ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೇದ್ ಅಲ್ ನಹ್ಯಾನ್ (UAE President Sheikh Mohammed Bin Zayed Al Nahyan) ಅವರು ಅಬುಧಾಬಿಯಲ್ಲಿ ಯುಪಿಐ ರೂಪೇ ಕಾರ್ಡ್ (UPI RuPay Card) ಸೇವೆಗಳಿಗೆ ಮಂಗಳವಾರ ಚಾಲನೆ ನೀಡಿದರು. ಇದು ಉಭಯ ದೇಶಗಳ ನಡುವಿನ ಗಡಿಯಾಚೆಗಿನ ವಹಿವಾಟುಗಳನ್ನು ಸುಗಮಗೊಳಿಸುತ್ತದೆ. ಕಳೆದ ವರ್ಷ ಜುಲೈನಲ್ಲಿ ಪ್ರಧಾನಮಂತ್ರಿಯವರ ಅಬುಧಾಬಿ ಭೇಟಿಯ ಸಂದರ್ಭದಲ್ಲಿ ಸಹಿ ಮಾಡಿದ ಇಂಟರ್ಲಿಂಕಿಂಗ್ ಪಾವತಿ ಮತ್ತು ಸಂದೇಶ ವ್ಯವಸ್ಥೆಗಳ ಕುರಿತಾದ ತಿಳುವಳಿಕಾ ಒಪ್ಪಂದವನ್ನು ಅನ್ವಯ ಈಗ ಸೇವೆಗೆ ಚಾಲನೆ ನೀಡಲಾಗಿದೆ.
ಸೋಮವಾರವಷ್ಟೇ ಭಾರತ ಸರ್ಕಾರವು ಮಾರಿಷಸ್ ಮತ್ತು ಶ್ರೀಲಂಕಾದಲ್ಲಿ ಯುಪಿಐ ಪಾವತಿ ಸೇವೆಗೆ ಚಾಲನೆ ನೀಡಿತ್ತು.
My remarks during meeting with HH @MohamedBinZayed in Abu Dhabi.https://t.co/lfLaOZ2LGp
— Narendra Modi (@narendramodi) February 13, 2024
ಪ್ರಧಾನಿ ಮೋದಿ ಎರಡು ದಿನಗಳ ಪ್ರವಾಸಕ್ಕಾಗಿ ಯುಎಇಗೆ ತೆರಳಿದ್ದಾರೆ. ಅವರನ್ನು ಅಧ್ಯಕ್ಷ ನಹ್ಯಾನ್ ಸ್ವಾಗತಿಸಿದರು. ದೇಶಕ್ಕೆ ಆಗಮಿಸಿದ ಪ್ರಧಾನಿಯವರಿಗೆ ಗೌರವ ರಕ್ಷೆ ನೀಡಲಾಯಿತು. ನಂತರ ರಾಷ್ಟ್ರಪತಿ ಭವನವಾದ ಕಸರ್ ಅಲ್ ವತನ್‌ನಲ್ಲಿ ಅವರಿಗೆ ವಿಧ್ಯುಕ್ತ ಸ್ವಾಗತ ನೀಡಲಾಯಿತು. ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುಂದಕ್ಕೆ ಕೊಂಡೊಯ್ಯಲು ನಾಯಕರು ನಂತರ ಸಭೆಗಳನ್ನು ನಡೆಸುತ್ತಿದ್ದಾರೆ. 2015ರ ಬಳಿಕ ಯುಎಇಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವುದು ಇದೇ ಏಳನೆ ಬಾರಿಯಾಗಿದೆ.
ಯುಎಇ ಅಧ್ಯಕ್ಷರೊಂದಿಗಿನ ಭೇಟಿಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು, “ಆತ್ಮೀಯ ಸ್ವಾಗತಕ್ಕಾಗಿ ನಿಮಗೆ ಧನ್ಯವಾದಗಳು. ನಾನು ನಿಮ್ಮನ್ನು ಭೇಟಿಯಾಗಲು ಇಲ್ಲಿಗೆ ಬಂದಾಗ, ನಾನು ಯಾವಾಗಲೂ ನನ್ನ ಕುಟುಂಬವನ್ನು ಭೇಟಿಯಾಗಲು ಬಂದಿದ್ದೇನೆ ಎಂದು ನಾನು ಭಾವಿಸುತ್ತೇನೆ. ಕಳೆದ ಏಳು ತಿಂಗಳಲ್ಲಿ ನಾವು ಕಳೆದ 5 ಬಾರಿ ಭೇಟಿಯಾಗಿದ್ದೇವೆ. ಇದು ಬಹಳ ಅಪರೂಪ ಮತ್ತು ನಮ್ಮ ನಿಕಟ ಸಂಬಂಧವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.
ಇಂಧನ, ಬಂದರುಗಳು, ಫಿನ್‌ಟೆಕ್, ಡಿಜಿಟಲ್ ಮೂಲಸೌಕರ್ಯ, ರೈಲ್ವೆ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವುದು ಉಭಯ ನಾಯಕರ ನಡುವಿನ ಮಾತುಕತೆಯ ಕೇಂದ್ರಬಿಂದುವಾಗಿದೆ. ಹಲವಾರು ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಉಭಯ ದೇಶಗಳು ಹಲವಾರು ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಯಿದೆ. ಹಲವಾರು ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಉಭಯ ದೇಶಗಳು ಹಲವಾರು ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಯಿದೆ.
ಜತೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 14ರಂದು ಅಬಿಧಾಬಿಯಲ್ಲಿ ನಿರ್ಮಾಣ ಮಾಡಲಾಗಿರುವ ಮೊದಲ ಹಿಂದೂ ಬೋಚಸನ್ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ (BAPS) ದೇವಾಲಯವನ್ನು ಉದ್ಘಾಟಿಸಲಿದ್ದಾರೆ.
ಈ ಸುದ್ದಿಯನ್ನೂ ಓದಿ: UPI service: ಶ್ರೀಲಂಕಾ, ಮಾರಿಷಸ್‌ನಲ್ಲಿ ಭಾರತೀಯ ಯುಪಿಐ ಸೇವೆ ಆರಂಭ