ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿದು (Uttarakhand Tunnel Collapse) ಸಂಕಷ್ಟಕ್ಕೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆಗೆ ನಡೆಯುತ್ತಿರುವ ಕಾರ್ಯಾಚರಣೆಯು 12ನೇ ದಿನಕ್ಕೆ ಕಾಲಿಟ್ಟಿದೆ. ಕಾರ್ಮಿಕರು ಯಾವುದೇ ತೊಂದರೆ ಇಲ್ಲದೆ ಬರಲಿ ಎಂದು ದೇಶದ ಜನ ಪ್ರಾರ್ಥಿಸುತ್ತಿದ್ದು, ಇನ್ನೂ ರಕ್ಷಣೆಗೆ ಹರಸಾಹಸ ಮುಂದುವರಿದಿದೆ. ಹಾಗೆ ನೋಡಿದರೆ, ಗುರುವಾರ (ನವೆಂಬರ್ 23) ಬೆಳಗ್ಗೆಯೇ ಕಾರ್ಯಾಚರಣೆ ಮುಗಿಯಬೇಕಿತ್ತು. ಆದರೆ, ಕಾರ್ಯಾಚರಣೆ (Rescue Operation) ವಿಳಂಬವಾಗಿದ್ದು, ರಕ್ಷಣೆಗೆ ಇನ್ನೂ 12-14ರಿಂದ ತಾಸು ಬೇಕಾಗುತ್ತದೆ ಎಂದು ತಿಳಿದುಬಂದಿದೆ.
“ಸುರಂಗದಲ್ಲಿ ಇನ್ನೂ 6-8 ಮೀಟರ್ ಅವಶೇಷವನ್ನು ಕೊರೆಯುವುದು ಬಾಕಿ ಇದೆ. ಮತ್ತೆ ಕಾರ್ಯಾಚರಣೆ ಆರಂಭವಾಗಿದ್ದು, ಇನ್ನೂ ಆರು ಮೀಟರ್ ಉದ್ದದ ಮೂರು ಪೈಪ್‌ಗಳನ್ನು ಒಳಗೆ ಬಿಡುವ ಕಾರ್ಯಕ್ಕೆ ಚಾಲನೆ ದೊರೆತಿದೆ. ಇದು ನಿಜಕ್ಕೂ ಸಕಾರಾತ್ಮಕ ಬೆಳವಣಿಗೆಯಾಗಿದೆ. ಬುಧವಾರ (ನವೆಂಬರ್ 22) ಕಾರ್ಯಾಚರಣೆ ವೇಳೆ ಕಬ್ಬಿಣದ ರಾಡ್‌ಗಳು ಅಡ್ಡ ಬಂದ ಕಾರಣ ವಿಳಂಬವಾಯಿತು. ಆದರೆ, ಗುರುವಾರವೇ ಎಲ್ಲ ಕಾರ್ಮಿಕರನ್ನು ಯಶಸ್ವಿಯಾಗಿ ಹೊರಗೆ ಕರೆತರಲಾಗುತ್ತದೆ” ಎಂದು ಕಾರ್ಯಾಚರಣೆಯಲ್ಲಿ ತೊಡಗಿರುವ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Uttarkashi Tunnel Collapse | Will Take 12-14 Hrs More To Reach Trapped Workers | Overseas News pic.twitter.com/RAYSLELT8r
— RayeesNews (@overseasnewsin) November 23, 2023
ಕಾರ್ಮಿಕರ ಜತೆ ಸಿಎಂ ಧಾಮಿ ಮಾತು
ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಜತೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮಾತನಾಡಿದ್ದಾರೆ. “ಸತತವಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇನ್ನು ಕೆಲವೇ ಗಂಟೆಗಳಲ್ಲಿ ನಿಮ್ಮನ್ನೆಲ್ಲ ರಕ್ಷಣೆ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಎದೆಗುಂದದಿರಿ” ಎಂದು ಧೈರ್ಯ ತುಂಬಿದ್ದಾರೆ. ಇನ್ನು ಕಾರ್ಮಿಕರನ್ನು ಹೊರಗೆ ಕರೆತರುತ್ತಲೇ ಅವರ ಆರೋಗ್ಯ ತಪಾಸಣೆ, ಚಿಕಿತ್ಸೆಗೆ ಸಕಲ ವ್ಯವಸ್ಥೆ ಮಾಡಲಾಗಿದೆ.
#WATCH | Uttarakhand CM Pushkar Singh Dhami had a conversation with Gabbar Singh Negi and Saba Ahmed, the workers trapped in the tunnel under construction in Silkyara, Uttarkashi, to inquire about their well-being and also informed them about the rescue operation going on at a… pic.twitter.com/uBqGQMppVV
— ANI (@ANI) November 23, 2023
ಉತ್ತರಕಾಶಿ ಜಿಲ್ಲೆಯ ಸಿಲ್‌ಕ್ಯಾರ ಹಾಗೂ ದಂಡಲ್‌ಗಾಂವ್‌ಗೆ ಸಂಪರ್ಕ ಕಲ್ಪಿಸಲು ಚಾರ್ ಧಾಮ್ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. 4.5 ಕಿಲೋ ಮೀಟರ್ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್ ಉದ್ದದ ಸುರಂಗ ಕುಸಿದಿತ್ತು. ನವೆಂಬರ್ 12ರಂದು ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು. ಇಷ್ಟಾದರೂ ಕ್ಷಿಪ್ರವಾಗಿ ಕಾರ್ಮಿಕರನ್ನು ರಕ್ಷಣೆ ಮಾಡಲು ಆಗಿರಲಿಲ್ಲ.
ಇದನ್ನೂ ಓದಿ: ಸುರಂಗದಲ್ಲಿ ಸಿಲುಕಿದ ಕಾರ್ಮಿಕರಿಗೆ ಮೊದಲ ಬಾರಿಗೆ ವೆಜ್ ಪುಲಾವ್, ಮಟರ್ ಪನೀರ್ ಪೂರೈಕೆ!
ಉತ್ತರಕಾಶಿಯಿಂದ ಯಮುನೋತ್ರಿಗೆ 26 ಕಿಲೋಮೀಟರ್ ಸಂಚರಿಸುವುದನ್ನು ಕಡಿಮೆಗೊಳಿಸಲು ಸುರಂಗ ನಿರ್ಮಿಸಲಾಗುತ್ತಿದೆ. ಸುರಂಗ ಕುಸಿಯುತ್ತಲೇ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರು ಒಳಗೆ ಸಿಲುಕಿದ್ದರು. ಏಕಾಏಕಿ ಸುರಂಗ ಕುಸಿದ ಕಾರಣ ಒಬ್ಬ ಕಾರ್ಮಿಕರೂ ಹೊರಗೆ ಬರಲು ಸಾಧ್ಯವಾಗಿರಲಿಲ್ಲ. ಉತ್ತರಾಖಂಡ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ. ಭೂಕುಸಿತ, ಡ್ರಿಲ್ಲಿಂಗ್ ಯಂತ್ರಗಳು ಕೈಕೊಟ್ಟಿರುವುದು ಸೇರಿ ಹಲವು ಕಾರಣಗಳಿಂದಾಗಿ ಕಾರ್ಮಿಕರ ರಕ್ಷಣೆಯು ಕಷ್ಟವಾಗಿತ್ತು. ವಿದೇಶಿ ತಜ್ಞರನ್ನೂ ಜನರ ರಕ್ಷಣೆಗೆ ಕರೆಸಲಾಗಿತ್ತು. ಈಗ ಕೊನೆಗೆ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ