Site icon Vistara News

Viral News: ಒಂಟಿಯಾಗಿದ್ದಾಗ ಮೈ ಮುಟ್ಟೋಕೆ ಬಂದೋನ ಖಾಸಗಿ ಅಂಗಕ್ಕೆ ಸಟ್ಟುಗದಲ್ಲೇ ಚುಚ್ಚಿದ್ಳು!

Viral Video

ಮುಂಬೈ: ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ತನ್ನ ಅಸಭ್ಯವಾಗಿ ವರ್ತಿಸಿದ ಕಿಡಿಗೇಡಿಗೆ ಮಹಿಳೆಯೊಬ್ಬಳು ತಕ್ಕಪಾಠ ಕಲಿಸಿದ್ದಾಳೆ. ಮಹಾರಾಷ್ಟ್ರ(Maharashtra)ದ ಥಾಣೆ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಕಬ್ಬಿಣದ ಸಟ್ಟುಗ(spatula)ದಿಂದಲೇ 30 ವರ್ಷದ ವ್ಯಕ್ತಿಯ ಖಾಸಗಿ ಅಂಗಕ್ಕೆ ಚುಚ್ಚಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ(Viral News).

ಏನಿದು ಘಟನೆ?

ಪೊಲೀಸರ ಮಾಹಿತಿ ಪ್ರಕಾರ, ಶುಕ್ರವಾರ ಭಿವಂಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅನಿಲ್ ಸತ್ಯನಾರಾಯಣ ರಚ್ಚಾ(30) ಎಂಬಾತ 26 ವರ್ಷದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಮಹಿಳೆ ಮತ್ತು ಈತ ಪರಸ್ಪರ ಪರಿಚಿತರೇ. ಶುಕ್ರವಾರ ಮಧ್ಯಾಹ್ನ 3.30ರ ಸುಮಾರಿಗೆ ರಚ್ಚ ತನ್ನ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ. ಅಲ್ಲದೆ ಆಕೆ ಮೇಲೆ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಮಹಿಳೆ, ತನ್ನನ್ನು ತಾನು ರಕ್ಷಿಸಿಕೊಳ್ಳುವ ಪ್ರಯತ್ನದಲ್ಲಿ, ಅಡುಗೆಮನೆಗೆ ಓಡಿ ಸಟ್ಟುಗ(ಸೌಟು) ತೆಗೆದುಕೊಂಡಳು. ಅದರಿಂದಲೇ ಅವಳು ರಚ್ಚಾ ಮೇಲೆ ದಾಳಿ ಮಾಡಿ ಅವನ ಜನನಾಂಗಗಳಿಗೆ ಗಾಯಗೊಳಿಸಿದಳು ಎಂದು ತಿಳಿದು ಬಂದಿದೆ.

ಗಂಭೀರವಾಗಿ ಗಾಯಗೊಂಡಿದ್ದ ರಚ್ಚಾನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್‌ ಆತ ಅಪಾಯದಿಂದ ಪಾರಾಗಿದ್ದಾನೆ. ಇನ್ನು ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ರಚ್ಚಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಮಹಿಳೆಯ ಮೇಲೆ ದೌರ್ಜನ್ಯ, ಲೈಂಗಿಕ ಕಿರುಕುಳ ಮತ್ತು ಅತಿಕ್ರಮಣಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಆರೋಪಿ ಇನ್ನೂ ಆಸ್ಪತ್ರೆಯಲ್ಲಿರುವುದರಿಂದ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ತಿಂಗಳು, ಬಿಹಾರದ ಮಹಿಳೆಯೊಬ್ಬಳು ತನ್ನನ್ನು ಮದುವೆಯಾಗಲು ನಿರಾಕರಿಸಿದ ಕಾರಣ ಸರನ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರ ಖಾಸಗಿ ಅಂಗಗಳನ್ನು ಕತ್ತರಿಸಿ ಹಾಕಿದ್ದಳು. ಈ ಸುದ್ದಿ ಭಾರೀ ವೈರಲ್‌ ಆಗಿತ್ತು. ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಆಕೆಯ ಬಳಿಯಿದ್ದ ರಕ್ತಸಿಕ್ತ ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ.

ವಿಚಾರಣೆಯ ನಂತರ, ಆರೋಪಿಯು ತಾನು ಮತ್ತು ಸಂತ್ರಸ್ತೆ ಕಳೆದ ಎರಡು ವರ್ಷಗಳಿಂದ ಸಂಬಂಧ ಹೊಂದಿರುವುದಾಗಿ ಹೇಳಿದ್ದಾನೆ, ಆದರೆ ವ್ಯಕ್ತಿ ಅವಳನ್ನು ಮದುವೆಯಾಗಲು ನಿರಾಕರಿಸಿದನು. ತನ್ನ ಪ್ರಸ್ತಾಪವನ್ನು ನಿರಾಕರಿಸಿದ ನಂತರ ವಾದದ ನಂತರ ಅವಳು ಅವನ ಮೇಲೆ ಹಲ್ಲೆ ನಡೆಸಿದ್ದಾಳೆ. ಮದುವೆಯ ನೆಪದಲ್ಲಿ ತನ್ನನ್ನು ಲೈಂಗಿಕವಾಗಿ ಶೋಷಿಸುತ್ತಿದ್ದಾನೆ ಎಂದು ಆರೋಪಿಸಿದ್ದಾಳೆ.

ಇದನ್ನೂ ಓದಿ: Viral News: ‘ಅಸ್ವಾಭಾವಿಕ ಲೈಂಗಿಕಕ್ರಿಯೆ’ಗೆ ಒತ್ತಾಯಿಸುತ್ತಿದ್ದ ಗಂಡನ ಶಿಶ್ನವನ್ನೇ ಬಾಯಿಂದ ಕತ್ತರಿಸಿದ ಹೆಂಡತಿ!

Exit mobile version