ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್(Paris Olympics 2024)ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅನರ್ಹಗೊಂಡಿರುವ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಬಗ್ಗೆ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ(Sudha Murthy) ನೀಡಿರುವ ಪ್ರತಿಕ್ರಿಯೆ ಇದೀಗ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ.
ದೇಶದ ಗಮನ ಸೆಳೆದಿರುವ ವಿನೇಶ್ ಪೋಗಟ್ ಅನರ್ಹತೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಧಾ, ಇಂತಹದ್ದ ವಿಚಾರಗಳು ನಡೆಯುತ್ತಿರುತ್ತವೆ. ಏನು ಮಾಡೋಕೆ ಆಗುತ್ತದೆ? ಇದು ಆಟದ ಒಂದು ಭಾಗ. ಈ ಬಗ್ಗೆ ಬೇಸರವಿದೆ. ಅಷ್ಟು ಮಾತ್ರ ಹೇಳಲು ಸಾಧ್ಯ ಎಂದು ಹೇಳಿದ್ದಾರೆ. ಸುಧಾಮೂರ್ತಿಯವರ ಈ ಪ್ರತಿಕ್ರಿಯೆ ಬಗ್ಗೆ ಹಲವರಿಂದ ಆಕ್ಷೇಪ ವ್ಯಕ್ತವಾಗಿದೆ. ಸುಧಾ ಮೂರ್ತಿಯವರು ಇಷ್ಟು ದೊಡ್ಡ ವಿಚಾರದ ಬಗ್ಗೆ ಹಗುರವಾಗಿ ಪ್ರತಿಕ್ರಿಯಿಸಿರುವುದು ಸರಿಯಲ್ಲ ಎಂದು ಕೆಲವರು ಟೀಕಿಸಿದ್ದಾರೆ.
ಸರಳತೆಯ ಪರಮಾವಧಿ ಇದು ಎಂದು ಒಬ್ಬ ನೆಟ್ಟಿಗ ಪ್ರತಿಕ್ರಿಯಿಸಿದ್ದು, ವಿನೇಶ್ ಅನರ್ಹತೆ ವಿಚಾರ ತಿಳಿದು ಕೋಟ್ಯಂತರ ಭಾರತೀಯರ ಹೃದಯ ಒಡೆದು ನುಚ್ಚುನೂರಾಗಿದೆ. ಇದೀಗ ಸುಧಾ ಮೂರ್ತಿಯವರು ಆ ಗಾಯ ಮೇಲೆ ಉಪ್ಪು ಸವರುತ್ತಿದ್ದಾರೆ ಎಂದು ಮತ್ತೊರ್ವ ಕಿಡಿಕಾರಿದ್ದಾನೆ. ಸುಧಾ ಮೂರ್ತಿಯವರ ಹೇಳಿಕೆ ಸರಿಯಾಗಿದೆ. ಬಹಳ ಪ್ರ್ಯಾಕ್ಟಿಕಲ್ ರೀತಿಯಲ್ಲಿ ಸತ್ಯ ಹೇಳುತ್ತಿದ್ದಾರೆ ಎಂದು ಇನ್ನೊರ್ವ ನೆಟ್ಟಿಗ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಯಿತು.ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಯಿತು.
ಒಲಿಂಪಿಕ್ಸ್‌ನಲ್ಲಿ 50 ಕಿಲೋ ತೂಕದ ವಿಭಾಗದಲ್ಲಿ ಸ್ಪರ್ಧಿಸಲು ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್ ಫೋಗಟ್ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯ ಮ ಎಕ್ಸ್‌ನಲ್ಲಿ ಪೋಸ್ಟ್ ಮೂಲಕ ಅವರು ಕುಸ್ತಿಯಿಂದ ನಿವೃತ್ತಿ (retirement) ಘೋಷಿಸಿದರು. “ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿದೆ. ನಾನು ಸೋತೆ.. ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ. ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ಕುಸ್ತಿ 2001-2024. ನಿಮ್ಮೆಲ್ಲರಿಗೂ ನಾನು ಎಂದೆಂದಿಗೂ ಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.
ಇದನ್ನೂ ಓದಿ:Vinesh Phogat: ವಿನೇಶ್ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸರ್ಕಾರ