ನವೆದಹಲಿ: ಕೇಂದ್ರ ಲೋಕಸೇವಾ ಆಯೋಗ (UPSC Result 2022) ನಡೆಸುವ 2022ನೇ ಸಾಲಿನ ನಾಗರಿಕ ಪರೀಕ್ಷೆಯ ಅಂತಿಮ ಫಲಿತಾಂಶವು ಪ್ರಕಟವಾಗಿದ್ದು, ಕರ್ನಾಟಕದ 25ಕ್ಕೂ ಹೆಚ್ಚು ಅಭ್ಯರ್ಥಿಗಳು ಪಾಸಾಗಿದ್ದಾರೆ. ಒಟ್ಟಾರೆ 933 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ 345 ಮಂದಿ ಸಾಮಾನ್ಯ ಅಭ್ಯರ್ಥಿಗಳಾಗಿದ್ದರೆ, 99 ಮಂದಿ ಆರ್ಥಿಕವಾಗಿ ದುರ್ಬಲ ವರ್ಗ ಅಭ್ಯರ್ಥಿಗಳಾಗಿದ್ದಾರೆ. 263 ಮಂದಿ ಒಬಿಸಿ, 154 ಮಂದಿ ಎಸ್‌ಸಿ, 72 ಮಂದಿ ಎಸ್‌ಟಿ ಅಭ್ಯರ್ಥಿಗಳಾಗಿದ್ದಾರೆ.
ಫಲಿತಾಂಶವನ್ನು ಯುಪಿಎಸ್‌ಸಿಯ ವೆಬ್‌ಸೈಟ್ https://www.upsc.gov.in/ ನಲ್ಲಿ ವೀಕ್ಷಿಸಬಹುದಾಗಿದೆ. ಇಷಿತಾ ಕಿಶೋರ್ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಎರಡನೇ ಸ್ಥಾನ ಗರಿಮಾ ಲೋಹಿಯಾ ಎಂಬುವರು ಪಡೆದುಕೊಂಡಿದ್ದರೆ, ಮೂರನೇ ಸ್ಥಾನ ಉಮಾ ಹರತಿ ಎನ್ ಪಾಲಾಗಿದೆ. ಹಾಗೇ, ನಾಲ್ಕನೇ ಸ್ಥಾನ ಸ್ಮೃತಿ ಮಿಶ್ರಾ ಪಾಲಾಗಿದೆ. ಮಯೂರ್ ಹಜಾರಿಯಾ, ಗಹನ್ ನವ್ಯಾ, ವಾಸಿಂ ಅಹ್ದ್ ಭಟ್, ಅನಿರುದ್ಧ ಯಾದವ್, ಕನಿಕಾ ಗೋಯಲ್ ಮತ್ತು ರಾಹುಲ್ ವಾಸ್ತವ್ ಕ್ರಮವಾಗಿ ಐದರಿಂದ ಹತ್ತನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಬಾರಿಯೂ ಮೊದಲ ಮೂರು ಸ್ಥಾನಗಳು ಮಹಿಳಾ ಅಭ್ಯರ್ಥಿಗಳ ಪಾಲಾಗಿದೆ.
ಇದನ್ನೂ ಓದಿ: UPSC Result 2022 : ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಇಷಿತಾ ಕಿಶೋರ್ ಟಾಪರ್
178 ಅಭ್ಯರ್ಥಿಗಳು ಭಾರತೀಯ ಆಡಳಿತ ಸೇವೆ, ಭಾರತೀಯ ವಿದೇಶಾಂಗ ಸೇವೆ, ಭಾರತೀಯ ಪೊಲೀಸ್ ಸೇವೆ ಪಟ್ಟಿಯಲ್ಲಿದ್ದಾರೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ವಿವಿಧ ಹುದ್ದೆಗಳಲ್ಲಿ ರಾಷ್ಟ್ರಕ್ಕೆ ಸೇವೆ ಸಲ್ಲಿಸಲಿದ್ದಾರೆ. ಯುಪಿಎಸ್‌ಸ್ಸಿ ಫಲಿತಾಂಶದ ಹೆಚ್ಚಿನ ಮಾಹಿತಿಗೆ ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.