ಕೋಲ್ಕತಾ: ಇರಾನ್(Iran) ಜೊತೆಗೆ ಭಾರತ ಚಬಾಹರ್ ಬಂದರು(Chabahar port) ಒಪ್ಪಂದ ಮಾಡಿಕೊಂಡಿರುವ ಬೆನ್ನಲ್ಲೇ ಅಮೆರಿಕ ನಿರ್ಬಂಧ(US sanction) ಹೇರುವ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್(S. Jaishankar) ರಿಯಾಕ್ಟ್ ಮಾಡಿದ್ದಾರೆ. ಈ ಯೋಜನೆ ಇಡೀ ಪ್ರಪಂಚಕ್ಕೆ ಉಪಯೋಗಕಾರಿಯಾಗಿದೆ. ಇದನ್ನು ಸಂಕುಚಿತ ಮನೋಭಾವದಿಂದ ನೋಡಬಾರದು ಎಂದು ಅಮೆರಿಕಕ್ಕೆ ತಿರುಗೇಟು ಕೊಟ್ಟಿದ್ದಾರೆ.
ಕೋಲ್ಕತಾದಲ್ಲಿ ಮಾತನಾಡಿದ ಜೈಶಂಕರ್, ಈ ಹಿಂದೆ ಚಬಾಹರ್ ಯೋಜನೆ ಬಗ್ಗೆ ಸ್ವತಃ ಅಮೆರಿಕವೇ ಪ್ರಶಂಸೆ ವ್ಯಕ್ತಪಡಿಸಿತ್ತು. ಈ ಯೋಜನೆ ಬಗ್ಗೆ ಅಮೆರಿಕ ನೀಡಿರುವ ಹೇಳಿಕೆಯನ್ನು ನಾನು ಕೇಳಿದ್ದೇನೆ. ಆ ಯೋಜನೆ ಎಲ್ಲರಿಗೂ ಅನುಕೂಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಜನ ಇದನ್ನು ಸಂಕುಚಿತ ಮನಸ್ಥಿತಿಯಿಂದ ನೋಡುವುದು ಸರಿಯಲ್ಲ. ಅಮೆರಿಕ ಈ ವಿಚಾರದ ಬಗ್ಗೆ ವಿಶಾಲ ಮನಸ್ಥಿತಿಯಿಂದ ಚಿಂತನೆ ನಡೆಸಬೇಕು ಎಂದು ಹೇಳಿದ್ದಾರೆ.
ಚಬಾಹರ್ ಬಂದರು ಯೋಜನೆ ಇಂದು ನಿನ್ನೆಯದ್ದಲ್ಲ. ಹಲವು ವರ್ಷಗಳ ಯೋಜನೆಯಾಗಿದೆ. ಇದು ಭಾರತದಕ್ಕೆ ಬಹಳ ಮುಖ್ಯವಾದ ಯೋಜನೆಯಾಗಿದೆ. ಇರಾನ್‌ನಲ್ಲಿ ಅನೇಕ ಸಮಸ್ಯೆಗಳಿದ್ದವು. ಹೀಗಾಗಿ ನಾವು ದೀರ್ಘಾವಧಿ ಒಪ್ಪಂದ ಮಾಡಿಕೊಂಡಿರಲಿಲ್ಲ. ಈಗ ಆ ಸಮಸ್ಯೆಗಳು ಬಗೆಹರಿದಿರುವ ಹಿನ್ನೆಲೆ ಈ ದೀರ್ಘಾವಧಿ ಒಪ್ಪಂದಕ್ಕೆ ಭಾರತ ಸಹಿ ಹಾಕಿದೆ. ಏಕೆಂದರೆ ಈ ಯೋಜನೆ ಇಲ್ಲದ್ದಿದ್ದರೆ ಬಂದರು ಕಾರ್ಯಾಚರಣೆ ಸುಧಾರಿಸುವುದಿಲ್ಲ. ಇದು ಇಡೀ ಪ್ರಪಂಚಕ್ಕೆ ಉಪಯೋಗಕಾರಿ ಎಂದು ಹೇಳಿದ್ದಾರೆ.
ಇರಾನ್ ಜೊತೆಗೆ ಭಾರತ ಚಬಾಹರ್ ಬಂದರು ಒಪ್ಪಂದ ಮಾಡಿಕೊಂಡಿರುವ ಬೆನ್ನಲ್ಲೇ ಅಮೆರಿಕ ನಿರ್ಬಂಧ ಹೇರುವ ಎಚ್ಚರಿಕೆ ನೀಡಿದೆ. ಇರಾನ್ ಜೊತೆಗೆ ವ್ಯಾಪಾರ-ವಹಿವಾಟಿಗಳನ್ನು ಮುಂದುವರೆಸಿದರೆ ನಿರ್ಬಂಧ ವಿಧಿಸಲಾಗುತ್ತದೆ ಎಂದು ಅಮೆರಿಕ ಎಲ್ಲಾ ದೇಶಗಳಿಗೆ ಎಚ್ಚರಿಕೆ ನೀಡಿತ್ತು. ಸ್ಟೇಟ್ ಡಿಪಾರ್ಟ್‌ಮೆಂಟ್ ಉಪ ವಕ್ತಾರ ವೇದಾಂತ್ ಪಟೇಲ್(State Department Deputy Spokesperson Vedant Patel) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು, ಚಬಾಹರ್ ಬಂದರಿಗೆ ಸಂಬಂಧಿಸಿದಂತೆ ಭಾರತ-ಇರಾನ್ ಒಪ್ಪಂದ ಮಾಡಿಕೊಂಡಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಇರಾನ್‌ನೊಂದಿಗಿನ ದ್ವಿಪಕ್ಷೀಯ ಸಂಬಂಧಕ್ಕೆ ಸಂಬಂಧಿಸಿದಂತೆ ತನ್ನದೇ ಆದ ವಿದೇಶಾಂಗ ನೀತಿ ಅನುಸರಿಸಲು ಭಾರತ ಮುಕ್ತವಾಗಿದೆ. ಆದರೆ ಇರಾನ್ ಮೇಲೆ ಅಮೆರಿಕ ನಿರ್ಬಂಧ ಹೇರಿರುವುದನ್ನು ಭಾರತ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದ್ದರು.
ಇದನ್ನೂ ಓದಿ:Narendra Modi: “ನಾನು ಹಿಂದೂ-ಮುಸ್ಲಿಂ ಅಂತ ಬೇಧ ಮಾಡಿದರೆ…”: ಪ್ರಧಾನಿ ಮೋದಿ ಹೇಳಿದ್ದೇನು?
ಇರಾನ್ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧ ಇನ್ನೂ ಮುಂದುವರೆಯಲಿದೆ. ಇದು ಭಾರತಕ್ಕೆ ಮುಂದೊಂದು ದಿನ ಭಾರೀ ಅಪಾಯವನ್ನು ತಂದೊಡ್ಡಬಹುದು ಎಂದು ಎಚ್ಚರಿಕೆ ನೀಡಿದೆ. ಕೆಲವು ದಿನಗಳ ಹಿಂದೆ ಇರಾನ್ ಜೊತೆ ವ್ಯಾಪಾರ ಸಂಬಂದ ಹೊಂದಿದ್ದ ಸಂಸ್ಥೆಗಳು, ವ್ಯಕ್ತಿಗಳ ಮೇಲೆ ಅಮೆರಿಕ ನಿರ್ಬಂಧ ಹೇಳಿರುವ ಬಗ್ಗೆ ನಿಮಗೆ ತಿಳಿದಿರಬಹುದು. ಹೀಗಾಗಿ ಇರಾನ್ ಜೊತೆಗೆ ಸಂಬಂಧ ಬೆಳೆಸಿ ನಿರ್ಬಂಧದ ರಿಸ್ಕ್ ಅನ್ನು ಮೈಮೇಲೆ ಎಳೆದುಕೊಳ್ಳಬೇಡಿ ಎಂದು ಅಮೆರಿಕ ಹೇಳಿತ್ತು.