ನವದೆಹಲಿ: ಮಾಜಿ ಪ್ರಧಾನಿ, ‘ಭಾರತ ರತ್ನ’ ಅಟಲ್ ಬಿಹಾರಿ ವಾಜಪೇಯಿ (Former PM Atal Bihari Vajpayee) ಅವರ ಪುಣ್ಯ ಸ್ಮರಣೆಯಲ್ಲಿ ಪ್ರಧಾನಿ ನೇರಂದ್ರ ಮೋದಿ(PM Narendra Modi), ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಸೇರಿ ಎನ್‌ಡಿಎ ನಾಯಕರು ಪಾಲ್ಗೊಂಡಿದ್ದರು. ವಾಜಪೇಯಿ ಅವರ 5ನೇ ಪುಣ್ಯತಿಥಿಯನ್ನು ಬುಧವಾರ ಆಚರಿಸಲಾಯಿತು(Vajpayee Death anniversary:).
ಉಪರಾಷ್ಟ್ರಪತಿ ಜಗದೀಪ್ ಧನಕರ್, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ರಾಜ್ಯಸಭಾ ಡೆಪ್ಯುಟಿ ಚೇರ್ಮನ್ ಹರಿವಂಶ್, ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್, ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ಅಪ್ನಾದಳ ನಾಯಕಿ ಅನುಪ್ರಿಯಾ ಪಟೇಲ್ ಹಾಗೂ ಎಚ್‌ಎಎಂನ ಜಿತನ್ ರಾಮ್ ಮಾಂಜ್ಹಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗೆ ಗೌರವ ಸಲ್ಲಿಸಿದರು. ಈ ವೇಳೆ, ವಾಜಪೇಯಿ ಅವರ ದತ್ತು ಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ ಅವರು ಸೈದವ್ ಅಟಲ್ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸಿದರು.
राष्ट्र सेवा में जीवनपर्यंत समर्पित रहे पूर्व प्रधानमंत्री वाजपेयी जी को आज उनकी पुण्यतिथि पर ‘सदैव अटल’ जाकर श्रद्धांजलि दी। pic.twitter.com/UKGDvXT7n9
— Narendra Modi (@narendramodi) August 16, 2023
ಅಟಲ್ ಪುಣ್ಯ ತಿಥಿಯಂದು ಅವರಿಗೆ ಗೌರವ ಸಲ್ಲಿಸುತ್ತಿರುವ 140 ಕೋಟಿ ಭಾರತೀಯರಲ್ಲಿ ನಾನು ಇದ್ದೇನೆ. ಅವರ ನಾಯಕತ್ವದಿಂದ ಭಾರತ್ಕಕೆ ಹೆಚ್ಚಿನ ಪ್ರಯೋಜನ ದೊರೆತಿದೆ. ನಮ್ಮ ದೇಶದ ಪ್ರಗತಿಯನ್ನು ಹೆಚ್ಚಿಸುವಲ್ಲಿ ಮತ್ತು ದೇಶವನ್ನು 21ನೇ ಶತಮಾನಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವನ್ನು ನಿಭಾಯಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಅವಧಿ ಪೂರೈಸಿದ ಕಾಂಗ್ರೆಸ್ಸೇತರ ಮೊದಲ ಪಿಎಂ
1924 ಡಿಸೆಂಬರ್ 25ರಂದು ಗ್ವಾಲಿಯರ್‌ನಲ್ಲಿ ವಾಜಪೇಯಿ ಅವರು ಜನಿಸಿದರು. ಪ್ರಧಾನಿಯಾಗಿ ಐದು ವರ್ಷಗಳನ್ನು ಪೂರೈಸಿದ ಮೊದಲ ಕಾಂಗ್ರೆಸ್ಸೇತರ ಎಂಬ ಕೀರ್ತಿ ಅವರಿಗಿದೆ. ವಾಜಪೇಯಿ ಅವರು ಮೊದಲಿಗೆ 1996 ಮೇ 16ರಿಂದ 1996 ಜೂನ್ 1ರ ವರೆಗೆ ಪ್ರಧಾನಿಯಾಗಿದ್ದರು. ಮತ್ತೆ 1998 ಮಾರ್ಚ್ 19ರಿಂದ 2004 ಮೇ 24ರವರೆಗೆ ಪ್ರಧಾನಿಯಾಗಿದ್ದರು. ಪ್ರಧಾನಿ ಮೊರಾರ್ಜಿ ದೇಸಾಯಿ ಸಂಪುಟದಲ್ಲಿ ಅವರು ಅವರು 1977ರಿಂದ 1979ರವರೆಗೆ ವಿದೇಶಾಂಗ ಸಚಿವರಾಗಿಯೂ ಕೆಲಸ ಮಾಡಿದ್ದರು.
ಈ ಸುದ್ದಿಯನ್ನೂ ಓದಿ: Atal Bihari Vajpayee Birth Day | ಭಾರತದ ಭದ್ರತಾ ವ್ಯವಸ್ಥೆಗೆ ಅಟಲ್ ಬಿಹಾರಿ ವಾಜಪೇಯಿ ಅವರ 5 ಕೊಡುಗೆಗಳು
Vajpayee Death anniversary: 2015ರಲ್ಲಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ
2014ರಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರವು ಅಧಿಕಾರಕ್ಕೇರಿತು. ಬಳಿಕ 2015ರಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಲಾಯಿತು. ಅಲ್ಲದೇ, ವಾಜಪೇಯಿ ಅವರ ಜನ್ಮ ದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಭಾರತದಲ್ಲಿ ಆಚರಿಸಲಾಗುತ್ತದೆ.