ಲಖನೌ/ಕಠ್ಮಂಡು: ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದ ಬಳಿ (Nepal Plane Crash) ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟ ಐವರು ಭಾರತೀಯರು ಉತ್ತರ ಪ್ರದೇಶದ ಘಾಜಿಪುರದವರು ಎಂದು ತಿಳಿದುಬಂದಿದೆ. ಅಲ್ಲದೆ, ಭಾರತೀಯರ ಶವಗಳನ್ನು ಭಾರತಕ್ಕೆ ತರಲು ಕೇಂದ್ರ ಸರ್ಕಾರ ಶ್ರಮಿಸುತ್ತಿದ್ದು, ಇದಕ್ಕೆ ಸಹಕಾರ ನೀಡಬೇಕು ಎಂದು ಉತ್ತರ ಪ್ರದೇಶದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.
ಪೋಖರಾ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. “ದುರಂತದಲ್ಲಿ ಮೃತಪಟ್ಟವರು ಉತ್ತರ ಪ್ರದೇಶದ ಘಾಜಿಯಾಪುರದವರಾಗಿದ್ದಾರೆ. ಅವರ ಶವಗಳನ್ನು ಕರೆತರಲು ವಿದೇಶಾಂಗ ಸಚಿವಾಲಯದ ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂಬುದಾಗಿ ಉತ್ತರ ಪ್ರದೇಶದ ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ಯೋಗಿ ಟ್ವೀಟ್ ಮಾಡಿದ್ದಾರೆ.
ನರೇಂದ್ರ ಮೋದಿ ಸಂತಾಪ
ನೇಪಾಳ ವಿಮಾನ ದುರಂತದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ನೇಪಾಳದಲ್ಲಿ ಸಂಭವಿಸಿದ ದುರಂತದಲ್ಲಿ ಭಾರತೀಯರು ಸೇರಿ ಹಲವು ಜನ ಪ್ರಾಣ ಕಳೆದುಕೊಂಡಿರುವ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಮೃತರ ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ವಿಮಾನದಲ್ಲಿದ್ದ 72 ಜನರೂ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ | ವಿಸ್ತಾರ Explainer | ನೇಪಾಳದಲ್ಲಿ ಪದೇಪದೆ ವಿಮಾನ ದುರಂತ ಸಂಭವಿಸುವುದೇಕೆ? ಇದುವರೆಗಿನ ಭೀಕರ ದುರಂತ ಯಾವವು?