Site icon Vistara News

Modi 3.0 Cabinet: ಮೈತ್ರಿ ಸರ್ಕಾರದಲ್ಲೂ ಮೋದಿಯದ್ದೇ ಪ್ರಾಬಲ್ಯ; 4 ಪ್ರಮುಖ ಖಾತೆಗಳು ಬಿಜೆಪಿ ಪಾಲು!

Modi 3.0 Cabinet

Union Cabinet Portfolios Announced, No Change In Big 4 In Modi 3.0 Cabinet

ನವದೆಹಲಿ: ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿಯು 240 ಕ್ಷೇತ್ರಗಳಿಗೆ ಕುಸಿದ ಕಾರಣ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಪ್ರಾಬಲ್ಯ ಕಡಿಮೆಯಾಗಿದೆ. ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು, ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸೇರಿ ಮೈತ್ರಿಪಕ್ಷಗಳಿಗೆ ಬಲಿಷ್ಠ ಖಾತೆಗಳನ್ನು ನೀಡಬೇಕಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ನರೇಂದ್ರ ಮೋದಿ ಅವರು ಸೋಮವಾರ (ಜೂನ್‌ 10) 71 ಸಂಸದರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ಪ್ರಮುಖ 4 ನಾಲ್ಕು ಖಾತೆಗಳು ಬಿಜೆಪಿ ಬಳಿಯೇ ಉಳಿದಿವೆ.

ಹೌದು, ಕೇಂದ್ರ ಗೃಹ ಖಾತೆಯನ್ನು ಅಮಿತ್‌ ಶಾ ಅವರಿಗೆ, ಹಣಕಾಸು ಖಾತೆಯನ್ನು ನಿರ್ಮಲಾ ಸೀತಾರಾಮನ್‌, ರಕ್ಷಣಾ ಖಾತೆಯನ್ನು ರಾಜನಾಥ್‌ ಸಿಂಗ್‌ ಹಾಗೂ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಖಾತೆಯನ್ನು ನಿತಿನ್‌ ಗಡ್ಕರಿ ಅವರಿಗೇ ನೀಡುವ ಮೂಲಕ ನರೇಂದ್ರ ಮೋದಿ ಅವರು ಮೊದಲಿನಂತೆಯೇ ಬಿಜೆಪಿ ಬಳಿಯೇ ಉಳಿಸಿಕೊಳ್ಳುವ ಮೂಲಕ ಚಾಣಾಕ್ಷತನ ಮೆರೆದಿದ್ದಾರೆ. ಅಷ್ಟೇ ಅಲ್ಲ, ಮೈತ್ರಿ ಸರ್ಕಾರದ ಮೇಲೆಯೂ ತಮ್ಮ ಹಿಡಿತ ಇದೆ ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

ಮೈತ್ರಿ ಸರ್ಕಾರ ರಚನೆಗೂ ಮೊದಲು, ನಿತೀಶ್‌ ಕುಮಾರ್‌ ಹಾಗೂ ಟಿಡಿಪಿ ಸೇರಿ ಮೈತ್ರಿ ಪಕ್ಷಗಳಿಗೇ ಪ್ರಮುಖ ನಾಲ್ಕು ಖಾತೆಗಳಲ್ಲಿ ಒಂದಷ್ಟನ್ನು ಮೋದಿ ನೀಡಬೇಕಾಗುತ್ತದೆ. ಅದರಲ್ಲೂ ಗೃಹ ಖಾತೆ ಹಾಗೂ ಹಣಕಾಸು ಖಾತೆಗಳನ್ನು ಮಿತ್ರಪಕ್ಷಗಳಿಗೆ ಬಿಟ್ಟುಕೊಡಬೇಕಾಗುತ್ತದೆ ಎಂಬುದಾಗಿ ಹೇಳಲಾಗುತ್ತಿತ್ತು. ಆದರೆ, ಮೊದಲ ಹಾಗೂ ಎರಡನೇ ಅವಧಿಯಂತೆ, ಮೂರನೇ ಅವಧಿಯಲ್ಲೂ ನರೇಂದ್ರ ಮೋದಿ ಅವರು ಪ್ರಮುಖ ಖಾತೆಗಳನ್ನು ಬಿಜೆಪಿ ಬಳಿಯೇ ಉಳಿಸಿಕೊಳ್ಳುವ ಮೂಲಕ ತಮ್ಮ ಹಿಡಿತವನ್ನು ಸಾಬೀತುಪಡಿಸಿದ್ದಾರೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಮಿತ್ರಪಕ್ಷಗಳಿಗೆ ಮೋದಿ ನೀಡಿರುವ ಪ್ರಮುಖ ಖಾತೆಗಳು

ಇದನ್ನೂ ಓದಿ: Mohan Bhagwat: ಮಣಿಪುರ ಹಿಂಸೆ ನಿಲ್ಲಿಸಿ; ಅಧಿಕಾರ ಹಿಡಿದ ಮೋದಿಗೆ ಟಾಸ್ಕ್‌ ಕೊಟ್ಟ ಮೋಹನ್‌ ಭಾಗವತ್!

Exit mobile version