Site icon Vistara News

Union Cabinet: ಭತ್ತ ಸೇರಿ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿದ ಮೋದಿ ಸರ್ಕಾರ; ರೈತರಿಗೆ ಗುಡ್‌ ನ್ಯೂಸ್

PMAY

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿರುವ ನರೇಂದ್ರ ಮೋದಿ ಅವರು ದೇಶದ ಜನರಿಗೆ ಹಲವು ಸಿಹಿ ಸುದ್ದಿ ನೀಡಿದ್ದಾರೆ. ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಅನ್ವಯ 9.26 ಕೋಟಿ ರೈತರ ಖಾತೆಗಳಿಗೆ ತಲಾ 2 ಸಾವಿರ ರೂ. ವರ್ಗಾವಣೆ, ಪಿಎಂ ಆವಾಸ್‌ ಯೋಜನೆ ಅಡಿಯಲ್ಲಿ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣ ಸೇರಿ ಹಲವು ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ, ಭತ್ತ, ಸೂರ್ಯಕಾಂತಿ, ಜೋಳ ಸೇರಿ 14 ಹಿಂಗಾರು ಬೆಳೆಗಳಿಗೆ (Kharif Crops) ಕನಿಷ್ಠ ಬೆಂಬಲ ಬೆಲೆ (Minimum Support Price) ನೀಡಲು ಕೇಂದ್ರ ಸಚಿವ ಸಂಪುಟ ಸಭೆಯು (Union Cabinet) ಬುಧವಾರ (ಜೂನ್‌ 19) ಅನುಮೋದನೆ ನೀಡಿದೆ.

ಸಚಿವ ಸಂಪುಟ ಸಭೆಯ ಬಳಿಕ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಅವರು ತೀರ್ಮಾನಗಳ ಕುರಿತು ಮಾಹಿತಿ ನೀಡಿದರು. “ನರೇಂದ್ರ ಮೋದಿ ಅವರ ಸರ್ಕಾರವು ರೈತರ ಕಲ್ಯಾಣಕ್ಕೆ ಬದ್ಧವಾಗದೆ. ಹಾಗಾಗಿ, ಭತ್ತ ಸೇರಿ 14 ಹಿಂಗಾರು ಬೆಳೆಗಳಿಗೆ ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡಲಾಗಿದೆ. ಭತ್ತಕ್ಕೆ ನೀಡುವ ಎಂಎಸ್‌ಪಿಯನ್ನು 117 ರೂ. ಏರಿಕೆ ಮಾಡಲಾಗಿದ್ದು, ಇದರೊಂದಿಗೆ ಒಟ್ಟು ಎಂಎಸ್‌ಪಿ 2,300 ರೂ. ಆಗಿದೆ” ಎಂಬುದಾಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರ

ಭತ್ತ, ಹತ್ತಿ, ಜೋಳ, ರಾಗಿ, ಬಾಜ್ರಾ, ಮೆಕ್ಕೆ ಜೋಳ, ಸೂರ್ಯಕಾಂತಿ, ಎಳ್ಳು ಸೇರಿ 14 ಬೆಳೆಗಳ ಬೆಂಬಲ ಬೆಲೆಯನ್ನು ಏರಿಕೆ ಮಾಡಲಾಗಿದೆ. ಹತ್ತಿಗೆ ಒಂದು ಕ್ವಿಂಟಾಲ್‌ಗೆ 501 ರೂ. ಏರಿಕೆ ಮಾಡಲಾದರೆ, ಸೂರ್ಯಕಾಂತಿಗೆ 983 ರೂ., ಎಳ್ಳಿಗೆ 632 ರೂ., ತೊಗರಿಗೆ 550 ರೂ. ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರವು ಬೆಂಬಲ ಬೆಲೆ ಏರಿಕೆ ಮಾಡಿರುವುದರಿಂದ ದೇಶದ ರೈತರು ಸುಮಾರು 2 ಲಕ್ಷ ಕೋಟಿ ರೂಪಾಯಿಯನ್ನು ಕನಿಷ್ಠ ಬೆಂಬಲ ಬೆಲೆಯನ್ನಾಗಿ ಪಡೆಯಲಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ 35 ಸಾವಿರ ಕೋಟಿ ರೂಪಾಯಿಯನ್ನು ಎಂಎಸ್‌ಪಿಯಾಗಿ ರೈತರಿಗೆ ನೀಡಲಾಗುತ್ತದೆ ಎಂಬುದಾಗಿ ಮಾಹಿತಿ ನೀಡಿದರು.

ಅಷ್ಟೇ ಅಲ್ಲ, ನರೇಂದ್ರ ಮೋದಿ ಅವರ ಲೋಕಸಭೆ ಕ್ಷೇತ್ರವಾದ ವಾರಾಣಸಿಯಲ್ಲಿರುವ ವಿಮಾಣ ನಿಲ್ದಾಣದಲ್ಲಿ 2,870 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಟರ್ಮಿನಲ್‌ ನಿರ್ಮಾಣಕ್ಕೂ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ. ಮಹಾರಾಷ್ಟ್ರದಲ್ಲಿ ವಾಧವಾನ್‌ ಬಂದರು ನಿರ್ಮಾಣಕ್ಕೂ ಸಚಿವ ಸಂಪುಟ ಸಭೆಯು ಸಮ್ಮತಿ ಸೂಚಿಸಿದೆ.

ಇದನ್ನೂ ಓದಿ: Narendra Modi: ನಳಂದಾ ವಿವಿಯ ನೂತನ ಕ್ಯಾಂಪಸ್ ಉದ್ಘಾಟಿಸಿದ ಮೋದಿ; ಭಾರತವನ್ನು ಶಿಕ್ಷಣದ ಜಾಗತಿಕ ಕೇಂದ್ರವನ್ನಾಗಿಸುವ ಪಣ

Exit mobile version