ಫೇಸ್‌ಬುಕ್‌ನಲ್ಲಿ ಪ್ಯಾಲೆಸ್ತೀನ್ ಪರ ಪೋಸ್ಟ್, ಯುಪಿ ಪೊಲೀಸ್ ಕಾನ್‌ಸ್ಟೆಬಲ್ ಸಸ್ಪೆಂಡ್! - Vistara News

ದೇಶ

ಫೇಸ್‌ಬುಕ್‌ನಲ್ಲಿ ಪ್ಯಾಲೆಸ್ತೀನ್ ಪರ ಪೋಸ್ಟ್, ಯುಪಿ ಪೊಲೀಸ್ ಕಾನ್‌ಸ್ಟೆಬಲ್ ಸಸ್ಪೆಂಡ್!

UP Police Constable: ಫೇಸ್‌ಬುಕ್‌ನಲ್ಲಿ ಸೇವ್ ಪ್ಯಾಲೆಸ್ತೀನ್ ಎಂದು ಪೋಸ್ಟ್ ಹಾಕಿದ್ದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತು ಮಾಡಿ, ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

VISTARANEWS.COM


on

UP Police Constable Suspended For Pro-Palestinian Facebook Post
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಪ್ಯಾಲೆಸ್ತೀನ್ ಪರ (Save Palestine) ಬೆಂಬಲಿಸಿ ಪೋಸ್ಟ್ ಮಾಡಿದ್ದ ಉತ್ತರ ಪ್ರದೇಶದ ಕಾನ್‌ಸ್ಟೆಬಲ್ (UP Police Constable) ಒಬ್ಬರನ್ನು ಸೇವೆಯಿಂದ ಅಮಾನತು (Suspend from Service) ಮಾಡಿರುವ ಸರ್ಕಾರವು, ಇಲಾಖಾ ತನಿಖೆಗೆ ಆದೇಶಿಸಿದೆ. ಇಸ್ರೇಲ್ ಮತ್ತು ಹಮಾಸ್ ಮಧ್ಯೆ ಯುದ್ಧ ನಡೆಯುತ್ತಿರುವ (Israel Palestine War) ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಕಾನ್‌ಸ್ಟೆಬಲ್, ಪ್ಯಾಲೆಸ್ತೀನ್ ಪರ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಲ್ಲದೇ, ನಿಧಿ ಸಂಗ್ರಹಕ್ಕೆ ಮುಂದಾಗಿದ್ದಾರೆಂದು ಆರೋಪಿಸಲಾಗಿದೆ. ಈ ಪೋಸ್ಟ್ ಭಾರೀ ವೈರಲ್ ಆಗಿತ್ತು. ಬಳಿಕ ಅವರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ. ಸುಹೈಲ್ ಅನ್ಸಾರಿ ಅಮಾನತು ಆಗಿರುವ ಪೊಲೀಸ್ ಕಾನ್‌ಸ್ಟೆಬಲ್. ಬರೇಲಿ ನಿವಾಸಿಯಾಗಿರುವ ಅನ್ಸಾರಿ, ಲಖೀಂಪುರ್ ಖೇರಿ ಜಿಲ್ಲೆಯಲ್ಲಿ ಕೆಲವು ತಿಂಗಳಿಂದ ಡ್ಯೂಟಿಯಲ್ಲಿದ್ದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೇಣಿಯ ಅಧಿಕಾರಿಯು ಪ್ರಕರಣವನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಕಾನ್‌ಸ್ಟೆಬಲ್ ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಫೇಸ್‌ಬುಕ್‌ನಲ್ಲಿ ಪ್ಯಾಲೆಸ್ತೀನ್ ಅನ್ನು ಬೆಂಬಲಿಸುವ ಅವರ ಪೋಸ್ಟ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಎಂದು ಸಿಟಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿರುವ ಖೇರಿ ಡಿಎಸ್ಪಿ ಸಂದೀಪ್ ಸಿಂಗ್ ಅವರು ಹೇಳಿದ್ದಾರೆ.

ಪ್ಯಾಲೆಸ್ತೀನ್ ಉಳುವಿಗಾಗಿ ಹಣ ನೀಡುವಂತೆ ಅಸಮಾನತುಗೊಂಡಿರುವ ಪೊಲೀಸ್ ಕಾನ್‌ಸ್ಟೆಬಲ್ ಅವರು ಎಕ್ಸ್ ವೇದಿಕೆ ಮತ್ತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ಈ ಕುರಿತು ಉತ್ತರ ಪ್ರದೇಶ ಪೊಲೀಸರಿಗೆ ದೂರುಗಳನ್ನು ಸ್ವೀಕರಿಸಿದ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿದ್ದಾರೆ.

ಇಸ್ರೇಲ್-ಹಮಾಸ್ ಯುದ್ಧಕ್ಕೆ ಸಂಬಂಧಿಸಿದ ಯಾವುದನ್ನಾದರೂ ಪೋಸ್ಟ್ ಮಾಡಿದ್ದಕ್ಕಾಗಿ ಸರ್ಕಾರಿ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಅಮಾನತುಗೊಳಿಸಿದ ಈ ರೀತಿಯ ಮೊದಲ ಪ್ರಕರಣ ಇದಾಗಿದೆ.

ಅಕ್ಟೋಬರ್ 7ರಂದು ಹಮಾಸ್ ಬಂಡುಕೋರರು ದಕ್ಷಿಣ ಇಸ್ರೇಲ್ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಸಾವಿರಕ್ಕೂ ಅಧಿಕ ಇಸ್ರೇಲ್‌ ಜನರು ಮೃತಪಟ್ಟಿದ್ದರು. ಇದಾದ ಬಳಿಕ ಇಸ್ರೇಲ್, ಹಮಾಸ್ ಬಂಡುಕೋರರ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಪರಿಪೂರ್ಣ ಯುದ್ಧ ಆರಂಭಿಸಿದ್ದರಿಂದ ಈವರೆಗೆ 4000ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. ಕಳೆದ ಒಂದು ವಾರದಿಂದ ಯುದ್ಧ ನಡೆಯುತ್ತಿದೆ.

ಈ ಸುದ್ದಿಯನ್ನೂ ಓದಿ: Israel Palestine War: ನಮ್ಮ ಕೈ ಟ್ರಿಗರ್ ಮೇಲಿದೆ! ಇಸ್ರೇಲ್‌ಗೆ ನೇರ ಎಚ್ಚರಿಕೆ ನೀಡಿದ ಇರಾನ್

ಐಸ್‌ಕ್ರೀಮ್‌ ಸಾಗಿಸುತ್ತಿದ್ದ ಟ್ರಕ್‌ಗಳು ಈಗ ಶವಾಗಾರಗಳು!

ಯುದ್ಧದ ರೀತಿ ಯಾವುದೇ ಆಗಿರಲಿ, ಯಾವುದೇ ಕಾರಣಕ್ಕೆ ಯುದ್ಧ ಸಂಭವಿಸಲಿ, ಅದರ ಸ್ವರೂಪ, ಪರಿಣಾಮ ಮಾತ್ರ ಮನುಕುಲದ ಮೇಲೆ ಒಂದೇ ಪರಿಣಾಮ ಬೀರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ಸಂಘರ್ಷದ (Israel Palestine War) ಪರಿಣಾಮವನ್ನು ಮುಗ್ಧ ನಾಗರಿಕರು, ಮಕ್ಕಳು, ಸ್ತ್ರೀಯರು ಎದುರಿಸುತ್ತಿದ್ದಾರೆ. ಮನೆ ಕಳೆದುಕೊಂಡು, ಸಂಬಂಧಿಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಅದರಲ್ಲೂ, ಇಸ್ರೇಲ್‌ ದಾಳಿಗೆ ಗಾಜಾ ನಗರವು ಅಕ್ಷರಶಃ ಮಸಣದಂತಾಗಿದೆ. ಐಸ್‌ಕ್ರೀಮ್‌ ಸಾಗಿಸುತ್ತಿದ್ದ ಟ್ರಕ್‌ಗಳಲ್ಲಿ (Ice Cream Trucks) ಶವಗಳನ್ನು ಇರಿಸುವ ಮೂಲಕ ಅವುಗಳನ್ನು ಶವಾಗಾರಗಳನ್ನಾಗಿ ಬಳಸಲಾಗುತ್ತಿದೆ. ಅಷ್ಟರಮಟ್ಟಿಗೆ ಇಸ್ರೇಲ್‌ ದಾಳಿಗೆ ಗಾಜಾ ನಗರದಲ್ಲಿ (Gaza City) ಅಮಾಯಕರ ಹೆಣಗಳು ಉರುಳಿವೆ.

ಹಮಾಸ್‌ ಉಗ್ರರು ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ದಾಳಿ ನಡೆಸಿದ ಬಳಿಕ ಇಸ್ರೇಲ್‌ ಸೇನೆಯು ಗಾಜಾ ನಗರದ ಮೇಲೆ ಮುಗಿಬಿದ್ದಿದೆ. ಇದರಿಂದಾಗಿ ಗಾಜಾದಲ್ಲಿ ಇದುವರೆಗೆ 2,600ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಆಸ್ಪತ್ರೆಗಳ ಶವಾಗಾರಗಳಲ್ಲಿ ಜನರ ಶವಗಳನ್ನು ಇರಿಸಲು ಕೂಡ ಜಾಗ ಇಲ್ಲದಂತಾಗಿದೆ. ಹಾಗಾಗಿ, ಗಾಜಾ ನಗರದಲ್ಲಿ ಐಸ್‌ಕ್ರೀಮ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ಗಳನ್ನೇ ಶವಾಗಾರಗಳನ್ನಾಗಿ ಬಳಸಲಾಗುತ್ತಿದೆ. ಟ್ರಕ್‌ಗಳಲ್ಲಿ ಶವಗಳನ್ನು ಇರಿಸುವ ಮೂಲಕ ಅವುಗಳನ್ನೇ ಶವಾಗಾರಗಳ ರೀತಿ ಬಳಸಲಾಗುತ್ತಿದೆ. ಈ ಕುರಿತು ಪತ್ರಕರ್ತರೊಬ್ಬರು ಮಾಡಿದ ವರದಿಯ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Phalodi Satta Bazar: ಚುನಾವಣೆಯಲ್ಲಿ ಮೋದಿ ಹ್ಯಾಟ್ರಿಕ್ ಖಚಿತ; ಸಟ್ಟಾ ಬಜಾರ್‌ ಸಮೀಕ್ಷಾ ವರದಿ ಇಲ್ಲಿದೆ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದೇ 300 ಸೀಟುಗಳಲ್ಲಿ ಗೆದ್ದರೂ ಕೆಲ ರಾಜ್ಯಗಳಿಗೆ ಬಿಜೆಪಿಗೆ ಅನುಕೂಲವಾದರೆ, ಕೆಲ ರಾಜ್ಯಗಳಲ್ಲಿ ಬಿಜೆಪಿಗೆ ಕಡಿಮೆ ಸ್ಥಾನಗಳು ಲಭಿಸಲಿವೆ ಎಂದು ಹೇಳಲಾಗುತ್ತಿದೆ. ಬಿಹಾರ, ಹರಿಯಾಣ, ಮಹಾರಾಷ್ಟ್ರ ಹಾಗೂ ರಾಜಸ್ಥಾನದಲ್ಲಿ ಬಿಜೆಪಿಯ ಸ್ಥಾನಗಳು ಕಡಿಮೆಯಾಗಲಿವೆ. ಆದರೆ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಗೆ ಹೆಚ್ಚಿನ ಕ್ಷೇತ್ರಗಳು ಬರಲಿವೆ ಎಂಬುದಾಗಿ ಸಮೀಕ್ಷಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

Phalodi Satta Bazar
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ಐದು ಹಂತದ ಮತದಾನ ಮುಕ್ತಾಯಗೊಂಡಿದೆ. ಆರನೇ ಹಂತದ ಮತದಾನವು ಶನಿವಾರ (ಮೇ 25) ನಡೆಯಲಿದೆ. ಇದಕ್ಕಾಗಿ ಚುನಾವಣೆ ಆಯೋಗ ಸಕಲ ಸಿದ್ಧತೆ ಕೈಗೊಳ್ಳುತ್ತಿದೆ. ಇದರ ಮಧ್ಯೆಯೇ, ಫಲೋಡಿ ಸಟ್ಟಾ ಬಜಾರ್‌ ಮಾರ್ಕೆಟ್‌ (Phalodi Satta Bazar) ಸಂಸ್ಥೆಯು ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಹೊಸ ಸಮೀಕ್ಷಾ ವರದಿ ಪ್ರಕಟಿಸಿದೆ. ಲೇಟೆಸ್ಟ್‌ ವರದಿ ಪ್ರಕಾರ, ನರೇಂದ್ರ ಮೋದಿ (Narendra Modi) ಅವರು ಹ್ಯಾಟ್ರಿಕ್‌ ಸಾಧಿಸುವುದು ಖಚಿತ ಎಂದು ವರದಿ ತಿಳಿಸಿದೆ.

ಐದು ಹಂತದ ಮತದಾನದ ಮುಕ್ತಾಯದ ಬಳಿಕ ಸಟ್ಟಾ ಬಜಾರ್‌ ಮಾರ್ಕೆಟ್‌ ಸಮೀಕ್ಷಾ ವರದಿ ಪ್ರಕಟಿಸಿದಂತೆ, ಬಿಜೆಪಿಯೊಂದೇ 304-306 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಎನ್‌ಡಿಎ ಮೈತ್ರಿಕೂಟವು ಸುಲಭವಾಗಿ 325-330 ಕ್ಷೇತ್ರಗಳಲ್ಲಿ ಜಯಿಸಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷವು 60-62 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂಬುದಾಗಿ ಸಮೀಕ್ಷಾ ವರದಿ ತಿಳಿಸಿದೆ. ಹಾಗಾಗಿ, ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವೇ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂಬುದು ವರದಿಯ ಸಾರಾಂಶವಾಗಿದೆ.

ಎಲ್ಲಿ ಏಳು? ಎಲ್ಲಿ ಬೀಳು?

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದೇ 300 ಸೀಟುಗಳಲ್ಲಿ ಗೆದ್ದರೂ ಕೆಲ ರಾಜ್ಯಗಳಿಗೆ ಬಿಜೆಪಿಗೆ ಅನುಕೂಲವಾದರೆ, ಕೆಲ ರಾಜ್ಯಗಳಲ್ಲಿ ಬಿಜೆಪಿಗೆ ಕಡಿಮೆ ಸ್ಥಾನಗಳು ಲಭಿಸಲಿವೆ ಎಂದು ಹೇಳಲಾಗುತ್ತಿದೆ. ಬಿಹಾರ, ಹರಿಯಾಣ, ಮಹಾರಾಷ್ಟ್ರ ಹಾಗೂ ರಾಜಸ್ಥಾನದಲ್ಲಿ ಬಿಜೆಪಿಯ ಸ್ಥಾನಗಳು ಕಡಿಮೆಯಾಗಲಿವೆ. ಆದರೆ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಗೆ ಹೆಚ್ಚಿನ ಕ್ಷೇತ್ರಗಳು ಬರಲಿವೆ. ತಮಿಳುನಾಡು ಹಾಗೂ ಒಡಿಶಾ ಕೂಡ ಬಿಜೆಪಿಗೆ ಹೆಚ್ಚಿನ ಕ್ಷೇತ್ರಗಳನ್ನು ತಂದುಕೊಡಲಿವೆ ಎಂಬುದಾಗಿ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.

ಫಲೋಡಿ ಸಟ್ಟಾ ಮಾರುಕಟ್ಟೆ ಇತಿಹಾಸವೇನು?

ಇದೀಗ ಲೋಕಸಭೆ ಚುನಾವಣೆ ಕೊನೆಯ ಹಂತಕ್ಕೆ ತಲುಪಿದ್ದು, ಇನ್ನುಳಿದಿರುವುದು ಕೇವಲ ಎರಡೇ ಹಂತದ ಚುನಾವಣೆ. ಹೀಗಿರುವಾಗ ಮತ್ತೊಮ್ಮೆ ಚುನಾವಣಾ ಫಲಿತಾಂಶದ ಭವಿಷ್ಯವಾಣಿಗಾಗಿ ರಾಜಸ್ಥಾನ ಮೂಲಕ ಫಲೋಡಿ ಸಟ್ಟಾ ಬಜಾರ್‌ನತ್ತ ಎಲ್ಲರೂ ಮುಖಮಾಡಿದ್ದಾರೆ. ಫಲೋಡಿ ಸಟ್ಟಾ ಮಾರುಕಟ್ಟೆಯು ಶತಮಾನಗಳ ಇತಿಹಾಸ ಹೊಂದಿದೆ. 19 ನೇ ಶತಮಾನದ ಅಂತ್ಯದ ವೇಳೆಗೆ ಈ ಮಾರುಕಟ್ಟೆಯ ಭವಿಷ್ಯವಾಣಿ ಮೂಲಕ ದೇಶದ ಗಮನವನ್ನೇ ಸೆಳೆದಿತ್ತು. ಹಿಂದೆ ಮಳೆಯ ಮುನ್ಸೂಚನೆಗಾಗಿ ಈ ಮಾರುಕಟ್ಟೆಯ ಮೇಲೆ ಜನ ಅವಲಂಭಿಸಿದ್ದರು. ಬರು ಬರುತ್ತಾ ಈ ಕಲೆ ದಂಧೆಯಾಗಿ ಮಾರ್ಪಾಡಾಗಿತ್ತು. ಅನಂತರದ ದಿನಗಳಲ್ಲಿ ಚುನಾವಣಾ ಭವಿಷ್ಯವಾಣಿ, ಬೆಟ್ಟಿಂಗ್‌ ದಂಧೆಗಳಿಗೆ ಈ ಮಾರುಕಟ್ಟೆ ಕುಖ್ಯಾತಿ ಪಡೆಯಿತು. ಕಾನೂನೂ ಬಾಹಿರವಾಗಿದ್ದರೂ ಕ್ರಿಕೆಟ್‌, ಐಪಿಎಲ್‌ ಸಂದರ್ಭದಲ್ಲಿ ಇಲ್ಲಿ ಅತಿ ಹೆಚ್ಚಾಗಿ ಬೆಟ್ಟಿಂಗ್‌ ನಡೆಯುತ್ತದೆ ಎಂಬ ಆರೋಪ ಕೇಳಿಬರುತ್ತದೆ.

ಇದನ್ನೂ ಓದಿ: Narendra Modi: 2047ರವರೆಗೆ ದೇಶಕ್ಕಾಗಿ ನನ್ನ ಸೇವೆ; ಇದು ದೇವರ ಆದೇಶ ಎಂದ ಮೋದಿ

Continue Reading

ದೇಶ

Narendra Modi: 2047ರವರೆಗೆ ದೇಶಕ್ಕಾಗಿ ನನ್ನ ಸೇವೆ; ಇದು ದೇವರ ಆದೇಶ ಎಂದ ಮೋದಿ

Narendra Modi: ದೇವರೇ ನನಗೆ ದಾರಿ ತೋರುತ್ತಿದ್ದಾನೆ, ಆತನೇ ನನಗೆ ಶಕ್ತಿ ತುಂಬುತ್ತಿದ್ದಾನೆ. ನನಗೆ ತುಂಬ ವಿಶ್ವಾಸವಿದೆ. ನಾನು 2047ರ ವೇಳೆಗೆ ದೇಶವು ವಿಕಸಿತ ಆಗುತ್ತದೆ ಎಂಬ ದೃಢ ನಿಶ್ಚಯವಿದೆ. ಹಾಗಾಗಿ, ನಾನು 2047ರವರೆಗೆ ಹಗಲು-ರಾತ್ರಿ ಕೆಲಸ ಮಾಡುತ್ತೇನೆ. ಆ ವಿಶ್ವಾಸ ನನ್ನಲ್ಲಿ ಹೆಚ್ಚಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದಿದ್ದು, ಶನಿವಾರ (ಮೇ 25) 6ನೇ ಹಂತದ ಮತದಾನ ನಡೆಯಲಿದೆ. ಹಾಗಾಗಿ, ಚುನಾವಣೆ ಪ್ರಚಾರವೂ ಅಬ್ಬರದಿಂದ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಂತೂ ಸಾಲು ಸಾಲು ಸಮಾವೇಶಗಳ ಜತೆಗೆ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಇದರ ಮಧ್ಯೆಯೇ, ನರೇಂದ್ರ ಮೋದಿ ಅವರು, “ವಿಕಸಿತ ಭಾರತದ (Viksit Bharat) ನಿರ್ಮಾಣವಾಗುವವರೆಗೆ ಅಂದರೆ, 2047ರವರೆಗೆ ನಾನು ಕೆಲಸ ಮಾಡಬೇಕು ಎಂಬುದು ದೇವರ ಆದೇಶವಾಗಿದೆ” ಎಂದು ಹೇಳಿದ್ದಾರೆ. ಆ ಮೂಲಕ 2047ರವರೆಗೆ ನಾನೇ ಪ್ರಧಾನಿ ಎಂಬುದನ್ನು ಸೂಚ್ಯವಾಗಿ ತಿಳಿಸಿದ್ದಾರೆ.

“ದೇವರು ನನಗೆ ವಿಶೇಷ ಕಾರಣಕ್ಕಾಗಿ ಇಲ್ಲಿಗೆ ಕಳುಹಿಸಿದ್ದಾನೆ ಎಂಬುದು ನನ್ನ ಭಾವನೆ. ವಿಕಸಿತ ಭಾರತದ ಕಲ್ಪನೆ ಸಾಕಾರ ಮಾಡು ಎಂಬುದು ದೇವರ ಆದೇಶವಾಗಿದೆ. ದೇವರೇ ನನಗೆ ದಾರಿ ತೋರುತ್ತಿದ್ದಾನೆ, ಆತನೇ ನನಗೆ ಶಕ್ತಿ ತುಂಬುತ್ತಿದ್ದಾನೆ. ನನಗೆ ತುಂಬ ವಿಶ್ವಾಸವಿದೆ. ನಾನು 2047ರ ವೇಳೆಗೆ ದೇಶವು ವಿಕಸಿತ ಆಗುತ್ತದೆ ಎಂಬ ದೃಢ ನಿಶ್ಚಯವಿದೆ. ಹಾಗಾಗಿ, ನಾನು 2047ರವರೆಗೆ ಹಗಲು-ರಾತ್ರಿ ಕೆಲಸ ಮಾಡುತ್ತೇನೆ. ಅಲ್ಲಿಯ ತನಕ ದೇವರು ನನ್ನನ್ನು ಕರೆದುಕೊಳ್ಳುವುದಿಲ್ಲ” ಎಂದು 74 ವರ್ಷದ ನರೇಂದ್ರ ಮೋದಿ ಅವರು ಇಂಡಿಯಾ ಟಿವಿಗೆ ನೀಡಿದ ಸಂದರ್ಶನದ ವೇಳೆ ಪ್ರಸ್ತಾಪಿಸಿದ್ದಾರೆ.

ಪಾಕ್‌ನಲ್ಲಿ ಉಗ್ರರ ಹತ್ಯೆ ಹಿಂದೆ ಇರೋದು ಯಾರು?

ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಉಗ್ರರು ಬಲಿಯಾಗುತ್ತಿರುವುದರ ಹಿಂದೆ ಭಾರತದ ಕೈವಾಡ ಇದೆ ಎಂಬುದಾಗಿ ಸಂದರ್ಶಕ ಕೇಳಿದ ಪ್ರಶ್ನೆಗೆ ನರೇಂದ್ರ ಮೋದಿ ಉತ್ತರಿಸಿದರು. “ಪಾಕಿಸ್ತಾನದವರು ಇದರ ಕುರಿತು ಚಿಂತೆ ಮಾಡುತ್ತಾರೆ. ಆದರೆ, ಪಾಕಿಸ್ತಾನದಲ್ಲಿ ಉಗ್ರರು ಹತ್ಯೆಗೀಡಾದರೆ, ಭಾರತದಲ್ಲಿರುವ ಕೆಲವರ ಕಣ್ಣಿನಲ್ಲಿ ನೀರು ಏಕೆ ಬರುತ್ತದೆ ಎಂಬುದೇ ನನಗೆ ಗೊತ್ತಾಗುತ್ತಿಲ್ಲ” ಎಂದಷ್ಟೇ ಹೇಳಿದರು. ಸಂದರ್ಶನದ ವೇಳೆ ರಾಹುಲ್‌ ಗಾಂಧಿ, ಪ್ರತಿಪಕ್ಷಗಳು, ಅಭಿವೃದ್ಧಿ, ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ ಸೇರಿ ಹಲವು ವಿಷಯಗಳ ಕುರಿತು ಮೋದಿ ಮಾತನಾಡಿದರು.

ಮಣಿಶಂಕರ್‌ ಅಯ್ಯರ್‌ ‘ಅಣುಬಾಂಬ್‌’ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿರು. “ನಾನೇ ಪಾಕಿಸ್ತಾನಕ್ಕೆ (Pakistan) ಹೋಗಿ, ಆ ದೇಶದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ” ಎಂದು ಹೇಳುವ ಮೂಲಕ ತಿರುಗೇಟು ನೀಡಿದರು. “ನಾನೇ ಲಾಹೋರ್‌ಗೆ ತೆರಳಿ ಆ ಪಾಕಿಸ್ತಾನದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ. ನನ್ನನ್ನು ನೋಡಿ, ಪಾಕಿಸ್ತಾನದ ಒಬ್ಬ ಪತ್ರಕರ್ತ ಆಶ್ಚರ್ಯದಿಂದ ಕೇಳಿದ. ‘ವೀಸಾ ಇಲ್ಲದೆ ನೀವೇಗೆ ಇಲ್ಲಿಗೆ ಬಂದಿದ್ದೀರಿ’ ಎಂದ. ಅದಕ್ಕೆ ನಾನು, ‘ಪಾಕಿಸ್ತಾನ ಒಂದು ಕಾಲಕ್ಕೆ ನಮ್ಮದೇ ದೇಶದ ಭಾಗವಾಗಿತ್ತು’ ಎಂಬುದಾಗಿ ಉತ್ತರಿಸಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಆ ಮೂಲಕ ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ವ್ಯಂಗ್ಯವಾಗಿಯೇ ಉತ್ತರ ಕೊಟ್ಟರು.

ಇದನ್ನೂ ಓದಿ: PM Modi: 400 ಸೀಟು, 400 ಸೀಟು ಎಂದು ಪ್ರತಿಪಕ್ಷಗಳನ್ನು ಮಂಗ್ಯಾ ಮಾಡಿದ ಮೋದಿ; ಅವರ ಮಾತಲ್ಲೇ ಕೇಳಿ!

Continue Reading

ಕ್ರೈಂ

Former DGP Arrested: ವಿಚ್ಛೇದಿತ ಪತ್ನಿಯ ದೂರು; ಮಾಜಿ ಡಿಜಿಪಿ ಜೈಲು ಪಾಲು

ಮಾಜಿ ಡಿಜಿಪಿ ರಾಜೇಶ್ ದಾಸ್ ಮತ್ತು ಇತರ ಕೆಲವು ಮಂದಿ ತೈಯೂರಿನಲ್ಲಿರುವ ತಮ್ಮ ಒಡೆತನದ ಮನೆಗೆ ಅತಿಕ್ರಮವಾಗಿ ನುಗ್ಗಿ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರ ಮಾಜಿ ಪತ್ನಿ ಆರೋಪಿಸಿದ್ದು, ಈ ಕುರಿತು ಕೆಲಂಬಾಕ್ಕಂ ಠಾಣೆಗೆ ದೂರು ನೀಡಿದ್ದರಿಂದ ಅವರನ್ನು (Former DGP Arrested) ಬಂಧಿಸಲಾಯಿತು.

VISTARANEWS.COM


on

By

Former DGP Arrested
Koo

ಚೆನ್ನೈ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ (sexually harassment case) ಈ ಹಿಂದೆ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಡಿಜಿಪಿ ರಾಜೇಶ್ ದಾಸ್ ಅವರನ್ನು (Former DGP Arrested) ವಿಚ್ಛೇದಿತ ಪತ್ನಿಯ ಮನೆಯಲ್ಲಿ ಅಕ್ರಮ ಪ್ರವೇಶ ಆರೋಪದಡಿಯಲ್ಲಿ ಶುಕ್ರವಾರ ಬೆಳಗ್ಗೆ ತಾಂಬರಂ ನಗರ ಪೊಲೀಸರು (Tambaram city police) ಬಂಧಿಸಿದ್ದಾರೆ.

ರಾಜೇಶ್ ದಾಸ್ ಅವರ ವಿಚ್ಛೇದಿತ ಪತ್ನಿ, ತಮಿಳುನಾಡಿನ (tamilnadu) ಇಂಧನ ಕಾರ್ಯದರ್ಶಿ ಬೀಲಾ ವೆಂಕಟೇಶನ್ (Beela Venkatesan) ಅವರು ನೀಡಿದ ದೂರಿನ ಆಧಾರದ ಮೇಲೆ ಈ ವಾರದ ಆರಂಭದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಬೀಲಾ ಅವರು ಈ ವಾರದ ಆರಂಭದಲ್ಲಿ ನೀಡಿದ ದೂರಿನಲ್ಲಿ ದಾಸ್ ಮತ್ತು ಇತರ ಕೆಲವು ಮಂದಿ ತೈಯೂರಿನಲ್ಲಿರುವ ತನ್ನ ಒಡೆತನದ ಮನೆಗೆ ಅತಿಕ್ರಮವಾಗಿ ನುಗ್ಗಿ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ಕುರಿತು ಕೆಲಂಬಾಕ್ಕಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ದಾಸ್ ಅವರು ತಾವು ಆ ಮನೆಯ ಕಾಯಂ ನಿವಾಸಿ ಎಂದು ಹೇಳಿಕೊಂಡಿದ್ದರು. ಇಂಧನ ಕಾರ್ಯದರ್ಶಿಯಾಗಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಮನೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕಾಗಿ ಬೀಲಾ ಅವರನ್ನು ದೂಷಿಸಿದ್ದರು. ಈ ಸಂಬಂಧ ಅವರು ಗುರುವಾರ ಮದ್ರಾಸ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದಕ್ಕೆ ಪ್ರತಿಕ್ರಿಯಿಸುವಂತೆ ಬೀಲಾ ಅವರಿಗೆ ಕೋರ್ಟ್ ಸೂಚನೆ ನೀಡಿತ್ತು.

ಪನೈಯೂರಿನಲ್ಲಿರುವ ಅವರ ಮನೆಯಿಂದ ಬಂಧನವನ್ನು ದೃಢಪಡಿಸಿದ ತಾಂಬರಂ ಪೊಲೀಸರು, ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಹೇಳಿದರು. ಕಿರಿಯ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ದಾಸ್‌ ಅವರಿಗೆ ಈ ಹಿಂದೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಅವರಿಗೆ ಶಿಕ್ಷೆಯಿಂದ ವಿನಾಯಿತಿ ನೀಡಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದ ಬಳಿಕ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಸದ್ಯ ಅವರಿಗೆ ಕೊಂಚ ರಿಲೀಫ್ ನೀಡಿದೆ.

ಇದನ್ನೂ ಓದಿ: Murder Attempt: ಮಗು ಹೆಣ್ಣೋ ಗಂಡೋ ನೋಡಲು ಹೆಂಡತಿಯ ಹೊಟ್ಟೆ ಸೀಳಿದವನಿಗೆ ಜೀವಾವಧಿ ಶಿಕ್ಷೆ!

Continue Reading

ಪ್ರಮುಖ ಸುದ್ದಿ

Ebola Virus: ಲ್ಯಾಬ್‌ನಲ್ಲಿ ಮತ್ತೊಂದು ಡೆಡ್ಲಿ ವೈರಸ್‌ ಸೃಷ್ಟಿಸಿದ ಚೀನಾ; ಈ ಲಕ್ಷಣ ಕಂಡರೆ ಮರಣ ನಿಶ್ಚಿತ!

Ebola Virus: ಎಬೋಲಾ ಸಾಂಕ್ರಾಮಿಕವಾಗಿದ್ದು, ಇದು ವೈರಾಣುವಿನಿಂದ ಹರಡುವ ಕಾಯಿಲೆಯಾಗಿದೆ. ಕೋತಿ, ಬಾವಲಿಯ ರಕ್ತ, ಸೋಂಕಿನಿಂದ ಕೂಡಿದ ಗಾಳಿ ಅಥವಾ ಎಬೋಲಾ ಸೋಂಕಿತನ ವೀರ್ಯದಿಂದ ಹರಡುತ್ತದೆ ಎಂದು ತಿಳಿದುಬಂದಿದೆ. ಸೋಂಕು ತಗುಲಿದವರು ಬಹು ಅಂಗಾಂಗ ವೈಫಲ್ಯದಿಂದ ಮೃತಪಡುತ್ತಾರೆ ಎಂಬುದಾಗಿ ಚೀನಾದ ವಿಜ್ಞಾನಿಗಳು ಹೇಳಿದ್ದಾರೆ. ಇದರಿಂದಾಗಿ ಭಾರತ ಸೇರಿ ಜಗತ್ತಿನಾದ್ಯಂತ ಭೀತಿ ಎದುರಾಗಿದೆ.

VISTARANEWS.COM


on

Ebola Virus
Koo

ಬೀಜಿಂಗ್: ಜಗತ್ತಿಗೇ ಕೊರೊನಾ (Corona Virus) ಎಂಬ ಮಹಾಮಾರಿಯನ್ನು ಹರಡಿ, ಕೋಟ್ಯಂತರ ಜನರ ಪ್ರಾಣಕ್ಕೆ ಕುತ್ತು ತಂದ ಚೀನಾ ಈಗ ಮತ್ತೊಂದು ಜೈವಿಕ ಯುದ್ಧಕ್ಕೆ ಮುಂದಾಗಿದೆ. ಮಾರಣಾಂತಿಕ ಎಬೋಲಾ ರೂಪಾಂತರಿ ಸೋಂಕನ್ನು (Ebola Mutant Virus) ಚೀನಾದ ವಿಜ್ಞಾನಿಗಳು ಸೃಷ್ಟಿಸಿದ್ದು, ಇದರಿಂದ ಜಗತ್ತಿಗೇ ಆತಂಕ ಎದುರಾಗಿದೆ. ಹೆಬೈ ಮೆಡಿಕಲ್‌ ಯುನಿವರ್ಸಿಟಿಯಲ್ಲಿ ವಿಜ್ಞಾನಿಗಳು ಎಬೋಲಾ ರೂಪಾಂತರಿ ವೈರಸ್‌ಅನ್ನು ಸೃಷ್ಟಿಸಿದ್ದಾರೆ. ಹ್ಯಾಮ್‌ಸ್ಟರ್‌ಗಳಿಗೆ (ಕಿರುಕಡಿಗ-ಇಲಿಯಂತ ಚಿಕ್ಕ ಪ್ರಾಣಿ) ವೈರಸ್‌ ಇಂಜೆಕ್ಟ್‌ ಮಾಡಿದರೆ, ಮೂರೇ ದಿನಗಳಲ್ಲಿ ಅವರು ಸಾಯುತ್ತವೆ ಎಂದು ಸೈನ್ಸ್‌ ಡೈರೆಕ್ಟ್‌ ಜರ್ನಲ್‌ನಲ್ಲಿ ವರದಿ ಪ್ರಕಟವಾಗಿದೆ.

ಸಿರಿಯಾ ಮೂಲದ, ಮೂರು ವಾರಗಳ ಹಿಂದೆ ಜನಿಸಿದ ಹ್ಯಾಮ್‌ಸ್ಟರ್‌ಗಳಿಗೆ ಎಬೋಲಾ ರೂಪಾಂತರಿ ತಳಿಯ ವೈರಸ್‌ಅನ್ನು ಇಂಜೆಕ್ಟ್‌ ಮಾಡಲಾಗಿತ್ತು. 5 ಗಂಡು ಹಾಗೂ 5 ಹೆಣ್ಣು ಹ್ಯಾಮ್‌ಸ್ಟರ್‌ಗಳಿಗೆ ಸೋಂಕನ್ನು ಇಂಜೆಕ್ಷನ್‌ ಮೂಲಕ ನೀಡಲಾಗಿತ್ತು. ಮೂರು ದಿನಗಳಲ್ಲಿಯೇ ಅವರು ಮೃತಪಟ್ಟವು” ಎಂಬುದಾಗಿ ವಿಜ್ಞಾನಿಗಳೇ ಹೇಳಿದ್ದಾರೆ. ಹಾಗಾಗಿ, ಇದು ಕೂಡ ಕೊರೊನಾ ಸಾಂಕ್ರಾಮಿಕದಂತೆ ಮಾರಣಾಂತಿಕವಾಗಿದ್ದು, ಭಾರತ ಸೇರಿ ಜಗತ್ತಿನ ಹಲವು ರಾಷ್ಟ್ರಗಳಿಗೆ ಕಮ್ಯುನಿಸ್ಟ್‌ ರಾಷ್ಟ್ರವು ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ.

ಮನುಷ್ಯರಿಗೆ ಹೇಗೆ ಅಪಾಯ?

ಹ್ಯಾಮ್‌ಸ್ಟರ್‌ಗಳಿಗೆ ಉಂಟಾದ ಪರಿಣಾಮವೇ ಮನುಷ್ಯರಿಗೂ ಆಗಲಿದೆ. ಮೊದಲು ಜೀವಕೋಶಗಳಿಗೆ ಹರಡುವ ಸೋಂಕು, ಹೃದಯ, ಶ್ವಾಸಕೋಶ, ಹೊಟ್ಟೆ, ಲಿವರ್‌ ಸೇರಿ ಹಲವು ಅಂಗಗಳನ್ನು ನಿಷ್ಕ್ರಿಯಗೊಳಿಸುತ್ತದೆ. ಕೊನೆಗೆ, ಬಹು ಅಂಗಾಂಗ ವೈಫಲ್ಯದಿಂದ ಮನುಷ್ಯನು ಕೂಡ ಮೂರ್ನಾಲ್ಕು ದಿನಗಳಲ್ಲಿಯೇ ಮೃತಪಡಲಿದ್ದಾನೆ ಎಂಬುದಾಗಿ ಚೀನಾ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಜಗತ್ತಿನಾದ್ಯಂತ ಭೀತಿ ಎದುರಾಗಿದೆ.

ಎಬೋಲಾ ಹರಡುವುದು ಹೇಗೆ?

ಎಬೋಲಾ ಸಾಂಕ್ರಾಮಿಕವಾಗಿದ್ದು, ಇದು ವೈರಾಣುವಿನಿಂದ ಹರಡುವ ಕಾಯಿಲೆಯಾಗಿದೆ. ಕೋತಿ, ಬಾವಲಿಯ ರಕ್ತ, ಸೋಂಕಿನಿಂದ ಕೂಡಿದ ಗಾಳಿ ಅಥವಾ ಎಬೋಲಾ ಸೋಂಕಿತನ ವೀರ್ಯದಿಂದ ಹರಡುತ್ತದೆ ಎಂದು ತಿಳಿದುಬಂದಿದೆ. ಗಂಟಲು ನೋವು, ಸ್ನಾಯು ನೋವು ಮತ್ತು ತಲೆನೋವು, ಯಕೃತ್ತು ಮತ್ತು ಮೂತ್ರ ಕಾರ್ಯನಿರ್ವಹಣೆಯ ಹದಗೆಡುತ್ತದೆ. ಸಾಮಾನ್ಯವಾಗಿ ವಾಕರಿಕೆ, ವಾಂತಿ ಮತ್ತು ಭೇದಿ ಇದರ ಲಕ್ಷಣಗಳಾಗಿವೆ. ಬಾವಲಿ, ಕೋತಿಯಂತಹ ಪ್ರಾಣಿಗಳಿಂದ ದೂರ ಇರುವುದು ಒಳಿತು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Chocolate: ಏನಿದು ಮೀಲಿಬಗ್‌ ವೈರಸ್‌? ಚಾಕೊಲೇಟ್ ದರ ಏರಿಕೆಗೂ ಇದಕ್ಕೂ ಏನು ಸಂಬಂಧ?

Continue Reading
Advertisement
Phalodi Satta Bazar
ದೇಶ8 mins ago

Phalodi Satta Bazar: ಚುನಾವಣೆಯಲ್ಲಿ ಮೋದಿ ಹ್ಯಾಟ್ರಿಕ್ ಖಚಿತ; ಸಟ್ಟಾ ಬಜಾರ್‌ ಸಮೀಕ್ಷಾ ವರದಿ ಇಲ್ಲಿದೆ

Sara Tendulkar
ಕ್ರಿಕೆಟ್15 mins ago

Sara Tendulkar: ಲಂಡನ್​ ಯೂನಿವರ್ಸಿಟಿಯಿಂದ ಪದವಿ ಪಡೆದ ಸಾರಾ ತೆಂಡೂಲ್ಕರ್​; ಮಗಳ ಸಾಧನೆ ಕೊಂಡಾಡಿದ ಸಚಿನ್​

Liquor ban
ಕರ್ನಾಟಕ40 mins ago

Liquor ban: ಜೂ. 1ರಿಂದ ಐದು ದಿನ ಮದ್ಯ ಮಾರಾಟ ನಿಷೇಧ; ಖರೀದಿಗೆ ಮುಗಿಬಿದ್ದ ಎಣ್ಣೆ ಪ್ರಿಯರು!

Narendra Modi
ದೇಶ42 mins ago

Narendra Modi: 2047ರವರೆಗೆ ದೇಶಕ್ಕಾಗಿ ನನ್ನ ಸೇವೆ; ಇದು ದೇವರ ಆದೇಶ ಎಂದ ಮೋದಿ

HD Kumaraswamy slams CM Siddaramaiah about devegowda statement
ರಾಜಕೀಯ48 mins ago

HD Kumaraswamy: ರಾಕೇಶ್‌ನನ್ನು ವಿದೇಶಿ ಪಾರ್ಟಿಗೆ ನೀವೇ ಕಳಿಸಿ ಸಾವಿಗೆ ಕಾರಣರಾದಿರಿ ಎಂದರೆ ಹೇಗೆ? ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ

Former DGP Arrested
ಕ್ರೈಂ1 hour ago

Former DGP Arrested: ವಿಚ್ಛೇದಿತ ಪತ್ನಿಯ ದೂರು; ಮಾಜಿ ಡಿಜಿಪಿ ಜೈಲು ಪಾಲು

ಕ್ರೈಂ1 hour ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ 5ನೇ ಆರೋಪಿಗೆ ಲಷ್ಕರ್–ಎ–ತಯ್ಬಾ ಜತೆ ಲಿಂಕ್‌!

CSK vs RC
ಕ್ರೀಡೆ1 hour ago

CSK vs RCB: ಮತ್ತೆ ಆರ್​ಸಿಬಿ, ಕೊಹ್ಲಿಯ ಬಗ್ಗೆ ಕಿಡಿಕಾರಿದ ಚೆನ್ನೈ ತಂಡದ ಮಾಜಿ ಆಟಗಾರ

BSNL network problem in Hosanagara The lawyer decided to climb the tower and protest
ಕರ್ನಾಟಕ1 hour ago

Hosanagara News: ಹೊಸನಗರದಲ್ಲಿ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸಮಸ್ಯೆ; ಟವರ್‌ ಏರಿ ಪ್ರತಿಭಟನೆಗೆ ಮುಂದಾದ ವಕೀಲ!

union minister pralhad joshi spoke in North East Graduate Constituency Electoral Convention at ballari
ಕರ್ನಾಟಕ1 hour ago

MLC Election: ಜಗತ್ತು ತೆವಳುತ್ತಿದ್ದರೆ ಮೋದಿ ಭಾರತ ಓಡುತ್ತಿದೆ; ಸಚಿವ ಪ್ರಲ್ಹಾದ್‌ ಜೋಶಿ ವ್ಯಾಖ್ಯಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌