Site icon Vistara News

Chhattisgarh CM: ವಿಷ್ಣು ದೇವ ಸಾಯಿ ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿ

Vishnu Deo Sai New chief minister of Chhattisgarh

ನವದೆಹಲಿ: ಛತ್ತೀಸ್‌ಗಢ ನೂತನ ಮುಖ್ಯಮಂತ್ರಿಯಾಗಿ (Chhattisgarh Chief Minister) ಭಾರತೀಯ ಜನತಾ ಪಾರ್ಟಿಯು (BJP Party) ವಿಷ್ಣು ದೇವ ಸಾಯಿ (Vishnu Deo Sai) ಅವರನ್ನು ಆಯ್ಕೆ ಮಾಡಿದೆ. ಈ ಮೂಲಕ ಒಂದು ವಾರದಿಂದ ಉಂಟಾಗಿದ್ದ ಕುತೂಹಲಕ್ಕೆ ತೆರೆ ಬಿದ್ದಿದೆ. ಮುಖ್ಯಮಂತ್ರಿ ರೇಸ್‌ನಲ್ಲಿ ಮಾಜಿ ಸಿಎಂ ರಮಣ್ ಸಿಂಗ್, ಬಿಜೆಪಿ ಅಧ್ಯಕ್ಷ ಅರುಣ್ ಸಾವೋ ಸೇರಿದಂತೆ ಹಲವು ನಾಯಕರ ಹೆಸರಿದ್ದವು. ಅಂತಿಮವಾಗಿ ಕೇಂದ್ರ ನಾಯಕತ್ವ ವಿಷ್ಣು ದೇವ ಸಾಯಿ ಅವರನ್ನು ಆಯ್ಕೆ ಮಾಡಿದೆ. ವಿಷ್ಮು ದೇವ ಸಾಯಿ ಅವರು ಆದಿವಾಸಿ ಸಮುದಾಯದ ಮುಖವಾಗಿದ್ದಾರೆ.

ಭಾನುವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಈ ವೇಳೆ, ಎಲ್ಲ ಶಾಸಕರ ಅಭಿಪ್ರಾಯವನ್ನು ಪಡೆದು ಅಂತಿಮವಾಗಿ ಹೊಸ ಮುಖ್ಯಮಂತ್ರಿಯನ್ನು ಘೋಷಣೆ ಮಾಡಲಾಗಿದೆ. ವೀಕ್ಷಕರಾಗಿ ಬಿಜೆಪಿ ನಾಯಕರಾದ ಬಿಜೆಪಿ ನಾಯಕರಾದ ಸರ್ಬಾನಂದ್ ಸೋನೋವಾಲ, ಅರ್ಜುನ ಮುಂಡಾ ಆಗಮಿಸಿದ್ದರು.

ವಿಷ್ಣು ದೇವ ಸಾಯಿ ಅವರು ಕುಂಕುರಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 87,604 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಬಿಜೆಪಿಯ ಮಾಜಿ ರಾಜ್ಯ ಮುಖ್ಯಸ್ಥರಾದ ದೇವ್ ಸಾಯಿ ಅವರು ಬುಡಕಟ್ಟು ಮುಖವನ್ನು ಆಯ್ಕೆ ಮಾಡಿದರೆ ಮುಖ್ಯಮಂತ್ರಿ ಹುದ್ದೆಗೆ ಪಕ್ಷದ ಮೊದಲ ಆಯ್ಕೆಯಾಗುತ್ತಾರೆ ಎಂದು ಊಹಿಸಲಾಗಿತ್ತು.

ವಿಷ್ಣದೇವ್ ಸಾಯ ಅವರು ಈ ಮೊದಲು ಮೋದಿ ಸಂಪುಟದಲ್ಲ ಕೇಂದ್ರ ಉಕ್ಕು ಇಲಾಖೆಯ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 16 ನೇ ಲೋಕಸಭೆಯಲ್ಲಿ ಛತ್ತೀಸ್‌ಗಢದ ರಾಯಗಢ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ವಿಷ್ಣು ದೇವ ಸಾಯಿ ಅವರು 2020ರಿಂದ 2022ರವರೆಗೆ ಛತ್ತೀಸ್‌ಗಢ ಬಿಜೆಪಿ ಅಧಯಕ್ಷರೂ ಆಗಿ ಕಾರ್ಯ ನಿರ್ವಹಿಸಿದ್ದಾರೆ.

ರಾಜಸ್ಥಾನ ಮತ್ತು ಛತ್ತೀಸ್‌ಗಢದಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಯಶಸ್ವಿಯಾಗಿದೆ. ಮಧ್ಯಪ್ರದೇಶವನ್ನು ಭರ್ಜರಿ ಜಯದೊಂದಿಗೆ ಉಳಿಸಿಕೊಂಡಿದೆ. ಇದು ಕೇಸರಿ ಪಕ್ಷವು ಹಿಂದಿಯ ಹೃದಯಭಾಗದಲ್ಲಿ ತನ್ನ ಹಿಡಿತವನ್ನು ಬಿಗಿಗೊಳಿಸುವುದಕ್ಕೆ ಕಾರಣವಾಯಿತು ಮತ್ತು 2024 ರ ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ದೊಡ್ಡ ಉತ್ತೇಜನವನ್ನು ನೀಡಲಿದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನೂ ಓದಿ: Revanth Reddy: ರೇವಂತ್ ರೆಡ್ಡಿ ತೆಲಂಗಾಣ ನೂತನ ಮುಖ್ಯಮಂತ್ರಿ; ಕಾಂಗ್ರೆಸ್ ಘೋಷಣೆ

Exit mobile version