Site icon Vistara News

Cabinet Meeting: ಅಯೋಧ್ಯೆಯಲ್ಲಿ ಯುಪಿ ಸಂಪುಟ ಸಭೆ! ನಾನಾ ಪ್ರಾಜೆಕ್ಟ್‌ಗೆ ಗ್ರೀನ್ ಸಿಗ್ನಲ್

Yogi Adityanath

Yogi Adityanath's 'Ram Naam Satya' Warning To Those Involved In Crimes

ಲಕ್ನೋ: ಅಯೋಧ್ಯೆ ಅಭಿವೃದ್ಧಿಗೆ ಸಂಬಂಧಿಸಿದಂತೆ 14 ಪ್ರಾಜೆಕ್ಟ್‌ಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (UP CM Yogi Adityanath) ನೇತೃತ್ವದ ಸಚಿವ ಸಂಪುಟವು ಗುರುವಾರ ಒಪ್ಪಿಗೆ ನೀಡಿದೆ(ayodhya cabinet Meeting). ಅಯೋಧ್ಯೆಯ ಸರಯೂ ನದಿ (Saryu river) ದಡದಲ್ಲಿರುವ ರಾಮಕಥಾ ಮಂಟಪದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ಕುರಿತು ಚರ್ಚೆ ನಡೆಸಿ, ನಿರ್ಧಾರ ಕೈಗೊಳ್ಳಲಾಯಿತು. ಒಳನಾಡು ಜಲಮಾರ್ಗ ಪ್ರಾಧಿಕಾರ ರಚನೆಗೆ ಸಮ್ಮತಿಸಲಾಯಿತು. ಮುಂದಿನ ವರ್ಷ ಜನವರಿಯಲ್ಲಿ ಅಯೋಧ್ಯ ರಾಮಮಂದಿರ ಲೋಕಾರ್ಪಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈಗ ನಡೆದ ಸಚಿವ ಸಂಪುಟ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ.

ಇಂದು ಉತ್ತರ ಪ್ರದೇಶದ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಲಾಗಿದೆ. ಉತ್ತರ ಪ್ರದೇಶದ ಸರ್ಕಾರದ ಸಂಪೂರ್ಣ ಕ್ಯಾಬಿನೆಟ್ ಅಯೋಧ್ಯಾ ಧಾಮಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಹೇಳಿದರು. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಉತ್ತರ ಪ್ರದೇಶ ಅಭಿವೃದ್ಧಿಯ ಅನೇಕ ಯೋಜನೆಗಳ ಕುರಿತು ಚರ್ಚಿಸಲಾಗಿದೆ. ಅಯೋಧ್ಯೆಯಲ್ಲಿ ಈಗಾಗಲೇ 30500 ಕೋಟಿ ರೂ. ವೆಚ್ಚದ ರಾಜ್ಯ ಹಾಗೂ ಕೇಂದ್ರ ಸರ್ಕಾರದ 178 ಯೋಜನೆಗಳು ಚಾಲ್ತಿಯಲ್ಲಿವೆ ಎಂದು ಯೋಗಿ ಆದಿತ್ಯನಾಥ ಅವರು ತಿಳಿಸಿದರು.

ಜಲ ಸಾರಿಗೆಯನ್ನು ಉತ್ತೇಜಿಸಲು ಮತ್ತು ಜಲ ಪ್ರವಾಸೋದ್ಯಮವನ್ನು ಪ್ರಚಾರ ಪಡಿಸಲು ಉತ್ತರ ಪ್ರದೇಶದಲ್ಲಿ ಒಳನಾಡು ಜಲಮಾರ್ಗ ಪ್ರಾಧಿಕಾರವನ್ನು ಸ್ಥಾಪಿಸುವುದು ಮೊದಲ ಪ್ರಸ್ತಾಪವಾಗಿದೆ ಎಂದು ಯೋಗಿ ಆದಿತ್ಯನಾಥ ಅವರು ಹೇಳಿದ್ದಾರೆ. ಇದಕ್ಕಾಗಿ ರಾಜ್ಯ ಮಟ್ಟದಲ್ಲಿ ಪ್ರಾಧಿಕಾರವನ್ನು ರಚಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಅಯೋಧ್ಯೆ ತೀರ್ಥ ವಿಕಾಸ ಪರಿಷತ್ ಮತ್ತು ಮಾ ಪತೇಶಶ್ರೀ ಧಾಮ ತೀರ್ಥ ವಿಕಾಸ ಪರಿಷತ್ ಸ್ಥಾಪನೆಗೆ ಒಪ್ಪಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ರಾಜ್ಯದಲ್ಲಿ ಡ್ರೋನ್‌ಗಳನ್ನು ಹಾರಿಸುವ ನಿಯಮಗಳಿಗೂ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು. ಸಚಿವ ಸಂಪುಟದ ಸಭೆಗೂ ಮುನ್ನ, ಹನುಮಾನ ಘರೀ ಮತ್ತು ರಾಮ ದೇಗುಲದಲ್ಲಿ ಸಚಿವರು ಪೂಜೆ ಸಲ್ಲಿಸಿದರು.

ಅಯೋಧ್ಯೆಯಲ್ಲಿ ನಡೆದ ಸಭೆ ಐತಿಹಾಸಿಕವಾಗಿದ್ದು, ಈ ದಿನ ಇತಿಹಾಸದಲ್ಲಿ ದಾಖಲಾಗಲಿದೆ ಎಂದು ಸಂಪುಟ ಸಚಿವ ನಂದಗೋಪಾಲ್ ನಂದಿ ಹೇಳಿದ್ದಾರೆ. “ಐತಿಹಾಸಿಕ ಕ್ಷಣವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ, ಈ ದಿನವು ಐತಿಹಾಸಿಕವಾಗಿದೆ ಮತ್ತು ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಲಾಗುವುದು. ಈ ದೇಶ ಮತ್ತು ರಾಜ್ಯದ ಮುಂದಿನ ಪೀಳಿಗೆಗಳು ಈ ದಿನವನ್ನು ನೆನಪಿನಲ್ಲಿಡಲಿದ್ದಾರೆ ಅವರು ಹೇಳಿದರು.

Exit mobile version