Site icon Vistara News

ಕಾನೂನು ಪಾಲನೆ ಪ್ರಜಾಪ್ರಭುತ್ವದ ಮೂಲಾಧಾರ; ರಾಹುಲ್ ಗಾಂಧಿ ಅನರ್ಹತೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅಮೆರಿಕ

US Reacts on Rahul Gandhi Disqualification Case

#image_title

ನವ ದೆಹಲಿ: 2019ರಲ್ಲಿ ಮೋದಿ ಉಪನಾಮವನ್ನು ಅವಹೇಳನ ಮಾಡಿದ ಆರೋಪದಡಿ ಕೋರ್ಟ್​ನಿಂದ ದೋಷಿ ಎಂದು ಸಾಬೀತಾಗಿ, ಲೋಕಸಭೆ ಸದಸ್ಯನ ಸ್ಥಾನ ಕಳೆದುಕೊಂಡ ರಾಹುಲ್ ಗಾಂಧಿ ವಿಷಯದ ಬಗ್ಗೆ ಯುಎಸ್​ ಪ್ರತಿಕ್ರಿಯೆ ನೀಡಿದೆ. ಕಾನೂನಿನ ನಿಯಮಗಳು ಮತ್ತು ನ್ಯಾಯಾಂಗ ಸ್ವಾತಂತ್ರ್ಯವನ್ನು ಗೌರವಿಸುವುದು ಯಾವುದೇ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಾಧಾರ ಎಂದು ಹೇಳಿದೆ.

ರಾಹುಲ್ ಗಾಂಧಿ ಕೇಸ್​ ಬಗ್ಗೆ ಪ್ರತಿಕ್ರಿಯೆ ನೀಡಿದ ಯುಎಸ್ ಡಿಪಾರ್ಟ್​​ಮೆಂಟ್​ ಸ್ಟೇಟ್​​ನ ಉಪವಕ್ತಾರ ವೇದಾಂತ್​ ಪಟೇಲ್​, ‘ಭಾರತದಲ್ಲಿ ರಾಹುಲ್ ಗಾಂಧಿ ವಿಷಯದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿ ಪ್ರಜಾಪ್ರಭುತ್ವದ ಎಲ್ಲ ಮೌಲ್ಯಗಳನ್ನೂ ಗೌರವಿಸಬೇಕು ಎಂಬುದು ನಮ್ಮ ಆಶಯ ಮತ್ತು ಬದ್ಧತೆ. ಇದನ್ನು ನಾವು ಸದಾ ಭಾರತದೊಂದಿಗೆ ವ್ಯಕ್ತಪಡಿಸುತ್ತಿದ್ದೇವೆ. ಪ್ರಜಾಪ್ರಭುತ್ವದ ತತ್ವದ ಮಹತ್ವ ಮತ್ತು ಮಾನವಹಕ್ಕುಗಳ ರಕ್ಷಣೆಯನ್ನು ಬಲಪಡಿಸುವ ವಿಷಯದಲ್ಲಿ ಅಮೆರಿಕ ಮತ್ತು ಭಾರತದ ಆಸಕ್ತಿಗಳು ಒಂದೇ’ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯವರು 2019ರಲ್ಲಿ ಕೋಲಾರದಲ್ಲಿ ಮಾತನಾಡುತ್ತ ‘ಎಲ್ಲ ಕಳ್ಳರ ಉಪನಾಮವೂ ಮೋದಿ ಎಂದೇ ಇರುತ್ತದೆ ಎಂದಿದ್ದರು. ಅದೇ ವಿಷಯವೀಗ ದೊಡ್ಡದಾಗಿದೆ. ರಾಹುಲ್ ಗಾಂಧಿ ವಿರುದ್ಧ ಗುಜರಾತ್​ ಶಾಸಕ ಪೂರ್ಣೇಶ್ ಮೋದಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ತೀರ್ಪು ಕೊಟ್ಟ ಸೂರತ್ ಕೋರ್ಟ್​ ರಾಹುಲ್ ಗಾಂಧಿಯನ್ನು ದೋಷಿ ಎಂದು ಹೇಳಿದೆ. 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅದರ ಬೆನ್ನಲ್ಲೇ ರಾಹುಲ್ ಗಾಂಧಿಯನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗಿದೆ. ಕಾಂಗ್ರೆಸ್ ನಾಯಕರು ಸದ್ಯ ಭಾರತದೆಲ್ಲೆಡೆ ಹೋರಾಟ ಕೈಗೊಂಡಿದ್ದಾರೆ. ಸಂಸತ್ತಿಗೆ ನಿನ್ನೆ ಅವರು ಕಪ್ಪು ಬಟ್ಟೆ ಧರಿಸಿ ಬಂದಿದ್ದರು. ಇದೀಗ ಯುಎಎಸ್​ ಕೂಡ ಪ್ರತಿಕ್ರಿಯೆ ನೀಡಿ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿಯವರೇ ನೀವು ಸಾವರ್ಕರ್ ಆಗಲು ಸಾಧ್ಯವೇ ಇಲ್ಲ, ಯಾಕೆಂದರೆ..; ಅಜ್ಜಿಯನ್ನು ನೆನಪಿಸಿ ತಿರುಗೇಟು ಕೊಟ್ಟ ಅನುರಾಗ್ ಠಾಕೂರ್​

Exit mobile version