ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗದ (UPSC) ಪೂರ್ವಭಾವಿ ಪರೀಕ್ಷೆಯನ್ನು (UPSC Prelims) ಮುಂದೂಡಿಕೆ ಮಾಡಲಾಗಿದೆ. 2024ನೇ ಸಾಲಿನ ಪೂರ್ವಭಾವಿ ಪರೀಕ್ಷೆಯನ್ನು ಮೇ 26ರ ಬದಲು ಜೂನ್ 16ರಂದು ನಡೆಸಲಾಗುವುದು ಎಂದು ಯುಪಿಎಸ್‌ಸಿ ತಿಳಿಸಿದೆ. ಮೇ 26ರಂದು ನಡೆಸಲಾಗುವುದು ಎಂದು ಯುಪಿಎಸ್‌ಸಿಯು ಮಾರ್ಚ್ 19ರಂದು ಘೋಷಿಸಿತ್ತು. ಈಗ ಚುನಾವಣೆ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ.
“ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯುಪಿಎಸ್‌ಸಿಯು ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ತೀರ್ಮಾನಿಸಿದೆ. ಜೂನ್ 16ರಂದು ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತದೆ. ಭಾರತೀಯ ಅರಣ್ಯ ಸೇವಾ ಪರೀಕ್ಷೆಯನ್ನೂ ಜೂನ್ 16ರಂದು ನಡೆಸಲು ತೀರ್ಮಾನಿಸಲಾಗಿದೆ” ಎಂದು ಮಾಹಿತಿ ನೀಡಿದೆ. ಯುಪಿಎಸ್‌ಸಿ ಮುಖ್ಯ ಪರೀಕ್ಷೆಯು ಸೆಪ್ಟೆಂಬರ್ 20ರಿಂದ 5 ದಿನಗಳವರೆಗೆ ನಡೆಯಲಿದೆ. ಪ್ರತಿ ವರ್ಷವೂ ಯುಪಿಎಸ್‌ಯು ಮೂರು ಹಂತಗಳಲ್ಲಿ ನಾಗರಿಕ ಸೇವಾ ಪರೀಕ್ಷೆ ನಡೆಸುತ್ತದೆ.
UPSC Prelims 2024 postponed
— UPSCprep.com (@UPSCprepIAS) March 19, 2024
88 days to go, kill it! pic.twitter.com/NgB4306GSV
ಹೀಗಿದೆ 7 ಹಂತಗಳಲ್ಲಿ ಚುನಾವಣೆ ದಿನಾಂಕ
ಮೊದಲ ಹಂತ: ಏಪ್ರಿಲ್ 19– 102 ಕ್ಷೇತ್ರಗಳು
2ನೇ ಹಂತ: ಏಪ್ರಿಲ್ 26– 89 ಕ್ಷೇತ್ರಗಳು
3ನೇ ಹಂತ: ಮೇ 7– 94 ಕ್ಷೇತ್ರಗಳು
4ನೇ ಹಂತ: ಮೇ 13– 96 ಕ್ಷೇತ್ರಗಳು
5ನೇ ಹಂತ: ಮೇ 20– 49 ಕ್ಷೇತ್ರಗಳು
6ನೇ ಹಂತ: ಮೇ 25– 57 ಕ್ಷೇತ್ರಗಳು
7ನೇ ಹಂತ: ಜೂನ್ 1– 57 ಕ್ಷೇತ್ರಗಳು
ಏಪ್ರಿಲ್ 19ರಿಂದ ಜೂನ್ 1ರ ಅವಧಿಯಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನವು ಏಪ್ರಿಲ್ 19ರಿಂದ ಆರಂಭವಾಗಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 1ರಂದು ಚುನಾವಣೆ ಮುಗಿಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ