಷಣದ ಮಾಹಿತಿಯನ್ನು ಲೈವ್ ವೀಕ್ಷಣೆ ಮೂಲಕ ಪಡೆಯಬಹುದಾಗಿದೆ.
ಲೈವ್ ಇಲ್ಲಿ ವೀಕ್ಷಿಸಿ
ಸಂಸತ್ ಟಿವಿ ಜತೆಗೆ ವಿಸ್ತಾರ ನ್ಯೂಸ್ ಚಾನೆಲ್‌ನಲ್ಲೂ ಬೆಳಗ್ಗೆಯಿಂದಲೇ ಲೈವ್ ಮಾಹಿತಿ, ಕ್ಷಣ ಕ್ಷಣದ ಅಪ್‌ಡೇಟ್, ಬಜೆಟ್ ಕುರಿತ ವಿಶ್ಲೇಷಣೆ ಇರಲಿದೆ. ವಿಸ್ತಾರ ನ್ಯೂಸ್ ವೆಬ್‌ಸೈಟ್‌ನಲ್ಲೂ ಪ್ರತಿಪಕ್ಷಣದ ಮಾಹಿತಿ ಲಭ್ಯವಾಗಲಿದೆ. ಮತ್ತೊಂದೆಡೆ, ಬಜೆಟ್‌ನಲ್ಲಿ ಏನೆಲ್ಲ ಘೋಷಣೆ ಮಾಡಲಾಗುತ್ತದೆ ಎಂಬ ನಿರೀಕ್ಷೆಗಳು ಹೆಚ್ಚಾಗಿವೆ. ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಹೊಸ ತೆರಿಗೆ (Income Tax) ಸ್ಲ್ಯಾಬ್‌ಅನ್ನು ಪರಿಚಯಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇದರ ಜತೆಗೆ ಸ್ಟಾಂಡರ್ಡ್ ಡಿಡಕ್ಷನ್ ಮೊತ್ತವನ್ನೂ ಏರಿಕೆ ಮಾಡುವ ನಿರೀಕ್ಷೆ ಇದೆ.
ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ
ನಿರ್ಮಲಾ ಸೀತಾರಾಮನ್ ಅವರು ಇಂದು ಪೂರ್ಣಪ್ರಮಾಣದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್ ಅವರು ಮುರಿಯಲಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Economic Survey 2023-24: ಉದ್ಯೋಗ ಸೃಷ್ಟಿ, ಕೃಷಿ ಏಳಿಗೆ; ಬಜೆಟ್‌ಗೂ ಮುನ್ನ ಕೇಂದ್ರದಿಂದ ಮಹತ್ವದ ಸುಳಿವು