ವಾರಾಣಸಿ: ಇಲ್ಲಿನ ಕಾಶಿ ವಿಶ್ವನಾಥನ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಸಂಕೀರ್ಣದ ಗೋಡೆಗಳಲ್ಲಿರುವ ಶೃಂಗಾರ ಗೌರಿ ದೇವಿಯ ಚಿತ್ರಗಳ ಪೂಜೆಗೆ ಸಂಬಂಧಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಗೆ ವಾರಾಣಸಿ ಜಿಲ್ಲಾ ನ್ಯಾಯಾಲಯ ಅಂಗೀಕರಿಸಿದೆ.
ಮುಸ್ಲಿಂ ಬಣದ ವಾದವನ್ನು ಬದಿಗೊತ್ತಿರುವ ವಾರಾಣಸಿ ಜಿಲ್ಲಾ ನ್ಯಾಯಾಲಯವು, ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 22ಕ್ಕೆ ನಿಗದಿಪಡಿಸಿದೆ ಎಂದು ಹಿಂದೂಗಳನ್ನು ಪ್ರತಿನಿಧಿಸುತ್ತಿರುವ ವಕೀಲರಾದ ವಿಷ್ಣು ಶಂಕರ್ ಜೈನ್ ಅವರು ತಿಳಿಸಿದ್ದಾರೆ.
ಪ್ರಕರಣ ವಿಚಾರಣೆಗೆ ಅನರ್ಹವಾಗಿದೆ ಎಂಬ ಮುಸ್ಲಿಂ ಬಣದ ವಾದವನ್ನು ಕೋರ್ಟ್ ತಳ್ಳಿ ಹಾಕಿದೆ. ಇದರೊಂದಿಗೆ ಪ್ರಕರಣ ವಿಚಾರಣೆಗೆ ಯೋಗ್ಯವಾಗಿದೆ ಎಂಬ ಹಿಂದೂ ಬಣದ ವಾದವನ್ನು ಕೋರ್ಟ್ ಪುರಸ್ಕರಿಸಿದಂತಾಗಿದೆ. ಜಿಲ್ಲಾ ನ್ಯಾಯಾಧೀಶ ಎ.ಕೆ ವಿಶ್ವೇಶ್ ಅವರು ಈ ಮಹತ್ವದ ತೀರ್ಪು ನೀಡಿದರು.
ಇದನ್ನೂ ಓದಿ: Explainer: ವಿವಾದದ ಕೇಂದ್ರದಲ್ಲಿ ಈಗ ಕಾಶಿ ಶೃಂಗಾರ ಗೌರಿ ದೇವಿ