Site icon Vistara News

Nisith Pramanik: ಬಂಗಾಳದಲ್ಲಿ ಕೇಂದ್ರ ಸಚಿವ ನಿಸಿತ್‌ ಪ್ರಾಮಾಣಿಕ್‌ ಬೆಂಗಾವಲು ವಾಹನದ ಮೇಲೆ ಕಲ್ಲುತೂರಾಟ

Union Minister Nisith Pramanik's Convoy Attacked With Stones In West Bengal

Nisith Pramanik

ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಪ್ರೇರಿತ ದಾಳಿಗಳು, ಹಿಂಸಾಚಾರ, ಹಲ್ಲೆ, ಹತ್ಯೆಯಂತಹ ಪ್ರಕರಣಗಳು ಆಗಾಗ ಸುದ್ದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ ಕೂಚ್‌ ಬೆಹಾರ್‌ ಜಿಲ್ಲೆಯಲ್ಲಿ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ನಿಸಿತ್‌ ಪ್ರಾಮಾಣಿಕ್‌ (Nisith Pramanik) ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದು ಈಗ ಬಿಜೆಪಿ ಹಾಗೂ ಟಿಎಂಸಿ ಮಧ್ಯೆ ಜಟಾಪಟಿಗೆ ಕಾರಣವಾಗಿದೆ.

ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾಗಲು ಸ್ಥಳೀಯ ಬಿಜೆಪಿ ಕಚೇರಿಗೆ ತೆರಳುವ ವೇಳೆ ದಿನ್ಹಾತ ಪ್ರದೇಶದಲ್ಲಿ ಸಚಿವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ದಾಳಿಯಿಂದಾಗಿ ಕಾರಿನ ಮುಂಭಾಗದ ಗಾಜು ಒಡೆದಿದೆ. ಈ ಕುರಿತು ಮಾತನಾಡಿರುವ ಸಚಿವ, “ನನ್ನ ಕಾರಿನ ಮೇಲೆ ಕಲ್ಲು ತೂರಾಟ ಮಾತ್ರವಲ್ಲ, ಗುಂಡಿನ ದಾಳಿ ನಡೆಸಲಾಗಿದೆ. ಬಾಂಬ್‌ ಎಸೆಯಲಾಗಿದೆ. ಪೊಲೀಸರ ಎದುರೇ ಇಷ್ಟೆಲ್ಲ ನಡೆದರೂ ಅವರು ಮೂಕ ಪ್ರೇಕ್ಷಕರಾಗಿ ನಿಂತಿದ್ದರು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಲ್ಲು ತೂರಾಟ ಸ್ಥಳದಲ್ಲಿ ಉದ್ವಿಗ್ನ ವಾತಾವರಣ

“ಮಮತಾ ಗೂಂಡಾಗಳ ಹಾವಳಿಯಿಂದಾಗಿ ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಚಿವರಿಗೇ ಭದ್ರತೆ ಇಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮರೀಚಿಕೆಯಾಗಿದ್ದು, ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯನ್ನು ಖಂಡಿಸುತ್ತೇನೆ” ಎಂದು ಪಶ್ಚಿಮ ಬಂಗಾಳ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ. ಆದರೆ, ಬಿಜೆಪಿ ಆರೋಪವನ್ನು ಟಿಎಂಸಿ ನಿರಾಕರಿಸಿದೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಪೊಲೀಸರು, ಜೆಸಿಬಿ ಮೇಲೆ ಕಲ್ಲು ತೂರಾಟ; ಅಧಿಕಾರಿಯ ಕಾಲರ್​ ಹಿಡಿದು ಹೊಡೆದ ಬಿಜೆಪಿ ಶಾಸಕನ ಹಿಂಬಾಲಕರು

Exit mobile version