Karva Chauth | ಕರ್ವಾ ಚೌಥ್‌ಗೆ ಮುಸ್ಲಿಮರು ಹಿಂದೂ ವಿವಾಹಿತ ಮಹಿಳೆಗೆ ಮೆಹಂದಿ ಹಾಕುವಂತಿಲ್ಲ: ವಿಎಚ್‌ಪಿ - Vistara News

ದೇಶ

Karva Chauth | ಕರ್ವಾ ಚೌಥ್‌ಗೆ ಮುಸ್ಲಿಮರು ಹಿಂದೂ ವಿವಾಹಿತ ಮಹಿಳೆಗೆ ಮೆಹಂದಿ ಹಾಕುವಂತಿಲ್ಲ: ವಿಎಚ್‌ಪಿ

ಕರ್ವಾ ಚೌಥ್ (Karva Chauth) ಹಿನ್ನೆಲೆಯಲ್ಲಿ ವಿವಾಹಿತ ಮಹಿಳೆಯರಿಗೆ ಮುಸ್ಲಿಮ್ ಯುವಕರು ಮೆಹಂದಿ ಹಾಕುವಂತಿಲ್ಲ ಎಂದು ಉತ್ತರ ಪ್ರದೇಶದಲ್ಲಿ ವಿಎಚ್‌ಪಿ ಕಟ್ಟಪ್ಪಣೆ ಹೊರಡಿಸಿದೆ.

VISTARANEWS.COM


on

Karva Chauth
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕರ್ವಾ ಚೌಥ್ (Karva Chauth) ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಝಪ್ಪರ್‌ನಗರದಲ್ಲಿ ಹಿಂದೂ ಮಹಾಸಭಾ (ವಿಎಚ್‌ಪಿ), ಅನ್ಯ ಕೋಮಿಗೆ ಸೇರಿದ ಯಾವುದೇ ಮೆಹಂದಿ ಕಲಾವಿದರು ಹಿಂದೂ ಹೆಣ್ಣುಮಕ್ಕಳಿಗೆ ಮದರಂಗಿ ಹಾಕಿದರೆ, ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಈ ಕುರಿತು ಮಾತನಾಡಿರುವ ಉತ್ತರ ಪ್ರದೇಶದ ಖಟೌಳಿ ಬಿಜೆಪಿಯ ಶಾಸಕ ವಿಕ್ರಮ್ ಸೈನಿ ಅವರು, ಮುಸ್ಲಿಮ್ ಯುವಕರು ಮೆಹಂದಿ ಅಂಗಡಿಯನ್ನು ದುರುದ್ದೇಶವಿಟ್ಟುಕೊಂಡು ತೆರೆಯುತ್ತಾರೆ. ಇದರ ಹಿಂದೆ ಲವ್ ಜಿಹಾದ್ ಉದ್ದೇಶವಿರುತ್ತದೆ ಎಂದು ಹೇಳಿದ್ದಾರೆ.

ಮೆಹಂದಿ ಕೆಲಸದ ನೆಪದಲ್ಲಿ ಲವ್ ಜಿಹಾದ್ ನಡೆಸುವ ಉದ್ದೇಶವನ್ನು ಮುಸ್ಲಿಮ್ ಯುವಕರು ಹೊಂದಿರುತ್ತಾರೆ. ಈ ಸಂಬಂಧ ಸಾಕಷ್ಟು ಪ್ರಕರಣಗಳು ನಡೆದಿವೆ. ಹಿಂದೂ ಹೆಣ್ಣುಮಕ್ಕಳಲ್ಲಿ ನಾನು ವಿನಂತಿಸಿಕೊಳ್ಳುತ್ತೇನೆ, ಮನೆಯಲ್ಲಿ ಮದರಂಗಿ ಹಾಕಿಸಿಕೊಳ್ಳಿ. ಇಲ್ಲವೇ ಹಿಂದೂ ಸಮುದಾಯದವರೇ ಹೊಂದಿರುವ ಬ್ಯೂಟಿ ಪಾರ್ಲರ್ ಅಥವಾ ಅಂಗಡಿಗಳಲ್ಲಿ ಮದರಂಗಿ ಹಾಕಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಮುಝಪ್ಪರ್‌ನಗರದಲ್ಲಿ ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ) 13 ಮೆಹಂದಿ ಅಂಗಡಿಗಳನ್ನು ತೆರೆದಿದೆ. ಯಾವುದೇ ಹಿಂದೂ ಮಹಿಳೆಯರು ಮುಸ್ಲಿಮ್ ಪುರುಷ ಕಲಾವಿದರ ಬಳಿ ಮೆಹಂದಿಗಾಗಿ ಹೋಗದಂತೆ ನೋಡಿಕೊಳ್ಳಲು ತನ್ನ ಕಾರ್ಯಕರ್ತರನ್ನು ಕಾವಲಿಗೆ ನಿಯೋಜಿಸಿದೆ. ವಿಎಚ್‌ಪಿ ಕಾರ್ಯಕರ್ತರು ಆಧಾರ್ ಕಾರ್ಡ್‌ಗಳನ್ನು ಪರಿಶೀಲಿಸುವ ಮೂಲಕ ಮೆಹಂದಿ ಕಲಾವಿದರು ಮುಸ್ಲಿಮರೇ ಅಥವಾ ಹಿಂದೂಗಳೇ ಎಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ.

ಉತ್ತರ ಭಾರತದಲ್ಲಿ ಕರ್ವಾ ಚೌಥ ಅತ್ಯಂತ ಜನಪ್ರಿಯ ಹಬ್ಬವಾಗಿದೆ. ವಿವಾಹಿತ ಮಹಿಳೆಯರು ತಮ್ಮ ಪತಿ ಆರೋಗ್ಯ ಹಾಗೂ ಆಯುಷ್ಯ ಹೆಚ್ಚಾಗಲಿ ಎಂದು ಪ್ರಾರ್ಥಿಸುವುದಕ್ಕಾಗಿ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಉಪವಾಸ ವ್ರತವನ್ನುಆಚರಿಸುತ್ತಾರೆ. ಕರ್ವಾ ಚೌಥ ಆಚರಣೆಯ ಭಾಗವಾಗಿ ವಿವಾಹಿತ ಮಹಿಳೆಯರು ತಮ್ಮ ಕೈಗಳಿಗೆ ಆಕರ್ಷಕ ವಿನ್ಯಾಸದ ಮೆಹಂದಿಯನ್ನು ಹಚ್ಚಿಕೊಳ್ಳುತ್ತಾರೆ.

ಇದನ್ನೂ ಓದಿ | ತ್ರಿಶೂಲ ದೀಕ್ಷೆ ಕುರಿತು ಮೌನ ಮುರಿದ ಶಾಲಾ ಆಡಳಿತ ಮಂಡಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Uttarakhand Wild fire:5 ತಿಂಗಳು.. 910 ಕಾಡ್ಗಿಚ್ಚು ಪ್ರಕರಣ;ಸುಪ್ರೀಂಕೋರ್ಟ್‌ನಲ್ಲಿ ಇಂದು ತುರ್ತು ವಿಚಾರಣೆ

Uttarakhand Wild fire: ವಕೀಲ ರಿತುಪರ್ಣ್‌ ಉನಿಯಾಲ್‌ ಸಲ್ಲಿಸಿದ್ದ ಅರ್ಜಿ ಪ್ರಕಾರ ಕಳೆದ ವರ್ಷ ನವೆಂಬರ್ 1 ರಿಂದ ಉತ್ತರಾಖಂಡದ ಕಾಡುಗಳಲ್ಲಿ ಒಟ್ಟು 910 ಬೆಂಕಿಯ ಘಟನೆಗಳು ಸಂಭವಿಸಿವೆ ಮತ್ತು ಸುಮಾರು 1145 ಹೆಕ್ಟೇರ್ ಅರಣ್ಯವು ಹಾನಿಗೊಳಗಾಗಿದೆ.

VISTARANEWS.COM


on

Uttarakhand Wildfire
Koo

ಡೆಹ್ರಾಡೂನ್: ಉತ್ತರಾಖಂಡ ಅರಣ್ಯದಲ್ಲಿ ಸಂಭವಿಸಿರುವ ಭೀಕರ ಕಾಡ್ಗಿಚ್ಚು(Uttarakhand Wild fire) ಪ್ರಕರಣದ ಬಗ್ಗೆ ಸಲ್ಲಿಸಲಾಗಿರುವ ತುರ್ತು ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್‌(Supreme court) ನಡೆಸಲಿದೆ. ವಕೀಲರೊಬ್ಬರು ಸಲ್ಲಿಸಿರುವ ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ.ಆರ್‌ ಗವಾಯಿ ಮತ್ತು ಸಂದೀಪ್‌ ಮೆಹ್ತಾ ನಡೆಸಲಿದ್ದಾರೆ.

ಅರ್ಜಿಯಲ್ಲಿ ಏನಿದೆ?

ಇತ್ತೀಚೆಗೆ ವಕೀಲ ರಿತುಪರ್ಣ್‌ ಉನಿಯಾಲ್‌ ಸಲ್ಲಿಸಿದ್ದ ಅರ್ಜಿ ಪ್ರಕಾರ ಕಳೆದ ವರ್ಷ ನವೆಂಬರ್ 1 ರಿಂದ ಉತ್ತರಾಖಂಡದ ಕಾಡುಗಳಲ್ಲಿ ಒಟ್ಟು 910 ಬೆಂಕಿಯ ಘಟನೆಗಳು ಸಂಭವಿಸಿವೆ ಮತ್ತು ಸುಮಾರು 1145 ಹೆಕ್ಟೇರ್ ಅರಣ್ಯವು ಹಾನಿಗೊಳಗಾಗಿದೆ. ಕಳೆದ ಶನಿವಾರ ರಾಜ್ಯದಲ್ಲಿ ಸಂಭವಿಸುತ್ತಿರುವ ಕಾಡ್ಗಿಚ್ಚಿನ ಘಟನೆಗಳ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯನ್ನು ನಡೆಸಲಾಯಿತು. ಮಾಧ್ಯಮ ವರದಿಗಳ ಪ್ರಕಾರ, ಕಾಡ್ಗಿಚ್ಚಿನಿಂದ ಇದುವರೆಗೆ ಒಟ್ಟು 5 ಜನರು ಸಾವನ್ನಪ್ಪಿದ್ದಾರೆ. ಇದೇ ವೇಳೆ ಕಾಡಾನೆಗಳಿಂದ ಹೊರಬರುತ್ತಿರುವ ಹೊಗೆಯಿಂದಾಗಿ ಜನರು ಉಸಿರಾಡಲು ತೊಂದರೆ ಅನುಭವಿಸುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಕಾಡ್ಗಿಚ್ಚು ಪ್ರಕರಣ ಹೆಚ್ಚುತ್ತಲೇ ಇವೆ. ಇದರಿಂದ ಪರಿಸರ ನಾಶವಾಗುತ್ತಿವೆ. ಹೀಗಾಗಿ ಇಂತಹ ಘಟನೆಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮವನ್ನು ಮೊದಲೇ ಕೈಗೊಳ್ಳುವಂತೆ ಕೇಂದ್ರ, ರಾಜ್ಯ ಮತ್ತು ಅರಣ್ಯ ಇಲಾಖೆ ಸೂಚಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಇನ್ನು ಅರ್ಜಿ ವಿಚಾರಣೆಯನ್ನು ತುರ್ತಾಗಿ ನಡೆಸಿ ಅರಣ್ಯ ಮತ್ತು ವನ್ಯಜೀವಿಗಳನ್ನು ರಕ್ಷಿಸುವಂತೆ ಮನವಿ ಮಾಡಿದ್ದಾರೆ.

ಉತ್ತರಾಖಂಡದ ಅಲ್ಮೋರಾ, ಬಾಗೇಶ್ವರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಡ್ಗಿಚ್ಚು ಇನ್ನು ನಿಯಂತ್ರಣಕ್ಕೆ ಬಂದಿಲ್ಲ. ಕಾಡಾನೆಗಳು ಹೊತ್ತಿ ಉರಿಯುತ್ತಿರುವುದರಿಂದ ಅಲ್ಮೋರಾ ಜಿಲ್ಲೆಯಲ್ಲಿ ಕಾಡ್ಗಿಚ್ಚು ಕ್ರಮೇಣ ನಿಯಂತ್ರಣಕ್ಕೆ ಬರುತ್ತಿಲ್ಲ. ಹತ್ತಾರು ಕಾಡುಗಳು ಬೆಂಕಿಗಾಹುತಿಯಾಗಿವೆ ಎಂದು ಹೇಳಲಾಗುತ್ತಿದೆ. ಏತನ್ಮಧ್ಯೆ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಒಂದು ವಾರದ ನೋಟಿಸ್ ನೀಡುವ ಮೂಲಕ ಕಾಡ್ಗಿಚ್ಚುಗಳ ನಿಯಮಿತ ಮೇಲ್ವಿಚಾರಣೆಗೆ ಸೂಚನೆಗಳನ್ನು ನೀಡುವಂತೆ ಮುಖ್ಯ ಕಾರ್ಯದರ್ಶಿ ರಾಧಾ ರಾತುರಿಗೆ ಸೂಚಿಸಿದ್ದಾರೆ. ಇನ್ನು ಘಟನೆಯಲ್ಲಿ ಇದುವರೆಗೆ ಐವರು ಮೃತಪಟ್ಟಿದ್ದು, ಕಾಡಿನ ಸಮೀಪ ಬೆಂಕಿಯಲ್ಲಿ ಆಟ ಆಡ್ತಿದ್ದ ನಾಲ್ವರನ್ನು ಅರೆಸ್ಟ್‌ ಮಾಡಲಾಗಿದೆ.

ಇದನ್ನೂ ಓದಿ:ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

ಗುರುವಾರ ಸಂಜೆ ಬರಹತ್‌ ವ್ಯಾಪ್ತಿಯ ಅರಣ್ಯದಲ್ಲಿ ವ್ಯಾಪಿಸಿದ ಬೆಂಕಿ ಭಾನುವಾರದವರೆಗೂ ನಂದಿಸಲು ಸಾಧ್ಯವಾಗಿಲ್ಲ. ಇದಲ್ಲದೇ, ಮುಖೇಮ್ ವ್ಯಾಪ್ತಿಯ ಡ್ಯಾಂಗ್ ಮತ್ತು ಪೋಖ್ರಿ ಗ್ರಾಮದ ಪಕ್ಕದ ಅರಣ್ಯ ಹಾಗೂ ಡುಂಡಾ ವ್ಯಾಪ್ತಿಯ ಚಮ್‌ಕೋಟ್ ಮತ್ತು ದಿಲ್ಸೌದ್ ಪ್ರದೇಶದ ಅರಣ್ಯವೂ ಬೆಂಕಿಯ ಹಿಡಿತದಲ್ಲಿದೆ. ಇದಲ್ಲದೇ ಧರಸು ವ್ಯಾಪ್ತಿಯ ಫೇಡಿ, ಸಿಲ್ಕ್ಯಾರ ಅಕ್ಕಪಕ್ಕದ ಕಾಡಾನೆಗಳೂ ಬೆಂಕಿಗೆ ಆಹುತಿಯಾಗಿವೆ. ಅರಣ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ ಉತ್ತರಕಾಶಿ ಅರಣ್ಯ ವಿಭಾಗದಲ್ಲಿ 19.5 ಹೆಕ್ಟೇರ್ ಅರಣ್ಯ ಕಾಡ್ಗಿಚ್ಚಿಗೆ ಸುಟ್ಟು ಬೂದಿಯಾಗಿದೆ.
ಈಗ ಹೊತ್ತಿ ಉರಿಯುತ್ತಿರುವ ಬೆಂಕಿಯ ನಡುವೆಯೂ ರಾಜ್ಯದಲ್ಲಿ ಮೇ 7-8ರವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಮೇ 11ರಿಂದ ಮಳೆ ಹೆಚ್ಚಾಗಲಿದೆ ಎಂದು ಹೇಳಲಾಗುತ್ತಿದೆ. ಇದು ಕಾಡಿನ ಬೆಂಕಿಯನ್ನು ನಂದಿಸಲು ಸಹಾಯ ಮಾಡುತ್ತದೆ.

Continue Reading

ಅಂಕಣ

ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

ನನ್ನ ದೇಶ ನನ್ನ ದನಿ ಅಂಕಣ: ಕಳೆದ ಎರಡು ಶತಮಾನಗಳಲ್ಲಿ ಭಾರತದ ಜ್ಞಾನಸಂಪತ್ತನ್ನು ಕೊಳ್ಳೆಹೊಡೆಯಲು ಬ್ರಿಟಿಷರು ಏನೇನು ಬೇಕೋ ಅಷ್ಟನ್ನೂ ಮಾಡಿದರು. ಬ್ರಿಟಿಷರ ಮೂಗಿನ ನೇರಕ್ಕೆ ಅನೇಕ ಭಾಷಾಂತರಗಳೂ ಆದವು. ಆದರೆ ಅನಂತರದ ಕಾಲಾವಧಿಯಲ್ಲಿ ಭಾಷಾಂತರಕ್ಕೆ ಸಿಕ್ಕಬೇಕಾದ ಪ್ರಾಮುಖ್ಯ ಸಿಕ್ಕಲೇ ಇಲ್ಲ. ಕನ್ನಡದ ವಿದ್ವಲ್ಲೋಕದಲ್ಲಿಯೂ “ಅನುವಾದವೇ, ಒಂದು ಡಿಕ್ಷನರಿ ಇದ್ದರಾಯಿತು” ಎಂಬಂತಹ ಔದಾಸೀನ್ಯ.

VISTARANEWS.COM


on

nanna desha nanna dani column
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

ajjampura manjunath

ನನ್ನ ದೇಶ ನನ್ನ ದನಿ ಅಂಕಣ: ಅನುವಾದ ಮತ್ತು ಭಾಷಾಂತರ ಕ್ಷೇತ್ರಗಳ ಮಹತ್ತ್ವವೇ ನಮಗೆ ತಿಳಿಯದು. ಸಾಮಾನ್ಯರಿರಲಿ, ವಿಶ್ವವಿದ್ಯಾಲಯಗಳಲ್ಲಿ ವಿರಾಜಮಾನರಾಗಿರುವ ಬಹುತೇಕ ಪ್ರಭೃತಿಗಳಿಗೂ ತಿಳಿಯದು. ಭಾಷಾಂತರ ಕ್ಷೇತ್ರದ ಆಳ – ಅಗಲಗಳ ಸರಿಯಾದ ಅಂದಾಜೇ ನಮಗಿಲ್ಲ. ಕಳೆದ ಆರೇಳು ದಶಕಗಳಲ್ಲಿ ಇಂಗ್ಲಿಷ್ ಭಾಷೆ ಮತ್ತು ರೋಮನ್ ಲಿಪಿಗಳ ಅಟ್ಟಹಾಸ, ಅಬ್ಬರಗಳ ಮಹಾಪೂರದಲ್ಲಿ ಭಾರತೀಯ ಭಾಷೆಗಳು ಸೊರಗುತ್ತಿವೆ, ನಿಧಾನವಾಗಿ ನೇಪಥ್ಯಕ್ಕೂ ಸೇರುತ್ತಿವೆ. ಇನ್ನೂ ಹೆಚ್ಚಿನ ದುರಂತವೆಂದರೆ, ನಮ್ಮ ಸೋ ಕಾಲ್ಡ್ ಶಿಕ್ಷಣ ತಜ್ಞರಿಗೆ ಇದರ ಅಂದಾಜೂ ಆಗುತ್ತಿಲ್ಲ. ಇತ್ತೀಚಿನ ಒಂದೆರಡು ದಶಕಗಳಲ್ಲಿ, ಸಂವಾದ – ಚರ್ಚೆ – ಉಪನ್ಯಾಸಮಾಲೆ – ಎಲ್ಲವೂ ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಎಂಬಂತಾಗಿವೆ. ಈ ಪಿಡುಗು ಇನ್ನಷ್ಟು ಮುಂದುವರಿದು ಸಂಗೀತ, ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮೊದಲ್ಗೊಂಡು, ಶಾಲಾ ಕಾಲೇಜುಗಳ ವಿದ್ಯಾರ್ಥಿ ಸಂಘಗಳ ಕಾರ್ಯಕ್ರಮಗಳನ್ನೂ ಇಂಗ್ಲಿಷ್ ಭಾಷೆ ಆವರಿಸಿಕೊಂಡುಬಿಟ್ಟಿದೆ. ಇನ್ನು ಇಡೀ ದೇಶದ ಬೌದ್ಧಿಕ – ಶೈಕ್ಷಣಿಕ ಕ್ಷೇತ್ರಗಳು, ಇಂಗ್ಲಿಷ್ ಭಾಷೆ – ಇಂಗ್ಲಿಷ್ ಮಾಧ್ಯಮಗಳ ಉಪೋತ್ಪನ್ನಗಳಾಗಿ ಹೋಗಿರುವುದು, ಈ ಎಲ್ಲಾ ಅಪಸವ್ಯಗಳಿಗೆ ಕಲಶವಿಟ್ಟಂತಾಗಿದೆ.

ಪ್ರಾಚೀನ ಭಾರತ, ಅಷ್ಟೇಕೆ, ಪ್ರಾಚೀನ ಜಗತ್ತಿನ ಬಹುಪಾಲು ಆಳರಸರಿಗೆ ಭಾಷಾಂತರ ಕ್ಷೇತ್ರದ ಮಹತ್ತ್ವ ತಿಳಿದಿತ್ತು. ಭಾಷೆಗಳನ್ನು ಯಾರೂ ಸಮಸ್ಯೆಯನ್ನಾಗಿ ಮಾಡಿಕೊಂಡಿರಲಿಲ್ಲ. ಹಿಂದೀ – ತಮಿಳು ಭಾಷೆಗಳನ್ನು ಮತ್ತು ಭಾಷಿಕರನ್ನು ದ್ವೇಷಿಸುವ ನಮ್ಮ ಇಂದಿನ ಯುಗಮಾನದ ಅವಿವೇಕ ಅಂದಿನವರಿಗೆ ಇರಲಿಲ್ಲ. ನಾಲ್ಕೈದು ದಶಕಗಳ ಹಿಂದೆ ಬಂಗಾಳಿ, ತಮಿಳು, ತೆಲುಗು, ಮರಾಠೀ ಮುಂತಾದ ಭಾಷೆಗಳಿಂದ ನೇರವಾಗಿ ಅನುವಾದ ಮಾಡುವವರು ನಮ್ಮಲ್ಲಿಯೇ ಇದ್ದರು. ಈಗ ವಿಚಿತ್ರವೆಂದರೆ, ಭಾರತೀಯ ಭಾಷೆಗಳ ನಡುವಣ ಕೊಡುಕೊಳ್ಳುವಿಕೆಗೂ ಇಂಗ್ಲಿಷ್ ಭಾಷೆಯು ಅನಿವಾರ್ಯ ಮಾಧ್ಯಮ ಎಂಬಂತಾಗುತ್ತಿದೆ. ಇದಕ್ಕಿಂತ ದೊಡ್ಡ ದುರಂತವಿನ್ನೇನು ಇದ್ದೀತು!

ಸಾವಿರಾರು ವರ್ಷಗಳ ನಿಜೇತಿಹಾಸಾಧ್ಯಯನ ನಮ್ಮ ದಿಗ್ಭ್ರಮೆಗೆ ಕಾರಣವಾಗುತ್ತದೆ. ನೋಡಿ, ನಮಗೆ ಯುವಾನ್ ಚ್ವಾಂಗ್ (ಇದು ಸರಿಯಾದ ಉಚ್ಚಾರಣೆ, ಹಿಂದೆ ಹ್ಯೂ ಎನ್ ತ್ಸಾಂಗ್ ಎನ್ನಲಾಗುತ್ತಿತ್ತು) ಫಾಹಿಯಾನ್ ಮಾತ್ರ ಗೊತ್ತು. ಅವರೆಲ್ಲ ಚೀನಾ ದೇಶದಿಂದ ಇಲ್ಲಿಗೆ ಬಂದು ಜ್ಞಾನಸಂಪತ್ತನ್ನು ಅಲ್ಲಿಗೆ ಕೊಂಡೊಯ್ದವರು. ಅವರು, ಅಂತಹವರು ಭಾಷಾಂತರದಿಂದ ಅದ್ಭುತವಾದ ಸಂಪತ್ತನ್ನು ಸಂಗ್ರಹಿಸಿದರು ಮತ್ತು ಅವರ ದೇಶದಲ್ಲಿ ಕಾಪಿಟ್ಟುಕೊಂಡರು. ನಿಜೇತಿಹಾಸದ ಇನ್ನಷ್ಟು ವಿವರಗಳು ಅಕ್ಷರಶಃ ನಮ್ಮನ್ನು ದಿಗ್ಭ್ರಮೆಗೊಳಿಸುತ್ತವೆ. ಇಲ್ಲಿಂದ ಅಲ್ಲಿಗೆ ಹೋಗಿ ಭಾಷಾಂತರ ಮಾಡಿದ ಭಾರತೀಯ ಮೂಲದ ವಿದ್ವಾಂಸರ ವಿವರಗಳು ಸಹ ದಿಕ್ಸೂಚಿಯಾಗಿವೆ.

ಸಾಮಾನ್ಯ ಯುಗದ ಮೊದಲನೆಯ ಶತಮಾನದಲ್ಲಿ (1st Century of Common Era) ಚೀನಾ ದೇಶದ ಸಮ್ರಾಟ ಮಿಂಗ್-ತಿ ಬೌದ್ಧ ಸಿದ್ಧಾಂತದ ಅಧ್ಯಯನಕ್ಕಾಗಿ 18 ಜನರ ತಂಡವನ್ನು ಭಾರತಕ್ಕೆ ಕಳುಹಿಸಿದ. ಅವರು ಇಲ್ಲಿಂದ ದೊಡ್ಡ ಸಂಖ್ಯೆಯ ಗ್ರಂಥಗಳನ್ನು ಪ್ರತಿ ಮಾಡಿಕೊಂಡು, ಅನುವಾದಿಸಿಕೊಂಡು ತೆಗೆದುಕೊಂಡುಹೋದರು ಮತ್ತು ಕಶ್ಯಪ ಮಾತಂಗ ಮತ್ತು ಧರ್ಮರತ್ನ ಎಂಬ ಬೌದ್ಧ ವಿದ್ವಾಂಸರನ್ನೂ ಕರೆದುಕೊಂಡುಹೋದರು. ಕಶ್ಯಪರು ಆಗ ಗಾಂಧಾರದಲ್ಲಿದ್ದರು (ಗಾಂಧಾರ ಎಂದರೆ ಇಂದಿನ ಆಫಘನಿಸ್ತಾನ. ಅದು ಇಸ್ಲಾಂ ಆಕ್ರಮಣಕ್ಕೆ ಮುಂಚೆ ಸಾವಿರಾರು ವರ್ಷಗಳ ಕಾಲ ಬೌದ್ಧ ಧರ್ಮಕ್ಕೆ ಹೆಸರಾಗಿತ್ತು). ಚೀನಾ ದೇಶದ ತರ್ಕೆಸ್ತಾನ್ ಪ್ರದೇಶದ ಪರ್ವತಗಳನ್ನು ಮತ್ತು ಗೋಬೀ ಮರುಭೂಮಿಯನ್ನು ದಾಟಿಹೋಗಲು ಕಶ್ಯಪರು ಪ್ರಯಾಸಪಡಬೇಕಾಯಿತು. ಆದರೆ, ಅವರ ಆ ಪರಿಶ್ರಮದ ಭೇಟಿಯ ಕಾರಣದಿಂದಲೇ ಅನಂತರದ ಅವಧಿಯಲ್ಲಿ, ಪ್ರಾಚೀನ ಭಾರತದ ವಿಶ್ವವಿದ್ಯಾಲಯಗಳಿಂದ ನೂರಾರು ಜನ ವಿದ್ವಾಂಸರು ಚೀನಾ ದೇಶದಲ್ಲಿಯೇ ಕುಳಿತು ಭಾಷಾಂತರ ಮಾಡುವಂತಹ ವ್ಯವಸ್ಥೆ ಬೆಳೆಯಲು ಸಾಧ್ಯವಾಯಿತು. ಅಗಾಧ ಪ್ರಮಾಣದ ಸಂಸ್ಕೃತ ಗ್ರಂಥಗಳನ್ನು ಅವರೆಲ್ಲ ಪ್ರತಿ ಮಾಡಿಕೊಂಡು ಇಲ್ಲಿಂದ ತೆಗೆದುಕೊಂಡುಹೋದರು. ಹಾಗೆ ಹೋದ ವಿದ್ವಾಂಸರಲ್ಲಿ ಸಂಘವರ್ಮ, ಧರ್ಮಸತ್ಯ, ಧರ್ಮಕಾಲ, ಮಹಾಬಲ, ವಿಘ್ನ, ಧರ್ಮಫಲ, ಕಲಾಸಿವಿ, ಕಲಾರುಚಿ ಮತ್ತು ಲೋಕರುಚಿ ಅವರು ಪ್ರಮುಖರಾದವರು.

nalanda and muslim invaders

ಆಗ ಕಾಶ್ಮೀರವೂ ಪ್ರಾಚೀನ ಭಾರತದ ಬಹಳ ದೊಡ್ಡ ಬೌದ್ಧ ಅಧ್ಯಯನ ಕೇಂದ್ರವಾಗಿತ್ತು. ಕಾಶ್ಮೀರದ ರಾಜವಂಶಕ್ಕೆ ಸೇರಿದ ಗುಣವರ್ಮರು ತಮ್ಮ ಪಾಂಡಿತ್ಯಕ್ಕೇ ಹೆಸರಾಗಿದ್ದರು. ಅವರು ಮೊದಲು ಶ್ರೀಲಂಕಾ ಮತ್ತು ಜಾವಾ ದೇಶಗಳಿಗೆ ಹೋಗಿ ಖ್ಯಾತರಾದರು. ಗುಣವರ್ಮರನ್ನು ಚೀನಾ ದೇಶದ ಚಕ್ರವರ್ತಿ ಆಹ್ವಾನಿಸಿದ. ಅಷ್ಟೇ ಅಲ್ಲ, ನಾಂಕಿಂಗ್ ಎಂಬ ಪಟ್ಟಣಕ್ಕೆ ಹೋಗಿ ಸ್ವತಃ ಗುಣವರ್ಮರನ್ನು ಎದುರುಗೊಂಡ. ಅವರ ಶಿಷ್ಯನೂ ಆದ. ಅವರಿಗಾಗಿ ಒಂದು ಬೌದ್ಧ ದೇವಾಲಯವನ್ನೂ ನಿರ್ಮಿಸಿದ. ಗುಣವರ್ಮರಂತೆಯೇ ಕಾಶ್ಮೀರದಿಂದ ಚೀನಾ ದೇಶಕ್ಕೆ ಹೋದ ವಿದ್ವಾಂಸರೆಂದರೆ ಬುದ್ಧಯಶಸ್, ಧರ್ಮಯಶಸ್, ಧರ್ಮಕ್ಷೇಮ, ಬುದ್ಧಜೀವ ಮತ್ತು ಧರ್ಮಮಿತ್ರ. ಈ ವಿವರಗಳು ಅದೆಷ್ಟು ಸಂತೋಷನೀಡುತ್ತವೆ ಎಂದರೆ, ನೋಡಿ, ದಕ್ಷಿಣ ಭಾರತದಿಂದಲೂ ಹಲವಾರು ವಿದ್ವಾಂಸರು ಚೀನಾ ದೇಶಕ್ಕೆ ಹೋದರು. ಹಾಗೆ ಹೋದ ಧರ್ಮರುಚಿ ಇಪ್ಪತ್ತು ವರ್ಷಗಳ ಕಾಲ (ಸಾಮಾನ್ಯ ಯುಗದ 693ರಿಂದ 713) ಚೀನಾ ದೇಶದಲ್ಲಿದ್ದು, ದಾಖಲೆ ಪ್ರಮಾಣದ ಐವತ್ಮೂರು ಗ್ರಂಥಗಳನ್ನು ಭಾಷಾಂತರಿಸಿದರು. ಚೀನೀ ಭಾಷೆಗೆ ವ್ಯವಸ್ಥಿತವಾದ ವ್ಯಾಕರಣವಿಲ್ಲ, ಒಂದು ಪದವನ್ನು ಒಂದು ಅಕ್ಷರವೋ – ಒಂದು ಚಿಹ್ನೆಯೋ ಪ್ರತಿನಿಧಿಸಿಬಿಡುತ್ತದೆ, ಎನ್ನುವ ಹಿನ್ನೆಲೆಯಲ್ಲಿ ಅತ್ಯಂತ ವ್ಯವಸ್ಥಿತವಾದ ಸಂಸ್ಕೃತ ಮತ್ತು ಇನ್ನಿತರ ಭಾರತೀಯ ಭಾಷೆಗಳಿಂದ ಅನುವಾದಿಸುವುದು ಅದೆಷ್ಟು ಶ್ರಮದಾಯಕ, ಕ್ಲಿಷ್ಟಕರ ಎಂಬುದನ್ನು ನಾವಿಲ್ಲಿ ಅರ್ಥಮಾಡಿಕೊಳ್ಳಬೇಕಿದೆ. ಭಾಷಾಂತರದ ಆಯಾಮವೇ ಹಾಗೆ. ಸಂಸ್ಕೃತಿಗಳ – ರೀತಿನೀತಿಗಳ ವ್ಯತ್ಯಾಸ ಮತ್ತು ಅಂತರಗಳೂ ಪ್ರಮುಖ ಪಾತ್ರ ವಹಿಸುತ್ತವೆ.

ಬಹಳ ಮುಖ್ಯವಾದ ಅಂಶವೊಂದನ್ನು ಇಲ್ಲಿ ಪ್ರಸ್ತಾಪಿಸಬೇಕಿದೆ. ಜ್ಞಾನದ ಸಂಪತ್ತನ್ನು ವಿವಿಧ ಸಮುದಾಯಗಳಿಗೆ, ಅನೇಕ ದೇಶಗಳಿಗೆ ಹಂಚಲು ನೀಡಲು ಭಾಷಾಂತರದ ಇಂತಹ ಪ್ರಮುಖ ಆಯಾಮಕ್ಕೆ ರಾಜಾಶ್ರಯ ಇತ್ತು, ಇರಬೇಕು ಎನ್ನುವುದನ್ನು ಸಹ ನಾವಿಲ್ಲಿ ಗಮನಿಸಬೇಕಿದೆ. ಭಾರತ, ಚೀನಾ ಮುಂತಾದ ದೇಶಗಳಲ್ಲಿ ಅನೇಕ ರಾಜರು ಪ್ರೋತ್ಸಾಹ ನೀಡಿದುದರಿಂದಲೇ ಜ್ಞಾನ ಪರಂಪರೆ ಮುಂದುವರಿಯಲು ಮತ್ತು ಉಳಿದುಕೊಂಡು ಬರಲು ಸಾಧ್ಯವಾಯಿತು.

ಕಳೆದ ಎರಡು ಶತಮಾನಗಳಲ್ಲಿ ಭಾರತದ ಜ್ಞಾನಸಂಪತ್ತನ್ನು ಕೊಳ್ಳೆಹೊಡೆಯಲು ಬ್ರಿಟಿಷರು ಏನೇನು ಬೇಕೋ ಅಷ್ಟನ್ನೂ ಮಾಡಿದರು. ಬ್ರಿಟಿಷರ ಮೂಗಿನ ನೇರಕ್ಕೆ ಅನೇಕ ಭಾಷಾಂತರಗಳೂ ಆದವು. ಆದರೆ ಅನಂತರದ ಕಾಲಾವಧಿಯಲ್ಲಿ ಭಾಷಾಂತರಕ್ಕೆ ಸಿಕ್ಕಬೇಕಾದ ಪ್ರಾಮುಖ್ಯ ಸಿಕ್ಕಲೇ ಇಲ್ಲ. ಕನ್ನಡದ ವಿದ್ವಲ್ಲೋಕದಲ್ಲಿಯೂ “ಅನುವಾದವೇ, ಒಂದು ಡಿಕ್ಷನರಿ ಇದ್ದರಾಯಿತು” ಎಂಬಂತಹ ಔದಾಸೀನ್ಯ. ಹಾಗೆಂದೇ, ಕನಿಷ್ಠ ಎಂಬತ್ತು ಪ್ರತಿಶತ ಅನುವಾದಗಳು ಕಳಪೆ ಗುಣಮಟ್ಟದವಾಗಿಬಿಟ್ಟಿವೆ. ಇನ್ನು ಪ್ರಶಸ್ತಿ, ಸ್ಥಾನಮಾನಗಳನ್ನು ಅನುವಾದಕರು ನಿರೀಕ್ಷಿಸುವಂತೆಯೇ ಇಲ್ಲ. ಒಂದೋ ಎರಡೋ ಕು-ಕವನಗಳನ್ನು ಬರೆದವರು ತಾವು ಬರೆದ ಕವನಗಳಿಗಿಂತ ಹೆಚ್ಚು ಸಂಖ್ಯೆಯ ಪ್ರಶಸ್ತಿಗಳನ್ನು ಗಳಿಸಿಬಿಡುತ್ತಾರೆ. ಕನ್ನಡದಲ್ಲಿ “ಕುವೆಂಪು ಭಾಷಾ ಭಾರತಿ ಪ್ರಾಧಿಕಾರ”ವು, ಭಾಷಾಂತರಕ್ಕೆ ಒಳ್ಳೆಯ ಸಂಭಾವನೆಯನ್ನು ಕೊಡುತ್ತಿರುವುದು ಸ್ವಾಗತಾರ್ಹವೇ ಆದರೂ, ಮುಖ್ಯ ವಿಷಯ ಅದಲ್ಲ. ನಮ್ಮ ಪರಂಪರೆಯ ಹಾಗೂ ಅನೇಕ ಪ್ರಮುಖ ಗ್ರಂಥಗಳ ಸಮರ್ಥ ಮತ್ತು ಅಧಿಕೃತ ಅನುವಾದಗಳು ಆಗಬೇಕಿದೆ. ಅದು ಬರಿಯ ಸಂಭಾವನೆಯ ಸಂಗತಿಯನ್ನು ಮೀರಿದುದು. ಕೆಲವು ಗ್ರಂಥಗಳ ಅನುವಾದಕ್ಕೆ ಪ್ರತ್ಯೇಕ ಆದ್ಯತೆಯನ್ನೇ ನೀಡಬೇಕಾಗುತ್ತದೆ ಮತ್ತು ಬರಿಯ ಸಂಭಾವನೆ ಸಾಲದೆಹೋಗುತ್ತದೆ. ಈ ಕಾರ್ಯಕ್ಕೆಂದೇ ಪೂರ್ಣಾವಧಿ ಭಾಷಾಂತರಕಾರರ ನೇಮಕವಾಗಬೇಕಾಗಿದೆ.

ಹಿಂದೆ ರಾಜಾಶ್ರಯ ಇದ್ದ ಹಾಗೆ, ಈಗ ಸರ್ಕಾರೀ ಮತ್ತು ಸೇವಾ ಸಂಸ್ಥೆಗಳು ಪೂರ್ಣಾವಧಿ ಭಾಷಾಂತರಕಾರರನ್ನೇ ನೇಮಿಸಿಕೊಂಡು ಈ ಕಾರ್ಯವನ್ನು ಕೈಗೊಳ್ಳಬೇಕು. ಆಗ ಮಾತ್ರ ನಮ್ಮ ಪರಂಪರೆ ಮತ್ತು ನಿಜ-ಇತಿಹಾಸ ಗ್ರಂಥಗಳನ್ನು ಉಳಿಸಿಕೊಳ್ಳಲು ಸಾಧ್ಯ. ಹಾಗಾದಾಗ ಮಾತ್ರವೇ, ಪರೋಕ್ಷವಾಗಿ ಎಲ್ಲ ಭಾರತೀಯ ಭಾಷೆಗಳನ್ನೂ ಉಳಿಸಲು, ಉಳಿಸಿಕೊಳ್ಳಲು ಸಾಧ್ಯ.

ಅದೆಷ್ಟು ಪ್ರಮಾಣದಲ್ಲಿ ಮಹತ್ತ್ವದ ಗ್ರಂಥಗಳು ಬೇರೆ ಬೇರೆ ಭಾಷೆಗಳಲ್ಲಿ ಬರಬೇಕಾಗಿವೆ ಎಂದರೆ, ಭಾರತಾದ್ಯಂತ ಹತ್ತಾರು ಸಾವಿರ ಪೂರ್ಣಾವಧಿ ಭಾಷಾಂತರಕಾರರ ಅಗತ್ಯವಿದೆ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಆ ಕರಾಳ ದಿನಗಳನ್ನು ನೆನಪಿಸಿ ಅಂತರಂಗ ಕಲಕುವ ಬುಗುರಿ

ವಿಚಿತ್ರ ನೋಡಿ. ಅಮೆರಿಕಾ, ಫ್ರಾನ್ಸ್ ಮತ್ತು ಇಂಗ್ಲೆಂಡ್ ದೇಶಗಳ ದರೋಡೆಕಾರರಿಗೆ ನಮ್ಮ ಪ್ರಾಚೀನ ಗ್ರಂಥಗಳ ನಿಜ-ಮೌಲ್ಯ ಗೊತ್ತಿತ್ತು. ಈ ಮೂರೂ ದೇಶಗಳ ವಿದ್ವಾಂಸರು ಒಟ್ಟಾಗಿ ಕುಳಿತು, ಸಾಮಾನ್ಯ ಯುಗದ 17 – 18ನೆಯ ಶತಮಾನಗಳಲ್ಲಿ, ನಮ್ಮ “ಸೂರ್ಯ ಸಿದ್ಧಾಂತ” ಗ್ರಂಥವನ್ನು ಅನುವಾದಿಸಿಕೊಂಡು ಹೋದರು. ಖಗೋಳ ಶಾಸ್ತ್ರದ ಆ ಅಮೌಲ್ಯ ಗ್ರಂಥದ ಪ್ರಮುಖ ವೈಜ್ಞಾನಿಕ ಅಂಶಗಳನ್ನು ಅವರು ಬಳಸಿಕೊಂಡರು. ಮೆಕಾಲೆ ಹುಟ್ಟುಹಾಕಿದ ನಮ್ಮ ದೇಶದ ಇಂದಿನ ವಿಕೃತ ಶಿಕ್ಷಣ ವ್ಯವಸ್ಥೆ ಹೇಗಿದೆಯೆಂದರೆ, ಇಂದು ನಮ್ಮ ವಿಶ್ವವಿದ್ಯಾಲಯಗಳ ಮಹಾಶಯರಿಗೆ “ಸೂರ್ಯ ಸಿದ್ಧಾಂತ”ದ ಬಗೆಗೆ ಕೇಳಿದರೆ, ಅವರು “ಅದು ಬೆಕ್ಕೋ – ನಾಯಿಯೋ ಇರಬಹುದು” ಎಂದಾರು. ಕಮ್ಯೂನಿಸ್ಟರು ಅವರ ತಲೆಗೆ ತುಂಬಿರುವಂತೆ, ಪ್ರಾಚೀನ ಭಾರತವೆಂದರೆ ಅವರ ಪಾಲಿಗೆ “ಸತೀ ಸಹಗಮನ, ಅಸ್ಪೃಶ್ಯತೆ, ಜಾತೀಯತೆ, ಮೂಢ ನಂಬಿಕೆಗಳು, ಭೇದಭಾವ, ಶೋಷಣೆ, ಇತ್ಯಾದಿ” ಮಾತ್ರ!

ಅತ್ಯಂತ ನಿರುಪಯುಕ್ತವಾದ ಕೆಮಿಸ್ಟ್ರಿ (ಶಾಲಾ ಕಾಲೇಜುಗಳಲ್ಲಿ ನಾನೂ ಕೆಮಿಸ್ಟ್ರಿ ವಿದ್ಯಾರ್ಥಿಯೇ. ಅದರಿಂದ ಮೂರುಕಾಸಿನ ಪ್ರಯೋಜನವೂ ಇಲ್ಲವೆಂಬುದನ್ನು, ಕಳೆದ ಅರ್ಧ ಶತಮಾನದಲ್ಲಿ ಅರ್ಥ ಮಾಡಿಕೊಂಡಿದ್ದೇನೆ) ಮುಂತಾದವನ್ನು ಕೈಬಿಟ್ಟು, ಆಗಬೇಕಾದ ವಿಭಾಗಗಳಲ್ಲಿ ಆಗಬೇಕಾದ ಕೆಲಸಗಳಿಗೆ ಆದ್ಯತೆ ಕೊಟ್ಟರೆ, ನಮ್ಮ ವಿಶ್ವವಿದ್ಯಾಲಯಗಳೂ ಅರ್ಥಪೂರ್ಣ ಕೊಡುಗೆ ನೀಡಬಹುದು.

ಇಲ್ಲಿ ಇನ್ನೂ ಒಂದು ಪ್ರಮುಖ ಸಂಗತಿಯನ್ನು ಪ್ರಸ್ತಾಪಿಸಬಹುದು. ಮೇಲೆ ಉಲ್ಲೇಖಿಸಿದ ಉದಾಹರಣೆಗಳು, ಮತಧರ್ಮಗಳ ಶಾಸ್ತ್ರಗ್ರಂಥಗಳ ಅನುವಾದಕ್ಕೆ ಸಂಬಂಧಿಸುತ್ತವೆ, ಅದರ ಹಿಂದೆ ಧರ್ಮಶ್ರದ್ಧೆಯ ಆಯಾಮವಿದೆ ಎಂದು ಕೆಲವರು ಮೂಗು ಮುರಿಯಬಹುದು. ಚೀನಾ ದೇಶದ ಈ ಮೇಲಿನ ಯೋಜನೆಗಳಲ್ಲಿ, ಅವರಿಗೆ ಜೊತೆಜೊತೆಯಲ್ಲಿಯೇ ತರ್ಕಶಾಸ್ತ್ರ, ಔಷಧಶಾಸ್ತ್ರ, ಆಯುರ್ವೇದ ಮುಂತಾದ ಅನೇಕ ಜ್ಞಾನಶಾಖೆಗಳ ಲಾಭವೂ ಆಯಿತು. ನಮ್ಮ ಭಾರತ-ಮೂಲದ ಗಣಿತ, ಅಂಕಿಗಳು, ಕ್ಯಾಲ್ಕುಲಸ್, ಬುದ್ಧಿವಂತರ ಆಟ ಎಂದೇ ಹೆಸರಾದ ಚದುರಂಗದಾಟ (Chess) ಇತ್ಯಾದಿ ಮಹತ್ತ್ವದ ಸಂಗತಿಗಳು ಅರೇಬಿಯಾ ಮೂಲಕ ಯೂರೋಪಿಗೆ ಪರಿಚಯವಾದವು. ಪರೋಕ್ಷವಾಗಿ ಯೂರೋಪಿನಲ್ಲಿ ಆಧುನಿಕ ವಿಜ್ಞಾನದ ವಿಕಾಸ ಸಂಶೋಧನೆಗಳಿಗೆ ಇವೆಲ್ಲಾ ಸಾಧನಗಳಾದವು, ಎಂಬುದನ್ನೂ ನಾವು ಮರೆಯುವಂತಿಲ್ಲ.

ಹೌದು, ಭಾಷಾಂತರ ಕ್ಷೇತ್ರಕ್ಕೆ ಈಗಲಾದರೂ ಆದ್ಯತೆ ದೊರೆಯಬೇಕಿದೆ. ಭಾರತೀಯ ಸಮಾಜದ ಬೌದ್ಧಿಕ ಲೋಕದ ಚುಕ್ಕಾಣಿ ಹಿಡಿದವರು ಈ ನಿಟ್ಟಿನಲ್ಲಿ ತೀವ್ರ ಗಮನ ನೀಡಬೇಕಿದೆ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಜೈಶಂಕರ್‌ ಕೃತಿ ʻಭಾರತ ಪಥʼ ತೆರೆದಿಡುವ ವಿದೇಶಾಂಗ ಸಂಬಂಧಗಳ ರೋಚಕ ಆಯಾಮ

Continue Reading

ಪ್ರಮುಖ ಸುದ್ದಿ

Mayawati: ನೇಮಿಸಿದ 5 ತಿಂಗಳಲ್ಲೇ ಸೋದರಳಿಯನನ್ನು ಉತ್ತರಾಧಿಕಾರಿ ಹುದ್ದೆಯಿಂದ ತೆಗೆದ ಮಾಯಾವತಿ!

Mayawati: ಮಾಯಾವತಿ ಅವರು 2019ರಲ್ಲಿ ಆಕಾಶ್‌ ಆನಂದ್‌ ಅವರನ್ನು ಬಿಎಸ್‌ಪಿ ರಾಷ್ಟ್ರೀಯ ಸಂಚಾಲಕರನ್ನಾಗಿ ನೇಮಿಸಿದ್ದರು. 2023ರ ಡಿಸೆಂಬರ್‌ನಲ್ಲಿ ಅವರು ಸೋದರಳಿಯನನ್ನೇ ಉತ್ತರಾಧಿಕಾರಿ ಎಂಬುದಾಗಿ ಘೋಷಿಸಿದ್ದರು. ಆದರೆ, ಈಗ ದಿಢೀರನೆ ಅವರನ್ನು ಎರಡೂ ಹುದ್ದೆಗಳಿಂದ ತೆರವುಗೊಳಿಸಲು ಏನು ಕಾರಣ ಎಂಬುದು ಸ್ಪಷ್ಟವಾಗಿಲ್ಲ.

VISTARANEWS.COM


on

Mayawati
Koo

ಲಖನೌ: ಬಹುಜನ ಸಮಾಜ ಪಕ್ಷದ (BSP) ವರಿಷ್ಠ ನಾಯಕಿ ಮಾಯಾವತಿ (Mayawati) ಅವರು ಸೋದರಳಿಯ ಆಕಾಶ್‌ ಆನಂದ್‌ (Akash Anand) ಅವರನ್ನು ತಮ್ಮ ಉತ್ತರಾಧಿಕಾರಿ ಹುದ್ದೆಯಿಂದ ವಜಾಗೊಳಿಸಿದ್ದಾರೆ. ನೇಮಕ ಮಾಡಿದ ಐದೇ ತಿಂಗಳಲ್ಲಿ ಬಿಎಸ್‌ಪಿಯ ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದಲೂ ಮಾಯಾವತಿಯವರು ವಜಾಗೊಳಿಸಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಮಾಯಾವತಿಯವರು ಇಂತಹ ತೀರ್ಮಾನ ತೆಗೆದುಕೊಂಡಿರುವುದು ಭಾರಿ ಚರ್ಚೆಗೂ ಗ್ರಾಸವಾಗಿದೆ.

ಆಕಾಶ್‌ ಆನಂದ್‌ ಅವರನ್ನು ಜವಾಬ್ದಾರಿಯಿಂದ ಮುಕ್ತಿಗೊಳಿಸಿರುವ ಕುರಿತು ಮಾಯಾವತಿಯವರೇ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. “ಆಕಾಶ್‌ ಆನಂದ್‌ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನಗಳನ್ನು ನಿಯೋಜಿಸಲಾಗಿತ್ತು. ಆದರೆ, ಬದಲಾದ ಸಾಮಾಜಿಕ ವ್ಯವಸ್ಥೆ, ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಅವರನ್ನು ರಾಷ್ಟ್ರೀಯ ಸಂಚಾಲಕ ಹಾಗೂ ಉತ್ತರಾಧಿಕಾರಿ ಹುದ್ದೆಯಿಂದ ತೆರವುಗೊಳಿಸಲಾಗಿದೆ. ಈಗಲೂ ಪಕ್ಷವು ಡಾ.ಬಿ.ಆರ್.ಅಂಬೇಡ್ಕರ್‌ ಅವರ ಚಿಂತನೆಗಳನ್ನು ಪಾಲಿಸಲು ಕಟಿಬದ್ಧವಾಗಿದೆ” ಎಂದು ತಿಳಿಸಿದ್ದಾರೆ.

ಮಾಯಾವತಿ ಅವರು 2019ರಲ್ಲಿ ಆಕಾಶ್‌ ಆನಂದ್‌ ಅವರನ್ನು ಬಿಎಸ್‌ಪಿ ರಾಷ್ಟ್ರೀಯ ಸಂಚಾಲಕರನ್ನಾಗಿ ನೇಮಿಸಿದ್ದರು. 2023ರ ಡಿಸೆಂಬರ್‌ನಲ್ಲಿ ಅವರು ಸೋದರಳಿಯನನ್ನೇ ಉತ್ತರಾಧಿಕಾರಿ ಎಂಬುದಾಗಿ ಘೋಷಿಸಿದ್ದರು. ಆದರೆ, ಈಗ ದಿಢೀರನೆ ಅವರನ್ನು ಎರಡೂ ಹುದ್ದೆಗಳಿಂದ ತೆರವುಗೊಳಿಸಲು ಏನು ಕಾರಣ ಎಂಬುದು ಸ್ಪಷ್ಟವಾಗಿಲ್ಲ. ಆದಾಗ್ಯೂ, ಮೊದಲಿನಂತೆ ಸಹೋದರ, ಆಕಾಶ್‌ ಆನಂದ್‌ ಅವರ ತಂದೆ ಆನಂದ್‌ ಕುಮಾರ್‌ ಅವರು ಜವಾಬ್ದಾರಿ ನಿಭಾಯಿಸಲಿದ್ದಾರೆ ಎಂಬುದಾಗಿ ಮಾಯಾವತಿ ಹೇಳೀದ್ದಾರೆ.

ಯಾರಿವರು ಆಕಾಶ್‌ ಆನಂದ್?

ಆಕಾಶ್ ಆನಂದ್ ತಮ್ಮ 22ನೇ ವಯಸ್ಸಿನಲ್ಲಿ 2017ರಲ್ಲಿ ರಾಜಕಾರಣವನ್ನು ಪ್ರವೇಶಿಸಿದರು. ಲಂಡನ್‌ನಲ್ಲಿ ಓದಿರುವ ಆಕಾಶ್ ಎಂಬಿಎ ಪದವೀಧರರು. ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ರ‍್ಯಾಲಿಯಲ್ಲಿ ಮಾಯಾವತಿಯವರೊಂದಿಗೆ ಅವರ ರಾಜಕೀಯ ಚೊಚ್ಚಲ ಪ್ರವೇಶವಾಗಿತ್ತು, ಅಲ್ಲಿ ಅವರು ಅಖಿಲೇಶ್ ಯಾದವ್ ಮತ್ತು ಅಜಿತ್ ಸಿಂಗ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.

ಸಾಮಾನ್ಯವಾಗಿ ಬಹುಜನ ಸಮಾಜ ಪಾರ್ಟಿಯ ಪಾದಯಾತ್ರೆಗಳಂಥ ರಾಜಕೀಯ ಚಟುವಟಿಕೆಗಳನ್ನು ನಡೆಸುವುದಿಲ್ಲ. ಆದರೆ, ಆಕಾಶ್ ಆನಂದ್ ಅವರು ಈ ಪದ್ಧತಿಯನ್ನು ಮುರಿದು ಇದೇ ಮೊದಲ ಬಾರಿಗೆ, 14 ದಿನಗಳ ಸರ್ವಜನ ಹಿತಾಯ, ಸರ್ವಜನ ಸುಖಾಯ ಸಂಕಲ್ಪ ಯಾತ್ರೆಯನ್ನು ಕೈಗೊಂಡಿದ್ದರು. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಬಿಎಸ್‌ಪಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: Politicians Scandals : ದೇಶದ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಲೈಂಗಿಕ ಹಗರಣಗಳಿವು!

Continue Reading

ದೇಶ

Amanatullah Khan: ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಮೇಲೆ ಆಪ್‌ ಎಂಎಲ್‌ಎ ಪುತ್ರನಿಂದ ಹಲ್ಲೆ; ಬಿತ್ತು ಕೇಸ್

Amanatullah Khan: ನೊಯ್ಡಾದ ಸೆಕ್ಟರ್‌ 95 ಪ್ರದೇಶದಲ್ಲಿರುವ ಪೆಟ್ರೋಲ್‌ ಬಕ್‌ನಲ್ಲಿ ಅಲ್ಲಿನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಕಾರಿನ ಡಿಕ್ಕಿಯಿಂದ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗಿ, ಹಲ್ಲೆ ಮಾಡುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದಾದ ಬಳಿಕ ಸಿಸಿಟಿವಿ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ. ಜನ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Amanatullah Khan
Koo

ನವದೆಹಲಿ: ರಾಜಕಾರಣಿಗಳು, ರಾಜಕಾರಣಿಗಳ ಮಕ್ಕಳು, ಅವರ ಕುಟುಂಬಸ್ಥರಿಗೊಂದು ದುರಹಂಕಾರ ಇರುತ್ತದೆ. ಹಣ, ಅಧಿಕಾರದ ಮದವು ಅವರನ್ನು ಸಾರ್ವಜನಿಕರೊಂದಿಗೆ ದುರಹಂಕಾರದಿಂದ, ದರ್ಪದಿಂದ ವರ್ತಿಸುವ ಹಾಗೆ ಮಾಡುತ್ತದೆ. ಚುನಾವಣೆ ಸಂದರ್ಭ ಹೊರತುಪಡಿಸಿ ಅವರು ಉಳಿದ ಸಮಯದಲ್ಲಿ ಅಹಂಕಾರದಿಂದಲೇ ವರ್ತಿಸುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಆಮ್‌ ಆದ್ಮಿ ಪಕ್ಷದ (Aam Aadmy Party) ಶಾಸಕ ಅಮಾನತುಲ್ಲಾ ಖಾನ್‌ ಅವರ ಪುತ್ರನು ಪೆಟ್ರೋಲ್‌ ಪಂಪ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಆತನ ವಿರುದ್ಧ ಕೇಸ್‌ ದಾಖಲಾಗಿದೆ.

ನೊಯ್ಡಾದ ಸೆಕ್ಟರ್‌ 95 ಪ್ರದೇಶದಲ್ಲಿರುವ ಪೆಟ್ರೋಲ್‌ ಬಕ್‌ನಲ್ಲಿ ಅಲ್ಲಿನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಕಾರಿನ ಡಿಕ್ಕಿಯಿಂದ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗಿ, ಹಲ್ಲೆ ಮಾಡುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದಾದ ಬಳಿಕ ಸಿಸಿಟಿವಿ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ. ವೈರಲ್‌ ಆಗುತ್ತಲೇ ಜನ ಶಾಸಕನ ಪುತ್ರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ.

ಅಮಾನತುಲ್ಲಾ ಖಾನ್‌ನ ಪುತ್ರನು ಕಾರಿನಲ್ಲಿ ಪೆಟ್ರೋಲ್‌ ಬಂಕ್‌ಗೆ ಬಂದಿದ್ದಾನೆ. ಆದರೆ, ಹಲವು ವಾಹನಗಳನ್ನು ಸಾಲಿನಲ್ಲಿ ನಿಲ್ಲಿಸಿದ ಕಾರಣ, ಕ್ಯೂ ಬಿಟ್ಟು ಹೋಗಿ, ಮೊದಲು ಪೆಟ್ರೋಲ್‌ ಹಾಕಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಆಗ ಅಲ್ಲಿದ್ದ ಸಾರ್ವಜನಿಕರು, ಪೆಟ್ರೋಲ್‌ ಬಂಕ್‌ ಸಿಬ್ಬಂದಿಯು ಆತನನ್ನು ತಡೆದಿದ್ದಾರೆ. ಇದರಿಂದ ಕುಪಿತಗೊಂಡ ಎಂಎಲ್‌ಎ ಪುತ್ರನು, ಕಾರಿನ ಡಿಕ್ಕಿಯಲ್ಲಿದ್ದ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗಿ ಅಲ್ಲಿನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಇಷ್ಟೆಲ್ಲ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ತಂದೆಯೂ ಬಂಕ್‌ಗೆ ಬಂದು ಬೆದರಿಕೆ

ಸಾರ್ವಜನಿಕರ ಜತೆ ಅಸಭ್ಯವಾಗಿ ವರ್ತಿಸಿದ, ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಮಗನಿಗೆ ಬುದ್ಧಿ ಮಾತು ಹೇಳಿ, ಪ್ರಕರಣವನ್ನು ತಣ್ಣಗಾಗಿಸುವ ಬದಲು, ಅಮಾನತುಲ್ಲಾ ಖಾನ್‌ ಅವರೇ ಪೆಟ್ರೋಲ್‌ ಬಂಕ್‌ಗೆ ತೆರಳಿ, ಅಲ್ಲಿನ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ವಕ್ಫ್‌ ಬೋರ್ಡ್‌ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳಷ್ಟೇ ಅಮಾನತುಲ್ಲಾ ಖಾನ್‌ ಅವರನ್ನು ಜಾರಿ ನಿರ್ದೇಶನಾಲಯದ ವಿಚಾರಣೆ ನಡೆಸಿದ್ದಾರೆ. ಇವರು ದೆಹಲಿಯ ಓಖ್ಲಾ ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದಾರೆ.

ಇದನ್ನೂ ಓದಿ: Harshika Poonacha: ಹಲ್ಲೆ ಪ್ರಕರಣ; ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ

Continue Reading
Advertisement
Prajwal Revanna Case HD Revanna bail plea to be heard tomorrow Jail or Bela
ಕ್ರೈಂ7 mins ago

Prajwal Revanna Case: ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

woman murder case divya
ಕ್ರೈಂ19 mins ago

Murder Case: ಮಾಜಿ ಪ್ರಿಯಕರನಿಂದ ಮಹಿಳೆಯ ಕೊಲೆ, ಕಾರಣ ನಿಗೂಢ

Uttarakhand Wildfire
ದೇಶ23 mins ago

Uttarakhand Wild fire:5 ತಿಂಗಳು.. 910 ಕಾಡ್ಗಿಚ್ಚು ಪ್ರಕರಣ;ಸುಪ್ರೀಂಕೋರ್ಟ್‌ನಲ್ಲಿ ಇಂದು ತುರ್ತು ವಿಚಾರಣೆ

nanna desha nanna dani column
ಅಂಕಣ48 mins ago

ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

Ghee Testing Method
ಆಹಾರ/ಅಡುಗೆ1 hour ago

Ghee Testing Method: ನಾವು ತಿನ್ನುವ ತುಪ್ಪ ಶುದ್ಧವಾಗಿದೆಯೇ ಎಂದು ಪರೀಕ್ಷಿಸುವುದು ಹೇಗೆ? ಇಲ್ಲಿದೆ ವಿಧಾನ

karnataka weather Forecast
ಮಳೆ2 hours ago

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Food Safety
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಆಹಾರ ಸುರಕ್ಷತೆಗಾಗಿ ನಿಷೇಧ ಆದೇಶ ಹೊರಡಿಸಿದರೆ ಸಾಕೆ?

Juices Side Effect
ಆರೋಗ್ಯ2 hours ago

Juices Side Effect: ಅಂಗಡಿಯಲ್ಲಿ ಸಿಗುವ ಜ್ಯೂಸ್‌ ಕುಡಿದರೆ ಏನಾಗುತ್ತದೆ?

Dina Bhavishya
ಭವಿಷ್ಯ3 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

70.94 percent voting in Koppal Lok Sabha constituency says Koppal DC Nalin Atul
ಕೊಪ್ಪಳ8 hours ago

Lok Sabha Election 2024: ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಶೇ 70.94ರಷ್ಟು ಮತದಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ11 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ14 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ16 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌