Site icon Vistara News

Love Jihad: ಲವ್‌ ಜಿಹಾದ್‌ ವಿರುದ್ಧ ಯೋಗಿ ದಿಟ್ಟ ಕ್ರಮ; ಇನ್ನು ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ಗ್ಯಾರಂಟಿ!

Love Jihad

ಲಖನೌ: ಲವ್‌ ಜಿಹಾದ್‌ ವಿರುದ್ಧ ಕ್ರಮ ತೆಗೆದುಕೊಳ್ಳುವ ದಿಸೆಯಲ್ಲಿ ಉತ್ತರ ಪ್ರದೇಶ ಸರ್ಕಾರವು (Uttar Pradesh Government) ಮಹತ್ವದ ಹೆಜ್ಜೆ ಇರಿಸಿದೆ. ಲವ್‌ ಜಿಹಾದ್‌ನಲ್ಲಿ (Love Jihad) ತೊಡಗುವವರಿಗೆ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸುವ ಉತ್ತರ ಪ್ರದೇಶ ಕಾನೂನು ಬಾಹಿರ ಧಾರ್ಮಿಕ ಮತಾಂತರ (ತಿದ್ದುಪಡಿ) ವಿಧೇಯಕಕ್ಕೆ ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ರಾಜ್ಯಪಾಲರ ಅಂಕಿತ ಸಿಕ್ಕರೆ ವಿಧೇಯಕವು ಕಾಯ್ದೆಯಾಗಿ ಜಾರಿಗೆ ಬರಲಿದೆ. ಕಾಯ್ದೆ ಜಾರಿಯಾದರೆ, ಲವ್‌ ಜಿಹಾದ್‌ನಲ್ಲಿ ತೊಡಗಿಸಿಕೊಂಡವರಿಗೆ ಗರಿಷ್ಠ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ.

ಉತ್ತರ ಪ್ರದೇಶದ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ 2021ರಲ್ಲಿ ಬಲವಂತದ ಮತಾಂತರಕ್ಕೆ 1ರಿಂದ 10 ವರ್ಷಗಳವರೆಗೆ ಶಿಕ್ಷೆ ವಿಧಿಸಲು ಅವಕಾಶವಿತ್ತು. ಹೊಸ ಮಸೂದೆಯಡಿ ಮೋಸ ಅಥವಾ ಸುಳ್ಳಿನ ಮೂಲಕ ನಡೆಸುವ ಮತಾಂತರಗಳನ್ನು ಸಹ ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲಾಗುತ್ತದೆ. ಸ್ವಯಂಪ್ರೇರಿತ ಮತಾಂತರಕ್ಕಾಗಿ ವ್ಯಕ್ತಿಗಳು ಎರಡು ತಿಂಗಳ ಮುಂಚಿತವಾಗಿ ಮ್ಯಾಜಿಸ್ಟ್ರೇಟ್‌ಗೆ ತಿಳಿಸಬೇಕು. ಇಲ್ಲದಿದ್ದರೆ 6 ತಿಂಗಳಿನಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 10,000 ರೂ. ವಿಧಿಸಲಾಗುತ್ತದೆ ಎಂದು ಮಸೂದೆ ವಿವರಿಸುತ್ತದೆ.

ಈ ಮಸೂದೆಯು ಪ್ರಕಾರ ಬಲವಂತದ ಅಥವಾ ಮೋಸದ ಮತಾಂತರಕ್ಕೆ 1ರಿಂದ 5 ವರ್ಷಗಳ ಜೈಲು ಶಿಕ್ಷೆ ಮತ್ತು 15,000 ರೂ. ದಂಡ ವಿಧಿಸಲು ಪ್ರಸ್ತಾವಿಸುತ್ತದೆ. ಅಪ್ರಾಪ್ತ ವಯಸ್ಕರು, ಮಹಿಳೆಯರು ಅಥವಾ ಎಸ್‌ಸಿ-ಎಸ್‌ಟಿ ಸಮುದಾಯದ ಸದಸ್ಯರನ್ನು ಮತಾಂತರ ಮಾಡಿದರೆ ಶಿಕ್ಷೆಯ ಪ್ರಮಾಣ ಹೆಚ್ಚಲಿದೆ. ಅಂತಹ ಸಂದರ್ಭದಲ್ಲಿ 3ರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸುವ ಸಾಧ್ಯತೆ ಇದೆ.

ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ಲವ್‌ ಜಿಹಾದ್‌ ವಿರುದ್ಧ ಹಿಂದಿನಿಂದಲೂ ಕಠಿಣ ನಿಲುವು ತಾಳಿದೆ. 2017ರ ವಿಧಾನಸಭಾ ಚುನಾವಣೆಯಲ್ಲಿ ಲವ್ ಜಿಹಾದ್ ಅನ್ನು ಪ್ರಮುಖ ವಿಷಯವಾಗಿ ಕೈಗೆತ್ತಿಕೊಂಡಿತ್ತು. ಅಂದಿನಿಂದ ಈ ಸಮಸ್ಯೆಯನ್ನು ಪರಿಹರಿಸಲು ಕಠಿಣ ಕಾನೂನುಗಳನ್ನು ರಚಿಸಲು ಸರ್ಕಾರ ಬದ್ಧವಾಗಿದೆ. ಹೊಸ ಮಸೂದೆಯು ಸಂತ್ರಸ್ತರ ವೈದ್ಯಕೀಯ ವೆಚ್ಚಗಳನ್ನು ಸರಿದೂಗಿಸಲು ಹಣಕಾಸಿನ ನೆರವು ನೀಡುವ ನಿಬಂಧನೆಗಳನ್ನೂ ಒಳಗೊಂಡಿದೆ.

ಇದಲ್ಲದೆ ಈ ಮಸೂದೆಯು ಲವ್ ಜಿಹಾದ್ ಪ್ರಕರಣಗಳನ್ನು ಯಾರು ವರದಿ ಮಾಡಬಹುದು ಎಂಬ ವ್ಯಾಪ್ತಿಯನ್ನೂ ವಿವರಿಸುತ್ತದೆ. ಈ ಹಿಂದೆ ಸಂತ್ರಸ್ತರು ಅವರ ಪೋಷಕರು ಅಥವಾ ಒಡಹುಟ್ಟಿದವರು ಮಾತ್ರ ದೂರುಗಳನ್ನು ಸಲ್ಲಿಸಬಹುದಿತ್ತು. ಹೊಸ ಮಸೂದೆಯಡಿ ಯಾರು ಬೇಕಾದರೂ ಪೊಲೀಸರಿಗೆ ಲಿಖಿತ ದೂರುಗಳನ್ನು ಸಲ್ಲಿಸಬಹುದು. ನಂತರ ಅವರು ತನಿಖೆ ನಡೆಸಲಿದ್ದಾರೆ.

ಇದನ್ನೂ ಓದಿ: ‌Love Jihad: ಲವ್‌ ಜಿಹಾದ್‌ಗೆ ಮತ್ತೊಂದು ಬಲಿ? ಹೋಟೆಲ್ ರೂಮ್ ನಲ್ಲಿ ಹಿಂದೂ ಯುವತಿ ಶವ ಪತ್ತೆ; ಮುಸ್ಲಿಂ ಯುವಕ ಎಸ್ಕೇಪ್‌

Exit mobile version