Delhi Murder | ಶಿಕ್ಷಣವಂತ ಹೆಣ್ಣುಮಕ್ಕಳಿಂದಲೇ ಇಂಥ ಅಪರಾಧ ಹೆಚ್ಚಳ; ಶ್ರದ್ಧಾ ಹತ್ಯೆ ಬಳಿಕ ಕೇಂದ್ರ ಸಚಿವರಿಂದ ವಿವಾದಾತ್ಮಕ ಹೇಳಿಕೆ - Vistara News

ದೇಶ

Delhi Murder | ಶಿಕ್ಷಣವಂತ ಹೆಣ್ಣುಮಕ್ಕಳಿಂದಲೇ ಇಂಥ ಅಪರಾಧ ಹೆಚ್ಚಳ; ಶ್ರದ್ಧಾ ಹತ್ಯೆ ಬಳಿಕ ಕೇಂದ್ರ ಸಚಿವರಿಂದ ವಿವಾದಾತ್ಮಕ ಹೇಳಿಕೆ

ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಇಲಾಖೆ ಸಹಾಯಕ ಸಚಿವರಾಗಿರುವ ಕೌಶಲ್​ ಕಿಶೋರ್​ ಹೇಳಿಕೆಗೆ ಶಿವಸೇನೆ ನಾಯಕಿ ಪ್ರಿಯಾಂಕಾ ಚತುರ್ವೇದಿ ವಿರೋಧ ವ್ಯಕ್ತಪಡಿಸಿದ್ದಾರೆ. ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

VISTARANEWS.COM


on

Union Minister Kaushal Kishore remark On Delhi Shradha Walkar Murder
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೆಹಲಿಯಲ್ಲಿ ನಡೆದ ಶ್ರದ್ಧಾ ಹತ್ಯೆ ಬಗ್ಗೆ ಸದ್ಯ ದೇಶದ ಎಲ್ಲೆಡೆ ಚರ್ಚೆ ನಡೆಯುತ್ತಿದೆ. ಅಫ್ತಾಬ್​​ನನ್ನು ನಿಂದಿಸುವ ಜತೆಗೆ, ಅನೇಕರು ಮೃತ ಶ್ರದ್ಧಾಳ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಹಿಂದು ಹೆಣ್ಣುಮಕ್ಕಳು ಮುಸ್ಲಿಂ ಯುವಕರೊಂದಿಗೆ ಹೋಗಬಾರದು, ಇಂಥ ಪ್ರೀತಿ, ಲಿವ್​ ಇನ್​ ರಿಲೇಶನ್​ಶಿಪ್​​ಗಳ ಪಾಶದಲ್ಲಿ ಸಿಲುಕಬಾರದು ಎಂದೂ ಆಶಯ ವ್ಯಕ್ತಪಡಿಸುತ್ತಿದ್ದಾರೆ. ಇದೆಲ್ಲದರ ಮಧ್ಯೆ ಕೇಂದ್ರ ಸಚಿವರೊಬ್ಬರು ಶ್ರದ್ಧಾ ಸಾವಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಟೀಕೆಗೆ ಗುರಿಯಾಗಿದ್ದಾರೆ.

ದೆಹಲಿ ಶ್ರದ್ಧಾ ವಾಳ್ಕರ್​ ಹತ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಕೌಶಲ್​ ಕಿಶೋರ್, ‘ಲಿವ್​ ಇನ್​ ರಿಲೇಶನ್​ಶಿಪ್​ಗಳು ಅಪರಾಧಗಳಿಗೆ ಕಾರಣವಾಗುತ್ತವೆ. ಅದು ಗೊತ್ತಿದ್ದೂ ಹೋಗಿ ಹುಡುಗಿಯರು ಅದರಲ್ಲಿ ಸಿಲುಕಿಕೊಳ್ಳುತ್ತಾರೆ. ಅದರಲ್ಲೂ ಇಂಥದ್ದರಲ್ಲೆಲ್ಲ ಸಿಲುಕುತ್ತಿರುವುದು ಶಿಕ್ಷಣವಂತ, ಸುಶಿಕ್ಷಿತ ಹುಡುಗಿಯರೇ ಆಗಿದ್ದಾರೆ. ಶಿಕ್ಷಣ ಪಡೆದ ಹುಡುಗಿಯರಿಗೆ ತಾವು ಓಪನ್​ ಮೈಂಡೆಂಡ್​ ಮತ್ತು ತಮ್ಮ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದಕೊಳ್ಳಲು ಸಮರ್ಥರಿದ್ದೇವೆ ಎಂಬ ಭಾವನೆ ಮನಸಲ್ಲಿ ಬಂದುಬಿಡುತ್ತದೆ. ಯಾಕಾಗಿಯಾದರೂ ಈ ಲಿವ್​ ಇನ್​ ರಿಲೇಶನ್​ಶಿಪ್​ ಬೇಕು? ಹಾಗೊಮ್ಮೆ ಲಿವ್​ ಇನ್​​ನಲ್ಲಿ ಇರಲೇಬೇಕು ಎಂದರೆ ಅದಕ್ಕೆ ಸೂಕ್ತವಾದ ನೋಂದಣಿ ಆಗಿರಬೇಕು. ಅವರ ಪಾಲಕರು ಒಪ್ಪದೆ ಇದ್ದರೆ, ಕನಿಷ್ಠಪಕ್ಷ ನ್ಯಾಯಾಲಯದಲ್ಲಿ, ಸಾಕ್ಷಿಗಳ ಎದುರಲ್ಲಿ ವಿವಾಹವಾಗಿಯಾದರೂ, ಒಟ್ಟಿಗೆ ಇರಬೇಕು’ ಎಂದು ಹೇಳಿದರು.

ಇಲ್ಲಿ ಕೇಂದ್ರ ಸಚಿವರು ಶ್ರದ್ಧಾಳ ಸಾವಿನ ಬಗ್ಗೆ ಮಾತನಾಡುವ ಭರದಲ್ಲಿ ಎಲ್ಲ ಶಿಕ್ಷಣವಂತ ಹುಡುಗಿಯರೂ ಇಷ್ಟೇ ಎಂಬ ಅರ್ಥದಲ್ಲಿ ಮಾತನಾಡಿದ್ದೇ ವಿವಾದಕ್ಕೆ ಕಾರಣವಾಗಿದೆ. ಇಲ್ಲಿ ಅಫ್ತಾಬ್ ವಿರುದ್ಧ ಮಾತನಾಡುವುದನ್ನು ಬಿಟ್ಟು, ಶ್ರದ್ಧಾ ಮತ್ತು ಇತರ ಹೆಣ್ಣುಮಕ್ಕಳನ್ನು ದೂಷಿಸಿ, ಇಂಥ ಅಪರಾಧಗಳಿಗೆ ಕಾರಣ ಆಗುತ್ತಿರುವುದೇ ಸುಶಿಕ್ಷಿತ ಹೆಣ್ಣುಮಕ್ಕಳು ಎಂದು ಕೌಶಲ್​ ಕಿಶೋರ್ ಹೇಳಿದ್ದಕ್ಕೆ ಅಪಾರ ಟೀಕೆ, ಆಕ್ರೋಶ ವ್ಯಕ್ತವಾಗುತ್ತಿದೆ.

ಕೌಶಲ್​ ಕಿಶೋರ್​ ಹೇಳಿಕೆ ಕಟುವಾಗಿ ವಿರೋಧಿಸಿದ ಶಿವಸೇನೆ ನಾಯಕಿ ಪ್ರಿಯಾಂಕಾ ಚತುರ್ವೇದಿ, ‘ಏನೇ ಕ್ರೈಂ ಆಗಲಿ, ಸಮಸ್ಯೆ ಆಗಲಿ, ಅದಕ್ಕೆ ಸಂಬಂಧಪಟ್ಟು ಹೆಣ್ಣುಮಕ್ಕಳನ್ನೇ ದೂಷಿಸುವ ಮನಸ್ಥಿತಿ ಬೆಳೆಯುತ್ತಲೇ ಇದೆ. ಅದಕ್ಕೆ ಕೇಂದ್ರ ಸಚಿವರ ಹೇಳಿಕೆಯೇ ಸಾಕ್ಷಿ. ಸದಾ ಮಹಿಳಾ ಶಕ್ತಿ ಬಗ್ಗೆ ಮಾತನಾಡುವ ಪ್ರಧಾನಿ ಮೋದಿಯವರು ನಿಜಕ್ಕೂ ಅದಕ್ಕೆ ಬದ್ಧರಾಗಿದ್ದರೆ, ಕೂಡಲೇ ಕೌಶಲ್​ ಅವರನ್ನು ವಜಾಗೊಳಿಸಬೇಕು. ಸಮಾಜದಲ್ಲಿರುವ ಇಂಥ ಪಿತೃಪ್ರಭುತ್ವದ ಭಾರವನ್ನು ನಾವು ಮಹಿಳೆಯರು ಹೊತ್ತುಕೊಂಡಿದ್ದೇವೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ:ವಿಸ್ತಾರ Explainer | Narco test| ಏನಿದು ನಾರ್ಕೊ ಟೆಸ್ಟ್?‌ ವಿಕೃತ ಹಂತಕ ಅಫ್ತಾಬ್‌ ತನಿಖೆಯಲ್ಲಿ ನಿರ್ಣಾಯಕ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

Narendra Modi: ಇಸ್ಕಾನ್‌, ರಾಮಕೃಷ್ಣ ಮಿಷನ್‌ ಹಾಗೂ ಭಾರತ್‌ ಸೇವಾಶ್ರಮ ಸಂಘದ ವಿರುದ್ಧ ಮಮತಾ ಬ್ಯಾನರ್ಜಿ ಹಲವು ಆರೋಪ ಮಾಡಿದ್ದರು. ಇದಕ್ಕೆ ನರೇಂದ್ರ ಮೋದಿ ತಿರುಗೇಟು ನೀಡಿದ್ದು, “ಮುಸ್ಲಿಮರ ಮತಗಳ ಓಲೈಕೆಗಾಗಿ ಮಮತಾ ಬ್ಯಾನರ್ಜಿ ಅವರು ಹೀಗೆ ಮಾಡುತ್ತಿದ್ದಾರೆ” ಎಂದು ಕುಟುಕಿದ್ದಾರೆ.

VISTARANEWS.COM


on

Narendra Modi
Koo

ಕೋಲ್ಕೊತಾ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಜಾತಿ, ಧರ್ಮ, ಮೀಸಲಾತಿ ಸೇರಿ ಹಲವು ವಿಷಯಗಳು ಚರ್ಚೆಯ ಮುನ್ನೆಲೆಗೆ ಬರುತ್ತಿವೆ. ರಾಜಕೀಯ ನಾಯಕರ ಹೇಳಿಕೆಗಳು ತೀಕ್ಷ್ಣತೆ ಪಡೆದುಕೊಂಡಿವೆ. ಇನ್ನು, ಹಿಂದು ಸಂಘ-ಸಂಸ್ಥೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಹರಿಹಾಯ್ದಿದ್ದಾರೆ. “ಮುಸ್ಲಿಮರ ಮತಗಳಿಗಾಗಿ ಮಮತಾ ಬ್ಯಾನರ್ಜಿ ಅವರು ಹಿಂದು ಸಂಘ-ಸಂಸ್ಥೆಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ” ಎಂದು ಕುಟುಕಿದ್ದಾರೆ.

“ಚುನಾವಣೆ ಸಂದರ್ಭದಲ್ಲಿ ಟಿಎಂಸಿಯು ಜನರಿಗೆ ಬೆದರಿಕೆ ಒಡ್ಡಿತ್ತು. ಈಗ ಅದು ತನ್ನ ಮಿತಿಯನ್ನು ಮೀರಿದೆ. ಇಸ್ಕಾನ್‌, ರಾಮಕೃಷ್ಣ ಮಿಷನ್‌ ಹಾಗೂ ಭಾರತ್‌ ಸೇವಾಶ್ರಮ ಸಂಘವು ಜಗತ್ತಿನಾದ್ಯಂತ ಜನರಿಗೆ ಸೇವೆ ಮಾಡುತ್ತಿವೆ. ನೈತಿಕ ಬೆಂಬಲ, ಮಾರ್ಗದರ್ಶನ ನೀಡುತ್ತಿವೆ. ಆದರೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯು ಇಂತಹ ಹಿಂದು ಸಂಘ-ಸಂಸ್ಥೆಗಳ ವಿರುದ್ಧ ಬಹಿರಂಗವಾಗಿಯೇ ಮಾತನಾಡುತ್ತಿದ್ದಾರೆ, ಬೆದರಿಕೆ ಒಡ್ಡುತ್ತಿದ್ದಾರೆ. ಮುಸ್ಲಿಮರ ಮತಗಳ ಓಲೈಕೆಗಾಗಿ ಮಮತಾ ಬ್ಯಾನರ್ಜಿ ಅವರು ಹೀಗೆ ಮಾಡುತ್ತಿದ್ದಾರೆ” ಎಂದು ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

“ಮಮತಾ ಬ್ಯಾನರ್ಜಿ ಅವರು ಓಲೈಕೆ ರಾಜಕಾರಣದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಮೂಲಭೂತವಾದಿಗಳನ್ನು ಓಲೈಸುವ ದೃಷ್ಟಿಯಿಂದ ಅವರು ಸಾಧು-ಸಂತರ ವಿರುದ್ಧ ಮಾತನಾಡುತ್ತಿದ್ದಾರೆ. ಆದರೆ, ಜನರು ಅಭಿವೃದ್ಧಿಯನ್ನು ನೋಡುತ್ತಾರೆಯೇ ಹೊರತು ಓಲೈಕೆ ರಾಜಕಾರಣಕ್ಕೆ ಮಣೆ ಹಾಕುವುದಿಲ್ಲ. ಪಶ್ಚಿಮ ಬಂಗಾಳದ ಜನರು ಬಿಜೆಪಿಯ ಆಡಳಿತವನ್ನು ಬಯಸುತ್ತಿದ್ದಾರೆ. ಇದು ಮಮತಾ ಬ್ಯಾನರ್ಜಿ ಅವರ ನಿದ್ದೆಗೆಡಿಸಲು ಕಾರಣವಾಗಿದೆ” ಎಂದು ಟೀಕಿಸಿದರು.

ಮಮತಾ ಬ್ಯಾನರ್ಜಿ ಹೇಳಿದ್ದೇನು?

ಶನಿವಾರ (ಮೇ 18) ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿ ಅವರು ಇಸ್ಕಾನ್‌, ರಾಮಕೃಷ್ಣ ಮಿಷನ್‌ ಹಾಗೂ ಭಾರತ್‌ ಸೇವಾಶ್ರಮ ಸಂಘದ ವಿರುದ್ಧ ಆರೋಪ ಮಾಡಿದ್ದರು. “ಮೂರೂ ಸಂಸ್ಥೆಗಳು ದೆಹಲಿಯಿಂದ ಬರುವ ಸೂಚನೆಗಳ ಮೇರೆಗೆ ಕಾರ್ಯನಿರ್ವಹಿಸುತ್ತಿವೆ. ರಾಮಕೃಷ್ಣ ಮಿಷನ್‌ ಅನುಯಾಯಿಗಳ ಒಂದು ವಾಟ್ಸ್‌ಆ್ಯಪ್‌ ಗ್ರೂಪ್‌ ಇದೆ. ಇಂತಹ ಚಟುವಟಿಕೆಗಳಲ್ಲಿ ಸನ್ಯಾಸಿಗಳು ಏಕೆ ಭಾಗಿಯಾಗಬೇಕು? ರಾಮಕೃಷ್ಣ ಮಿಷನ್‌ ಬಗ್ಗೆ ಜನರಿಗೆ ಗೌರವವಿದೆ. ರಾಮಕೃಷ್ಣ ಮಿಷನ್‌ನ ಸನ್ಯಾಸಿಗಳು ಮತದಾನ ಮಾಡುವುದಿಲ್ಲ ಎಂಬುದು ನನಗೆ ಗೊತ್ತಿದೆ. ಆದರೆ, ನೀವೇಕೆ ಬಿಜೆಪಿಗೆ ಮತ ನೀಡಿ ಎಂಬುದಾಗಿ ಬೇರೆಯವರಿಗೆ ಕರೆ ನೀಡುತ್ತೀರಿ? ಎಲ್ಲರೂ ಅಲ್ಲ, ಕೆಲವು ಸನ್ಯಾಸಿಗಳು ಹೀಗೆ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದರು.

“ಭಾರತ ಸೇವಾಶ್ರಮ ಸಂಘದ ಮೇಲೆ ನನಗೆ ಅಪಾರ ಗೌರವ ಇತ್ತು. ಆದರೆ, ತೃಣಮೂಲ ಕಾಂಗ್ರೆಸ್‌ ಏಜೆಂಟ್‌ನನ್ನು ಮತಗಟ್ಟೆ ಒಳಗೆ ಬಿಡುವುದಿಲ್ಲ ಎಂಬುದಗಿ ಒಬ್ಬ ಕಾರ್ತಿಕ ಮಹಾರಾಜ ಹೇಳಿದ್ದಾರೆ ಎಂಬುದಾಗಿ ನಾನು ಕೇಳುತ್ತಲೇ ಇದ್ದೇನೆ. ರಾಜಕೀಯದಲ್ಲ ಹೀಗೆ ಭಾಗಿಯಾದವರನ್ನು ನಾನು ಸನ್ಯಾಸಿ ಎಂಬುದಾಗಿ ಕರೆಯುವುದಿಲ್ಲ. ಹೀಗೆ ರಾಜಕೀಯ ಮಾಡುತ್ತಿರುವವರನ್ನು ನಾನು ಗುರುತಿಸಿದ್ದೇನೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು. ಮಮತಾ ಬ್ಯಾನರ್ಜಿ ಹೇಳಿಕೆಗೆ ಬಿಜೆಪಿಯ ಕೆಲ ನಾಯಕರೂ ಟೀಕಿಸಿದ್ದಾರೆ.

ಮಮತಾ ಬ್ಯಾನರ್ಜಿ ಹೇಳಿಕೆ ವಿರುದ್ಧ ನರೇಂದ್ರ ಮೋದಿ ಟೀಕಿಸುತ್ತಲೇ ಬಿಜೆಪಿ ನಾಯಕ ಅಮಿತ್‌ ಮಾಳವಿಯ ಅವರು ಪೋಸ್ಟ್‌ ಮಾಡಿದ್ದಾರೆ. “ಭಾರತ ಸೇವಾಶ್ರಮ ಸಂಘವು ಮಮತಾ ಬ್ಯಾನರ್ಜಿ ಅವರು ಸಂತರ ವಿರುದ್ಧ ನೀಡಿದ ಹೇಳಿಕೆಯನ್ನು ಖಂಡಿಸಿ ಹೈಕೋರ್ಟ್‌ ಮೊರೆ ಹೋಗಲಿದ್ದಾರೆ. ಕಾರ್ತಿಕ್‌ ಮಹಾರಾಜ ಅವರು ಎಂದಿಗೂ ಬೂತ್‌ ಏಜೆಂಟ್‌ಗಳ ವಿರುದ್ಧ ಮಾತನಾಡಿಲ್ಲ” ಎಂದು ಮಮತಾ ಆರೋಪವನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

Continue Reading

ದೇಶ

Great Khali: ಜಗತ್ತಿನ ಕುಬ್ಜ ಮಹಿಳೆಯನ್ನು ಮಗುವಿನಂತೆ ಎತ್ತಿ ಆಡಿಸಿದ ಗ್ರೇಟ್‌ ಖಲಿ; ಜನ ಕೆಂಡವಾಗಿದ್ದು ಏಕೆ?

Great Khali: ಜ್ಯೋತಿ ಆಮ್ಗೆ ಅವರನ್ನು ಒಂದೇ ಕೈಯಲ್ಲಿ ತಮಾಷೆಗಾಗಿ ಎತ್ತಿ ಆಡಿಸಿದ ವಿಡಿಯೊವನ್ನು ಗ್ರೇಟ್‌ ಖಲಿ ಅವರೇ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದು, ಲಕ್ಷಾಂತರ ಜನ ವೀಕ್ಷಿಸಿದ್ದಾರೆ. ಸಾವಿರಾರು ಜನ ಪ್ರತಿಕ್ರಿಯಿಸಿದ್ದಾರೆ. ಆದರೆ, ಎತ್ತಿ ಆಡಿಸಿದ್ದಕ್ಕೆ ಗ್ರೇಟ್‌ ಖಲಿ ವಿರುದ್ಧ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಬ್ಯಾಡ್‌ ಟಚ್‌ ಎಂದು ದಿ ಗ್ರೇಟ್‌ ಖಲಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

VISTARANEWS.COM


on

Great Khali
Koo

ನವದೆಹಲಿ: ಆಜಾನುಬಾಹು ದೇಹದಿಂದಲೇ ದೇಶಾದ್ಯಂತ ಖ್ಯಾತಿ ಗಳಿಸಿರುವ, ಡಬ್ಲ್ಯೂಡಬ್ಲ್ಯೂಇನಲ್ಲಿ (WWE) ಭಾರತವನ್ನು ಪ್ರತಿನಿಧಿಸಿದ ಕುಸ್ತಿಪಟು ದಿ ಗ್ರೇಟ್‌ ಖಲಿ (Great Khali) ಅವರು ವಿಶ್ವದಲ್ಲೇ ಅತಿ ಕುಬ್ಜ ಮಹಿಳೆ ಎನಿಸಿರುವ ಜ್ಯೋತಿ ಆಮ್ಗೆ (Jyoti Amge) ಅವರನ್ನು ಒಂದೇ ಕೈಯಲ್ಲಿ ಎತ್ತಿ ಆಡಿಸಿದ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಆದರೆ, ತಮಾಷೆಗಾಗಿ ಒಂದೇ ಕೈಯಲ್ಲಿ ಮಗುವಿನಂತೆ ಎತ್ತಿ ಆಡಿಸಿದ ವಿಡಿಯೊ ವೈರಲ್‌ (Viral Video) ಆದ ಬೆನ್ನಲ್ಲೇ ಗ್ರೇಟ್‌ ಖಲಿ ವಿರುದ್ಧ ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದವರಾದ ಜ್ಯೋತಿ ಆಮ್ಗೆ (30) ಅವರು ಕೇವಲ 2.3 ಅಡಿ ಎತ್ತರವಾಗಿದ್ದು, ಜಗತ್ತಿನಲ್ಲೇ ಅತಿ ಕುಬ್ಜ ಮಹಿಳೆ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಇವರು ಗಿನ್ನಿಸ್‌ ದಾಖಲೆಗೂ ಭಾಜನರಾಗಿದ್ದಾರೆ. ಜ್ಯೋತಿ ಆಮ್ಗೆ ಹಾಗೂ ದಿ ಗ್ರೇಟ್‌ ಖಲಿ ಅವರು ಇತ್ತೀಚೆಗೆ ಭೇಟಿಯಾಗಿದ್ದು, ಗ್ರೇಟ್‌ ಖಲಿ ಅವರು ತಮಾಷೆಗಾಗಿ ಅವರನ್ನು ಒಂದೇ ಕೈಯಲ್ಲಿ ಎತ್ತಿ ಆಡಿಸಿದ್ದಾರೆ. “ನಾನು ನಿಮ್ಮನ್ನು ನಾಗ್ಪುರಕ್ಕೆ ಕಳುಹಿಸಿಬಿಡುತ್ತೇನೆ” ಎಂದು ತಮಾಷೆ ಮಾಡಿದ್ದಾರೆ. ಇದರಿಂದ ಜ್ಯೋತಿ ಆಮ್ಗೆ ಅವರು ನಾಚಿ ನೀರಾಗಿದ್ದಾರೆ.

ಕೆರಳಿ ಕೆಂಡವಾದ ಜನ

ಜ್ಯೋತಿ ಆಮ್ಗೆ ಅವರನ್ನು ಎತ್ತಿ ಆಡಿಸಿದ ವಿಡಿಯೊವನ್ನು ಗ್ರೇಟ್‌ ಖಲಿ ಅವರೇ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದು, ಲಕ್ಷಾಂತರ ಜನ ವೀಕ್ಷಿಸಿದ್ದಾರೆ. ಸಾವಿರಾರು ಜನ ಪ್ರತಿಕ್ರಿಯಿಸಿದ್ದಾರೆ. ಆದರೆ, ಎತ್ತಿ ಆಡಿಸಿದ್ದಕ್ಕೆ ಗ್ರೇಟ್‌ ಖಲಿ ವಿರುದ್ಧ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಗ್ರೇಟ್‌ ಖಲಿಯವರೇ, ನಮಗೆ ನಿಮ್ಮ ಬಗ್ಗೆ ಗೌರವ ಇದೆ. ಆದರೆ, ನೀವು ಹೀಗೆ ಮಾಡಬಾರದಿತ್ತು. ಅದು ಮಗು ಅಲ್ಲ‌, 30 ವರ್ಷದ ಮಹಿಳೆ ಅವರು. ನೀವು ಹಾಗೆ ಮಾಡಬಾರದಿತ್ತು” ಎಂದು ಇನ್‌ಸ್ಟಾಗ್ರಾಂ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಇದು ಬ್ಯಾಡ್ ಟಚ್” ಎಂಬುದಾಗಿ ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. “ಇದು ತಮಾಷೆಯಾಗಿಲ್ಲ. ಹೀಗೆ ಮಾಡಲು ಜ್ಯೋತಿ ಅವರು ಅನುಮತಿ ನೀಡಿದ್ದಾರೆ ಎಂದುಕೊಳ್ಳುತ್ತೇನೆ” ಎಂದು ಮತ್ತೊಬ್ಬರು ನಯವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೂ ಒಂದಷ್ಟು ಜನ ತಮಾಷೆಯಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. “ನೀವು ಜ್ಯೋತಿ ಆಮ್ಗೆ ಅವರನ್ನು ಹಾಗೆಯೇ ಎತ್ತಿಕೊಂಡು ವರ್ಲ್ಡ್‌ ಟೂರ್‌ ಕೂಡ ಮಾಡಬಹುದು”, “ಅವರನ್ನು ಹಾಗೆಯೇ ತಿಂದು ಬಿಡಿ” ಎಂಬುದು ಸೇರಿ ಹಲವು ರೀತಿಯಲ್ಲಿ ಕಮೆಂಟ್‌ ಮಾಡಿದ್ದಾರೆ. ಇನ್ನು ವಿಡಿಯೊಗೆ ಖುದ್ದು ಜ್ಯೋತಿ ಆಮ್ಗೆ ಅವರೇ ಪ್ರತಿಕ್ರಿಯಿಸಿದ್ದು, “ತುಂಬ ಧನ್ಯವಾದ” ಎಂದು ಹೇಳಿದ್ದಾರೆ. ಅಲ್ಲಿಗೆ, ಜನ ತಣ್ಣಗಾದಂತಾಗಿದೆ.

ಇದನ್ನೂ ಓದಿ: Lok Sabha Election 2024: ʼನನ್ನ ಸ್ಟೈಲು ಬೇರೇನೆ…ʼ; ಕತ್ತೆ ಮೂಲಕ ಪ್ರಚಾರ ನಡೆಸುವ ಅಭ್ಯರ್ಥಿಯ ಕಾರ್ಯ ವೈಖರಿ ಈಗ ವೈರಲ್‌

Continue Reading

ದೇಶ

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಅಪಪ್ರಚಾರ; ವ್ಯಕ್ತಿ ಅರೆಸ್ಟ್‌-ಬಿಜೆಪಿ ಕಿಡಿ

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದ ಬಲಪಂಥೀಯ ವಿಚಾರಧಾರೆ ಹೊಂದಿರುವ ವಿನೀತ್‌, ಕಾಂಗ್ರೆಸ್‌ ಹಿಂದೂಗಳ ಸಂಪತ್ತನ್ನು ಕಸಿದು ಕೇವಲ ಮುಸ್ಲಿಮರಿಗೆ ಹಂಚಲು ಸಂಚು ರೂಪಿಸಿದೆ. ಕಾಂಗ್ರೆಸ್‌ ಎಸ್‌ಸಿ/ಎಸ್‌ಟಿ ಸೇರಿದಂತೆ ಎಲ್ಲಾ ಹಿಂದೂಗಳನ್ನು ದ್ವೇಷಿಸುತ್ತದೆ. ಎಸ್‌ಸಿ, ಎಸ್‌ಟಿಗಳ ಅಭಿವೃದ್ಧಿಗಾಗಿ ಶ್ರಮಿಸುವ ಬಗ್ಗೆ ಕಾಂಗ್ರೆಸ್‌ ಸುಳ್ಳು ಹೇಳುತ್ತಿದೆ. ಹೀಗಾಗಿ ಕಾಂಗ್ರೆಸ್‌ನವರ ಮುಖಕ್ಕೆ ಅವರ ಪ್ರಣಾಳಿಕೆಯನ್ನು ಎಸೆಯಿರಿ ಎಂದು ವಿಡಿಯೋ ಸಮೇತ ಟ್ವೀಟ್‌ ಮಾಡಿದ್ದರು.

VISTARANEWS.COM


on

Congress Manifesto
Koo

ಗೋವಾ: ಕೈ-ಕಮಲ ಪಾಳಯದಲ್ಲಿ ಪರಸ್ಪರ ವಾಕ್ಸಮರಕ್ಕೆ ಕಾರಣವಾಗಿರುವ ಕಾಂಗ್ರೆಸ್‌ ಪ್ರಣಾಳಿಕೆ (Congress Manifesto) ವಿಚಾರಕ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್‌ ಪ್ರಣಾಳಿಕೆಯನ್ನು ಟೀಕಿಸಿ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದ ವ್ಯಕ್ತಿಯೊಬ್ಬನನ್ನು ಕರ್ನಾಟಕ ಪೊಲೀಸರು(Congress Police) ಗೋವಾದಲ್ಲಿ ಅರೆಸ್ಟ್‌ ಮಾಡಿದ್ದು, ಬಿಜೆಪಿ ಕಾಂಗ್ರೆಸ್‌ ನಡುವೆ ಮತ್ತೆ ವಾಕ್ಸಮರಕ್ಕೆ ಕಾರಣವಾಗಿದೆ. ವಿನೀತ್‌ ನಾಯ್ಕ್‌ ಎಂಬಾತನನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ. ವಿನೀತ್‌ ವಿರುದ್ಧ ಸುಳ್ಳು ಮಾಹಿತಿ ಹರಡಿ ಕೋಮು ಘರ್ಷಣೆ (Communal disturbance)ಗೆ ಕುಮ್ಮಕ್ಕು ನೀಡಿಡ ಆರೋಪ ಕೇಳಿ ಬಂದಿದ್ದು, ಕರ್ನಾಟಕ ಶ್ರೀರಾಮಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಏನಿದು ಪ್ರಕರಣ?

ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದ ಬಲಪಂಥೀಯ ವಿಚಾರಧಾರೆ ಹೊಂದಿರುವ ವಿನೀತ್‌, ಕಾಂಗ್ರೆಸ್‌ ಹಿಂದೂಗಳ ಸಂಪತ್ತನ್ನು ಕಸಿದು ಕೇವಲ ಮುಸ್ಲಿಮರಿಗೆ ಹಂಚಲು ಸಂಚು ರೂಪಿಸಿದೆ. ಕಾಂಗ್ರೆಸ್‌ ಎಸ್‌ಸಿ/ಎಸ್‌ಟಿ ಸೇರಿದಂತೆ ಎಲ್ಲಾ ಹಿಂದೂಗಳನ್ನು ದ್ವೇಷಿಸುತ್ತದೆ. ಎಸ್‌ಸಿ, ಎಸ್‌ಟಿಗಳ ಅಭಿವೃದ್ಧಿಗಾಗಿ ಶ್ರಮಿಸುವ ಬಗ್ಗೆ ಕಾಂಗ್ರೆಸ್‌ ಸುಳ್ಳು ಹೇಳುತ್ತಿದೆ. ಹೀಗಾಗಿ ಕಾಂಗ್ರೆಸ್‌ನವರ ಮುಖಕ್ಕೆ ಅವರ ಪ್ರಣಾಳಿಕೆಯನ್ನು ಎಸೆಯಿರಿ ಎಂದು ವಿಡಿಯೋ ಸಮೇತ ಟ್ವೀಟ್‌ ಮಾಡಿದ್ದರು. ಇದಾದ ಬಳಿಕ ಏ. 22 ಮತ್ತು ಏ. 29ರಂದು ವಿನೀತ್‌ ನಾಯ್ಕ್‌ ವಿರುದ್ಧ ದೂರು ದಾಖಲಾಗಿತ್ತು.

ಬೆಂಗಳೂರಿನ ನಿವಾಸಿ ಮತ್ತು ಕಾಂಗ್ರೆಸ್ ಕಾರ್ಯಕರ್ತ ಜೆ ಸರವಣನ್ ಅವರು ಏಪ್ರಿಲ್ 29 ರಂದು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದರು. ಸೈಬರ್ ಕ್ರೈಂ ಪೊಲೀಸರು ಎಕ್ಸ್ ಬಳಕೆದಾರರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಎ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ 66 (ಸಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಎರಡು ಸಮುದಾಯಗಳ ನಡುವೆ ದ್ವೇಷ ಹುಟ್ಟುಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ತಿರುಚಿ ಪೋಸ್ಟ್​ ಮಾಡಲಾಗಿದೆ ಎಂದು ದೂರಲಾಗಿತ್ತು. ಇನ್ನು ವಿನೀತ್‌ ಟ್ವೀಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ಅದನ್ನು ಡಿಲೀಟ್‌ ಮಾಡಿದ್ದ.

ಪ್ರಕರಣ ದಾಖಲಿಸಿಕೊಂಡು ವಿನೀತ್‌ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು ಶನಿವಾರ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮತ್ತೊಂದೆಡೆ ನನ್ನ ತಂದೆಯನ್ನು ಬೆಂಗಳೂರು ಪೊಲೀಸರು ಇದ್ದಕ್ಕಿದ್ದಂತೆ ಬಂಧಿಸಿ ಕರೆದೊಯ್ದಿದ್ದಾರೆ, ಅವರನ್ನು ಬಿಡುಗಡೆ ಮಾಡಿ ಎಂದು ಮಗ ನಾಗೇಶ್​ ನಾಯ್ಕ್​ ಟ್ವೀಟ್​ ಮಾಡಿದ್ದಾರೆ.

ಈ ಸುದ್ದಿ ಹೊರಬಿದ್ದ ಬೆನ್ನಲ್ಲೇ ಬಿಜೆಪಿ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಎಕ್ಸ್‌ನಲ್ಲಿ, ಕರ್ನಾಟಕ ಪೊಲೀಸರು ಗೋವಾದಲ್ಲಿ ವಿನೀತ್‌ನನ್ನು ಬಂಧಿಸಿದ್ದಾರೆ. ನಾವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಅವರು ಎಲ್ಲಾ ಕಾನೂನು ಬೆಂಬಲವನ್ನು ನೀಡುತ್ತೇವೆ, ಕಾಂಗ್ರೆಸ್ ಅರಾಜಕತೆಯನ್ನು ಹೊರಹಾಕಿದೆ ಎಂದು ಬರೆದಿದ್ದಾರೆ.
ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಪೋಸ್ಟ್​ ಮಾಡಿ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಅಧಿಕಾರ ದುರ್ಬಳಕೆಯಾಗಿದೆ. ನಾವು ನ್ಯಾಯಾಲಯದ ಒಳಗೆ ಮತ್ತು ಹೊರಗೆ ಹೋರಾಡಲು ಸಿದ್ಧರಿದ್ದೇವೆ ಎಂದು ಬರೆದಿದ್ದಾರೆ. ಮತ್ತೊಂದೆಡೆ ಕೇಂದ್ರ ಸಚಿವ ಸ್ಮೃತಿ ಇರಾನಿ ಕೂಡ ವಿನೀತ್‌ ಬೆಂಬಲಕ್ಕೆ ನಿಂತಿದ್ದಾರೆ.

ಇದನ್ನೂ ಓದಿ:ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

Continue Reading

ಆರೋಗ್ಯ

FSSAI Warning: ನೀವು ತಿನ್ನುವ ಮಾವಿನ ಹಣ್ಣು ಸುರಕ್ಷಿತವಾಗಿದೆಯೇ?

ಮಾವಿನ ಹಣ್ಣನ್ನು ಕೃತಕವಾಗಿ ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಅನ್ನು ಬಳಸಲಾಗುತ್ತದೆ. ಇದರ ವಿರುದ್ಧ ವರ್ತಕರಿಗೆ ಗಂಭೀರ ಆರೋಗ್ಯ ಅಪಾಯಗಳನ್ನು ಉಲ್ಲೇಖಿಸಿ ಎಚ್ಚರಿಕೆಯನ್ನು ( FSSAI Warning) ನೀಡಲಾಗಿದೆ.

VISTARANEWS.COM


on

By

FSSAI alert
Koo

ಮಾರುಕಟ್ಟೆಯಲ್ಲಿ (market) ಮಾವಿನ (mango) ಹಣ್ಣುಗಳ ರಾಶಿ ಕಂಡಾಗ ಎಂಥವರ ಬಾಯಲ್ಲೂ ನೀರೂರುವಂತೆ ಮಾಡುತ್ತದೆ. ಆದರೆ ನಾವು ಹಣ ಕೊಟ್ಟು ಖರೀದಿ ಮಾಡಿ ತಂದ ಮಾವಿನ ಹಣ್ಣುಗಳು ಸುರಕ್ಷಿತವಾಗಿ ಇದೆಯೇ? ಯಾಕೆಂದರೆ ಮಾವಿನ ಹಣ್ಣುಗಳಲ್ಲಿರುವ ಕ್ಯಾಲ್ಸಿಯಂ ಕಾರ್ಬೈಡ್ (calcium carbide) ಅಪಾಯಗಳ ವಿರುದ್ಧ ಕೇಂದ್ರ ಆಹಾರ ನಿಯಂತ್ರಣ ಸಂಸ್ಥೆಯಾದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI Warning) ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದೆ.

ಮಾವಿನ ಹಣ್ಣಿನ ಋತುವಿನಲ್ಲಿ ಕ್ಯಾಲ್ಸಿಯಂ ಕಾರ್ಬೈಡ್ ಬಳಸುವುದರ ಬಗ್ಗೆ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರೈಪನಿಂಗ್ ಚೇಂಬರ್‌ಗಳನ್ನು ನಿರ್ವಹಿಸುವ ವ್ಯಾಪಾರಿಗಳಿಗೆ ಎಫ್‌ಎಸ್‌ಎಸ್‌ಎಐ ಎಚ್ಚರಿಕೆ ನೀಡಿದೆ.
ಮಾವಿನ ಹಣ್ಣನ್ನು ಕೃತಕವಾಗಿ ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಅನ್ನು ಬಳಸಲಾಗುತ್ತದೆ. ಇದರ ವಿರುದ್ಧ ವರ್ತಕರಿಗೆ ಗಂಭೀರ ಆರೋಗ್ಯ ಅಪಾಯಗಳನ್ನು ಉಲ್ಲೇಖಿಸಿ ಎಚ್ಚರಿಕೆಯನ್ನು ನೀಡಲಾಗಿದೆ.

ಮಾವಿನ ಹಣ್ಣಿನ ಋತುವಿನಲ್ಲಿ ಕ್ಯಾಲ್ಸಿಯಂ ಕಾರ್ಬೈಡ್ ಅನ್ನು ಬಳಸುವುದರ ಮೇಲಿನ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಫ್‌ಎಸ್‌ಎಸ್‌ಎಐ ಹಣ್ಣಿನ ವ್ಯಾಪಾರಿಗಳು, ಹ್ಯಾಂಡ್ಲರ್‌ಗಳು ಮತ್ತು ಫುಡ್ ಬ್ಯುಸಿನೆಸ್ ಆಪರೇಟರ್‌ಗಳು (ಎಫ್‌ಬಿಒಗಳು) ಪಕ್ವಗೊಳಿಸುವ ಕೋಣೆಗಳನ್ನು ನಿರ್ವಹಿಸುವ ಎಚ್ಚರಿಕೆ ನೀಡಿದೆ.

ಕ್ಯಾಲ್ಸಿಯಂ ಕಾರ್ಬೈಡ್‌ನ ಪರಿಣಾಮ?

ಮಾವಿನಹಣ್ಣಿನಂತಹ ಹಣ್ಣುಗಳನ್ನು ಹಣ್ಣಾಗಲು ಬಳಸುವ ಕ್ಯಾಲ್ಸಿಯಂ ಕಾರ್ಬೈಡ್, ಆರ್ಸೆನಿಕ್ ಮತ್ತು ಫಾಸ್ಪರಸ್‌ನ ಹಾನಿಕಾರಕ ಕುರುಹುಗಳನ್ನು ಹೊಂದಿರುವ ಅಸಿಟಿಲೀನ್ ಅನಿಲವನ್ನು ಬಿಡುಗಡೆ ಮಾಡುತ್ತದೆ. ‘ಮಸಾಲಾ’ ಎಂದು ಕರೆಯಲ್ಪಡುವ ಈ ಪದಾರ್ಥಗಳು ತಲೆತಿರುಗುವಿಕೆ, ಆಗಾಗ್ಗೆ ಬಾಯಾರಿಕೆ, ಕಿರಿಕಿರಿ, ದೌರ್ಬಲ್ಯ, ನುಂಗಲು ತೊಂದರೆ, ವಾಂತಿ ಮತ್ತು ಚರ್ಮದ ಹುಣ್ಣುಗಳನ್ನು ಉಂಟುಮಾಡಬಹುದು. ಅಸಿಟಿಲೀನ್ ಅನಿಲವು ಹ್ಯಾಂಡ್ಲರ್‌ಗಳಿಗೆ ಅಪಾಯಕಾರಿಯಾಗಿದೆ ಮತ್ತು ಆರ್ಸೆನಿಕ್ ಮತ್ತು ರಂಜಕದ ಅವಶೇಷಗಳು ಹಣ್ಣುಗಳ ಮೇಲೆ ಉಳಿಯಬಹುದು.

ಸಾಮಾನ್ಯವಾಗಿ ಕಾರ್ಬೈಡ್ ಗ್ಯಾಸ್ ಎಂದು ಕರೆಯಲ್ಪಡುವ ಅಸಿಟಿಲೀನ್ ಅನಿಲದ ಬಳಕೆಯಿಂದ ಕೃತಕವಾಗಿ ಮಾಗಿದ ಹಣ್ಣುಗಳನ್ನು ಯಾವುದೇ ವ್ಯಕ್ತಿಯು ಮಾರಾಟ ಮಾಡಬಾರದು ಎಂದು ಆಹಾರ ಸುರಕ್ಷತೆ ಮತ್ತು ಮಾನದಂಡಗಳು ನಿಷೇಧ ಮತ್ತು ಮಾರಾಟದ ಮೇಲಿನ ನಿರ್ಬಂಧಗಳ ನಿಯಮಗಳು-2011 ಹೇಳುತ್ತವೆ.


ಯಾವುದಕ್ಕೆ ಅನುಮತಿ ಇದೆ?

ಎಫ್‌ಎಸ್‌ಎಸ್‌ಎಐ ಪ್ರಕಾರ ಹಣ್ಣು ಹಣ್ಣಾಗಿಸಲು ಸುರಕ್ಷಿತ ಪರ್ಯಾಯವಾಗಿ ಎಥಿಲೀನ್ ಅನಿಲವನ್ನು ಬಳಸಲು ಅನುಮತಿ ನೀಡುತ್ತದೆ. ಎಥಿಲೀನ್ ಅನಿಲ, 100ಪಿಪಿಎಂವರೆಗಿನ ಸಾಂದ್ರತೆಗಳಲ್ಲಿ ಹಣ್ಣಾಗುವುದನ್ನು ನಿಯಂತ್ರಿಸುವ ನೈಸರ್ಗಿಕ ಹಾರ್ಮೋನ್ ಆಗಿದೆ. ಹಣ್ಣು ಎಥಿಲೀನ್ ಅನ್ನು ಗಣನೀಯ ಪ್ರಮಾಣದಲ್ಲಿ ಉತ್ಪಾದಿಸುವವರೆಗೆ ಇದು ನೈಸರ್ಗಿಕ ಮಾಗಿದ ಪ್ರಕ್ರಿಯೆಯನ್ನು ಪ್ರಚೋದಿಸುತ್ತದೆ. ಹೆಚ್ಚುವರಿಯಾಗಿ ಕೇಂದ್ರೀಯ ಕೀಟನಾಶಕ ಮಂಡಳಿ ಮತ್ತು ನೋಂದಣಿ ಸಮಿತಿ (CIB & RC) ಮಾವು ಮತ್ತು ಇತರ ಹಣ್ಣುಗಳ ಏಕರೂಪದ ಪಕ್ವತೆಗಾಗಿ ಎಥೆಫೋನ್ 39 ಪ್ರತಿಶತ ಎಸ್ ಎಲ್ ಅನ್ನು ಅನುಮೋದಿಸಿದೆ.

ಗುರುತಿಸುವುದು ಹೇಗೆ?

ಕ್ಯಾಲ್ಸಿಯಂ ಕಾರ್ಬೈಡ್‌ನಿಂದ ಹಣ್ಣಾದ ಮಾವಿನ ಹಣ್ಣನ್ನು ಗುರುತಿಸುವುದು ಸುಲಭ.

ವಿಶ್ವಾಸಾರ್ಹ ಮೂಲಗಳಿಂದ ಖರೀದಿಸಿ

ಹಣ್ಣುಗಳು ಮತ್ತು ತರಕಾರಿಗಳನ್ನು ತಿಳಿದಿರುವ ಮಾರಾಟಗಾರರು, ಪ್ರತಿಷ್ಠಿತ ಅಂಗಡಿಗಳು ಅಥವಾ ವಿತರಕರು ತಮ್ಮ ಉತ್ಪನ್ನಗಳನ್ನು ಹಾನಿಕಾರಕ ಅಥವಾ ನಿಷೇಧಿತ ರಾಸಾಯನಿಕಗಳಿಂದ ಹಣ್ಣಾಗಿಲ್ಲ ಎಂದು ಹೇಳಿಕೊಳ್ಳುತ್ತಾರೆ.

ಸಂಪೂರ್ಣವಾಗಿ ತೊಳೆಯುವುದು

ಯಾವುದೇ ಸಂಭಾವ್ಯ ಮೇಲ್ಮೈ ಮಾಲಿನ್ಯಕಾರಕಗಳನ್ನು ತೆಗೆದುಹಾಕಲು ತಿನ್ನುವ ಮೊದಲು ಕುಡಿಯುವ ನೀರಿನಲ್ಲಿ ಹಣ್ಣುಗಳನ್ನು ಚೆನ್ನಾಗಿ ತೊಳೆಯಿರಿ.

ಕಪ್ಪು ಕಲೆಗಳನ್ನು ತಪ್ಪಿಸಿ

ಮಾವಿನ ಹಣ್ಣುಗಳ ಚರ್ಮದ ಮೇಲೆ ಕಪ್ಪು ಮಚ್ಚೆಗಳಿರುವ ಹಣ್ಣುಗಳಿಂದ ದೂರವಿರಿ. ಏಕೆಂದರೆ ಇವುಗಳು ಕ್ಯಾಲ್ಸಿಯಂ ಕಾರ್ಬೈಡ್‌ನಿಂದ ಅಸಿಟಿಲೀನ್ ಅನಿಲದಿಂದ ಹಣ್ಣಾಗುತ್ತವೆ.

ಇದನ್ನೂ ಓದಿ: Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

ವಿನ್ಯಾಸವನ್ನು ಪರಿಶೀಲಿಸಿ

ಏಕರೂಪದ ಬಣ್ಣದ ವಿನ್ಯಾಸದೊಂದಿಗೆ ಮಾವಿನಹಣ್ಣು ಮತ್ತು ಇತರ ಹಣ್ಣುಗಳ ಬಗ್ಗೆ ಜಾಗರೂಕರಾಗಿರಿ. ಏಕೆಂದರೆ ಇದು ಸಂಭವನೀಯ ರಾಸಾಯನಿಕ ಪಕ್ವತೆಯ ಸಂಕೇತವಾಗಿದೆ.

ವಾಸನೆ ಮತ್ತು ಶೆಲ್ಫ್ ಲೈಫ್

ಕಲಬೆರಕೆ ಹಣ್ಣುಗಳು ಸ್ವಲ್ಪ ಕಟುವಾದ ವಾಸನೆ ಮತ್ತು ಕಡಿಮೆ ಶೆಲ್ಫ್ ಜೀವಿತಾವಧಿಯನ್ನು ಹೊಂದಿರುತ್ತದೆ ಎಂಬುದು ತಿಳಿದಿರಲಿ. ಸಾಮಾನ್ಯವಾಗಿ ಮಾಗಿದ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆಯನ್ನು ಸೂಚಿಸುತ್ತದೆ.

Continue Reading
Advertisement
Dangerous Bike Stunt
ಕರ್ನಾಟಕ1 min ago

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Narendra Modi
ದೇಶ46 mins ago

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

SRH vs PBKS
ಕ್ರೀಡೆ1 hour ago

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

Drowned in Lake
ಕರ್ನಾಟಕ1 hour ago

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

Bengaluru Rain
ಕರ್ನಾಟಕ2 hours ago

Bengaluru Rain: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಆರ್ಭಟ; ರಸ್ತೆಗಳು ಜಲಾವೃತ, ಹಲವೆಡೆ ಸಂಚಾರ ಅಸ್ತವ್ಯಸ್ತ

Kantara Movie
ಸಿನಿಮಾ2 hours ago

Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

SRH vs PBKS
ಕ್ರೀಡೆ2 hours ago

SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

Harish Poonja
ಕರ್ನಾಟಕ3 hours ago

Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

Ebrahim Raisi
ವಿದೇಶ3 hours ago

Ebrahim Raisi: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ

PBKS vs SRH
ಕ್ರೀಡೆ3 hours ago

PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ9 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌