Site icon Vistara News

FRP Hike: ರೈತರಿಗೆ ಮೋದಿ ಗುಡ್‌ನ್ಯೂಸ್;‌ ಕಬ್ಬಿನ ಪ್ರೋತ್ಸಾಹಧನ 25 ರೂ. ಏರಿಕೆ

Narendra Modi

Jammu Kashmir assembly polls soon, statehood to be restored; Says PM Narendra Modi In Udhampur

ನವದೆಹಲಿ: ಪಂಜಾಬ್‌ ಹಾಗೂ ಹರಿಯಾಣ ಗಡಿಯಲ್ಲಿ ಸಾವಿರಾರು ರೈತರು ಪ್ರತಿಭಟನೆ (Farmers Protest) ನಡೆಸುತ್ತಿದ್ದಾರೆ. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ನೀಡುವ ಕಾನೂನು ಜಾರಿಗೊಳಿಸಬೇಕು ಎಂಬುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಯು ಹಿಂಸಾರೂಪ ತಾಳಿದೆ. ಇದರ ಬೆನ್ನಲ್ಲೇ, ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಬ್ಬಿಗೆ ನೀಡುವ ನ್ಯಾಯಯುತ ಹಾಗೂ ಪ್ರೋತ್ಸಾಹಧನವನ್ನು (FRP Hike) ಕ್ವಿಂಟಾಲ್‌ಗೆ 25 ರೂ. ಏರಿಕೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಕಬ್ಬಿನ ನ್ಯಾಯಯುತ ಹಾಗೂ ಪ್ರೋತ್ಸಾಹಧನವನ್ನು 25 ರೂ. ಏರಿಸಲು ತೀರ್ಮಾನಿಸಲಾಗಿದೆ. ಇದರಿಂದಾಗಿ 2024-25ನೇ ಸಾಲಿನ ಅಕ್ಟೋಬರ್‌ನಿಂದ ಕಬ್ಬಿನ ಮಾರಾಟ ಆರಂಭವಾಗಲಿದ್ದು, ರೈತರು ಕ್ವಿಂಟಾಲ್‌ಗೆ 315 ರೂ. ಬದಲಾಗಿ 340 ರೂ. ನ್ಯಾಯಯುತ ಹಾಗೂ ಪ್ರೋತ್ಸಾಹಧನ ಪಡೆಯಲಿದ್ದಾರೆ. ಲೋಕಸಭೆ ಚುನಾವಣೆಗೂ ಮೊದಲೇ ಕೇಂದ್ರ ಸರ್ಕಾರವು ಕಬ್ಬಿನ ಪ್ರೋತ್ಸಾಹಧನವನ್ನು ಹೆಚ್ಚಿಸಿದ್ದು, ಹಲವು ರೀತಿಯಲ್ಲಿ ವಿಶ್ಲೇಷಣೆ ಮಾಡಲಾಗುತ್ತಿದೆ. ರಾಜಕೀಯದ ಹೊರತಾಗಿ ಕೇಂದ್ರ ಸರ್ಕಾರದ ತೀರ್ಮಾನದಿಂದ ರೈತರಿಗೆ ಅನುಕೂಲವಾಗಲಿದೆ.

ಏನಿದು ಎಫ್‌ಆರ್‌ಪಿ?

ನ್ಯಾಯಯುತ ಹಾಗೂ ಲಾಭದಾಯಕ ಬೆಲೆ (Fair and Remunerative Price) ಎಂಬುದು ಕಬ್ಬು ಖರೀದಿಸುವ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ನೀಡುವ ಪ್ರೋತ್ಸಾಹ ಧನವಾಗಿದೆ. ಇದನ್ನು ಕೇಂದ್ರ ಸರ್ಕಾರವೇ ನಿಗದಿ ಮಾಡುತ್ತದೆ. ಇದರಿಂದ ರೈತರು ಕಬ್ಬು ಮಾರಾಟ ಮಾಡುವಾಗ ಹೆಚ್ಚಿನ ಬೆಲೆ ಪಡೆಯಲು ಸಾಧ್ಯವಾಗಲಿದೆ. ಕೃಷಿ ವೆಚ್ಚಗಳು ಹಾಗೂ ಬೆಲೆಗಳ ಆಯೋಗವು ಮಾಡುವ ಶಿಫಾರಸಿನ ಅನ್ವಯ ಕೇಂದ್ರ ಸರ್ಕಾರವು ಬೆಲೆಯನ್ನು ಹೆಚ್ಚಳ ಮಾಡುತ್ತದೆ. ದೇಶದಲ್ಲಿ ಕರ್ನಾಟಕ ಹಾಗೂ ಉತ್ತರ ಪ್ರದೇಶದಲ್ಲಿ ಕಬ್ಬನ್ನು ಹೆಚ್ಚು ಬೆಳೆಯಲಾಗುತ್ತದೆ. ಕೇಂದ್ರ ಸರ್ಕಾರದ ನಿರ್ಧಾರದಿಂದ ದೇಶದ 5 ಕೋಟಿ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ.

ಇದನ್ನೂ ಓದಿ: Farmers Protest: ಪೊಲೀಸರ ಏಟಿಗೆ ರೈತ ಬಲಿ; ರೈತರ ಪ್ರತಿಭಟನೆ ದಿಢೀರ್‌ ಸ್ಥಗಿತ!

ಬಾಹ್ಯಾಕಾಶ ಕ್ಷೇತ್ರದಲ್ಲಿ 100% ಎಫ್‌ಡಿಐಗೆ ಅಸ್ತು

ದೇಶದ ಬಾಹ್ಯಾಕಾಶ ಕ್ಷೇತ್ರದಲ್ಲಿ ಶೇ.100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ (FDI) ಕೂಡ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದರಿಂದಾಗಿ, ಬಾಹ್ಯಾಕಾಶ ಕ್ಷೇತ್ರಕ್ಕೆ ವಿದೇಶದಿಂದ ಅಪಾರ ಪ್ರಮಾಣದ ಬಂಡವಾಳ ಹರಿದು ಬಂದು, ಹೆಚ್ಚಿನ ಸಂಶೋಧನೆ, ಉಡಾವಣೆ ಕೈಗೊಳ್ಳಲು ಸಾಧ್ಯವಾಗಲಿದೆ ಎಂಬುದು ಕೇಂದ್ರ ಸರ್ಕಾರದ ಚಿಂತನೆಯಾಗಿದೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version