Vande Bharat Express: ಮತ್ತೆ ಸುದ್ದಿಯಾದ ವಂದೇ ಭಾರತ್‌ ರೈಲು; ಮಾಂಸಾಹಾರ ಸರ್ವ್‌ ಮಾಡಿದ ಸಿಬ್ಬಂದಿಗೆ ಕಪಾಳಮೋಕ್ಷ - Vistara News

ದೇಶ

Vande Bharat Express: ಮತ್ತೆ ಸುದ್ದಿಯಾದ ವಂದೇ ಭಾರತ್‌ ರೈಲು; ಮಾಂಸಾಹಾರ ಸರ್ವ್‌ ಮಾಡಿದ ಸಿಬ್ಬಂದಿಗೆ ಕಪಾಳಮೋಕ್ಷ

Vande Bharat Express: ಊಟದ ಪ್ಯಾಕೆಟ್‌ನಲ್ಲಿನ ಲೇಬಲ್ ಅನ್ನು ಗಮನಿಸದ ಹಿರಿಯ ವ್ಯಕ್ತಿ ಮಾಂಸಾಹಾರಿ ಆಹಾರವನ್ನು ಸೇವಿಸಿದ್ದಾರೆ. ತಿಂದ ನಂತರ ಮಾಂಸಾಹಾರವೆಂದು ಗೊತ್ತಾಗಿದ್ದು, ಇದರಿಂದ ಕುಪಿತಗೊಂಡ ಅವರು ಆಹಾರ ವಿತರಿಸಿದ ಸಿಬ್ಬಂದಿಗೆ ಎರಡು ಬಾರಿ ಕಪಾಳಮೋಕ್ಷ ಮಾಡಿದ್ದಾರೆ.

VISTARANEWS.COM


on

Vande Bharat Express
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ವಂದೇ ಭಾರತ್‌ ರೈಲು(Vande Bharat Express) ಶುರುವಾದ ನಂತರ ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇದೆ. ಕೆಲವೊಮ್ಮೆ ರೈಲಿನ ಮೇಲೆ ಕಲ್ಲೆಸೆತ, ಇನ್ನು ಕೆಲವೊಮ್ಮೆ ರೈಲಿನಲ್ಲಿ ಸಿಗುವ ಕಳಪೆ ಊಟ ಹೀಗೆ ಸದಾ ಯಾವುದಾದರೂ ವಿವಾದಗಳು ಕೇಳಿ ಬರುತ್ತಲೇ ಇರುತ್ತದೆ. ಇದೀಗ ಅಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ. ಹಿರಿಯ ಪ್ರಯಾಣಿಕರೊಬ್ಬರು (Elderly Passenger), ತಾವು ಕೇಳಿದ ಸಸ್ಯಾಹಾರದ (Vegetarian) ಬದಲಿಗೆ ಮಾಂಸಾಹಾರವನ್ನು (Non-Vegetarian Meal) ನೀಡಿದ್ದಾನೆಂದು ಆಹಾರ ವಿತರಕ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿರುವ ಘಟನೆ ವರದಿಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಘಟನೆ ವಿವರ:

ಹೌರಾದಿಂದ ರಾಂಚಿಗೆ (Ranchi) ತೆರಳುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಜುಲೈ 26 ರಂದು ನಡೆದ ಈ ಘಟನೆಯನ್ನು ಸಹ-ಪ್ರಯಾಣಿಕ ಕುನಾಲ್ ವರ್ಮಾ ಅವರು ವಿಡಿಯೋ ಮಾಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಊಟದ ಪ್ಯಾಕೆಟ್‌ನಲ್ಲಿನ ಲೇಬಲ್ ಅನ್ನು ಗಮನಿಸದ ಹಿರಿಯ ವ್ಯಕ್ತಿ ಮಾಂಸಾಹಾರಿ ಆಹಾರವನ್ನು ಸೇವಿಸಿದ್ದಾರೆ. ತಿಂದ ನಂತರ ಮಾಂಸಾಹಾರವೆಂದು ಗೊತ್ತಾಗಿದ್ದು, ಇದರಿಂದ ಕುಪಿತಗೊಂಡ ಅವರು ಆಹಾರ ವಿತರಿಸಿದ ಸಿಬ್ಬಂದಿಗೆ ಎರಡು ಬಾರಿ ಕಪಾಳಮೋಕ್ಷ ಮಾಡಿದ್ದಾರೆ. ಇದು ಇತರ ಪ್ರಯಾಣಿಕರಿಗೆ ಹಿಡಿಸಲಿಲ್ಲ, ಮಧ್ಯಪ್ರವೇಶಿಸಿದ ಪ್ರಯಾಣಿಕರು ಹಿರಿಯ ಪ್ರಯಾಣಿಕ ಆಹಾರ ವಿತರಕ ಸಿಬ್ಬಂದಿಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹಿರಿಯ ಪ್ರಯಾಣಿಕನ ವರ್ತನೆಗೆ ಅಸಮಾಧಾನಗೊಂಡಿರುವ ಸಹ ಪ್ರಯಾಣಿಕರು ಆತನ ವಿರುದ್ಧ ಹರಿಹಾಯ್ದಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ನೀವು ಏಕೆ ಅವರಿಗೆ ಹೊಡೆಯತ್ತಿದ್ದೀರಿ? ನಿಮ್ಮ ವಯಸ್ಸನ್ನು ನೋಡಿ. ವಯಸ್ಸಿಗೆ ತಕ್ಕಂತೆ ವರ್ತಿಸಿ ಎಂದು ಹೇಳಿದ್ದಾರೆ ಈ ವೇಳೆ ಆಹಾರ ವಿತರಿಸಿದ ಸಿಬ್ಬಂದಿ ಪದೇ ಪದೇ ಕ್ಷಮೆಯಾಚಿಸುವುದನ್ನು ಕಾಣಬಹುದು. ಇತರ ಪ್ರಯಾಣಿಕರು ಹಿರಿಯ ವ್ಯಕ್ತಿಯನ್ನು ಕ್ಷಮೆಯಾಚಿಸಿ ಎಂದು ಹೇಳುತ್ತಾರೆ.

ಇನ್ನು ಘಟನೆಯ ಬಗ್ಗೆ ಪೂರ್ವ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಕಾಶ್ ಚರಣ್ ಪ್ರತಿಕ್ರಿಯಿಸಿದ್ದು, ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಅದನ್ನು ಬಗೆಹರಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ವಿಡಿಯೋ ನೋಡಿದ ನೆಟ್ಟಿಗರು ವೃದ್ಧನ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral News: ಕಾಲಿಗೆ ಕಬ್ಬಿಣದ ಸರಪಳಿ.. ಕೈಯಲ್ಲಿ ಅಮೆರಿಕ ಪಾಸ್‌ಪೋರ್ಟ್‌..ದಟ್ಟ ಕಾಡಿನಲ್ಲಿ ಮಹಿಳೆ ಪತ್ತೆ-ವಿಡಿಯೋ ವೈರಲ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Nirmala Sitharaman: ಕಾಂಗ್ರೆಸ್‌ ಅವಧಿ ಬಜೆಟ್‌ನಲ್ಲಿ 26 ರಾಜ್ಯಗಳ ಹೆಸರೇ ಇರಲಿಲ್ಲ; ನಿರ್ಮಲಾ ಸೀತಾರಾಮನ್‌ ಟಾಂಗ್

Nirmala Sitharaman: ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನುದಾನ ನೀಡಿಲ್ಲ ಎಂಬುದಾಗಿ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಸಂಸತ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಬಜೆಟ್‌ ಭಾಷಣದಲ್ಲಿ ರಾಜ್ಯಗಳ ಹೆಸರು ಇಲ್ಲ ಎಂದ ಮಾತ್ರಕ್ಕೆ ಆ ರಾಜ್ಯಕ್ಕೆ ಅನುದಾನ ಹೋಗುವುದಿಲ್ಲ ಎಂಬ ಅರ್ಥವಲ್ಲ ಎಂದಿದ್ದಾರೆ.

VISTARANEWS.COM


on

Nirmala Sitharaman
Koo

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಕೆಲ ದಿನಗಳ ಹಿಂದೆ ಮಂಡಿಸಿದ ಬಜೆಟ್‌ನಲ್ಲಿ (Union Budget 2024) ಕರ್ನಾಟಕಕ್ಕೆ ಹೆಚ್ಚಿನ ಅನುದಾನ ಕೊಟ್ಟಿಲ್ಲ ಎಂದು ರಾಜ್ಯ ಕಾಂಗ್ರೆಸ್‌ ನಾಯಕರು ಆರೋಪಿಸುತ್ತಿದ್ದಾರೆ. ಜನರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದಕ್ಷಿಣ ಭಾರತದ ಹಲವು ರಾಜ್ಯಗಳು ಟೀಕಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಸಂಸತ್‌ನಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದು, “ಕಾಂಗ್ರೆಸ್‌ ನೇತೃತ್ವದ ಯುಪಿಎ ಅವಧಿಯ ಬಜೆಟ್‌ನಲ್ಲೂ 26 ರಾಜ್ಯಗಳ ಹೆಸರು ಇರಲಿಲ್ಲ. ಹಾಗಂತ, ಆ ರಾಜ್ಯಗಳಿಗೆ ಅನುದಾನ ನೀಡಿಲ್ಲ ಎಂದು ಅರ್ಥವೇ” ಎಂಬುದಾಗಿ ಪ್ರಶ್ನಿಸಿದ್ದಾರೆ.

“ಬಜೆಟ್‌ ಭಾಷಣದಲ್ಲಿ ಕೆಲ ರಾಜ್ಯಗಳ ಹೆಸರು ಇಲ್ಲದ ಕಾರಣ, ಕೇಂದ್ರ ಸರ್ಕಾರವು ಆ ರಾಜ್ಯಗಳಿಗೆ ಅನುದಾನವನ್ನೇ ಕೊಟ್ಟಿಲ್ಲ ಎಂಬ ರೀತಿ ಪ್ರತಿಪಕ್ಷಗಳು ಬಿಂಬಿಸುತ್ತಿಲ್ಲ. ಆದರೆ, ನಾನು 2004-05ರಿಂದಲೂ ಮಂಡಿಸಿದ ಬಜೆಟ್‌ ಪ್ರತಿಗಳನ್ನು ಗಮನಿಸಿದ್ದೇನೆ. 2004-05ರ ಬಜೆಟ್‌ನಲ್ಲಿ ಅಂದರೆ ಯುಪಿಎ ಅವಧಿಯಲ್ಲಿ ಪ್ರಸ್ತುತಪಡಿಸಿದ ಬಜೆಟ್‌ ಭಾಷಣದಲ್ಲಿ 17 ರಾಜ್ಯಗಳ ಹೆಸರು ಇರಲಿಲ್ಲ. 2006-07ರಲ್ಲಿ 16, 2009ರಲ್ಲಿ 26 ರಾಜ್ಯಗಳ ಹೆಸರುಗಳೇ ಇರಲಿಲ್ಲ. ಹಾಗಂತ, ಈ ರಾಜ್ಯಗಳಿಗೆ ಹಣವೇ ನೀಡಲಿಲ್ಲವೇ” ಎಂಬುದಾಗಿ ಬಜೆಟ್‌ ಕುರಿತ ಚರ್ಚೆಯ ವೇಳೆ ನಿರ್ಮಲಾ ಸೀತಾರಾಮನ್‌ ಅವರು ಪ್ರತಿಪಕ್ಷಗಳನ್ನು ಪ್ರಶ್ನಿಸಿದ್ದಾರೆ.

“ಸಂಸತ್‌ನ ಎಲ್ಲ ಸದಸ್ಯರಿಗೂ ನಾನು ಒಂದು ಮನವಿ ಮಾಡುತ್ತೇನೆ. ಬಜೆಟ್‌ ಭಾಷಣದಲ್ಲಿ ಯಾವುದಾದರೂ ರಾಜ್ಯಗಳ ಹೆಸರು ಇಲ್ಲ ಎಂದರೆ, ಆ ರಾಜ್ಯಗಳಿಗೆ ಹಣ ನೀಡುವುದಿಲ್ಲ ಎಂದು ಅರ್ಥವಲ್ಲ. ಸುಳ್ಳು ಹಾಗೂ ಜನರ ದಾರಿ ತಪ್ಪಿಸುವ ರೀತಿ ಅಭಿಯಾನ ಆರಂಭಿಸಲಾಗುತ್ತಿದೆ. ಒಂದು ರಾಜ್ಯದ ಹೆಸರನ್ನು ಬಜೆಟ್‌ ಭಾಷಣದಲ್ಲಿ ಪ್ರಸ್ತಾಪಿಸಿಲ್ಲ ಎಂದ ಮಾತ್ರಕ್ಕೆ, ಆ ರಾಜ್ಯಕ್ಕೆ ಅನುದಾನವನ್ನೇ ನೀಡಿಲ್ಲ ಎಂಬ ರೀತಿ ಹೇಳುತ್ತಿರುವುದು ನೋವು ತಂದಿದೆ” ಎಂಬುದಾಗಿ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನುದಾನ ನೀಡಿಲ್ಲ ಎಂಬುದಾಗಿ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಸ್ಪಷ್ಟನೆ ನೀಡಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದರು.

ನಿರ್ಮಲಾ ಸೀತಾರಾಮನ್ ಅವರ ಪ್ರಕಾರ ಹಿಂದಿನ ಯುಪಿಎ ಸರ್ಕಾರ (2004-2014) ಹತ್ತು ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ ನೀಡಿರುವ ಅನುದಾನ ರೂ.60,779 ಕೋಟಿ. ಎನ್‌ಡಿಎ ಸರ್ಕಾರ (2014-2024) ಹತ್ತು ವರ್ಷಗಳ ಅವಧಿಯಲ್ಲಿ ನೀಡಿದ್ದ ಹಣ ರೂ.2,36,955 ಕೋಟಿ ಎಂದು ಸಚಿವೆ ಹೇಳಿದ್ದಾರೆ. ಆದರೆ ಹತ್ತು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ಎಷ್ಟು ಪಟ್ಟು ಹೆಚ್ಚಾಗಿದೆ ಎನ್ನುವುದನ್ನು ಅವರು ಮರೆತಿದ್ದಾರೆ. ಇದು ಅವರ ಅಜ್ಞಾನವೋ, ಇಲ್ಲವೇ ಜನತೆಯ ದಾರಿ ತಪ್ಪಿಸುವ ಹುನ್ನಾರವೋ? ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದರು.

ಇದನ್ನೂ ಓದಿ: HD Devegowda: ಮೋದಿ ಬಜೆಟ್‌ಗೆ ಎಚ್‌.ಡಿ.ದೇವೇಗೌಡರ ಮೆಚ್ಚುಗೆ; ಬೆಂಗಳೂರು ನೀರಿನ ಸಮಸ್ಯೆ ಬಗೆಹರಿಸಲು ಮನವಿ

Continue Reading

ದೇಶ

ಜಾಬ್‌ ಸಿಕ್ಕಿದೆ ಎಂದು ಗೆಳೆಯರಿಗೆ ಪಾರ್ಟಿ ಕೊಟ್ಟ ಯುವತಿ; ಕುಡಿದ ಸ್ನೇಹಿತರು ಆಕೆಯನ್ನೇ ರೇಪ್ ಮಾಡಿದರು!

ತೆಲಂಗಾಣದಲ್ಲಿ ಕಳೆದ 24 ಗಂಟೆಯಲ್ಲಿಯೇ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಜಾಬ್‌ ಸಿಕ್ಕ ಖುಷಿಯಲ್ಲಿ ಪಾರ್ಟಿ ಕೊಟ್ಟ ಗೆಳತಿ ಮೇಲೆಯೇ ಇಬ್ಬರು ಗೆಳೆಯರು ಅತ್ಯಾಚಾರ ಎಸಗಿದ್ದಾರೆ. ಮತ್ತೊಂದು ಪ್ರಕರಣದಲ್ಲಿ, ಖಾಸಗಿ ಬಸ್‌ನಲ್ಲಿ ಬಸ್‌ ಚಾಲಕನು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಸ್‌ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Girl
Koo

ಹೈದರಾಬಾದ್:‌ ಹೆಣ್ಣುಮಕ್ಕಳಿಗೆ ಮನೆಯ ಹೊರಗೆ ಬಿಡಿ ಮನೆಯ ಒಳಗೆ ಕೂಡ ರಕ್ಷಣೆ ಇಲ್ಲದಂತಾಗಿದೆ. ಅಪರಿಚಿತರು ಬಿಡಿ ಸಂಬಂಧಿಕರನ್ನೇ ನಂಬದಂತಹ ಸ್ಥಿತಿ ಎದುರಾಗಿದೆ. ಮಧ್ಯಪ್ರದೇಶದ ರೇವಾದಲ್ಲಿ 13 ವರ್ಷದ ಬಾಲಕನು 9 ವರ್ಷದ ತಂಗಿಯ ಮೇಲೆಯೇ ಅತ್ಯಾಚಾರ (Rape Case) ಎಸಗಿ, ಕೊಲೆ ಮಾಡಿದ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ. ಇಂತಹ ಪ್ರಕರಣಗಳು ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಭಯ ಹುಟ್ಟಿಸುತ್ತಿವೆ. ಇದರ ಬೆನ್ನಲ್ಲೇ, ಹೈದರಾಬಾದ್‌ನಲ್ಲಿ (Hyderabad) ಒಬ್ಬ ಬಾಲ್ಯ ಸ್ನೇಹಿತ ಸೇರಿ ಇಬ್ಬರು ಯುವಕರು ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಹೈದರಾಬಾದ್‌ ಯುವತಿಗೆ ಸಾಫ್ಟ್‌ವೇರ್‌ ಎಂಜಿನಿಯರ್‌ ಜಾಬ್‌ ಸಿಕ್ಕಿದ್ದು, ಬಾಲ್ಯದ ಸ್ನೇಹಿತನಾದ ಗೌತಮ್‌ ರೆಡ್ಡಿಗೆ ವಿಷಯ ತಿಳಿಸಿದ್ದಾಳೆ. ಆಗ ಗೆಳೆಯನು ಪಾರ್ಟಿ ಕೊಡಿಸು ಎಂದಿದ್ದಾನೆ. ಜಾಬ್‌ ಸಿಕ್ಕ ಖುಷಿಯಲ್ಲಿದ್ದ ಯುವತಿಯು ಬಾರ್‌ & ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಕೊಡಿಸುವುದಾಗಿ ಒಪ್ಪಿಕೊಂಡಿದ್ದಾಳೆ. ಸೋಮವಾರ (ಜುಲೈ 29) ಸಂಜೆ ಗೌತಮ್‌ ರೆಡ್ಡಿಯು ತನ್ನ ಮತ್ತೊಬ್ಬ ಸ್ನೇಹಿತನೊಂದಿಗೆ ವನಸ್ಥಲಿಪುರಂನಲ್ಲಿರುವ ರೆಸ್ಟೋರೆಂಟ್‌ಗೆ ತೆರಳಿದ್ದಾನೆ. ಅಲ್ಲಿ, ಯುವತಿ, ಗೌತಮ್‌ ರೆಡ್ಡಿ ಹಾಗೂ ಆತನ ಗೆಳೆಯ ಸೇರಿ ಪಾರ್ಟಿ ಮಾಡಿದ್ದಾರೆ. ಅದಾದ ಬಳಿಕ ಇಬ್ಬರೂ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ.

Crime Scene
Crime Scene

“ಗೌತಮ್‌ ರೆಡ್ಡಿ ಹಾಗೂ ಯುವತಿಯು 2ನೇ ಕ್ಲಾಸ್‌ನಿಂದ 10ನೇ ತರಗತಿವರೆಗೆ ಒಂದೇ ಶಾಲೆಯಲ್ಲಿ ಓದಿದ್ದಾರೆ. ಜಾಬ್‌ ಸಿಕ್ಕ ಖುಷಿಯಲ್ಲಿ ಯುವತಿಯು ಪಾರ್ಟಿಗೆ ಕರೆದಿದ್ದಾಳೆ. ಬಾರ್‌ & ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಮಾಡಿದ ಬಳಿಕ ಕುಡಿದ ಮತ್ತಿನಲ್ಲಿ ಯುವತಿಯನ್ನು ಇಬ್ಬರೂ ಕೋಣೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಇಬ್ಬರೂ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂಬುದಾಗಿ ವನಸ್ಥಲಿಪುರಂ ಪೊಲೀಸ್‌ ಇನ್ಸ್‌ಪೆಕ್ಟರ್‌ ಡಿ ಜಲೇಂದರ್‌ ರೆಡ್ಡಿ ಮಾಹಿತಿ ನೀಡಿದ್ದಾರೆ.

ಬಸ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ

ತೆಲಂಗಾಣದಲ್ಲಿಯೇ ಮಂಗಳವಾರ (ಜುಲೈ 30) ಬಸ್‌ನಲ್ಲಿ ಮಹಿಳೆ ಮೇಲೆ ಬಸ್‌ ಚಾಲಕನು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಿರ್ಮಲ್‌ದಿಂದ ಖಾಸಗಿ ಬಸ್‌ನಲ್ಲಿ ಪ್ರಕಾಶಂ ಜಿಲ್ಲೆಗೆ ಮಹಿಳೆ ತೆರಳುತ್ತಿದ್ದರು. ಬೆಳಗಿನ ಜಾವ ಬಸ್‌ ಚಾಲಕನು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಕುರಿತು ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಪೊಲೀಸರು ಬಸ್‌ ಚಾಲಕನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Physical Abuse: 85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ; ಭೀಕರ ಘಟನೆ ಬಳಿಕ ಮಹಿಳೆ ಸಾವು

Continue Reading

ದೇಶ

8th Pay Commission: 8ನೇ ವೇತನ ಆಯೋಗ ಜಾರಿಯಾಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು?

8th Pay Commission: 8ನೇ ವೇತನ ಆಯೋಗವು ಜನವರಿ 1, 2026 ರಂದು ಜಾರಿಗೆ ಬರಲಿದೆ. ಸಾಮಾನ್ಯವಾಗಿ, ಸರ್ಕಾರಿ ನೌಕರರ ಸಂಭಾವನೆಯನ್ನು ಪರಿಷ್ಕರಿಸಲು ಕೇಂದ್ರ ಸರ್ಕಾರವು ಪ್ರತಿ 10 ವರ್ಷಗಳಿಗೊಮ್ಮೆ ವೇತನ ಆಯೋಗವನ್ನು ರಚಿಸುತ್ತದೆ. 7 ನೇ ವೇತನ ಆಯೋಗವನ್ನು ಫೆಬ್ರವರಿ 2014 ರಲ್ಲಿ ಸ್ಥಾಪಿಸಲಾಯಿತು. ಅದರ ಶಿಫಾರಸುಗಳನ್ನು ಜನವರಿ 1, 2016 ರಿಂದ ಜಾರಿಗೆ ತರಲಾಯಿತು.

VISTARANEWS.COM


on

8th Pay Commission
Koo

ನವದೆಹಲಿ: 8ನೇ ವೇತನ ಆಯೋಗ(8th Pay Commission) ಜಾರಿಗೊಳಿಸಲು ಎರಡು ಪ್ರಸ್ತಾವನೆಗಳು ಬಂದಿದ್ದು, ಅವುಗಳನ್ನು ಪರಿಗಣಿಸಿಲ್ಲ ಎಂದು ಕೇಂದ್ರ ಸರ್ಕಾರವು ಸಂಸತ್‌(Parliament Session)ನಲ್ಲಿ ಹೇಳಿದೆ. ಈ ಕುರಿತು ಪ್ರತಿಪಕ್ಷಗಳ ಪ್ರಶ್ನೆಗೆ ಲಿಖಿತ ರೂಪದಲ್ಲಿ ಉತ್ತರಿಸಿರುವ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್‌ ಚೌಧರಿ, ಜೂನ್ 2024 ರಲ್ಲಿ 8 ನೇ ಕೇಂದ್ರ ವೇತನ ಆಯೋಗದ ಸಂವಿಧಾನಕ್ಕಾಗಿ ಎರಡು ಪ್ರಾತಿನಿಧ್ಯಗಳನ್ನು ಸ್ವೀಕರಿಸಲಾಗಿದೆ. ಅಂತಹ ಯಾವುದೇ ಪ್ರಸ್ತಾವನೆಯು ಪ್ರಸ್ತುತ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಹೇಳಿದೆ.

8ನೇ ವೇತನ ಆಯೋಗವು ಜನವರಿ 1, 2026 ರಂದು ಜಾರಿಗೆ ಬರಲಿದೆ. ಸಾಮಾನ್ಯವಾಗಿ, ಸರ್ಕಾರಿ ನೌಕರರ ಸಂಭಾವನೆಯನ್ನು ಪರಿಷ್ಕರಿಸಲು ಕೇಂದ್ರ ಸರ್ಕಾರವು ಪ್ರತಿ 10 ವರ್ಷಗಳಿಗೊಮ್ಮೆ ವೇತನ ಆಯೋಗವನ್ನು ರಚಿಸುತ್ತದೆ. 7ನೇ ವೇತನ ಆಯೋಗವನ್ನು ಫೆಬ್ರವರಿ 2014 ರಲ್ಲಿ ಸ್ಥಾಪಿಸಲಾಯಿತು. ಅದರ ಶಿಫಾರಸುಗಳನ್ನು ಜನವರಿ 1, 2016 ರಿಂದ ಜಾರಿಗೆ ತರಲಾಯಿತು.

8ನೇ ವೇತನ ಆಯೋಗದತ್ತ ಗಮನ ಕ್ರಮೇಣ ಹರಿದರೆ, 7ನೇ ವೇತನ ಆಯೋಗವು ಕೇಂದ್ರ ಸರಕಾರಿ ನೌಕರರ ವೇತನದ ಮೇಲೆ ಪ್ರಭಾವ ಬೀರುತ್ತಲೇ ಇದೆ. ಕೇಂದ್ರ ಸರ್ಕಾರಿ ನೌಕರರಿಗೆ ಹಣದುಬ್ಬರದ ಕಾರಣದಿಂದ ಅವರ ಸಂಬಳದ ನೈಜ ಮೌಲ್ಯದಲ್ಲಿನ ಸವೆತವನ್ನು ಸರಿದೂಗಿಸಲು, ಅವರಿಗೆ ತುಟ್ಟಿಭತ್ಯೆ (ಡಿಎ) ನೀಡಲಾಗುತ್ತದೆ ಮತ್ತು ಹಣದುಬ್ಬರದ ದರವನ್ನು ಆಧರಿಸಿ ಪ್ರತಿ ಆರು ತಿಂಗಳಿಗೊಮ್ಮೆ ಡಿಎ ದರವನ್ನು ನಿಯತಕಾಲಿಕವಾಗಿ ಪರಿಷ್ಕರಿಸಲಾಗುತ್ತದೆ.

ವೇತನ ಆಯೋಗ ಎಂದರೇನು?

ವೇತನ ಆಯೋಗವು ಭಾರತದಲ್ಲಿ ಸರ್ಕಾರದಿಂದ ನೇಮಕಗೊಂಡ ಸಂಸ್ಥೆಯಾಗಿದ್ದು, ಕೇಂದ್ರ ಸರ್ಕಾರಿ ನೌಕರರ ಸಂಬಳ ರಚನೆ, ಭತ್ಯೆಗಳು ಮತ್ತು ಇತರ ಪ್ರಯೋಜನಗಳಿಗೆ ಬದಲಾವಣೆಗಳನ್ನು ಪರಿಶೀಲಿಸಲು ಮತ್ತು ಶಿಫಾರಸು ಮಾಡಲು ಕಾರಣವಾಗಿದೆ. ಹಣದುಬ್ಬರ, ಆರ್ಥಿಕ ಬೆಳವಣಿಗೆ ಮತ್ತು ಬದಲಾಗುತ್ತಿರುವ ಉದ್ಯೋಗದ ಪಾತ್ರಗಳನ್ನು ಮುಂದುವರಿಸಲು ಈ ಆಯೋಗಗಳನ್ನು ಸಾಮಾನ್ಯವಾಗಿ ಪ್ರತಿ 10 ವರ್ಷಗಳಿಗೊಮ್ಮೆ ರಚಿಸಲಾಗುತ್ತದೆ. 7ನೇ ವೇತನ ಆಯೋಗದ ಶಿಫಾರಸುಗಳನ್ನು 2016ರ ಜನವರಿಯಲ್ಲಿ ಜಾರಿಗೊಳಿಸಲಾಗಿತ್ತು. ಇದು ಪರಿಷ್ಕೃತ ವೇತನ ಮ್ಯಾಟ್ರಿಕ್ಸ್ ಮತ್ತು ಹೆಚ್ಚಿದ ಭತ್ಯೆಗಳನ್ನು ಒಳಗೊಂಡಂತೆ ಸಂಬಳದ ರಚನೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ತಂದಿತು.

ಇತ್ತೀಚೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಿಸಲು ರಚನೆ ಮಾಡಿದ್ದ 7ನೇ ವೇತನ ಆಯೋಗದ (7th Pay Commission) ಶಿಫಾರಸುಗಳನ್ನು ಆ.1ರಿಂದ ಜಾರಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಾಗಲಿದೆ ಎಂಬ ಕುರಿತ ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಪ್ರಕಟ ಮಾಡಲಾಗಿತ್ತು.

ಈ ಬಗ್ಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಆದೇಶ ಹೊರಡಿಸಿದ್ದಾರೆ. 2022ರ ನ.19ರಂದು ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯ ಸಂಪುಟ-1 ನ್ನು ಸಲ್ಲಿಸಿದೆ. ವರದಿಯಲ್ಲಿನ ಶಿಫಾರಸುಗಳನ್ನು ಸರ್ಕಾರವು ಪರಿಗಣಿಸಿದ್ದು, ಅದರಂತೆ, 7ನೇ ರಾಜ್ಯ ವೇತನ ಆಯೋಗವು ಶಿಫಾರಸು ಮಾಡಿರುವ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಜುಲೈ 1ರಿಂದ ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Parliament Session: ಪತಿ ಅಮಿತಾಬ್‌ ಹೆಸರು ಜಯಾ ಬಚ್ಚನ್‌ಗೆ ಅಲರ್ಜಿ! ಸಂಸತ್‌ನಲ್ಲಿ ಆ ಹೆಸರು ಹೇಳಬೇಡಿ ಎಂದ ನಟಿ!

Continue Reading

ದೇಶ

Wayanad Landslide: ಸಾವಿನ ಸಂಖ್ಯೆ 89; ವಯನಾಡು ಭೂಕುಸಿತದ ಭೀಕರತೆಯ ವಿಡಿಯೊ, ಫೋಟೊಗಳು ಇಲ್ಲಿವೆ

Wayanad Landslide: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ, ಸರ್ಕಾರಿ ಸಂಸ್ಥೆ ಸಿಬ್ಬಂದಿ ಸೇರಿದಂತೆ ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಸಹಾಯ ಮಾಡಲು 43 ಭಾರತೀಯ ಸೇನಾ ಸಿಬ್ಬಂದಿಯ ತಂಡವನ್ನು ಸಹ ಸಜ್ಜುಗೊಳಿಸಲಾಗಿದೆ. ಇದರ ಮಧ್ಯೆಯೇ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಲೇ ಇದೆ.

VISTARANEWS.COM


on

Wayanad Landslide
Koo

ತಿರುವನಂತಪುರಂ: ಕೇರಳದ ವಯನಾಡು ಈಗ ಅಕ್ಷರಶಃ ಮಸಣದಂತಾಗಿದೆ. ಭಾರಿ ಮಳೆ (Wayanad Rains), ರಣಭೀಕರ ಭೂಕುಸಿತದಿಂದಾಗಿ (Wayanad Landslide) ಎಲ್ಲೆಂದರಲ್ಲಿ ಹೆಣಗಳ ರಾಶಿ, ಕೊಚ್ಚಿಹೋದ ಊರುಗಳು, ಭೂಕುಸಿತದಿಂದ ಸಂಪರ್ಕ ಸಂಪೂರ್ಣವಾಗಿ ಕಡಿತ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಎನ್‌ಡಿಆರ್‌ಎಫ್‌, ಎಸ್‌ಟಿಆರ್‌ಎಫ್‌ ಸಿಬ್ಬಂದಿ, ಹೆಣ್ಣುಮಕ್ಕಳು, ಮಕ್ಕಳ ದುಸ್ಥಿತಿಯೇ ಕಾಣಿಸುತ್ತಿದೆ. ಸಾವಿರಾರು ಜನರ ಬದುಕು ಈಗ ಮೂರಾಬಟ್ಟೆಯಾಗಿದೆ. ಸಾವಿನ ಸಂಖ್ಯೆಯಂತೂ ಏರಿಕೆಯಾಗುತ್ತಲೇ ಇದ್ದು, ಇದುವರೆಗೆ 89 ಮಂದಿ ಮೃತಪಟ್ಟಿದ್ದಾರೆ. ವಯನಾಡು ಭೂಕುಸಿತ, ಮಳೆಯ ಭೀಕರತೆಯನ್ನು ಸಾರುವ, ಎಂತಹವರನ್ನೂ ಗಾಬರಿ ಬೀಳಿಸುವ ವಿಡಿಯೊಗಳು ಹಾಗೂ ಫೋಟೊಗಳು ಇಲ್ಲಿವೆ.

ವಯನಾಡಿನಲ್ಲಿ ಭೂಕುಸಿತ ಸಂಭವಿಸುತ್ತಲೇ ನೂರಾರು ಜನ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಇದುವರೆಗೆ 300ಕ್ಕೂ ಅಧಿಕ ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಸಾವಿರಾರು ಜನರನ್ನು ನಿರಾಶ್ರಿತ ಕೇಂದ್ರಗಳಿಗೆ ರವಾನಿಸಲಾಗಿದೆ. ಇಷ್ಟಾದರೂ, ಹಲವು ಜನ ಅವಶೇಷಗಳ ಅಡಿಯಲ್ಲೇ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇದಕ್ಕಾಗಿ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ, ಸರ್ಕಾರಿ ಸಂಸ್ಥೆ ಸಿಬ್ಬಂದಿ ಸೇರಿದಂತೆ ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಸಹಾಯ ಮಾಡಲು 43 ಭಾರತೀಯ ಸೇನಾ ಸಿಬ್ಬಂದಿಯ ತಂಡವನ್ನು ಸಹ ಸಜ್ಜುಗೊಳಿಸಲಾಗಿದೆ.

ಮಂಗಳವಾರ ಮುಂಜಾನೆ 2ರಿಂದ4 ಗಂಟೆಯ ನಡುವೆ ಸಂಭವಿಸಿದ ಭೂಕುಸಿತದಿಂದ ಮುಂಡಕೈ ಮತ್ತು ಚೂರಲ್‌ಮಾಲಾ ಪ್ರದೇಶದಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ಕುಸಿದ ಸೇತುವೆ, ಕೊಚ್ಚಿ ಹೋದ ರಸ್ತೆ ಮುಂಡಕೈಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿ ಪರಿಣಮಿಸಿದೆ. ಚೂರಲ್‌ಮಾಲಾದಲ್ಲಿ ಒಟ್ಟು 250 ಸಿಬ್ಬಂದಿ ಕಾರ್ಯ ಪ್ರವೃತ್ತರಾಗಿದ್ದಾರೆ.

ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣೆ ಮಾಡುತ್ತಿರುವ ಎನ್‌ಡಿಆರ್‌ಎಫ್‌ ಸಿಬ್ಬಂದಿ
ಪ್ರವಾಹದ ಅಬ್ಬರಕ್ಕೆ ಕೊಚ್ಚಿಕೊಂಡು ಹೋಗಿ ಬಿದ್ದಿರುವ ವಾಹನ
ಭೂಕುಸಿತ, ಮಳೆಯ ಕಾರಣ ಮಣ್ಣು ಕೊಚ್ಚಿಕೊಂಡು ಹೋಗುತ್ತಿದೆ
ಭಾರಿ ಮಳೆಯಿಂದಾಗಿ ಊರಿಗೆ ಊರೇ ಮುಳುಗಿ ಹೋಗಿದೆ

ಇದನ್ನೂ ಓದಿ: Shiradi Landslide: ಕೇರಳದ ಬೆನ್ನಿಗೇ ಶಿರಾಡಿ ಘಾಟಿಯಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ ಸಿಲುಕಿದ ಕಾರುಗಳು, ಟ್ಯಾಂಕರ್‌

Continue Reading
Advertisement
Custard Apple Benefits
Latest25 mins ago

Custard Apple Benefits: ಕ್ಯಾನ್ಸರ್‌ ಸೇರಿದಂತೆ ಹಲವು ರೋಗಗಳನ್ನು ತಡೆಯುವ ಶಕ್ತಿ ಸೀತಾಫಲಕ್ಕಿದೆ!

namma Metro
ಬೆಂಗಳೂರು31 mins ago

Namma Metro : ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ದೋಷ; ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವ್ಯತ್ಯಯ

Martin Movie
ಕರ್ನಾಟಕ40 mins ago

Martin Movie: ಆ.4ಕ್ಕೆ ಮಾರ್ಟಿನ್ ಚಿತ್ರದ ಟ್ರೈಲರ್‌ 1 ರಿಲೀಸ್‌; ವಿಎಫ್‌ಎಕ್ಸ್‌ ವಂಚನೆ ಬಗ್ಗೆ ನಿರ್ಮಾಪಕ ಹೇಳಿದ್ದೇನು?

Neeraj Chopra
ಪ್ರಮುಖ ಸುದ್ದಿ43 mins ago

Neeraj Chopra : ನಮಸ್ಕಾರ ಪ್ಯಾರಿಸ್​​; ಒಲಿಂಪಿಕ್ಸ್​ ಕ್ರೀಡಾಗ್ರಾಮ ತಲುಪಿದ ಚಿನ್ನದ ಹುಡುಗ ನೀರಜ್ ಚೋಪ್ರಾ

Nirmala Sitharaman
ದೇಶ52 mins ago

Nirmala Sitharaman: ಕಾಂಗ್ರೆಸ್‌ ಅವಧಿ ಬಜೆಟ್‌ನಲ್ಲಿ 26 ರಾಜ್ಯಗಳ ಹೆಸರೇ ಇರಲಿಲ್ಲ; ನಿರ್ಮಲಾ ಸೀತಾರಾಮನ್‌ ಟಾಂಗ್

Paris Olympics 2024
ಪ್ರಮುಖ ಸುದ್ದಿ1 hour ago

Paris Olympics 2024 : 7 ತಿಂಗಳ ಗರ್ಭಿಣಿಯಾಗಿದ್ದರೂ ಒಲಿಂಪಿಕ್ಸ್​ ಫೆನ್ಸಿಂಗ್​ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಪಂದ್ಯ ಗೆದ್ದ ಈಜಿಫ್ಟ್​​ನ ನಾದಾ ಹಫೀಜ್​

karnataka Rain
ಮಳೆ1 hour ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Actor Shahrukh Khan
ಸಿನಿಮಾ2 hours ago

Actor Shahrukh Khan: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

Girl
ದೇಶ2 hours ago

ಜಾಬ್‌ ಸಿಕ್ಕಿದೆ ಎಂದು ಗೆಳೆಯರಿಗೆ ಪಾರ್ಟಿ ಕೊಟ್ಟ ಯುವತಿ; ಕುಡಿದ ಸ್ನೇಹಿತರು ಆಕೆಯನ್ನೇ ರೇಪ್ ಮಾಡಿದರು!

Sarabjot Singh
ಪ್ರಮುಖ ಸುದ್ದಿ2 hours ago

Sarabjot Singh : ಭಾರತಕ್ಕೆ 2ನೇ ಒಲಿಂಪಿಕ್ಸ್ ಪದಕ ತಂದುಕೊಟ್ಟ ಮನು ಭಾಕರ್ ಶೂಟಿಂಗ್ ಪಾಲುದಾರ ಸರಬ್ಜೋತ್ ಸಿಂಗ್​ ಹಿನ್ನೆಲೆ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌