Budget 2023: ಸಂಸತ್ತಿನಲ್ಲಿ ಇಂದು ಕೇಂದ್ರ ಬಜೆಟ್‌ ಮಂಡನೆ, ಜನಪರ ಘೋಷಣೆ ನಿರೀಕ್ಷೆ - Vistara News

ದೇಶ

Budget 2023: ಸಂಸತ್ತಿನಲ್ಲಿ ಇಂದು ಕೇಂದ್ರ ಬಜೆಟ್‌ ಮಂಡನೆ, ಜನಪರ ಘೋಷಣೆ ನಿರೀಕ್ಷೆ

2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಕೊನೆಯ ಪೂರ್ಣಪ್ರಮಾಣದ ಬಜೆಟ್‌ ಇದಾಗಿರುವುದರಿಂದ 2023-24ರ ಆಯವ್ಯಯ (Budget 2023) ಭಾರಿ ಗಮನ ಸೆಳೆದಿದೆ.

VISTARANEWS.COM


on

Economic growth strong after recovering from Covid, loan interest rates rise
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವ ದೆಹಲಿ: ‌ಕೇಂದ್ರ ಸರ್ಕಾರ ಫೆಬ್ರವರಿ 1ರಂದು ಬಹು ನಿರೀಕ್ಷಿತ 2023-24ರ ಸಾಲಿನ ಕೇಂದ್ರ ಬಜೆಟ್‌ ಅನ್ನು ಬುಧವಾರ ಮಂಡಿಸಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬೆಳಗ್ಗೆ 11 ಗಂಟೆಗೆ ಮುಂಗಡಪತ್ರ ಮಂಡಿಸಲಿದ್ದಾರೆ. 2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಕೊನೆಯ ಪೂರ್ಣ ಪ್ರಮಾಣದ ಬಜೆಟ್‌ ಇದಾಗಿದ್ದು, ಜನಪರ ಘೋಷಣೆಗಳನ್ನು ನಿರೀಕ್ಷಿಸಲಾಗಿದೆ.

ಜನ ಸಾಮಾನ್ಯರ ಆಶೋತ್ತರ ಈಡೇರಿಸಲಿದೆ: ಪ್ರಧಾನಿ ಮೋದಿ

PM Modi wished Republicday

ಬಜೆಟ್‌ ಜನ ಸಾಮಾನ್ಯ ಆಶೋತ್ತರಗಳನ್ನು ಈಡೇರಿಸುವ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ಸಂಸತ್ತಿನ ಜಂಟಿ ಅಧಿವೇಶನಕ್ಕೆ (Budget 2023) ಮುನ್ನ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಇಡೀ ವಿಶ್ವ ಈಗ ಭಾರತದ ಕಡೆಗೆ ಸಕಾರಾತ್ಮಕ ದೃಷ್ಟಿಕೋನದಿಂದ ಎದುರು ನೋಡುತ್ತಿದೆ. ವಿಶ್ವ ಸಮುದಾಯದಲ್ಲಿ ಭಾರತ ವಿಶ್ವಾಸಾರ್ಹ ತಾಣವಾಗಿದೆ ಎಂದು ಹೇಳಿದರು.

ಬಸವಣ್ಣನವರ ಕಾಯಕವೇ ಕೈಲಾಸ ನೀತಿಯನ್ನು ಸ್ಮರಿಸಿದ ರಾಷ್ಟ್ರಪತಿ

Draupadi Murmu 1

ಭಾರತವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕಾಲಿಟ್ಟಿದ್ದು, ಜಾಗತಿಕವಾಗಿ ಏಳಿಗೆ ಹೊಂದುತ್ತಿದೆ. ಇನ್ನಷ್ಟು ಆತ್ಮನಿರ್ಭರ ಸಾಧಿಸುವ ದಿಸೆಯಲ್ಲಿ ಕಾರ್ಯನಿರ್ವಹಿಸುವ ಅವಶ್ಯಕತೆ ಇದ್ದು, ಎಲ್ಲರೂ ಒಗ್ಗೂಡಿ ದೇಶದ ಏಳಿಗೆ ದೃಷ್ಟಿಯಿಂದ ಶ್ರಮಿಸೋಣ. ಮುಂದಿನ ವರ್ಷಗಳಲ್ಲಿ ಭಾರತದ ಏಳಿಗೆ ಮತ್ತೊಂದು ಹಂತ ತಲುಪಲಿದೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು (Budget 2023) ಹೇಳಿದರು. ದ್ರೌಪದಿ ಮುರ್ಮು ಅವರು ಬಜೆಟ್‌ ಅಧಿವೇಶನ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ಮಾತನಾಡಿದರು. ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದಾರೆ. ಅಂದರೆ, ಕೆಲಸ ಮಾಡುವುದರಲ್ಲೇ ದೇವರನ್ನು ಕಾಣುವುದು ಎಂಬುದು ಅವರ ಮಾತಿನ ತಾತ್ಪರ್ಯವಾಗಿದೆ. ಹಾಗಾಗಿ, ಸರ್ಕಾರ ಹಾಗೂ ದೇಶದ ಜನ ಬಸವಣ್ಣನವರ ತತ್ವವನ್ನು ಅಳವಡಿಸಿಕೊಂಡು ಮುಂದೆ ಸಾಗಬೇಕು” ಎಂದು ಕರೆ ನೀಡಿದರು. “ದೇಶದಲ್ಲೀಗ ಭ್ರಷ್ಟಾಚಾರ ನಿಗ್ರಹವಾಗಿದ್ದು, ಜಿಎಸ್‌ಟಿಯಂತಹ ತೆರಿಗೆ ಸುಧಾರಣೆ ಜಾರಿಗೆ ತರಲಾಗಿದೆ. ಪಾರದರ್ಶಕತೆಯನ್ನು ಅಳವಡಿಸಿಕೊಳ್ಳಲಾಗಿದೆ. ಇದರಿಂದಾಗಿ ಜಾಗತಿಕ ಮಟ್ಟದಲ್ಲಿ ದೇಶದ ಚಹರೆ ಬದಲಾಗಿದೆ” ಎಂದರು.

ಆರ್ಥಿಕ ಸಮೀಕ್ಷೆ ಸಕಾರಾತ್ಮಕ, ಆಶಾದಾಯಕ

GDP growth likely to be 6% to 6.8% in 2023-24: Economic Survey reveals

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸಂಸತ್ತಿನಲ್ಲಿ ಮಂಗಳವಾರ ಮಂಡಿಸಿರುವ 2023ರ ಆರ್ಥಿಕ ಸಮೀಕ್ಷೆಯು ಭಾರತದ ಆರ್ಥಿಕತೆ ಕೋವಿಡ್‌ ಬಿಕ್ಕಟ್ಟಿನಿಂದ ಸಂಪೂರ್ಣ ಚೇತರಿಸಿದೆ. ಜಗತ್ತಿನಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುಂದುವರಿಯಲಿದೆ. ಹಾಗೂ ಜಿಡಿಪಿ ಬೆಳವಣಿಗೆ 2022-23ರಲ್ಲಿ 7%ಕ್ಕೆ ಏರಿಕೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.

ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್‌ ನೇತೃತ್ವದ ತಂಡ ಸಿದ್ಧಪಡಿಸಿರುವ ಆರ್ಥಿಕ ಸಮೀಕ್ಷೆ ಪ್ರಕಾರ, ಜಾಗತಿಕ ಬಿಕ್ಕಟ್ಟಿನ ಹೊರತಾಗಿಯೂ 2023ರಲ್ಲಿ ಭಾರತ ಪ್ರಬಲ ಹಾಗೂ ವೇಗವಾಗಿ ಬೆಳೆಯುತ್ತಿರುವ ಎಕಾನಮಿಯಾಗಿ ಹೊರಹೊಮ್ಮಲಿದೆ. ಹೀಗಿದ್ದರೂ, ಭಾರತದ ಸಾಲದ ಬಡ್ಡಿ ದರ ಏರುಗತಿಯಲ್ಲಿ ಮುಂದುವರಿಯಬಹುದು ಹಾಗೂ ಹಣದುಬ್ಬರ ಸವಾಲು ಕೂಡ ಇರಬಹುದು ಎಂದು ತಿಳಿಸಿದೆ.

ಆದಾಯ ತೆರಿಗೆ ವಿನಾಯಿತಿ ಮಿತಿ ವಿಸ್ತರಣೆ ನಿರೀಕ್ಷೆ:

ಆದಾಯ ತೆರಿಗೆ ದರಗಳು ಮತ್ತು ಆದಾಯ ತೆರಿಗೆ ಶ್ರೇಣಿಗಳಲ್ಲಿ ಕೆಲ ಬದಲಾವಣೆಗಳು, ತೆರಿಗೆ ವಿನಾಯಿತಿ ಮಿತಿಯ ವಿಸ್ತರಣೆ, ಸ್ಟ್ಯಾಂಡರ್ಡ್‌ ಡಿಡಕ್ಷನ್‌ ಮಿತಿ ವಿಸ್ತರಣೆಯ ನಿರೀಕ್ಷೆ ಜನ ಸಾಮಾನ್ಯರಲ್ಲಿದೆ.

ಬೆಲೆ ಏರಿಕೆಯಿಂದ ಸಿಗಲಿದೆಯೇ ರಿಲೀಫ್?

cash

ವಿದ್ಯುತ್‌ ಬಿಲ್‌ಗೆ ಸಬ್ಸಿಡಿ, ಬೆಲೆ ಏರಿಕೆಯಿಂದ ರಿಲೀಫ್‌ ಅನ್ನು ಜನ ಸಾಮಾನ್ಯರು ಬಯಸುತ್ತಿದ್ದಾರೆ. ಜಾಗತಿಕ ಆರ್ಥಿಕತೆ ಮಂದಗತಿಯಲ್ಲಿ ಇರುವುದರಿಂದ ಬಿಸಿನೆಸ್‌ ಸಮುದಾಯ ಅನಿಶ್ಚಿತತೆ ಎದುರಿಸುತ್ತಿದೆ. ಹೀಗಾಗಿ ಉದ್ದಿಮೆ ಸ್ನೇಹಿ ಉಪಕ್ರಮಗಳನ್ನು ಕೈಗೊಳ್ಳುವ ನಿರೀಕ್ಷೆಯೂ ಇದೆ.

ವೇತನದಾರರ ನಿರೀಕ್ಷೆ ಏನು?

ವೇತನದಾರರು ಆದಾಯ ತೆರಿಗೆ ವಿನಾಯಿತಿಯ ಮಿತಿ ವಿಸ್ತರಣೆ, ಸ್ಟ್ಯಾಂಡರ್ಡ್‌ ಡಿಡಕ್ಷನ್‌ ಮಿತಿಯನ್ನು ಈಗಿನ 50,000 ರೂ.ಗಳಿಂದ 1 ಲಕ್ಷ ರೂ.ಗೆ ಏರಿಕೆ ನಿರೀಕ್ಷಿಸುತ್ತಿದ್ದಾರೆ. ಈ ನಡುವೆ ಸಣ್ಣ ತೆರಿಗೆದಾರರಿಗೆ ರಿಲೀಫ್‌ ನೀಡಬೇಕು ಎಂದು ಕೈಗಾರಿಕಾ ವಲಯದ ಸಂಘಟನೆ ಫಿಕ್ಕಿ ಒತ್ತಾಯಿಸಿದೆ.

ಐಎಂಎಫ್‌ ನುಡಿದ ಭವಿಷ್ಯ: ಭಾರತ ಮತ್ತು ಚೀನಾ 2023ರಲ್ಲಿ ಪ್ರಬಲ ಆರ್ಥಿಕತೆಗಳಾಗಿ ನಿರ್ಣಾಯಕ ಪಾತ್ರ ವಹಿಸಲಿದೆ. ಜಾಗತಿಕ ಬೆಳವಣಿಗೆಯಲ್ಲಿ 50% ಪಾಲನ್ನು ವಹಿಸಲಿವೆ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಐಎಂಎಫ್‌ (IMF) ತನ್ನ ವರದಿಯಲ್ಲಿ ತಿಳಿಸಿದೆ. ಅಮೆರಿಕ ಮತ್ತು ಯುರೋಪ್‌ ಕೇವಲ 10ರಲ್ಲಿ ಒಂದು ಭಾಗವನ್ನು ಮಾತ್ರ ವಹಿಸಲಿವೆ ಎಂದಿರುವುದು ಗಮನಾರ್ಹ.

ಇದನ್ನೂ ಓದಿ: Budget 2023: ದಿನಾಂಕ, ಸಮಯ, ನಿರೀಕ್ಷೆಗಳು, ಯಾವಾಗ, ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ವಿವರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಯುದ್ಧವಿರಾಮ ಅನಿರ್ದಿಷ್ಠಾವಧಿಗೆ ವಿಸ್ತರಣೆ: ಡೋನಾಲ್ಡ್ ಟ್ರಂಪ್‌ ಘೋಷಣೆ

VISTARANEWS.COM


on

Donald trump

ವಾಷಿಂಗ್ಟನ್‌: ಅಮೆರಿಕಾ-ಇಸ್ರೇಲ್‌- ಇರಾನ್‌ ನಡುವಿನ ಯುದ್ಧ ವಿರಾಮಕ್ಕೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇವೆ. ಅಷ್ಟರೊಳಗೆ ಯುದ್ಧ ವಿರಾಮ ಅನಿರ್ದಿಷ್ಠಾವಧಿಗೆ ವಿಸ್ತರಣೆಯಾಗಿದೆ.


ಈ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ ನಲ್ಲಿ ಈ ವಿಷಯ ತಿಳಿಸಿರುವ ಅಮೆರಿಕಾ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಇರಾನ್‌ ನಾಯಕರು ಮತ್ತು ಅವರ ಪ್ರತಿನಿಧಿಗಳು ಏಕರೂಪದ ಪ್ರಸ್ತಾವನೆಯೊಂದಿಗೆ ಬರುವವರೆಗೆ ಯುದ್ಧ ವಿರಾಮ ಮುಂದುವರಿಸುತ್ತೇನೆ ಎಂದಿದ್ದಾರೆ.


ಶಾಂತಿ ಮಾತುಕತೆಯ ಮಧ್ಯಸ್ಥಿಕೆ ವಹಿಸಿರುವ ಪಾಕಿಸ್ತಾನ್‌ ಮನವಿಯನ್ನು ತಾನು ಒಪ್ಪಿಕೊಂಡಿರುವುದಾಗೆ ಟ್ರಂಪ್‌ ಸ್ಪಷ್ಟಪಡಿಸಿದ್ದಾರೆ. ಇರಾನ್‌ ಸರ್ಕಾರ ಗಂಭೀರವಾಗಿ ಹಾನಿಗೀಡಾಗಿದೆ. ಹೀಗಾಗಿ ಯುದ್ಧ ವಿರಾಮ ವಿಸ್ತರಿಸುತ್ತಿದ್ದೇನೆ ಹೊರತು ಇದು ಅನಿರಿಕ್ಷಿತವಲ್ಲ ಎಂದು ಹೇಳಿಕೊಂಡಿದ್ದಾರೆ.
ಕಳೆದ ಫೆ.28 ಅಮೆರಿಕಾ-ಇಸ್ರೇಲ್‌ ಜಂಟಿಯಾಗಿ ಇರಾನ್‌ ವಿರುದ್ಧ ಯುದ್ಧ ಆರಂಭಿಸಿದ್ದವು. ಈ ಹಿಂದೆ ಇರಾನ್‌ ನ ವಿದ್ಯುತ್‌ ಸ್ಥಾವರಗಳು, ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲೆ ಬಾಂಬ್‌ ದಾಳಿ ನಡೆಸುವುದಾಗಿ ಟ್ರಂಪ್‌ ಗುಡುಗಿದ್ದರು. ಇದನ್ನು ಅಂತರ ರಾಷ್ಟ್ರೀಯ ಕಾನೂನಿನಲ್ಲಿ ಇದಕ್ಕೆ ಅವಕಾಶ ಇಲ್ಲ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ಮತ್ತಿತರ ದೇಶಗಳ ಮುಖಂಡರು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Continue Reading

Latest

ವೈರಲ್ ಬೆಡಗಿ ಕುಂಭಮೇಳದ ಮೋನಾಲಿಸಾ ಬಗ್ಗೆ ಬಿಗ್ ಅಪ್ಡೇಟ್: ಪತ್ನಿ ಗರ್ಭಿಣಿ ಎಂದು ಪೊಲೀಸರಿಗೆ ಪತಿ ಫರ್ಮಾನ್ ಮಾಹಿತಿ

VISTARANEWS.COM


on

ಕುಂಭಮೇಳದಲ್ಲಿ ರುದ್ರಾಕ್ಷಿ ಮಾರಾಟ ಮಾಡುತ್ತಿದ್ದ ಫೋಟೋ ವೈರಲ್ ಆಗುವ ಮೂಲಕ ರಾತ್ರೋರಾತ್ರಿ ಇಂಟರ್ನೆಟ್‌ ಸೆಲೆಬ್ರಿಟಿಯಾಗಿದ್ದ ಮೋನಾಲಿಸಾ ಭೋಸ್ಲೆ ಈಗ ಮತ್ತೊಂದು ದೊಡ್ಡ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಕೇರಳದ ದೇವಸ್ಥಾನವೊಂದರಲ್ಲಿ ಫರ್ಮಾನ್ ಖಾನ್ ಎಂಬಾತನನ್ನು ವಿವಾಹವಾಗಿದ್ದ ಮೋನಾಲಿಸಾ, ಅಂದಿನಿಂದಲೂ ಅಂತರಧರ್ಮೀಯ ವಿವಾಹ ಮತ್ತು ವಯಸ್ಸಿನ ಕಾರಣಕ್ಕೆ ಸುದ್ದಿಯಲ್ಲಿದ್ದರು. ಇದೀಗ ಆಕೆ ಗರ್ಭಿಣಿಯಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿಯನ್ನು ಆಕೆಯ ಪತಿ ಫರ್ಮಾನ್ ಪೊಲೀಸರಿಗೆ ನೀಡಿದ್ದು, ಪ್ರಕರಣಕ್ಕೆ ಹೊಸ ತಿರುವು ಲಭಿಸಿದೆ.

ವಾಸ್ತವವಾಗಿ, ಈ ಮದುವೆಯನ್ನು ಮೋನಾಲಿಸಾ ಕುಟುಂಬದವರು ತೀವ್ರವಾಗಿ ವಿರೋಧಿಸಿದ್ದು, ಇದನ್ನು ‘ಲವ್ ಜಿಹಾದ್’ ಎಂದು ಆರೋಪಿಸಿದ್ದರು. ಅಷ್ಟೇ ಅಲ್ಲದೆ, ಮದುವೆಯ ಸಮಯದಲ್ಲಿ ಮೋನಾಲಿಸಾ ಅಪ್ರಾಪ್ತ ವಯಸ್ಕಳಾಗಿದ್ದರು ಎಂದು ಕುಟುಂಬದವರು ದೂರು ನೀಡಿದ್ದರು. ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ (NCST) ನಡೆಸಿದ ತನಿಖೆಯಲ್ಲಿ ಮೋನಾಲಿಸಾಗೆ ಕೇವಲ 16 ವರ್ಷ ಎಂದು ತಿಳಿದುಬಂದ ಹಿನ್ನೆಲೆಯಲ್ಲಿ, ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಾಗಿದೆ. ಪ್ರಸ್ತುತ ಕೇರಳ ಹೈಕೋರ್ಟ್ ಫರ್ಮಾನ್ ಬಂಧನಕ್ಕೆ ಮೇ 20ರವರೆಗೆ ತಡೆಯಾಜ್ಞೆ ನೀಡಿದೆ.

ಇತ್ತೀಚೆಗೆ ಮಧ್ಯಪ್ರದೇಶ ಪೊಲೀಸರು ವಿಚಾರಣೆಗಾಗಿ ಮೋನಾಲಿಸಾರನ್ನು ಹಾಜರುಪಡಿಸುವಂತೆ ಸೂಚಿಸಿದಾಗ, ಆಕೆ ಗರ್ಭಿಣಿಯಾಗಿರುವ ಕಾರಣ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಫರ್ಮಾನ್ ತಿಳಿಸಿದ್ದಾರೆ. ಈ ಹೇಳಿಕೆಯು ತನಿಖಾಧಿಕಾರಿಗಳಲ್ಲಿ ಕುತೂಹಲ ಮೂಡಿಸಿದ್ದು, ಫರ್ಮಾನ್ ನೀಡಿರುವ ಮಾಹಿತಿಯನ್ನು ಪೊಲೀಸರು ಈಗ ವೈದ್ಯಕೀಯ ವರದಿಗಳ ಮೂಲಕ ಪರಿಶೀಲಿಸುತ್ತಿದ್ದಾರೆ. ವೈದ್ಯಕೀಯ ತಪಾಸಣೆಯ ನಂತರವಷ್ಟೇ ಮುಂದಿನ ಕಾನೂನು ಕ್ರಮಗಳ ಬಗ್ಗೆ ಸ್ಪಷ್ಟತೆ ಸಿಗಲಿದ್ದು, ಈ ಹೈಪ್ರೊಫೈಲ್ ಪ್ರಕರಣವು ಈಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

Continue Reading

Latest

ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಟೀಕಿಸಿದ ಖರ್ಗೆ; ಕ್ಷಮೆ ಯಾಚನೆಗೆ ಯಡಿಯೂರಪ್ಪ ಆಗ್ರಹ

VISTARANEWS.COM


on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅರನ್ನು ‘ಭಯೋತ್ಪಾದಕ’ ಎಂದು ಟೀಕಿಸಿರುವ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹಿರಿಯ ಬಿಜೆಪಿ ಮಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಎಕ್ಸ್‌ ನಲ್ಲಿ ಅವರು ವಿವರವಾದ ಹೇಳಿಕೆ ನೀಡಿದ್ದು, ಇಂತಹ ಹೇಳಿಕೆ ನಿಮ್ಮ ಅಹಂಕಾರವನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ತಮ್ಮ ಹೇಳಿಕೆಗೆ ಕೂಡಲೇ ಕ್ಷಮೆಯಾಚಿಸಬೇಕು ಎಂದೂ ಆಗ್ರಹಪಡಿಸಿದ್ದಾರೆ.


ತೀರಾಕೀಳು ಮಟ್ಟದಲ್ಲಿ ನೀವು ನೀಡಿರುವ ಹೇಳಿಕೆ ನಿಮ್ಮ ದುರಹಂಕಾರದ ಪರಮಾವಧಿ ಮಾತ್ರವಲ್ಲ, ಅದು ನಿಮ್ಮ ಕೊಳಕು, ವಿಷಕಾರಿ ಮನಸ್ಥಿತಿಯನ್ನು ಅನಾವರಣಗೊಳಿಸಿದೆ. ಖರ್ಗೆಯವರೇ, ಪ್ರಧಾನಿ ಮೋದಿ ರವರ ನಾಯಕತ್ವದ ಮೇಲೆ ಅಚಲ ವಿಶ್ವಾಸವಿಟ್ಟು ಭಾರತದ ಜನತೆ ಸತತ ಮೂರನೇ ಬಾರಿಗೆ ಅವರನ್ನು ಪ್ರಧಾನಿ ಪೀಠದಲ್ಲಿ ಕೂರಿಸಿದ್ದಾರೆ. ಅವರನ್ನು ಟೀಕಿಸುವ ಭರದಲ್ಲಿ ಹೀಗೆ ಅವಮಾನಿಸುವುದು ಎಂದರೆ ಮೋದಿ ರವರನ್ನು ಬೆಂಬಲಿಸಿದ ಕೋಟ್ಯಂತರ ಭಾರತೀಯರನ್ನು ಅಪಮಾನಿಸಿದಂತೆ! ಕಾಂಗ್ರೆಸ್ ನಾಯಕರಿಗೆ ಇಂತಹ ದುರ್ವರ್ತನೆ ಅಭ್ಯಾಸವಾಗಿಬಿಟ್ಟಿದೆ. ಚುನಾವಣೆ ಬಂದಾಗಲೆಲ್ಲ ಇಂತಹ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದು, ಜನರು ನಿಮಗೆ ಪಾಠ ಕಳಿಸುತ್ತಲೇ ಬಂದಿದ್ದಾರೆ. ಆದರೂ ತಿದ್ದಿಕೊಳ್ಳದ ನಿಮ್ಮ ವರ್ತನೆ ನಿಮ್ಮ ಅಹಂಕಾರಕ್ಕೆ ಕನ್ನಡಿ ಹಿಡಿದಿದೆ.


ಖರ್ಗೆಯವರೇ, ಭಾರತದ ಪ್ರಧಾನಿ @narendramodi ರವರು ಅಪ್ರತಿಮ ಜಾಗತಿಕ ನಾಯಕ ಎಂದು ವಿಶ್ವದ ಹಲವಾರು ದೇಶಗಳ ನೇತಾರರು ಕೊಂಡಾಡುತ್ತಿದ್ದಾರೆ. ವಿಶ್ವದ 26ಕ್ಕೂ ಅಧಿಕ ರಾಷ್ಟ್ರಗಳು ತಮ್ಮ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ನೀಡಿ ಮೋದಿ ಅವರನಾಯಕತ್ವವನ್ನು ಗೌರವಿಸಿವೆ. ಇಡೀ ಜಗತ್ತೇ ಭಾರತದತ್ತ ಹೆಮ್ಮೆಯಿಂದ ನೋಡುತ್ತಿರುವಾಗ, ಕೇವಲ ನಿಮ್ಮ ರಾಜಕೀಯ ವೈಷಮ್ಯಕ್ಕಾಗಿ ದೇಶದ ಪ್ರಧಾನಮಂತ್ರಿಗಳ ಬಗ್ಗೆ ಇಷ್ಟು ಕೀಳುಮಟ್ಟದ ಶಬ್ದಗಳನ್ನು ಬಳಸುವುದು, ನಿಮ್ಮ ಕೀಳು ಮನಸ್ಥಿತಿಯನ್ನು ಮತ್ತು ನಿಮ್ಮ ರಾಜಕೀಯ ಹತಾಶೆಯನ್ನು ಸಾಬೀತುಪಡಿಸಿದೆ. ಅಧಿಕಾರದ ಹಪಾಹಪಿಯಲ್ಲಿ, ಒಂದು ಮನೆತನವನ್ನು ಸಂತೋಷಪಡಿಸುವ ಭರದಲ್ಲಿ ನಿಮ್ಮ ಘನತೆಯನ್ನು ಕಳೆದುಕೊಂಡಿದ್ದೀರಿ. ಹಿರಿಯರಾದ ನಿಮ್ಮಿಂದ ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನಾಡಿನ ಜನತೆ ಎಂದಿಗೂ ಕ್ಷಮಿಸುವುದಿಲ್ಲ. ಇಂತಹ ಕೀಳು ಮಟ್ಟದ ಅಸಂಬದ್ಧ ಹೇಳಿಕೆಗೆ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.

Continue Reading

Latest

ಗುಜರಾತ್‌ ನಲ್ಲಿ ಬೃಹತ್‌ ಸೈಬರ್‌ ವಂಚನೆ ಜಾಲ ಪತ್ತೆ: 2,500 ಕೋಟಿ ಹಣ ವಂಚನೆ

VISTARANEWS.COM


on

ಗುಜರಾತ್‌: ಗುಜರಾತ್‌ನಲ್ಲಿ ಪತ್ತೆಯಾದ ಈ ಬೃಹತ್ ಸೈಬರ್ ವಂಚನೆ ಪ್ರಕರಣವು ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಆತಂಕಕ್ಕೆ ತಳ್ಳಿದೆ. ಸುಮಾರು 2,500 ಕೋಟಿ ರೂ. ಮೊತ್ತದ ಈ ಹಗರಣದಲ್ಲಿ ಭಾಗಿಯಾಗಿದ್ದ 20 ಆರೋಪಿಗಳನ್ನು ರಾಜ್‌ಕೋಟ್ ಪೊಲೀಸರು ಬಂಧಿಸಿದ್ದು, ಇವರಲ್ಲಿ ಎಚ್.ಡಿಎಫ್.ಸಿ, ಯೆಸ್ ಮತ್ತು ಆಕ್ಸಿಸ್ ಬ್ಯಾಂಕ್‌ನಂತಹ ಪ್ರತಿಷ್ಠಿತ ಸಂಸ್ಥೆಗಳ ಅಧಿಕಾರಿಗಳೂ ಸೇರಿರುವುದು ಗಂಭೀರ ವಿಚಾರವಾಗಿದೆ.

ಈ ಬ್ಯಾಂಕ್ ಅಧಿಕಾರಿಗಳು ಸೈಬರ್ ಕ್ರಿಮಿನಲ್‌ಗಳೊಂದಿಗೆ ಶಾಮೀಲಾಗಿ, ನಕಲಿ ದಾಖಲೆಗಳನ್ನು ಬಳಸಿ ಸುಮಾರು 85ಕ್ಕೂ ಹೆಚ್ಚು ‘ಮ್ಯೂಲ್ ಅಕೌಂಟ್’ಗಳನ್ನು (ನಕಲಿ ಖಾತೆ) ತೆರೆದಿದ್ದರು. ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ದೊಡ್ಡ ಮೊತ್ತದ ಹಣ ವರ್ಗಾವಣೆ ಮಾಡುತ್ತಿದ್ದ ಇವರು, ವ್ಯವಸ್ಥೆಯಲ್ಲಿ ಬರುವ ಎಚ್ಚರಿಕೆಗಳನ್ನು (Internal Alerts) ಬೇಕೆಂದೇ ನಿರ್ಲಕ್ಷಿಸುತ್ತಿದ್ದರು. ಬಳಿಕ ಈ ಹಣವನ್ನು ಹವಾಲಾ ದಂಧೆಯ ಮೂಲಕ ಬೇರೆಡೆ ರವಾನಿಸಿ, ವಂಚಕರಿಂದ ದೊಡ್ಡ ಮೊತ್ತದ ಕಮಿಷನ್ ಪಡೆಯುತ್ತಿದ್ದರು.

ಗೊಂಡಲ್ ಮಾರ್ಕೆಟಿಂಗ್ ಯಾರ್ಡ್‌ನ ಕಂಪನಿಯೊಂದರ ಖಾತೆಯಲ್ಲಿ ನಡೆದ 200 ಕೋಟಿ ರೂ.ಗಳ ಸಂಶಯಾಸ್ಪದ ವ್ಯವಹಾರವು ಈ ಮಹಾ ಹಗರಣವನ್ನು ಬಯಲಿಗೆಳೆದಿದೆ. ಪ್ರಸ್ತುತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 535 ದೂರುಗಳು ದಾಖಲಾಗಿದ್ದು, 35 ನಕಲಿ ಸಂಸ್ಥೆಗಳನ್ನು ಪೊಲೀಸರು ಗುರುತಿಸಿದ್ದಾರೆ. ತನಿಖೆ ಮುಂದುವರಿದಂತೆ ಇನ್ನೂ ಹೆಚ್ಚಿನ ಬ್ಯಾಂಕ್ ನೌಕರರು ಸಿಕ್ಕಿಬೀಳುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading
Advertisement
Latest3 hours ago

ಫರ್ಮಾನ್ ಖಾನ್ ಜೊತೆ ಮದುವೆಯಾದ ಒಂದೇ ತಿಂಗಳಲ್ಲಿ ಮೊನಾಲಿಸಾ ಭೋಸ್ಲೆ ಗರ್ಭಿಣಿ!

Latest3 hours ago

ಎಸ್ಎಸ್ಎಲ್‌ಸಿ: ಹಿಂದಿಗೆ ಈ ಬಾರಿ ಗ್ರೇಡ್‌ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

Latest4 hours ago

ಇರಾನ್‌ ಸರಕು ಸಾಗಣೆ ಹಡಗಿನ ಮೇಲೆ ಗುಂಡಿನ ದಾಳಿ: ಅಮೆರಿಕ ವಿರುದ್ಧ ಆಕ್ರೋಶ

Latest4 hours ago

ಹೋಮ್‌ಸ್ಟೇನಲ್ಲಿ ಅತ್ಯಾಚಾರ: ಸುತ್ತೋಲೆ ಹೊರಡಿಸಲಾಗಿದೆ ಎಂದ ಸಚಿವ ಪರಮೇಶ್ವರ್‌

Latest5 hours ago

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

Latest5 hours ago

ಸಚಿವ ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ; “ಧಾರವಾಡ ಆಕಾಶವಾಣಿ ಕೇಂದ್ರ” ಸ್ಥಳಾಂತರಿಸದಿರಲು ನಿರ್ಧಾರ

Latest5 hours ago

ಚಿನ್ನ ಕಳ್ಳ ಸಾಗಣೆ: ನಟಿ ರನ್ಯಾರಾವ್‌ ಗೆ ಸಿಕ್ತು ಜಾಮೀನು

Latest5 hours ago

ತಮಿಳುನಾಡು: ಯಾರು ಹಿತವರು ಈ ಮೂವರೊಳಗೆ?:dmk; aiadmk; tvk

Latest6 hours ago

ಗೋಲ್ಡ್ ಸ್ಮಗ್ಲಿಂಗ್ ಹಗರಣ: ನಟಿ ರನ್ಯಾ ರಾವ್​​ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ!

ಅವಿಭಾಗೀಕೃತ6 hours ago

“ನಿಮ್ಮಿಂದಲೇ ಟ್ರಾಫಿಕ್‌ ಜಾಮ್!‌ ಗೆಟ್‌ ಔಟ್‌” ಎಂದು ಸಚಿವರನ್ನು ನಿಂದಿಸಿದ ಮಹಿಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌