ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31ರಿಂದ ಆರಂಭವಾಗಲಿದ್ದು, ಫೆಬ್ರವರಿ 1ರಂದು (Union Budget 2023) ಬಜೆಟ್ ಮಂಡನೆಯಾಗಲಿದೆ. ಜನವರಿ 31ರಿಂದ ಏಪ್ರಿಲ್ 6ರವರೆಗೆ ಅಧಿವೇಶನ ನಡೆಯಲಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿವೇಶನದ ಮೊದಲ ದಿನ ಅವರು ಸಂಸತ್‌ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದಾದ ಬಳಿಕ ಎರಡೂ ಸದನಗಳಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು ಬಜೆಟ್ ಮಂಡಿಸಲಿದ್ದು, ಮೊದಲ ಹಂತದ ಅಧಿವೇಶನ ಫೆಬ್ರವರಿ 10ರವರೆಗೆ ನಡೆಯಲಿದೆ. ಎರಡನೇ ಹಂತದ ಅಧಿವೇಶನವು ಮಾರ್ಚ್ 6ರಿಂದ ಏಪ್ರಿಲ್ 6ರವರೆಗೆ ನಡೆಯಲಿದೆ.
ಇದನ್ನೂ ಓದಿ | Union Budget 2023 | ಬಜೆಟ್‌ನಲ್ಲಿ 400 ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಘೋಷಣೆ ನಿರೀಕ್ಷೆ