ವೈಶಾಲಿ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ತಡ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ(Vaishali accident) 12 ಜನರು ಮೃತಪಟ್ಟದ್ದಾರೆ. ಧಾರ್ಮಿಕ ಮೆರವಣಿಗೆಯಲ್ಲಿ ಸಾಗುತ್ತಿದ್ದ ಜನರ ಮೇಲೆ ವೇಗವಾಗಿ ಬಂದ ಟ್ರಕ್ ಹರಿದಿದೆ. ಮೃತಪಟ್ಟವರ ಪೈಕಿ ಏಳು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ. ಪರಿಹಾರ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ.
ಈ ದುರ್ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರ ಕುಟುಂಬಕ್ಕೆ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.
ಬಿಹಾರದ ವೈಶಾಲಿ ಜಿಲ್ಲೆಯ ನಯಾಗಾಂವ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಧಾರ್ಮಿಕ ಮೆರವಣಿಗೆ ಹೋಗುತ್ತಿತ್ತು. ಈ ವೇಳೆ, ನಿಯಂತ್ರಣ ತಪ್ಪಿದ ಟ್ರಕ್ವೊಂದು ಮೆರವಣಿಗೆಯ ಮೇಲೆ ಹರಿದ ಪರಿಣಾಮ ಭೀರಕ ಅಪಘಾತ ಸಂಭವಿಸಿದೆ. ಪರಿಹಾರ ಕಾರ್ಯಾಚರಣೆಯನ್ನು ಕೈಗೊಳ್ಳುವಂತೆ ಬಿಹಾರ ನಿತೀಶ್ ಕುಮಾರ್ ಅವರು ಸೂಚಿಸಿದ್ದಾರೆ. ಹೆಚ್ಚಿನ ಪ್ರಮಾಣದ ಪರಿಹಾರಧನ ವಿತರಣೆಗೆ ಮುಂದಾಗಿದ್ದಾರೆ. ಇದೇ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೂ ದುರ್ಘಟನೆಯಲ್ಲಿ ಮೃತಪಟ್ಟವರಿಗಾಗಿ ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ | Pune Accident | ಪುಣೆ-ಬೆಂಗಳೂರು ಹೈವೇಯಲ್ಲಿ ಭೀಕರ ಅಪಘಾತ, 48 ವಾಹನಗಳು ಜಖಂ