ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ (L K Advani ) ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಘೋಷಿಸುವುದು ನನ್ನ ಜೀವನದ ಅತ್ಯಂತ ಪ್ರಮುಖ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
“ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದು ನನಗೆ ತುಂಬಾ ಭಾವನಾತ್ಮಕ ಕ್ಷಣವಾಗಿದೆ” ಎಂದು ಪಿಎಂ ಮೋದಿ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ. ಈ ಎಕ್ಸ್ನಲ್ಲಿ 96 ವರ್ಷದ ಹಿರಿಯ ಮುತ್ಸದ್ದಿಯೊಂದಿಗೆ ಇರುವ ಎರಡು ಚಿತ್ರಗಳನ್ನು ಟ್ಯಾಗ್ ಮಾಡಿದ್ದಾರೆ. ಮಾಜಿ ಉಪಪ್ರಧಾನಿ ಶ್ರೀ ಅಡ್ವಾಣಿ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಈ ಗೌರವವನ್ನು ಪಡೆದಿರುವುದಕ್ಕೆ ಅವರನ್ನು ಅಭಿನಂದಿಸಿದ್ದೇನೆ ಎಂದು ಪ್ರಧಾನಿ ಹೇಳಿದರು.
ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜನೀತಿಜ್ಞರಲ್ಲಿ ಒಬ್ಬರಾದ ಅಡ್ವಾಣಿ ಭಾರತದ ಅಭಿವೃದ್ಧಿಗೆ ನೀಡಿದ ಕೊಡುಗೆ ಸ್ಮರಣೀಯವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪ ಪ್ರಧಾನಿಯಾಗಿ ರಾಷ್ಟ್ರದ ಸೇವೆ ಮಾಡುವವರೆಗೆ ಅವರ ಜೀವನ” ಎಂದು ಪ್ರಧಾನಿ ಮೋದಿ ಬರೆದಿದ್ದಾರೆ.
ಮೋದಿಯ ಟ್ವೀಟ್ನಲ್ಲೇನಿದೆ?
ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಪುರಸ್ಕಾರ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ (ಫೆಬ್ರುವರಿ 3ರಂದು) ಬೆಳಗ್ಗೆ ಘೋಷಿಸಿದ್ದಾರೆ. “ಶ್ರೀ ಎಲ್.ಕೆ. ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಈ ಗೌರವವನ್ನು ಪಡೆದಿರುವುದಕ್ಕೆ ಅವರನ್ನು ಅಭಿನಂದಿಸಿದ್ದೇನೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
“ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕೀಯ ತಜ್ಞರಲ್ಲಿ ಒಬ್ಬರಾದ ಲಾಲ್ ಕೃಷ್ಣ ಅಡ್ವಾಣಿ ಭಾರತದ ಅಭಿವೃದ್ಧಿಗೆ ನೀಡಿದ ಕೊಡುಗೆ ಸ್ಮರಣೀಯವಾಗಿದೆ. ಪಕ್ಷದ ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ದೇಶದ ಉಪ ಪ್ರಧಾನಿಯಾಗಿ ರಾಷ್ಟ್ರದ ಸೇವೆ ಮಾಡುವವರೆಗಿನ ಅವರ ಜೀವನ ಆದರ್ಶಮಯ. ಅವರು ನಮ್ಮ ಗೃಹ ಸಚಿವರಾಗಿ ಮತ್ತು ವಾರ್ತಾ ಮತ್ತು ಪ್ರಸಾರ ಸಚಿವರಾಗಿ ಹೆಸರು ಗಳಿಸಿಕೊಂಡವರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಅನುಕರಣೀಯ ಹಾಗೂ ಬೌದ್ಧಿಕ ಒಳನೋಟಗಳಿಂದ ತುಂಬಿವೆ” ಎಂದು ಅವರು ಹೇಳಿದರು.
ಇದನ್ನೂ ಓದಿ : LK Advani : ಎಲ್.ಕೆ. ಆಡ್ವಾಣಿಗೆ ಭಾರತ ರತ್ನ: ಪ್ರಧಾನಿ ಮೋದಿ ಘೋಷಣೆ
ಅಡ್ವಾಣಿ ಅವರ ಸಾರ್ವಜನಿಕ ಜೀವನದಲ್ಲಿ ದಶಕಗಳ ಸೇವೆಯು ಪಾರದರ್ಶಕತೆ ಮತ್ತು ಸಮಗ್ರತೆಗೆ ಅಚಲ ಬದ್ಧತೆಯಿಂದ ಗುರುತಿಸಲ್ಪಟ್ಟಿದೆ. ರಾಜಕೀಯ ನೈತಿಕತೆಯಲ್ಲಿ ಅನುಕರಣೀಯ ಮಾನದಂಡವನ್ನು ಅವರು ಹೊಂದಿದ್ದರು. ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅವರು ಅಸಾಮಾನ್ಯ ಪ್ರಯತ್ನಗಳನ್ನು ಮಾಡಿದ್ದಾರೆ. ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದು ನನಗೆ ಬಹಳ ಭಾವನಾತ್ಮಕ ಕ್ಷಣವಾಗಿದೆ. ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರಿಂದ ಕಲಿಯಲು ನನಗೆ ಅಸಂಖ್ಯಾತ ಅವಕಾಶಗಳು ಸಿಕ್ಕಿದ್ದು ನನ್ನ ಸುಯೋಗ ಎಂದು ನಾನು ಯಾವಾಗಲೂ ಪರಿಗಣಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.
ಬಿಜೆಪಿ ದೀರ್ಘಕಾಲದ ಅಧ್ಯಕ್ಷ
1980ರಲ್ಲಿ ಭಾರತೀಯ ಜನತಾ ಪಕ್ಷ ಸ್ಥಾಪನೆಯಾದಾಗಿನಿಂದ ಎಲ್.ಕೆ. ಅಡ್ವಾಣಿ ಅವರು ಪಕ್ಷದ ಅಧ್ಯಕ್ಷರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. 1990ರ ದಶಕದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಅಡಿಯಲ್ಲಿ ಸಮ್ಮಿಶ್ರ ಸರ್ಕಾರಗಳ ಮುಖ್ಯಸ್ಥರಾಗಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಾಗ ಬಿಜೆಪಿಯ ಏಳಿಗೆಯನ್ನು ರೂಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರು 2002 ರಿಂದ 2004 ರವರೆಗೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕ್ಯಾಬಿನೆಟ್ನಲ್ಲಿ ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು.