ಲಖನೌ: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ(UP CM v/s DCM) ಸ್ಫೋಟವಾಗಿದೆ. ಸಿಎಂ ಯೋಗಿ ಆದಿತ್ಯಾನಾಥ್(Yogi Adityanath) ಮತ್ತು ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ(Keshav Prasad Mourya) ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗಿದೆ. ಇಬ್ಬರ ನಡುವಿನ ಭಾರೀ ಭಿನ್ನಮತದ ಬೆನ್ನಲ್ಲೇ ಕೇಶವ್ ಪ್ರಸಾದ್ ಮೌರ್ಯ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ(JP Nadda) ಅವರನ್ನು ಭೇಟಿ ಮಾಡಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ. ಅದೂ ಅಲ್ಲದೇ ಚುನಾವಣಾ ಹಿನ್ನಡೆ ಬಳಿಕ ಸಿಎಂ ಯೋಗಿ ಆದಿತ್ಯನಾಥ್ ತಲೆದಂಡವಾಗಲಿದೆ ಎಂಬ ವದಂತಿಗೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ.
ಇನ್ನು ಜೆ ಪಿ ನಡ್ಡಾರ ಜೊತೆ ಕೇಶವ್ ಪ್ರಸಾದ್ ಭೇಟಿ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಸಿಂಗ್ ಚೌಧರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿ ಮಾತುಕತೆ ನಡೆಸಿರುವುದು ಎಲ್ಲರ ಗಮನ ಸೆಳೆದಿದೆ. ಇನ್ನು ಭೂಪೇಂದ್ರ ಸಿಂಗ್ ಚೌಧರಿ, ಜೆಪಿ ನಡ್ಡಾ ಅವರನ್ನೂ ಸಹ ಭೇಟಿ ಮಾಡಿ ಪ್ರತ್ಯೇಕ ಸಭೆ ನಡೆಸಿದ್ದಾರೆ.
ಜೆಪಿ ನಡ್ಡಾ ಭೇಟಿಗೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬಹಿರಂಗವಾಗಿ ಯೋಗಿ ಆದಿತ್ಯಾನಾಥ್ ವಿರುದ್ಧ ಕಿಡಿಕಾರಿದ್ದ ಮೌರ್ಯ “ಸರ್ಕಾರಕ್ಕಿಂತ ಸಂಘಟನೆ ದೊಡ್ಡದು. ನನ್ನ ಕಾರ್ಯಕರ್ತರ ನೋವು, ನನ್ನ ನೋವು ಕೂಡ. ಸಂಘಟನೆಗಿಂತ ಯಾರೂ ದೊಡ್ಡವರಲ್ಲ. ಕಾರ್ಯಕರ್ತರೇ ಹೆಮ್ಮೆ” ಎಂದು ಟ್ವೀಟ್ ಮಾಡಿತ್ತು. ಇದರ ಬೆನ್ನಲ್ಲೇ ಮೌರ್ಯ ಅವರ ದಿಲ್ಲಿ ಪ್ರವಾಸ ಸಂಚಲನ ಮೂಡಿಸಿತ್ತು.
संगठन सरकार से बड़ा है, कार्यकर्ताओं का दर्द मेरा दर्द है संगठन से बड़ा कोई नहीं, कार्यकर्ता ही गौरव है…
— Office of Keshav Prasad Maurya (@OfficeOfKPM) July 17, 2024
-मा0 उप मुख्यमंत्री श्री @kpmaurya1 जी#BJPUPKaryasamiti2024 pic.twitter.com/gSwqrJwtSB
ಕಳೆದ ಜೂನ್ 14ರಂದು ಲಖನೌದಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲೋಕಸಭೆ ಚುನಾವಣೆಯ ಹಿನ್ನಡೆಗೆ ‘ಅತಿಯಾದ ಆತ್ಮವಿಶ್ವಾಸ’ ಕಾರಣ ಎಂದು ಸಿಎಂ ಯೋಗಿ ಆದಿತ್ಯನಾಥ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಸೇರಿದಂತೆ ರಾಜ್ಯ ಬಿಜೆಪಿಯ ಹಲವು ನಾಯಕರು, ಯೋಗಿ ಆದಿತ್ಯನಾಥ್ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ತಮ್ಮ ಸೋಲಿಗೆ ಯೋಗಿ ಅವರ ಆಡಳಿತ ಶೈಲಿಯೇ ಕಾರಣ ಎಂದು ಆರೋಪಿಸುತ್ತಿದ್ದರು.
ಅಖಿಲೇಶ್ ಯಾದವ್ ಗೆ ತಿರುಗೇಟು
ಏತನ್ಮಧ್ಯೆ, ಮೌರ್ಯ ಅವರ ಪೋಸ್ಟ್ ಅನ್ನೇ ಅಸ್ತ್ರವನ್ನಾಗಿಸಿಕೊಂಡು ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ವ್ಯಂಗ್ಯವಾಡಿದೆ. ಈ ಬಗ್ಗೆ ಎಸ್ಪಿ ನಾಯಕ ಅಖಲೇಶ್ ಯಾದವ್ ಬಿಜೆಪಿಯನ್ನು ಟೀಕಿಸಿದ್ದರು. ಇದಕ್ಕೆ ಟಾಂಗ್ ಕೊಟ್ಟ, ಕೇಶವ್ ಪ್ರಸಾದ್ ಮೌರ್ಯ, ಇಂದು ಬಿಜೆಪಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಬಲವಾಗಿದೆ ಮತ್ತು 2027 ರಲ್ಲಿ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಹೇಳಿದರು.
ಇದನ್ನೂ ಓದಿ:Director Arrest: ಕೊಲೆ ಕೇಸ್ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸ್ಯಾಂಡಲ್ವುಡ್ ನಿರ್ದೇಶಕ ಅರೆಸ್ಟ್!