Site icon Vistara News

Viral News: ಕಾಲಿಗೆ ಕಬ್ಬಿಣದ ಸರಪಳಿ.. ಕೈಯಲ್ಲಿ ಅಮೆರಿಕ ಪಾಸ್‌ಪೋರ್ಟ್‌..ದಟ್ಟ ಕಾಡಿನಲ್ಲಿ ಮಹಿಳೆ ಪತ್ತೆ-ವಿಡಿಯೋ ವೈರಲ್‌

Viral News

ಮುಂಬೈ: ಮರಕ್ಕೆ ಕಬ್ಬಿಣದ ಸರಪಳಿಯಲ್ಲಿ ಕಟ್ಟಿಹಾಕಿದ ಸ್ಥಿತಿಯಲ್ಲಿ ಮಹಿಳೆಯೊಬ್ಬಳು ಮಹಾರಾಷ್ಟ್ರದ ಸಿಂಧುದುರ್ಗ ದಟ್ಟ ಅರಣ್ಯದಲ್ಲಿ ಪತ್ತೆಯಾಗಿರುವ ಶಾಕಿಂಗ್‌ ಘಟನೆ ವರದಿಯಾಗಿದೆ. ಸುಮಾರು 50 ವರ್ಷದ ಮಹಿಳೆಯನ್ನು ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿಹಾಕಲಾಗಿದ್ದು, ಆಕೆಯ ಬಳಿ ಅಮೆರಿಕದ ಪಾಸ್‌ಪೋರ್ಟ್‌ನ ಜೆರಾಕ್ಸ್‌ ಮತ್ತು ತಮಿಳುನಾಡು ವಿಳಾಸವಿರುವ ಆಧಾರ್‌ ಕಾರ್ಡ್‌ ಪತ್ತೆಯಾಗಿದೆ(Viral News).

ಮುಂಬೈನಿಂದ ಸುಮಾರು 450 ಕಿಲೋಮೀಟರ್ ದೂರದಲ್ಲಿರುವ ಸೋನುರ್ಲಿ ಗ್ರಾಮದಲ್ಲಿ ಶನಿವಾರ ಸಂಜೆ ಕುರಿಗಾಹಿಯೊಬ್ಬರು ಆಕೆಯ ಅಳಲು ಕೇಳಿದ್ದು, ಸರಪಳಿಯಲ್ಲಿ ಸಿಲುಕಿರುವ ಮತ್ತು ಸಂಕಷ್ಟದಲ್ಲಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಆಕೆಯನ್ನು ರಕ್ಷಿಸಿ ನಂತರ ಸಿಂಧುದುರ್ಗದ ಓರೋಸ್‌ನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಕೆಯನ್ನು ಲಲಿತಾ ಕಯಿ ಎಂದು ಗುರುತಿಸಲಾಗಿದ್ದು, ಆಕೆಯ ಮಾನಸಿಕ ಮತ್ತು ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ, ಅವರಿಗೆ ಉನ್ನತ ಚಿಕಿತ್ಸೆಗಾಗಿ ಗೋವಾ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು.

ಸದ್ಯ ಆಕೆ ಅಪಾಯದಿಂದ ಪಾರಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಆಕೆ ಮನೋ ಖಾಯಿಲೆಯಿಂದ ಬಳಲುತ್ತಿದ್ದಾಳೆ. ಅದಕ್ಕೆ ಬೇಕಾದ ಸೂಕ್ತ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ. ನಾವು ಆಕೆಯ ತಮಿಳುನಾಡು ವಿಳಾಸ ಆಧಾರ್ ಕಾರ್ಡ್, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಪಾಸ್‌ಪೋರ್ಟ್‌ನ ಜೆರಾಕ್ಸ್‌ ಆಕೆಯ ಬಳಿ ಇತ್ತು. ಆಕೆಯ ವೀಸಾ ಅವಧಿ ಮುಗಿದಿದೆ.

ಇನ್ನು ಆಕೆ ಯಾವರ ದೇಶಕ್ಕೆ ಸೇರಿದವಳು ಎಂಬ ಬಗ್ಗೆ ನಾವು ಈ ಎಲ್ಲ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ. ನಮ್ಮ ಪೊಲೀಸರು ವಿದೇಶಿಯರ ಪ್ರಾದೇಶಿಕ ನೋಂದಣಿ ಕಛೇರಿಯೊಂದಿಗೆ ಸಂಪರ್ಕದಲ್ಲಿದೆ” ಎಂದು ಅವರು ಹೇಳಿದರು.
ಪೊಲೀಸರು ಪಡೆದ ಪ್ರಾಥಮಿಕ ಮಾಹಿತಿಯಂತೆ ಮಹಿಳೆ ಕಳೆದ 10 ವರ್ಷಗಳಿಂದ ಭಾರತದಲ್ಲಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸದ್ಯ ಮಹಿಳೆ ಯಾವುದೇ ರೀತಿಯ ಹೇಳಿಕೆ ನೀಡುವ ಪರಿಸ್ಥಿತಿಯಲ್ಲಿಲ್ಲ. ಆಕೆ ತೀರ ಕ್ಷೀಣಿಸಿದ್ದಾಳೆ. ಆಕೆಯನ್ನು ಎಷ್ಟು ದಿನಗಳಿಂದ ಅಲ್ಲಿ ಕಟ್ಟಿ ಹಾಕಲಾಗಿತ್ತು? ಯಾರು ಕಟ್ಟಿ ಹಾಕಿದ್ದಾರೆ ಎಂಬ ಬಗ್ಗೆ ತನಿಖೆ ಮುಂದುವರೆದಿದೆ. ಮೇಲ್ನೋಟಕ್ಕೆ ಆಕೆಯ ಪತಿಯೇ ಆಕೆಯನ್ನು ಕಟ್ಟಿ ಹಾಕಿ ಪರಾರಿಯಾಗಿರುವ ಸಾಧ್ಯತೆ ಇದೆ ಆಧಾರ್‌ ಕಾರ್ಡ್‌ನಲ್ಲಿರುವ ಆಕೆಯ ವಿಳಾಸ ಆಧರಿಸಿ ಸಂಬಂಧಿಕರನ್ನು ವಿಚಾರಣೆಗೊಳಪಡಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: Areca Nut Illegal Import: ಭಾರತದೊಳಗೆ 3 ತಿಂಗಳಲ್ಲಿ 3009 ಟನ್‌ ವಿದೇಶಿ ಅಡಿಕೆ ಅಕ್ರಮ ಆಮದು; ಬೆಳೆಗಾರರಿಗೆ ಕಾದಿದೆ ಆಪತ್ತು!

Exit mobile version