ಹೈದರಾಬಾದ್: ದಕ್ಷಿಣದ ಖ್ಯಾತ ನಟ ವಿಶಾಲ್ ರಾಜಕೀಯ ಪ್ರವೇಶಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ವಿಶಾಲ್‌ಗೂ ರಾಜಕೀಯಕ್ಕೂ ಹಿಂದಿನಿಂದ ನಂಟು ಇದೆ. 2017ರ ಚುನಾವಣೆಯಲ್ಲಿ ಅವರು ಕಣಕ್ಕಿಳಿಯಲು ನಾಮಪತ್ರ ಸಲ್ಲಿಸಿದ್ದರಾಧೃಊ ನಾಮಪತ್ರ ತಿರಸ್ಕೃತವಾಗಿತ್ತು. ಮತ್ತೆ, ಕಳೆದ ಕೆಲವು ದಿನಗಳಿಂದ, ವಿಶಾಲ್ ರಾಜಕೀಯ ಪ್ರವೇಶಿಸಲು ಯೋಜಿಸುತ್ತಿದ್ದಾರೆ ಮತ್ತು ಆಂಧ್ರಪ್ರದೇಶದಲ್ಲಿ ಮುಂದೆ ನಡೆಯುವ ಚುನಾವಣೆಯಲ್ಲಿ ಟಿಡಿಪಿ ನಾಯಕ, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿರುದ್ಧ ಸ್ಪರ್ಧಿಸುತ್ತಾರೆ ಎಂಬ ವದಂತಿಗಳು ಹರಡುತ್ತಿವೆ. ಆದರೆ ನಟ ವಿಶಾಲ್ ಮಾತ್ರ ಈ ಎಲ್ಲ ವದಂತಿಗಳನ್ನು ಅಲ್ಲಗಳೆದಿದ್ದಾರೆ.
“ನಾನು ಆಂಧ್ರಪ್ರದೇಶದಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದೇನೆ ಮತ್ತು ಕುಪ್ಪಂ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ವದಂತಿಗಳನ್ನು ಕೇಳುತ್ತಿದ್ದೇನೆ. ನಾನು ಇದನ್ನು ಸಂಪೂರ್ಣವಾಗಿ ನಿರಾಕರಿಸುತ್ತೇನೆ, ಇದರ ಬಗ್ಗೆ ನನಗೆ ತಿಳಿದಿಲ್ಲ ಮತ್ತು ಯಾರೂ ಈ ಬಗ್ಗೆ ನನ್ನನ್ನು ಸಂಪರ್ಕಿಸಲಿಲ್ಲ. ಈ ಸುದ್ದಿ ಎಲ್ಲಿಂದ ಬಂತು, ಹೇಗೆ ಬಂತು ಎಂಬುದು ನನಗೆ ಗೊತ್ತಿಲ್ಲ. ಆಂಧ್ರಪ್ರದೇಶದ ರಾಜಕೀಯಕ್ಕೆ ಪ್ರವೇಶಿಸುವ ಅಥವಾ ಚಂದ್ರಬಾಬು ನಾಯ್ಡು ವಿರುದ್ಧ ಸ್ಪರ್ಧಿಸುವ ಯಾವುದೇ ಉದ್ದೇಶ ನನಗಿಲ್ಲ” ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.
ವಿಶಾಲ್ ಅವರು 2017ರಲ್ಲಿ ರಾಜಕೀಯಕ್ಕೆ ಸೇರುವ ಉದ್ದೇಶದಿಂದ ನಾಮಪತ್ರ ಸಲ್ಲಿಸಿದ್ದರು, ವಿಶಾಲ್ ಸಲ್ಲಿಸಿದ್ದ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ತಮ್ಮ ನಾಮಪತ್ರ ತಿರಸ್ಕೃತವಾಗಿರುವುದು ಆಶ್ಚರ್ಯ ತಂದಿದೆ ಎಂದು ತಿಳಿಸಿದ್ದರು. “ತಿರಸ್ಕಾರವು ನನಗೆ ದೊಡ್ಡ ಆಶ್ಚರ್ಯವನ್ನುಂಟು ಮಾಡಿದೆ; ನನ್ನ ದಾಖಲೆಗಳು ಕ್ರಮಬದ್ಧವಾಗಿವೆ. ನಾನು ಯಾವುದೇ ಸಹಿಯನ್ನು ನಕಲಿ ಮಾಡಿಲ್ಲ. ನಿಯಮಗಳನ್ನು ಉಲ್ಲಂಘಿಸಲಾಗಿದೆ. ಪ್ರಜಾಪ್ರಭುತ್ವವನ್ನು ಅಪಹಾಸ್ಯ ಮಾಡಿದ್ದರಿಂದ ನಾನು ಖಿನ್ನತೆಗೆ ಒಳಗಾಗಿದ್ದೇನೆ” ಎಂದು ವಿಶಾಲ್ ಸುದ್ದಿ ಮಾಧ್ಯಮಕ್ಕೆ ತಿಳಿಸಿದ್ದರು.
ಇದನ್ನೂ ಓದಿ: ಮೀನಾ ಪತಿ ವಿದ್ಯಾಸಾಗರ್ ಸಾವಿಗೆ ಕೋವಿಡ್ ಕಾರಣವಲ್ಲ ಎಂದ ನಟಿ ಖುಷ್ಬೂ ಸುಂದರ್