ಲಖನೌ: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ‘ಸತ್ಸಂಗ’ ಧಾರ್ಮಿಕ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದ ದುರ್ಘಟನೆಗೆ (Uttar Pradesh stampede) ಕನಿಷ್ಠ 27 ಜನರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ ಹತ್ರಾಸ್ ಸಿಕಂದರಾ ರಾವ್ ಪಟ್ಟಣದಲ್ಲಿ ವಿಶೇಷವಾಗಿ ಹಾಕಲಾಗಿದ್ದ ಪೆಂಡಾಲ್ನಲ್ಲಿ ಧಾರ್ಮಿಕ ಬೋಧಕರೊಬ್ಬರು ತಮ್ಮ ಅನುಯಾಯಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ.
ಮೃತಪಟ್ಟವರಲ್ಲಿ 25 ಮಹಿಳೆಯರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಿವನ ಸತ್ಸಂಗದ ವೇಳೆ ಕಾಲ್ತುಳಿತ ಸಂಭವಿಸಿದೆ. ಸಮುದಾಯ ಆರೋಗ್ಯ ಕೇಂದ್ರಗಳಿಗೆ ಅವರೆಲ್ಲರನ್ನೂ ಕೊಂಡೊಯ್ಯಲಾಗಿದೆ. ಅದೇ ರೀತಿ ಹಲವಾರು ಮಂದಿ ಗಾಯಗೊಂಡಿದ್ದು ನಾನಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ ಇಬ್ಬರು ಮಕ್ಕಳೂ ಇದ್ದಾರೆ ಎನ್ನಲಾಗಿದೆ.
#WATCH | Etah, Uttar Pradesh: Several people have died in a stampede at a religious event in Hathras.
— ANI (@ANI) July 2, 2024
CMO Etah, Umesh Kumar Tripathi says, "27 bodies have arrived at the post-mortem house so far, including 25 women and 2 men. Many injured have also been admitted. Further details… pic.twitter.com/7tgZEQXHEe
ಸಾವು ನೋವುಗಳನ್ನು ದೃಢಪಡಿಸಿದ ಮುಖ್ಯ ವೈದ್ಯಕೀಯ ಅಧಿಕಾರಿ ರಾಜ್ಕುಮಾರ್ ಅಗರ್ವಾಲ್, “ನಾವು ಇಲ್ಲಿಯವರೆಗೆ 27 ಶವಗಳನ್ನು ದಾಖಲಿಸಿಕೊಂಡಿದ್ದೇವೆ ಅದರಲ್ಲಿ 25 ಮಹಿಳೆಯರು ಮತ್ತು ಇಬ್ಬರು ಪುರುಷರು ಎಂದು ಹೇಳಿದ್ದಾರೆ. ಧಾರ್ಮಿಕ ಸಭೆಯ ಕೊನೆಯಲ್ಲಿ ಈ ಘಟನೆ ನಡೆದಿದ್ದು, ಗೊಂದಲ ಮತ್ತು ನೂಕುನುಗ್ಗಲು ಹಲವಾರು ಭಕ್ತರ ಸಾವಿಗೆ ಕಾರಣವಾಯಿತು. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆ ಮತ್ತು ಮುಂದಿನ ಕ್ರಮಗಳಿಗಾಗಿ ಇಟಾ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಗಿದೆ.
ಇದನ್ನೂ ಓದಿ: Narendra Modi: ಪ್ರಜಾಪ್ರಭುತ್ವ, ಜಾತ್ಯತೀತತೆ, ಏಳಿಗೆಯೇ ನಮ್ಮ ಆದ್ಯತೆ; ಸಂಸತ್ತಿನಲ್ಲಿ ಮೋದಿ ಹೇಳಿಕೆ
ರತಿಭಾನ್ಪುರದಲ್ಲಿ ಶಿವನ ಆರಾಧನೆಯ ಧಾರ್ಮಿಕ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮ ಮುಗಿಯುತ್ತಿದ್ದಂತೆ ಕಾಲ್ತುಳಿತ ಸಂಭವಿಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಜನರು ಗಾಯಗೊಂಡಿದ್ದಾರೆ. ಒಟ್ಟು 15 ಮಹಿಳೆಯರು ಮತ್ತು ಮಕ್ಕಳನ್ನು ಇಟಾ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿನಾಥ, ತಕ್ಷಣವೇ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಮುಖ್ಯಮಂತ್ರಿಗಳು, ಗಾಯಾಳುಗಳು ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.