Viral News : ನವಜಾತ ಶಿಶುವನ್ನೇ ಬೂಟು ಕಾಲಿನಲ್ಲಿ ಮೆಟ್ಟಿ ಕೊಂದ ಪೊಲೀಸರು! - Vistara News

ದೇಶ

Viral News : ನವಜಾತ ಶಿಶುವನ್ನೇ ಬೂಟು ಕಾಲಿನಲ್ಲಿ ಮೆಟ್ಟಿ ಕೊಂದ ಪೊಲೀಸರು!

ಆರೋಪಿಯೊಬ್ಬನನ್ನು ಹುಡುಕಲು ಹೋದ ಪೊಲೀಸರು ಆ ಮನೆಯಲ್ಲಿದ್ದ ನವಜಾತ ಶಿಶುವನ್ನೇ ಬೂಟು ಕಾಲಿನಿಂದ ತುಳಿದು ಕೊಂದಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಈ ಸಂಬಂಧ ಆರು ಪೊಲೀಸ್‌ ಸಿಬ್ಬಂದಿಯನ್ನು ವಜಾ ಮಾಡಿರುವ ವಿಚಾರ ವೈರಲ್‌ (Viral News) ಆಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಂಚಿ: ಪೊಲೀಸರೆಂದರೆ ಎಲ್ಲರ ರಕ್ಷಣೆಗೆ ಇರುವವರು ಎನ್ನುವುದು ಎಲ್ಲರಿಗೆ ತಿಳಿದಿರುವ ವಿಚಾರ. ಆದರೆ ಜಾರ್ಖಂಡ್‌‌ನಲ್ಲಿ ನವಜಾತ ಶಿಶುವನ್ನು ಪೊಲೀಸರೇ ಬೂಟು ಕಾಲಿನಲ್ಲಿ ಮೆಟ್ಟಿ ಕೊಂದಿರುವ ಘಟನೆ ನಡೆದಿದೆ. ಇದೀಗ ತನಿಖೆ ನಡೆಸಿ, ಆರು ಪೊಲೀಸ್‌ ಸಿಬ್ಬಂದಿಯನ್ನು ಕೆಲಸದಿಂದ ಅಮಾನತು (Viral News) ಮಾಡಲಾಗಿದೆ.

ಇದನ್ನೂ ಓದಿ: Puneeth Rajkumar: ಅಪ್ಪು ಸಮಾಧಿ ದರ್ಶನಕ್ಕೆ ಬಂದ 80ರ ವೃದ್ಧ, 19 ದಿನಗಳ ನವಜಾತ ಶಿಶು ಜತೆ ಬಂದ ತಾಯಿ!
ಗಿರಿದಿಹ್‌ ಜಿಲ್ಲೆಯ ಕೊಸೊಗೊಂಡೋಡಿಗಿನ್ ಗ್ರಾಮದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಗ್ರಾಮದಲ್ಲಿ ಭೂಷಣ್‌ ಪಾಂಡೆ ಹೆಸರಿನ ವ್ಯಕ್ತಿ ತನ್ನ ಕುಟುಂಬದೊಂದಿಗೆ ವಾಸವಿದ್ದಾನೆ. ಆತನ ವಿರುದ್ಧ ಯಾವುದೋ ಪ್ರಕರಣ ಬಾಕಿಯಿದ್ದು, ಗುರುವಾರದಂದು ಆತನನ್ನು ಹುಡುಕಿಕೊಂಡು ಬಂದ ಪೊಲೀಸರು ಶಿಶುವನ್ನು ಕೊಂದಿರುವುದಾಗಿ ಕುಟುಂಬಸ್ಥರು ದೂರಿದ್ದಾರೆ.

ಈ ಬಗ್ಗೆ ಮಾತನಾಡಿರುವ ಭೂಷಣ್‌ ಪಾಂಡೆ, “ಮುಂಜಾನೆ 3 ಗಂಟೆ ಸಮಯಕ್ಕೆ ಪೊಲೀಸರು ಮನೆ ಬಾಗಿಲಿಗೆ ಬಂದು ಬಾಗಿಲು ಬಡಿಯಲಾರಂಭಿಸಿದರು. ನನ್ನ ವಿರುದ್ಧ ಕೇಸ್‌ ಒಂದು ಬಾಕಿ ಇದ್ದು, ನಾನು ಈ ಹಿಂದೆ ಜೈಲುವಾಸವನ್ನೂ ಅನುಭವಿಸಿದ್ದೆ. ಪೊಲೀಸರು ಬಂದಿದ್ದು ನೋಡಿ ನನಗೆ ಭಯವಾಯಿತು. ನನಗೆ ಏಳು ಮಕ್ಕಳಿದ್ದಾರೆ. ಅದರಲ್ಲೂ ಕೊನೆಯ ಮಗು ಐದು ವರ್ಷದ್ದು. ನಾನು ಜೈಲಿಗೆ ಹೋಗಿಬಿಟ್ಟರೆ ನನ್ನ ಕುಟುಂಬ ಹಸಿವಿನಿಂದ ಬಳಲಬೇಕಾಗುತ್ತದೆ ಎಂದು ನಾನು ಭಯದಿಂದ ಓಡಿ ಹೋದೆ. ಒಂದು ಗಂಟೆ ಬಿಟ್ಟು ಮನೆಯಿಂದ ಕರೆ ಮಾಡಿ, ನನ್ನ ಮೊಮ್ಮಗು ಸಾವನ್ನಪ್ಪಿರುವುದಾಗಿ ಹೇಳಿದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: Child Kidnapping case: ನರ್ಸ್‌ ರೂಪದಲ್ಲಿ ಬಂದು ಶಿಶು ಕದ್ದವಳು ಠಾಣೆಯಲ್ಲಿ ಪ್ರತ್ಯಕ್ಷ; ಮಕ್ಕಳಾಗದಿರುವುದೇ ಕಿಡ್ನ್ಯಾಪ್‌ಗೆ ಕಾರಣ

ಭೂಷಣ್‌ ಅವರ ಸೊಸೆ ನೇಹಾ ದೇವಿ ಅವರು ವಾರದ ಹಿಂದೆ ಮಗುವಿಗೆ ಜನ್ಮ ನೀಡಿದ್ದು, ಆ ಮಗು ಈಗ ಸಾವನ್ನಪ್ಪಿದೆ. ಈ ಬಗ್ಗೆ ನೇಹಾ ಕೂಡ ಮಾತನಾಡಿದ್ದು, “ಪೊಲೀಸರು ಬಂದಾಗ ನಾನು ಮತ್ತು ನನ್ನ ಗಂಡ ಮಂಚದ ಮೇಲೆ ಮಲಗಿದ್ದೆವು. ನನ್ನ ಅತ್ತೆ ಮಾವ ನೆಲದ ಮೇಲೆ ಮಲಗಿದ್ದರು. ಪೊಲೀಸರು ಬಂದಿದ್ದನ್ನು ನೋಡಿ ನಾವು ಹೆದರಿ ಮನೆಯಿಂದ ಹೊರಗೆ ಓಡಿದ್ದೆವು. ಪೊಲೀಸರು ನಮಗೆ ಬೈಯುತ್ತ ನಮ್ಮ ಮಾವನಿಗೆ ಹುಡುಕುತ್ತಿದ್ದರು. ಅದರಲ್ಲಿ ಒಬ್ಬ ಪೊಲೀಸ್‌ ಮಂಚದ ಮೇಲೆ ಹತ್ತಿ ನಮ್ಮ ಮಾವ ಎಲ್ಲಾದರೂ ಅಡಗಿದ್ದಾರೆಯೇ ಎಂದು ಹುಡುಕುತ್ತಿದ್ದರು. ಪೊಲೀಸರು ಮನೆಯಿಂದ ಹೋದ ಮೇಲೆ ಮಗುವಿನ ಬಳಿ ಬಂದು ನೋಡಿದರೆ ಮಗುವಿನ ದೇಹ ತಣ್ಣಗಾಗಿತ್ತು. ಮಗುವಿನ ಕುತ್ತಿಗೆಯ ಬಳಿ ಕೆಂಪಾಗಿ ಬೂಟಿನ ಅಚ್ಚಿತ್ತು” ಎಂದು ಹೇಳಿದ್ದಾರೆ.

ಈ ಬಗ್ಗೆ ಭೂಷಣ್‌ ಪಾಂಡೆ ಕುಟುಂಬ ಪೊಲೀಸರಲ್ಲಿ ದೂರು ನೀಡಿದೆ. ತನಿಖೆ ನಡೆಸಿರುವ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದು, ಆರು ಅಧಿಕಾರಿಗಳನ್ನು ಅಮಾನತು ಮಾಡಿದೆ. ಈ ಬಗ್ಗೆ ಸೂಕ್ತವಾಗಿ ತನಿಖೆ ನಡೆಸುವುದಕ್ಕೆ ಮುಖ್ಯಮಂತ್ರಿ ಹೇಮಂತ್‌ ಸೋರೆನ್‌ ಅವರು ಪೊಲೀಸರಿಗೆ ಸೂಚಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Anant- Radhika  wedding: 1,500 ಕೋಟಿ ರೂ. ದಾಟಲಿದೆ ಅಂಬಾನಿ ಮಗನ ಮದುವೆ ಖರ್ಚು!

Anant- Radhika  wedding: ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಕಾರ್ಯಕ್ರಮಗಳು ಇತ್ತೀಚೆಗೆ ಅದ್ದೂರಿಯಾಗಿ ನಡೆದಿದೆ. ಇದಕ್ಕೆ ಕೋಟ್ಯಂತರ ರೂ. ಖರ್ಚು ಮಾಡಿರುವ ಅಂಬಾನಿ ಮಗನ ಮದುವೆ ಕಾರ್ಯಕ್ರಮವನ್ನು ಎಲ್ಲಿ , ಹೇಗೆ, ಎಷ್ಟು ಬಜೆಟ್ ನಲ್ಲಿ ನಡೆಸಲಿದ್ದಾರೆ ಗೊತ್ತೇ? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

Anant-Radhika wedding
Koo

ಮುಂಬಯಿ: ಉದ್ಯಮಿ ಮುಕೇಶ್ ಅಂಬಾನಿ (Mukesh Ambani) ಮತ್ತು ನೀತಾ ಅಂಬಾನಿ (Nita Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ (Anant- Radhika  wedding) ಪೂರ್ವ ಕಾರ್ಯಕ್ರಮಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ (social media) ಹೆಚ್ಚು ಸದ್ದು ಮಾಡಿತ್ತು. ಈ ವರ್ಷ ಜುಲೈನಲ್ಲಿ ಇವರ ವಿವಾಹ ಲಂಡನ್‌ನಲ್ಲಿರುವ (London) ಅಂಬಾನಿ ಕುಟುಂಬದ ಸ್ಟೋಕ್ ಪಾರ್ಕ್ ಎಸ್ಟೇಟ್‌ನಲ್ಲಿ ನಡೆಯಲಿದೆ.

ಮಾರ್ಚ್ ತಿಂಗಳ 1ರಿಂದ 3ರವರೆಗೆ ಗುಜರಾತ್‌ನ (gujart) ಜಾಮ್‌ನಗರದಲ್ಲಿ (jamnagar) ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ತಮ್ಮ ವಿವಾಹಪೂರ್ವ ಸಮಾರಂಭವನ್ನು ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಿದ್ದರು. ಇದರಲ್ಲಿ ಜಾಗತಿಕ ಟೆಕ್ ಸಿಇಒಗಳು, ಬಾಲಿವುಡ್ ತಾರೆಗಳು, ಪಾಪ್ ಐಕಾನ್‌ಗಳು ಮತ್ತು ರಾಜಕಾರಣಿಗಳು ಭಾಗವಹಿಸಿದ್ದರು.

ಇಶಾ ಅಂಬಾನಿ, ಆಕಾಶ್ ಅಂಬಾನಿ, ಶ್ಲೋಕಾ ಮೆಹ್ತಾ, ಆನಂದ್ ಪಿರಾಮಲ್ ಮತ್ತು ಕೋಕಿಲಾಬೆನ್ ಅಂಬಾನಿ ಸೇರಿದಂತೆ ಇಡೀ ಅಂಬಾನಿ ವಂಶಸ್ಥರು ಮದುವೆಯ ಪೂರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Sachin Birthday: ಸಚಿನ್ ತೆಂಡೂಲ್ಕರ್ ಬಳಿ ಇರುವ ಅತ್ಯಂತ ದುಬಾರಿ ಆಸ್ತಿಗಳಿವು!


ಒಟ್ಟು ಖರ್ಚು

ವಿವಾಹ ಪೂರ್ವ ಕಾರ್ಯಕ್ರಮಗಳಲ್ಲಿ ಅತಿಥಿಗಳನ್ನು ಪಾಪ್ ಐಕಾನ್ ರಿಹಾನ್ನಾ ಅವರು ಸತ್ಕರಿಸಿದರು. ಎರಡು ಗಂಟೆಗಳ ಕಾರ್ಯಕ್ರಮಕ್ಕಾಗಿ ಅವರು 6 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 52 ಕೋಟಿ ರೂ. ಗೂ ಹೆಚ್ಚು ಸಂಭಾವನೆ ಪಡೆದದ್ದು ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು.

ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ 3 ದಿನಗಳ ಸಮಾರಂಭಕ್ಕೆ ಸುಮಾರು 1,260 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅಡುಗೆ ಗುತ್ತಿಗೆಯವರಿಗೆ 200 ಕೋಟಿ ರೂ. ನೀಡಲಾಗಿದೆ ಎನ್ನಲಾಗಿದೆ.

ಫೋರ್ಬ್ಸ್ ಪ್ರಕಾರ 116 ಶತಕೋಟಿ ಡಾಲರ್ ಅಂದರೆ ಸುಮಾರು 9 ಲಕ್ಷ ಕೋಟಿ ರೂ. ಗೂ ಹೆಚ್ಚು ನಿವ್ವಳ ಮೌಲ್ಯದೊಂದಿಗೆ ಮುಖೇಶ್ ಅಂಬಾನಿ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರು. ಅಂಬಾನಿ ಕುಟುಂಬವು ತಮ್ಮ ಕಿರಿಯ ಮಗನ ಮದುವೆಯ ಪೂರ್ವ ಸಂಭ್ರಮಕ್ಕಾಗಿ 1,200 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದಾರೆ. ಮಗನ ಮದುವೆಯನ್ನು ಅದ್ದೂರಿಯಾಗಿ ನೆರವೇರಿಸಲು ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಧಾರಾಳವಾಗಿ ಹಣ ಖರ್ಚು ಮಾಡಿದ್ದಾರೆ.


ಮದುವೆ ಖರ್ಚು ಎಷ್ಟಿರಬಹುದು?

ವರದಿಗಳ ಪ್ರಕಾರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಗೆ 1200- 1500 ಕೋಟಿ ರೂಪಾಯಿ ವೆಚ್ಚವಾಗಲಿದೆ. ದಂಪತಿಗಳು ಲಂಡನ್‌ನಲ್ಲಿ ವಿವಾಹವಾಗಲು ಸಿದ್ಧರಾಗಿದ್ದಾರೆ ಮತ್ತು ಅಬುಧಾಬಿಯಲ್ಲಿ ಸಂಗೀತ/ ಕಾಕ್‌ಟೈಲ್ ಕಾರ್ಯಕ್ರಮವನ್ನು ಸಹ ನಡೆಸಲು ಸಿದ್ಧರಾಗಿದ್ದಾರೆ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಯ ಪೂರ್ವದಲ್ಲಿ ಹೂವಿನ ಅಲಂಕಾರವನ್ನು ಕಿಮ್ ಕಾರ್ಡಶಿಯಾನ್ ಮತ್ತು ಅವರ ಕುಟುಂಬ ನಡೆಸಿತ್ತು. ಕಾರ್ಯಕ್ರಮದ ಕೆಲಸಗಳನ್ನು ಹೆಸರುವಾಸಿಯಾದ ಜೆಫ್ ಲೀಥಮ್ ಅವರು ಮಾಡಿದ್ದಾರೆ. ಅವರು ಅಂಬಾನಿ ಮದುವೆಯಲ್ಲೂ ಅಲಂಕಾರವನ್ನು ಇವರಿಗೆ ನೀಡುವ ಸಾಧ್ಯತೆ ಇದೆ.


ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ 2023ರ ಜನವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಈ ವರ್ಷ ಜುಲೈನಲ್ಲಿ ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ. ಇದು ಈ ವರ್ಷದ ಅತಿ ದೊಡ್ಡ, ಅತ್ಯಂತ ಐಷಾರಾಮಿ ಮತ್ತು ಅತಿರಂಜಿತ ವಿವಾಹಗಳಲ್ಲಿ ಒಂದಾಗಿದೆ ಎನ್ನಲಾಗುತ್ತಿದೆ.

Continue Reading

ದೇಶ

Rahul Gandhi: ಅಮೇಥಿಯಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆ ಖಚಿತ; ಸ್ಮೃತಿ ಇರಾನಿಗೆ ಕೈ ನಾಯಕ ಸವಾಲು!

Rahul Gandhi: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಉತ್ತರ ಪ್ರದೇಶದ ಅಮೇಥಿ ಲೋಕಸಭೆ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಎಂಬುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಮಾಹಿತಿ ನೀಡಿದ್ದಾರೆ. ಇದಕ್ಕೂ ಮೊದಲು ರಾಹುಲ್‌ ಗಾಂಧಿ ಅವರು ವಯನಾಡು ಲೋಕಸಭೆ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸಲಿದ್ದಾರೆ. ಅಮೇಥಿಯಲ್ಲಿ ಅವರು ಸ್ಪರ್ಧಿಸುವುದಿಲ್ಲ ಎಂಬ ಮಾತುಗಳು ಕೇಳಿಬಂದಿದ್ದವು.

VISTARANEWS.COM


on

Rahul Gandhi
Koo

ಲಖನೌ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕೇರಳದ ವಯನಾಡು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ರಾಹುಲ್‌ ಗಾಂಧಿ (Rahul Gandhi) ಅವರು ಉತ್ತರ ಪ್ರದೇಶದ ಅಮೇಥಿ (Amethi) ಕ್ಷೇತ್ರದಲ್ಲೂ ಸ್ಪರ್ಧಿಸುವುದು ಖಚಿತವಾಗಿದೆ. ರಾಹುಲ್‌ ಗಾಂಧಿ ಅವರು ಅಮೇಥಿ ಕ್ಷೇತ್ರದಿಂದಲೂ ಸ್ಪರ್ಧಿಸುವ ಕುರಿತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ (Akhilesh Yadav) ಅವರು ಸ್ಪಷ್ಟಪಡಿಸಿದ್ದಾರೆ. ಸಮಾಜವಾದಿ ಪಕ್ಷವು ಇಂಡಿಯಾ ಒಕ್ಕೂಟದ ಭಾಗವಾಗಿರುವ ಕಾರಣ ಅಖಿಲೇಶ್‌ ಯಾದವ್‌ ಅವರ ಹೇಳಿಕೆಯು ಪ್ರಾಮುಖ್ಯತೆ ಪಡೆದಿದೆ.

“ನೀವು ಕನೌಜ್‌ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೀರಿ. ನಿಮ್ಮ ಗೆಳೆಯ ರಾಹುಲ್‌ ಗಾಂಧಿ ಅವರು ಅಮೇಥಿಯಿಂದ ಸ್ಪರ್ಧಿಸುತ್ತಿದ್ದಾರೆ” ಎಂದು ಸುದ್ದಿಗಾರರು ಕೇಳಿದ್ದಕ್ಕೆ ಅಖಿಲೇಶ್‌ ಯಾದವ್‌ ಪ್ರತಿಕ್ರಿಯಿಸಿದರು. “ಹೌದು, ಖಂಡಿತವಾಗಿಯೂ ಎಲ್ಲರೂ ಬರುತ್ತೇವೆ. ಉತ್ತರ ಪ್ರದೇಶದಲ್ಲಿ ಎಲ್ಲರೂ ಒಗ್ಗೂಡಿ ಹೋರಾಡುತ್ತೇವೆ. ಚುನಾವಣಾ ಬಾಂಡ್‌ ಕೇಸ್‌ ಕುರಿತು ಸುಪ್ರೀಂ ಕೋರ್ಟ್‌ ತೀರ್ಪು ಬರುತ್ತಲೇ ಬಿಜೆಪಿಯವರ ಬಣ್ಣ ಬಯಲಾಗಿದೆ” ಎಂದು ಅಖಿಲೇಶ್‌ ಯಾದವ್‌ ಹೇಳಿದರು. ಆ ಮೂಲಕ ಅಮೇಥಿಯಿಂದಲೂ ರಾಹುಲ್‌ ಗಾಂಧಿ ಸ್ಪರ್ಧಿಸುತ್ತಿದ್ದಾರೆ ಎಂಬುದರ ಸುಳಿವು ನೀಡಿದರು.

ರಾಹುಲ್‌ ಗಾಂಧಿ ಅವರು ಕೇರಳದ ವಯನಾಡು ಲೋಕಸಭೆ ಕ್ಷೇತ್ರದಿಂದ ಎರಡನೇ ಬಾರಿ ಸ್ಪರ್ಧಿಸುತ್ತಿದ್ದು, ಏಪ್ರಿಲ್‌ 26ರಂದು ಮತದಾನ ನಡೆಯಲಿದೆ. ಇನ್ನು ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿದ್ದ ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಆಯ್ಕೆಯಾಗುವ ಮೂಲಕ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಈ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅಥವಾ ಅವರ ಪತಿ ರಾಬರ್ಟ್‌ ವಾದ್ರಾ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಹುಲ್‌ ಗಾಂಧಿ ಅವರು ಅಮೇಥಿಯಿಂದ 2004ರಿಂದಲೂ ಸ್ಪರ್ಧಿಸಿ, ಗೆಲುವು ಸಾಧಿಸುತ್ತಿದ್ದರು. ಆದರೆ, 2019ರಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಅವರು ಸೋಲನುಭವಿಸಿದ ಕಾರಣ ವಯನಾಡು ಅವರ ಲೋಕಸಭೆ ಕ್ಷೇತ್ರವಾಗಿದೆ. ಈ ಬಾರಿಯೂ ರಾಹುಲ್‌ ಗಾಂಧಿ ಅವರು ಅಮೇಥಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಯ್‌ಬರೇಲಿಯಲ್ಲಿ ಸೋನಿಯಾ ಗಾಂಧಿ ಅವರು ಕೂಡ 2004ರಿಂದ ಸ್ಪರ್ಧಿಸುತ್ತಿದ್ದರು. ಈಗ ಮತ್ತೆ ರಾಹುಲ್‌ ಗಾಂಧಿ ಹಾಗೂ ಸ್ಮೃತಿ ಇರಾನಿ ಅವರ ಮಧ್ಯೆ ವಯನಾಡಿನಲ್ಲಿ ತೀವ್ರ ಸ್ಪರ್ಧೆ ಏರ್ಪಟ್ಟಿದೆ.

ರಾಮಮಂದಿರಕ್ಕೆ ಭೇಟಿ?

ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶ್ರೀರಾಮನ ವಿರೋಧಿ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ರಾಮಮಂದಿರಕ್ಕೆ ಭೇಟಿ ನೀಡುವ ಮೂಲಕ ಕಾಂಗ್ರೆಸ್‌ ರಾಮಮಂದಿರ ವಿರೋಧಿ ಅಲ್ಲ ಎಂಬ ಸಂದೇಶ ರವಾನಿಸುವ ಉದ್ದೇಶವಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

Continue Reading

ದೇಶ

ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

ದ್ವೇಷ ಭಾಷಣ, ಧರ್ಮ, ಜಾತಿ, ಸಮುದಾಯಗಳನ್ನು ಪ್ರಸ್ತಾಪಿಸಿ ಮತಯಾಚನೆ, ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಹಾಗೂ ರಾಹುಲ್‌ ಗಾಂಧಿ ಅವರಿಗೆ ಚುನಾವಣಾ ಆಯೋಗವು ನೋಟಿಸ್‌ ನೀಡಿದೆ. ಏಪ್ರಿಲ್‌ 29ರ ಬೆಳಗ್ಗೆ 11 ಗಂಟೆಯೊಳಗೆ ಇಬ್ಬರೂ ನಾಯಕರು ಪ್ರತಿಕ್ರಿಯೆ ನೀಡಬೇಕು ಎಂಬುದಾಗಿ ಸೂಚನೆ ನೀಡಿದೆ.

VISTARANEWS.COM


on

Election Commission
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ಮಾದರಿ ನೀತಿ ಸಂಹಿತೆ ಉಲ್ಲಂಘನೆ (MCC Violations) ಮಾಡಿದ ಕುರಿತಂತೆ ಚುನಾವಣೆ ಆಯೋಗವು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರ ಪ್ರತಿಕ್ರಿಯೆ ಕೇಳಿದೆ. ಏಪ್ರಿಲ್‌ 29ರ ಬೆಳಗ್ಗೆ 11 ಗಂಟೆಯೊಳಗೆ ಇಬ್ಬರೂ ನಾಯಕರು ಪ್ರತಿಕ್ರಿಯೆ ನೀಡಬೇಕು ಎಂಬುದಾಗಿ ಚುನಾವಣೆ ಆಯೋಗವು (Election Commission) ಸೂಚನೆ ನೀಡಿದೆ.

ನರೇಂದ್ರ ಮೋದಿ ಹಾಗೂ ರಾಹುಲ್‌ ಗಾಂಧಿ ಅವರು ಚುನಾವಣೆ ಪ್ರಚಾರದ ವೇಳೆ ಜಾತಿ, ಧರ್ಮ, ಸಮುದಾಯ ಹಾಗೂ ಭಾಷೆ ಆಧಾರದ ಮೇಲೆ ಮತಗಳನ್ನು ಕೇಳಿದ್ದಾರೆ. ದ್ವೇಷ ಹರಡುವ ರೀತಿಯಲ್ಲಿ ಇವರು ಮಾತನಾಡಿದ್ದಾರೆ ಎಂಬ ಕುರಿತು ಆರೋಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಚುನಾವಣೆ ಆಯೋಗವು ಇಬ್ಬರು ನಾಯಕರ ಪ್ರತಿಕ್ರಿಯೆ ಕೇಳಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಆಸ್ತಿ ಹಂಚಿಕೆ ವಿಷಯ ಪ್ರಸ್ತಾಪಿಸಿದ್ದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮ ಮಂಗಳಸೂತ್ರವನ್ನು ಮುಸ್ಲಿಮರಿಗೆ ನೀಡುತ್ತದೆ ಎಂದಿದ್ದರು. “ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ನಿಮ್ಮ ಆದಾಯ ಮತ್ತು ಆಸ್ತಿಯ ಮೇಲೆ ಕಣ್ಣಿಟ್ಟಿವೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಇದನ್ನು ಉಲ್ಲೇಖಿಸಿದೆ. ಮಹಿಳೆಯರು ಚಿನ್ನವನ್ನು ಆಭರಣಗಳ ರೂಪದಲ್ಲಿ ಧರಿಸಲು ಮಾತ್ರವಲ್ಲ, ಅದನ್ನು ರಸಕ್ಷಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಈಗ ಅವರ ಕಣ್ಣು ಮಹಿಳೆಯರ ಮಂಗಳಸೂತ್ರದ ಮೇಲೆ ನೆಟ್ಟಿದೆ. ತಾಯಿ ಮತ್ತು ಸಹೋದರಿಯರ ಚಿನ್ನವನ್ನು ದೋಚುವುದು ಇವರ ಉದ್ದೇಶ. ಹೀಗಾಗಿ ಅವರು ಅಧಿಕಾರಕ್ಕೆ ಬಂದರೆ ನಿಮ್ಮ ಮಂಗಳಸೂತ್ರವೂ ಸುರಕ್ಷಿತವಲ್ಲʼʼ ಎಂದು ಮೋದಿ ಹೇಳಿದ್ದರು.

ನರೇಂದ್ರ ಮೋದಿ ಅವರ ಹೇಳಿಕೆಗೆ ದೇಶಾದ್ಯಂತ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ನರೇಂದ್ರ ಮೋದಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಪ್ರತಿಪಕ್ಷಗಳ ನಾಯಕರು ಆಗ್ರಹಿಸಿದ್ದರು. ಇದಕ್ಕೂ ಮೊದಲು ಮೋದಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಬೇಕು ಚುನಾವಣೆ ಆಯೋಗವು ನಿರಾಕರಿಸಿತ್ತು. ರಾಹುಲ್‌ ಗಾಂಧಿ ಅವರ ಕೆಲ ಹೇಳಿಕೆಗಳ ಕುರಿತು ಕೂಡ ಅಸಮಾಧಾನ ವ್ಯಕ್ತವಾಗಿತ್ತು. ಹಾಗಾಗಿ, ಚುನಾವಣಾ ಆಯೋಗವು ಇಬ್ಬರೂ ನಾಯಕರಿಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

ರಾಜಕೀಯ ಭಾಷಣ ತೆರವಿಗೆ ಆಯೋಗ ಆದೇಶ

ರಾಜಕೀಯ ನಾಯಕರು ನೀಡುವ ವಿವಾದಾತ್ಮಕ ಹೇಳಿಕೆಗಳ ಭಾಷಣಗಳ ವಿಡಿಯೊ, ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಇದಕ್ಕೂ ಮೊದಲು ಚುನಾವಣಾ ಆಯೋಗವು ಎಕ್ಸ್‌ ಸಾಮಾಜಿಕ ಜಾಲತಾಣಕ್ಕೆ ಸೂಚಿಸಿದೆ. ಈ ಮಧ್ಯೆ ಚುನಾವಣಾ ಆಯೋಗ ಆದೇಶದಂತೆ ಸಾಮಾಜಿಕ ಜಾಲತಾಣ ಎಕ್ಸ್‌ ರಾಜಕಾರಣಿಗಳು, ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಭಾಷಣವನ್ನು ಒಳಗೊಂಡಿರುವ ಕೆಲವು ಪೋಸ್ಟ್‌ಗಳನ್ನು ತೆಗೆದು ಹಾಕಿದೆ.

ಇದನ್ನೂ ಓದಿ: Lok Sabha Election 2024: ಹಿಂದೂ ಧರ್ಮದ ಉಳಿವಿಗಾಗಿ ಮತ್ತೆ ಮೋದಿ ಬೆಂಬಲಿಸಿ: ಪ್ರಲ್ಹಾದ್‌ ಜೋಶಿ

Continue Reading

ವೈರಲ್ ನ್ಯೂಸ್

Arunachal Pradesh landslide: ಅರುಣಾಚಲದಲ್ಲಿ ಭೂಕುಸಿತ, ಚೀನಾ ಗಡಿ ಪ್ರದೇಶಕ್ಕೆ ಸಂಪರ್ಕ ಬಂದ್‌

Arunachal Pradesh landslide: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಿನ್ನೆ ರಾಷ್ಟ್ರೀಯ ಹೆದ್ದಾರಿ-313ರಲ್ಲಿ ಹುನ್ಲಿ ಮತ್ತು ಅನಿನಿ ನಡುವೆ ಭಾರೀ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತ ಹಾಗೂ ಕತ್ತರಿಸಿಹೋದ ರಸ್ತೆಯ ಮೂಲಕ ನೀರಿನ ಪ್ರವಾಹ ಹರಿಯುತ್ತಿರುವ ಹಲವು ವೀಡಿಯೊಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ (viral video) ಆಗಿವೆ.

VISTARANEWS.COM


on

arunachal pradesh landslide
Koo

ಗುವಾಹಟಿ: ಮಳೆಯಿಂದ (Rain) ಉಂಟಾದ ಭಾರೀ ಭೂಕುಸಿತದಿಂದ (Landslide) ಅರುಣಾಚಲ ಪ್ರದೇಶದ ಹೆದ್ದಾರಿಯ ಪ್ರಮುಖ ಭಾಗ ಕೊಚ್ಚಿ (Arunachal Pradesh landslide) ಹೋಗಿದ್ದು, ಚೀನಾ ಗಡಿಗೆ (China Border) ಹೊಂದಿಕೊಂಡಿರುವ ಜಿಲ್ಲೆ ದಿಬಾಂಗ್ ಕಣಿವೆಯೊಂದಿಗೆ ರಸ್ತೆ ಸಂಪರ್ಕ ಕತ್ತರಿಸಿಹೋಗಿದೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಿನ್ನೆ ರಾಷ್ಟ್ರೀಯ ಹೆದ್ದಾರಿ-313ರಲ್ಲಿ ಹುನ್ಲಿ ಮತ್ತು ಅನಿನಿ ನಡುವೆ ಭಾರೀ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತ ಹಾಗೂ ಕತ್ತರಿಸಿಹೋದ ರಸ್ತೆಯ ಮೂಲಕ ನೀರಿನ ಪ್ರವಾಹ ಹರಿಯುತ್ತಿರುವ ಹಲವು ವೀಡಿಯೊಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ (viral video) ಆಗಿವೆ. ಹೆದ್ದಾರಿಯ ಒಂದು ಭಾಗ ಕಾಣೆಯಾಗಿರುವುದನ್ನು ಇವು ತೋರಿಸಿವೆ.

ರಸ್ತೆ ತುಂಡಾಗಿದ್ದು, ವಾಹನಗಳು ಇನ್ನೊಂದು ಬದಿಗೆ ದಾಟಲು ಅಸಾಧ್ಯವಾಗಿದೆ. ಈ ಕಷ್ಟಕರವಾದ ಭೂಪ್ರದೇಶದಲ್ಲಿ ಹೆದ್ದಾರಿಯನ್ನು ಜೀವನಾಡಿ ಎಂದು ಪರಿಗಣಿಸುವ ಸ್ಥಳೀಯರು ಮತ್ತು ಭದ್ರತಾ ಪಡೆಗಳಿಗೆ ಇದರಿಂದ ಭಾರೀ ತೊಂದರೆಯಾಗಿದೆ. ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (NHIDCL) ಈ ಹೆದ್ದಾರಿಯ ಹಾನಿಗೊಳಗಾದ ಭಾಗವನ್ನು ಸರಿಪಡಿಸಲು ಮುಂದಾಗಿದೆ.

ಪ್ರಸ್ತುತ, ಕತ್ತರಿಸಿಹೋಗಿರುವ ಪ್ರದೇಶಕ್ಕೆ ಆಹಾರ ಮತ್ತು ಇತರ ಅಗತ್ಯ ವಸ್ತುಗಳ ಕೊರತೆ ಆಗಿಲ್ಲ. “ಹುನ್ಲಿ ಮತ್ತು ಅನಿನಿ ನಡುವಿನ ಹೆದ್ದಾರಿಗೆ ವ್ಯಾಪಕವಾದ ಹಾನಿಯಿಂದಾಗಿ ಪ್ರಯಾಣಿಕರಿಗೆ ಉಂಟಾಗುತ್ತಿರುವ ಅನನುಕೂಲತೆಯನ್ನು ನಿವಾರಿಸಲು ಯತ್ನಿಸಲಾಗುತ್ತಿದೆ. ಈ ರಸ್ತೆಯು ದಿಬಾಂಗ್ ಕಣಿವೆಯನ್ನು ದೇಶದ ಇತರ ಭಾಗಗಳಿಗೆ ಸಂಪರ್ಕಿಸುತ್ತದೆ. ಹೀಗಾಗಿ ಶೀಘ್ರವಾಗಿ ಸಂಪರ್ಕವನ್ನು ಮರುಸ್ಥಾಪಿಸಲು ಸೂಚನೆಗಳನ್ನು ನೀಡಲಾಗಿದೆ” ಎಂದು ಅರುಣಾಚಲ ಪ್ರದೇಶದ ಸಚಿವ ಪೆಮಾ ಖಂಡು ಆನ್‌ಲೈನ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ದಿಬಾಂಗ್ ವ್ಯಾಲಿ ಆಡಳಿತದ ಪ್ರಕಾರ ಹೆದ್ದಾರಿ ಮರುಸ್ಥಾಪನೆಗೆ ಕನಿಷ್ಠ ಮೂರು ದಿನಗಳು ಬೇಕಾಗಬಹುದು. ಭೂಕುಸಿತ ಉಂಟಾಗುವ ಪ್ರದೇಶಗಳಲ್ಲಿ ಮತ್ತು ಜಲಮೂಲಗಳಿಂದ ಹಾಗೂ ಮೀನುಗಾರಿಕೆಯಂತಹ ಚಟುವಟಿಕೆಗಳಿಂದ ದೂರವಿರಲು ಆಡಳಿತವು ಜನರಿಗೆ ಮನವಿ ಮಾಡಿದೆ. ರಾತ್ರಿಯಲ್ಲಿ ಪ್ರಯಾಣಿಸುವುದರ ವಿರುದ್ಧ ಮತ್ತು ಮಳೆಗಾಲದಲ್ಲಿ ಮಣ್ಣನ್ನು ಕತ್ತರಿಸದಂತೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Viral video: ಸೇನಾ ಹೆಲಿಕಾಪ್ಟರ್‌ಗಳ ಭಯಾನಕ ಡಿಕ್ಕಿ; 10 ಸಾವು

Continue Reading
Advertisement
Anant-Radhika wedding
ವಾಣಿಜ್ಯ5 mins ago

Anant- Radhika  wedding: 1,500 ಕೋಟಿ ರೂ. ದಾಟಲಿದೆ ಅಂಬಾನಿ ಮಗನ ಮದುವೆ ಖರ್ಚು!

Ballari Lok Sabha constituency Congress candidate e Tukaram election campaign at apmc market
ಬಳ್ಳಾರಿ11 mins ago

Lok Sabha Election 2024: ತಾಯಿ ನಾನು ನಿಮ್ಮ ಮಗನಂತೆ, ಮತ ನೀಡಿ ಗೆಲ್ಲಿಸಿ ಎಂದ ಈ. ತುಕಾರಾಂ

Rahul Gandhi
ದೇಶ27 mins ago

Rahul Gandhi: ಅಮೇಥಿಯಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆ ಖಚಿತ; ಸ್ಮೃತಿ ಇರಾನಿಗೆ ಕೈ ನಾಯಕ ಸವಾಲು!

DC vs GT
ಕ್ರೀಡೆ36 mins ago

DC vs GT: ಕೊಹ್ಲಿಯಂತೆ ಅದ್ಭುತ ಫೀಲ್ಡಿಂಗ್​ ನಡೆಸಿ ಡೆಲ್ಲಿಗೆ ಗೆಲುವು ತಂದ ಟ್ರಿಸ್ಟಾನ್ ಸ್ಟಬ್ಸ್

Heeramandi Premiere Farida Jalal rare public appearance
ಬಾಲಿವುಡ್36 mins ago

Heeramandi Premiere: ʻಹೀರಾಮಂಡಿʼ ಪ್ರೀಮಿಯರ್‌ನಲ್ಲಿ ಅಪರೂಪವಾಗಿ ಕಂಡ ʻಕಭಿ ಖುಷಿ ಕಭಿ ಗಮ್ʼ ಸಿನಿಮಾ ನಟಿ!

Murder case In davanagere
ದಾವಣಗೆರೆ36 mins ago

Murder Case : ಮನೆ ಹಾಳು ಮಾಡಿದ ಕುಡಿತ; ತಾಯಿ ಸಾವಿಗೆ, ತಂದೆಯ ಕೊಂದ ಮಗ!

Election Commission
ದೇಶ53 mins ago

ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

arunachal pradesh landslide
ವೈರಲ್ ನ್ಯೂಸ್1 hour ago

Arunachal Pradesh landslide: ಅರುಣಾಚಲದಲ್ಲಿ ಭೂಕುಸಿತ, ಚೀನಾ ಗಡಿ ಪ್ರದೇಶಕ್ಕೆ ಸಂಪರ್ಕ ಬಂದ್‌

Neha Murder case CID Officer
ಹುಬ್ಬಳ್ಳಿ1 hour ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Virender Sehwag
ಕ್ರೀಡೆ1 hour ago

Virender Sehwag: ಬಡ ದೇಶದ ಕ್ರಿಕೆಟ್​ ಲೀಗ್​ ಆಡಲ್ಲ ಎಂದ ವೀರೇಂದ್ರ ಸೆಹವಾಗ್; ಕಾರಣವೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder case CID Officer
ಹುಬ್ಬಳ್ಳಿ1 hour ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20243 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

ಟ್ರೆಂಡಿಂಗ್‌