ಡೆಹ್ರಾಡೂನ್: “ಬಲವಂತದ ಮತಾಂತರ ಅಪಾಯಕಾರಿ” ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಉತ್ತರಾಖಂಡದಲ್ಲಿ ಮತಾಂತರ ತಡೆ ಕಾನೂನನ್ನು ಬಿಗಿಗೊಳಿಸಲು (Anti Conversion Law) ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆ ಮೂಲಕ ರಾಜ್ಯದಲ್ಲಿ ಬಲವಂತದ ಮತಾಂತರ ತಡೆಗೆ ಮುಂದಾಗಿದೆ.
ಮತಾಂತರ ತಡೆ ಕಾನೂನಿಗೆ ತಿದ್ದುಪಡಿ ತಂದು, ಬಲವಂತದ ಮತಾಂತರ ಮಾಡುವವರಿಗೆ ಐದು ವರ್ಷದ ಬದಲು 10 ವರ್ಷ ಜೈಲು ಶಿಕ್ಷೆ ವಿಧಿಸುವುದು ಸೇರಿ ನಿಯಮ ರೂಪಿಸಲು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯು ಸಮ್ಮತಿ ಸೂಚಿಸಿದೆ. ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ಕುರಿತು ವಿಧೇಯಕ ಮಂಡಿಸಲು ಸಂಪುಟ ಸಭೆ ತೀರ್ಮಾನಿಸಿದೆ.
ಉತ್ತರಾಖಂಡ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ 2018ರ ಪ್ರಕಾರ ಬಲವಂತವಾಗಿ ಮತಾಂತರ ಮಾಡುವವರಿಗೆ ಐದು ವರ್ಷದವರೆಗೆ ಶಿಕ್ಷೆ ವಿಧಿಸಲಾಗುತ್ತದೆ. ಇದನ್ನು 10 ವರ್ಷಕ್ಕೆ ಏರಿಕೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಕೆಲ ದಿನಗಳ ಹಿಂದಷ್ಟೇ ಸುಪ್ರೀಂ ಕೋರ್ಟ್, ಮತಾಂತರದ ಕುರಿತು ಕಳವಳ ವ್ಯಕ್ತಪಡಿಸಿತ್ತು. “ಬಲವಂತದ ಮತಾಂತರವು ದೇಶದ ಭದ್ರತೆಗೆ ಅಪಾಯಕಾರಿ” ಎಂದಿತ್ತು.
ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ಬಲವಂತದ ಮತಾಂತರದಿಂದ ದೇಶದ ಭದ್ರತೆಗೆ ಅಪಾಯ