ಲಕ್ನೋ: “ಸಾಮಾನ್ಯ ಮುಸ್ಲಿಮರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೇ ಹಿತೈಷಿಗಳಾಗಿದ್ದಾರೆ,” ಎಂದು ಉತ್ತರ ಪ್ರದೇಶದ (Uttar Pradesh) ಅಲ್ಪಸಂಖ್ಯಾತರ ಸಚಿವರಾಗಿರುವ ಡ್ಯಾನಿಶ್ ಆಜಾದ್ ಅನ್ಸಾರಿ ಅವರು ಹೇಳಿದ್ದಾರೆ.
ಇದನ್ನೂ ಓದಿ: Flipkart | ಉತ್ತರಪ್ರದೇಶದ ಉನ್ನಾವೊದಲ್ಲಿ ಫ್ಲಿಪ್‌ಕಾರ್ಟ್‌ನ ಅತಿ ದೊಡ್ಡ ದಿನಸಿ ದಾಸ್ತಾನು ಕೇಂದ್ರ
“ವಿರೋಧ ಪಕ್ಷಗಳು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಮುಸ್ಲಿಂ ವಿರೋಧಿ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿವೆ. ಅವರಿಗೆ ಮುಸ್ಲಿಮರು ಅಭಿವೃದ್ಧಿಯಾಗುವುದು ಬೇಕಿಲ್ಲವಾದ್ದರಿಂದ ಈ ರೀತಿ ಮಾಡುತ್ತಿದ್ದಾರೆ. ಆದರೆ ಸಾಮಾನ್ಯ ಮುಸ್ಲಿಮರು ಮೋದಿ ಹಾಗೂ ಯೋಗಿ ಅವರನ್ನು ತಮ್ಮ ಹಿತೈಷಿಗಳಂತೆ ಕಾಣುತ್ತಾರೆ. ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನೀಡಿದ ಹೇಳಿಕೆಯನ್ನು ಎಲ್ಲ ಮುಸ್ಲಿಮರು ಸ್ವಾಗತಿಸಿದ್ದಾರೆ. ಅವರೆಲ್ಲರೂ ಒಂದಾಗಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಲಿದ್ದಾರೆ” ಎಂದು ಸಚಿವರು ಹೇಳಿದ್ದಾರೆ.
ನಮ್ಮಲ್ಲಿ ಪಸ್ಮಂದ(ಹಿಂದುಳಿದ) ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಮುಸ್ಲಿಂ ಸಮುದಾಯ ಅಭಿವೃದ್ಧಿಯಾಗಬೇಕೆಂದರೆ ಮೊದಲು ಪಸ್ಮಂದ ಮುಸ್ಲಿಂ ಸಮುದಾಯ ಅಭಿವೃದ್ಧಿಯಾಗಬೇಕು. ಅದಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಲ್ಲ ರೀತಿಯ ಕೆಲಸಗಳನ್ನು ಮಾಡುತ್ತಿದೆ” ಎಂದೂ ಡ್ಯಾನಿಶ್ ಅವರು ತಿಳಿಸಿದ್ದಾರೆ.
ಆರ್‌ಎಸ್‌ಎಸ್ ಹಾಗೂ ಮುಸ್ಲಿಂ ಧರ್ಮದ ಬಾಂಧವ್ಯದ ಬಗ್ಗೆಯೂ ಮಾತನಾಡಿದ ಅವರು, “ಆರ್‌ಎಸ್‌ಎಸ್ ಎಂದೂ ಮುಸ್ಲಿಂ ವಿರೋಧಿಯಾಗಿದ್ದಲ್ಲ. ದೇಶದ ಹಿತಾಸಕ್ತಿಯ ಬಗ್ಗೆಯೇ ಚಿಂತಿಸುವ ಸಂಘಟನೆಯದು. ಆದರೆ ವಿರೋಧ ಪಕ್ಷಗಳು ಮಾತ್ರ ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರೋಧಿಗಳು ಎನ್ನುವಂತೆ ಬಿಂಬಿಸಲು ಪ್ರಯತ್ನಿಸುತ್ತವೆ” ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ನಿಟ್ಟಿನಲ್ಲಿ ಬಿಜೆಪಿಯ ಪ್ರತಿ ನಾಯಕರು ಹಾಗೂ ಕಾರ್ಯಕರ್ತರಿಗೆ ದೇಶದ ಪ್ರತಿಯೊಂದು ಧರ್ಮದವರ ಮನೆ ಮನೆಗಳಿಗೆ ತೆರಳಿ, ಪ್ರಚಾರ ಕೈಗೊಳ್ಳುವಂತೆ ಪ್ರಧಾನಿ ಮೋದಿ ಅವರು ಸೂಚಿಸಿದ್ದಾರೆ ಎಂದು ದೆಹಲಿ ಬಿಜೆಪಿಯ ಮೂಲಗಳು ತಿಳಿಸಿವೆ.