Site icon Vistara News

President Joe Biden: ಭಾರತದ ಗಣರಾಜ್ಯೋತ್ಸವಕ್ಕೆ ಅಮೆರಿಕ ಅಧ್ಯಕ್ಷ ಬೈಡೆನ್ ಬರಲ್ಲ!

US President joe biden will not participate india for Republic day

ನವದೆಹಲಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್ (US President Joe Biden) ಅವರು ಭಾರತದ ಗಣರಾಜ್ಯೋತ್ಸವದ (Republic Day) ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಲಿದ್ದಾರೆಂದು ಈ ಹಿಂದೆ ಹೇಳಲಾಗಿತ್ತು. ಆದರೆ, ಈಗ ಗೊತ್ತಾಗಿರುವ ಮಾಹಿತಿಗಳ ಪ್ರಕಾರ, ಅಧ್ಯಕ್ಷ ಜೋ ಬೈಡೆನ್ ಅವರು ಭಾರತೀಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸುತ್ತಿಲ್ಲ(India). ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು, ಬೈಡೆನ್‌ಗೆ ಆಹ್ವಾನ ನೀಡಿದ್ದರು.

ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ದಿಲ್ಲಿಯಲ್ಲಿ ಜಿ20 ಶೃಂಗ ಸಭೆ ನಡೆಯಿತು. ಈ ಶೃಂಗದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗಣರಾಜ್ಯೋತ್ಸವದಲ್ಲಿ ಅತಿಥಿಯಾಗಿ ಪಾಲ್ಗೊಳ್ಳಲು ಆಹ್ವಾನ ನೀಡಿದ್ದರು. ಶೃಂಗಸಭೆಯ ಸಂದರ್ಭದಲ್ಲಿ ಭಾರತ ಮತ್ತು ಅಮೆರಿಕ ನಡುವೆ ದ್ವೀಪಕ್ಷೀಯ ಮಾತುಕತೆಗಳು ನಡೆದಿದ್ದವು. ಇದೇ ವೇಳೆ, ಪ್ರಧಾನಿ ಆಹ್ವಾನ ನೀಡಿದ್ದರು. ಭಾರತ, ಆಸ್ಟ್ರೇಲಿಯಾ, ಜಪಾನ್ ಮತ್ತು ಅಮೆರಿಕ ಒಳಗೊಂಡಿರುವ ಮುಂದಿನ ಕ್ವಾಡ್ ಶೃಂಗಸಭೆಯನ್ನು ಜನವರಿ 27 ರಂದು ನಿಗದಿಪಡಿಸಲು ಭಾರತ ಸರ್ಕಾರವು ಯೋಜನೆ ರೂಪಿಸುತ್ತಿದೆ.

ಆದರೆ, ಪ್ರಸ್ತುತ ಪರಿಗಣನೆಯಲ್ಲಿರುವ ದಿನಾಂಕಗಳು ಎಲ್ಲಾ ಕ್ವಾಡ್ ರಾಷ್ಟ್ರಗಳಿಗೆ ಹೊಂದಾಣಿಕೆಯಾಗುತ್ತಿಲ್ಲ. ಹಾಗಾಗಿ, ಭಾರತವು ಕ್ವಾಡ್ ಶೃಂಗಸಭೆಗೆ ಬೇರೆ ದಿನಾಂಕಗಳನ್ನು ಪರಿಶೀಲನೆ ಮಾಡುತ್ತಿದೆ ಎಂದು ಬೆಳವಣಿಗೆಗಳ ಬಗ್ಗೆ ತಿಳಿದಿರುವ ಜನರು ಹೇಳಿದ್ದಾರೆ. ಹಾಗಾಗಿ, ಭಾರತವು ಆತಿಥ್ಯ ವಹಿಸಲಿರುವ ಈ ಕ್ವಾಡ್ ಶೃಂಗಸಭೆಯು 2024ರ ನಂತರದಲ್ಲಿ ಆಯೋಜಿಸುವ ಸಾಧ್ಯತೆಗಳಿವೆ.

ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಸೆಪ್ಟೆಂಬರ್‌ನಲ್ಲಿ, ಗಣರಾಜ್ಯೋತ್ಸವಕ್ಕೆ ಬೈಡೆನ್ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಾರೆ ಎಂದು ಹೇಳಿದ್ದರು. ಆದರೂ ಅಮೆರಿಕ ಆಡಳಿತವು ಇನ್ನೂ ಔಪಚಾರಿಕವಾಗಿ ಭಾರತದ ಆಹ್ವಾನ ಸ್ವೀಕರಿಸಿದ್ದ ಬಗ್ಗೆ ಖಚಿತ ಮಾಹಿತಿಯನ್ನು ನೀಡಿಲ್ಲ.

ಈ ಸುದ್ದಿಯನ್ನೂ ಓದಿ: Republic Day: ಗಣರಾಜ್ಯೋತ್ಸವಕ್ಕೆ ಅಮೆರಿಕ ಅಧ್ಯಕ್ಷ ಬೈಡೆನ್‌ಗೆ ಆಹ್ವಾನ ನೀಡಿದ ಪ್ರಧಾನಿ ಮೋದಿ

Exit mobile version