ಲಖನೌ : ರಾಜಕಾರಣಿ ಹಾಗೂ ಜೈಲು ಶಿಕ್ಷೆ ಅನುಭವಿಸುತ್ತಿರುವ ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿಯ (Mukthar Ansari) ಮಕ್ಕಳಿಗೆ ಸೇರಿದ ಎರಡು ಅಂತಸ್ತಿನ ಮನೆಯನ್ನು ಉತ್ತರ ಪ್ರದೇಶದ ಪೊಲೀಸರು ನೆಲಸಮ ಮಾಡಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶಧ ಪ್ರಕಾರ ಕ್ರಮ ಕೈಗೊಂಡಿರುವ ಪೊಲೀಸರು ಮನೆಯನ್ನು ಸಂಪೂರ್ಣವಾಗಿ ನೆಲಸಮಗೊಳಿಸಿದ್ದಾರೆ.
ಮುಖ್ತಾರ್ ಅನ್ಸಾರಿಯ ಮಕ್ಕಳಾದ ಅಬ್ಬಾಸ್ ಹಾಗೂ ಉಮರ್ ಅನ್ಸಾರಿಯ ಮಕ್ಕಳಿಗೆ ಸೇರಿದ್ದ ಕಟ್ಟಡವನ್ನು ನೆಲಸಮ ಮಾಡುವಂತೆ ಕೋರ್ಟ್ ಆದೇಶ ನೀಡಿತ್ತು. ಅದರಂತೆ ಕಾರ್ಯಾಚರಣೆ ಆರಂಭಿಸಿ ಶನಿವಾರ ಮುಗಿಸಲಾಗಿದೆ ಎಂದು ವಲಯ ಅಧಿಕಾರಿ ಅಭಯ್ ಸಿಂಗ್ ಮಾಹಿತಿ ನೀಡಿದ್ದಾರೆ.
ಮುಖ್ತಾರಿ ಅನ್ಸಾರಿ ಬೇರೆಯವರಿಗೆ ಸೇರಿದ್ದ ಜಮೀನಿನಲ್ಲಿ ಮನೆ ಕಟ್ಟಿದ್ದರು. ಅಲ್ಲದೆ ಮನೆ ಕಟ್ಟುವ ಮೊದಲು ಸಂಬಂಧಿಸಿದ ಅಧಿಕಾರಿಗಳಿಂದ ಅನುಮೋದನೆ ಕೂಡ ಪಡೆದುಕೊಂಡಿರಲಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: Mukhtar Ansari | ಯುಪಿ ಗ್ಯಾಂಗ್‌ಸ್ಟರ್- ರಾಜಕಾರಣಿ ಮುಖ್ತಾರ್ ಅನ್ಸಾರಿಗೆ 10 ವರ್ಷ ಜೈಲು ಶಿಕ್ಷೆ, ಏನಿದು ಪ್ರಕರಣ?
ಮುಖ್ತಾರ್ ಅನ್ಸಾರಿ ಜೈಲು ಸೇರಿರುವ ಜತೆಗೆ ಪುತ್ರ ಅಬ್ಬಾಸ್ ಕೂಡ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ (ಎಸ್ಬಿಎಸ್ಪಿ) ಪಕ್ಷದ ಶಾಸಕರಾಗಿದ್ದ ಅವರು ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ.