ವಿಸ್ತಾರ ಸಂಪಾದಕೀಯ: ಮುಳುಗಿದ ದೆಹಲಿ, ಆಪ್-ಬಿಜೆಪಿ ಪಕ್ಷಗಳು ರಾಜಕೀಯ ಕಿತ್ತಾಟದಿಂದ ಮೇಲೇಳಲಿ - Vistara News

ದೇಶ

ವಿಸ್ತಾರ ಸಂಪಾದಕೀಯ: ಮುಳುಗಿದ ದೆಹಲಿ, ಆಪ್-ಬಿಜೆಪಿ ಪಕ್ಷಗಳು ರಾಜಕೀಯ ಕಿತ್ತಾಟದಿಂದ ಮೇಲೇಳಲಿ

Vistara Editorial: ಕಳೆದ 50 ವರ್ಷಗಳಲ್ಲಿ ಕಂಡು ಕೇಳರಿಯದ ಯಮುನಾ ನದಿ ಪ್ರವಾಹಕ್ಕೆ ದಿಲ್ಲಿ ನಗರ ತುತ್ತಾಗಿದೆ. ಕಷ್ಟದ ಪರಿಸ್ಥಿತಿಯಲ್ಲಿ ಜನರನ್ನು ರಕ್ಷಣೆ ಮಾಡಬೇಕಾದ ಆಪ್ ಮತ್ತು ಬಿಜೆಪಿಗಳೆರಡೂ ರಾಜಕೀಯ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿವೆ.

VISTARANEWS.COM


on

Delhi Rain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೇಶದ ಶಕ್ತಿ ಕೇಂದ್ರವಾಗಿರುವ, ರಾಜಧಾನಿ ದಿಲ್ಲಿ ನಗರವು ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅಕ್ಷರಶಃ ನಲುಗಿದೆ. ಸಾವಿರಾರು ಜನರು ನಿರ್ವಸತಿಗರಾಗಿದ್ದಾರೆ. ತಗ್ಗು ಪ್ರದೇಶಗಳಿಗೆ ಯಮುನೆ ನುಗ್ಗಿ, ರಾದ್ಧಾಂತ ಸೃಷ್ಟಿದ್ದಾಳೆ. ಸುಪ್ರೀಂ ಕೋರ್ಟ್, ರಾಜಘಾಟ್, ಕೆಂಪುಕೋಟೆವರೆಗೂ ಯಮುನೆ ತನ್ನ ಪಾತ್ರವನ್ನು ಹಿಗ್ಗಿಸಿಕೊಂಡಿದ್ದಾಳೆ. ಕಳೆದ 40 ವರ್ಷದಲ್ಲೇ ದಾಖಲೆ ಮಳೆಯನ್ನು ಈ ಬಾರಿ ದಿಲ್ಲಿ ಕಂಡಿದೆ. ಜತೆಗೆ, ಹರ್ಯಾಣ ಸೇರಿದಂತೆ ದಿಲ್ಲಿ ನೆರೆ ಹೊರೆಯ ರಾಜ್ಯಗಳಲ್ಲೂ ವ್ಯಾಪಕ ಮಳೆಯಾಗುತ್ತಿದೆ. ಪರಿಣಾಮ ಯಮುನಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಮಹಾಪೂರದಂಥ ವಿಕೋಪ ಪರಿಸ್ಥಿತಿಗಳು ಸೃಷ್ಟಿಯಾದಾಗ, ಜನರ ರಕ್ಷಣೆ, ಪರಿಹಾರ ಕಾರ್ಯಾಚರಣೆಯ ಮುಖ್ಯವಾಗಬೇಕು. ಆದರೆ, ದಿಲ್ಲಿಯಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಾರ್ಟಿ(ಆಪ್) ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಪರಸ್ಪರ ರಾಜಕೀಯ ಆರೋಪ ಮತ್ತು ಪ್ರತ್ಯಾರೋಪಗಳಲ್ಲಿ ಕಾಲಹರಣ ಮಾಡುತ್ತಿರುವುದು ದುರದೃಷ್ಟಕರ.

ನೈಸರ್ಗಿಕ ವಿಕೋಪಗಳು ಯಾರ ಕೈಯಲ್ಲೂ ಇಲ್ಲ. ಅವು ಸಂಭವಿಸಿದಾಗ ಎದುರಿಸಬೇಕಷ್ಟೇ. ಸಾಧ್ಯವಿರುವ ಜೀವ ಹಾನಿ, ಆಸ್ತಿ ಹಾನಿಯನ್ನು ತಡೆಯುವತ್ತ ವ್ಯವಸ್ಥೆಗಳು ಕೆಲಸ ಮಾಡಬೇಕಾಗುತ್ತದೆ. ಸಂಕಟದ ಸಮಯದಲ್ಲಿ ನಮ್ಮ ನಡುವಿನ ರಾಜಕೀಯವನ್ನು, ಸಿದ್ಧಾಂತವನ್ನು ಬದಿಗಿಟ್ಟು ಒಂದಾಗಬೇಕು. ಆದರೆ, ದಿಲ್ಲಿಯಲ್ಲಿ ಆಪ್ ಮತ್ತು ಬಿಜೆಪಿ ನಡುವಿನ ವಾಕ್ಸಮರ ನೋಡಿದರೆ, ಅವರಿಗೆ ತಮ್ಮ ತಪ್ಪುಗಳನ್ನು ಮತ್ತೊಬ್ಬರ ಮೇಲೆ ಹೊರಿಸುವುದಲ್ಲಿ ಹೆಚ್ಚು ಸಂತುಷ್ಟರಾಗುತ್ತಿರುವಂತೆ ಕಾಣುತ್ತಿದೆ. ದಿಲ್ಲಿಯಲ್ಲಿ ಆಡಳಿತ ನಡೆಸುತ್ತಿರುವ ಆಪ್, ಅಧಿಕಾರ ವಿಕೇಂದ್ರೀಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಜತೆ ನಿತ್ಯ ಸಂಘರ್ಷ ನಡೆಸುತ್ತಿದೆ. ಅದಕ್ಕೀಗ ಈ ಪ್ರವಾಹ ನಿಯಂತ್ರಣ ಕೂಡ ಸೇರಿಕೊಂಡಿದೆ. ಅತ್ತ ಬಿಜೆಪಿಯಿಂದಲಾದರೂ ಸಂಯಮದ ನಡೆಯನ್ನು ಜನರು ನಿರೀಕ್ಷಿಸಿದ್ದರು. ಆದರೆ, ಕಮಲ ಪಡೆ ಕೂಡ ಸೇರಿಗೆ ಸವ್ವಾ ಸೇರು ಎಂಬಂತೆ ವರ್ತಿಸುತ್ತಿದೆ. ಅಂತಿಮವಾಗಿ ಯಮುನೆಯ ರುದ್ರ ನರ್ತನಕ್ಕೆ ದಿಲ್ಲಿಗರು ನರಳುತ್ತಿದ್ದಾರೆ. ರಸ್ತೆ, ಸೇತುವೆ ಸೇರಿ ಮೂಲ ಸೌಕರ್ಯಗಳು ಕೊಚ್ಚಿ ಹೋಗುತ್ತಿವೆ. ಹಾಗಾಗಿ, ಆಪ್ ಆಗಲೀ ಅಥವಾ ಬಿಜೆಪಿಯೇ ಆಗಲಿ, ಪ್ರತಿಯೊಂದರಲ್ಲೂ ಪರಸ್ಪರರ ಹುಳುಕುಗಳನ್ನು ಹುಡುಕುವುದರಲ್ಲಿ ತೊಡಗಿ ರಾಜಕೀಯ ಮಾಡುವುದನ್ನು ಬಿಟ್ಟು ಪ್ರವಾಹ ಪೀಡಿತ ಜನರ ಸಂಕಟ ನಿವಾರಿಸಲು ಮುಂದಾಗಬೇಕು.

ಕೆಲವು ಮೂಲಗಳ ಪ್ರಕಾರ, ದಿಲ್ಲಿ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿರುವ ಪ್ರವಾಹ ನಿಯಂತ್ರಣ ಮಂಡಳಿಯ ಸಭೆ ಎರಡು ವರ್ಷಗಳಿಂದ ನಡೆದೇ ಇಲ್ಲ! ಹೀಗಾದರೆ, ಪ್ರವಾಹ ನಿಯಂತ್ರಣ ಹೇಗೆ ಸಾಧ್ಯ? ದಿಲ್ಲಿಯಂಥ ಮಹಾನಗರವು ಯಾವುದೇ ನೈಸರ್ಗಿಕ ವಿಕೋಪವನ್ನು ಎದುರಿಸಲು ಸಜ್ಜಾಗಿರಬೇಕು. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿರುತ್ತದೆ. ಯಾಕೆಂದರೆ, ದಿಲ್ಲಿಯ ಆಡಳಿತವು ರಾಜ್ಯ ಹಾಗೂ ಕೇಂದ್ರ ನಡುವೆ ಹಂಚಿ ಹೋಗಿದೆ. ಇಲ್ಲಿನ ಎಲ್ಲ ಒಡಕು-ಕೆಡಕುಗಳಿಗೆ ಇಬ್ಬರೂ ಹೊಣೆಗಾರರು. ಒಬ್ಬರು ಮತ್ತೊಬ್ಬರನ್ನು ದೂರಿ ಹೊಣೆಗಾರಿಕೆಯಿಂದ ನುಣಿಚಿಕೊಳ್ಳುವಂತಿಲ್ಲ. ಈ ಸಂಗತಿಯನ್ನು ಉಭಯ ಪಕ್ಷಗಳು ಅರ್ಥ ಮಾಡಿಕೊಂಡರೆ ಜನರಿಗೆ ಒಳ್ಳೆಯದಾಗಲಿದೆ.

ಈ ಸಂಪಾದಕೀಯವನ್ನೂ ಓದಿ: ಸಂಪಾದಕೀಯ: ಉತ್ತರ ಕನ್ನಡಕ್ಕೆ ಅಗತ್ಯವಾಗಿ ಬೇಕು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ

ಸದ್ಯಕ್ಕೆ ಯಮುನಾ ನದಿಯ ತೀವ್ರತೆ ಕೊಂಚ ತಗ್ಗುತ್ತಿದೆ ಎಂಬ ಮಾಹಿತಿ ಇದೆ. ಬಹುಶಃ ಮೂರ್ನಾಲ್ಕು ದಿನಗಳಲ್ಲಿ ದಿಲ್ಲಿ ಮತ್ತೆ ಎಂದಿನ ಸ್ಥಿತಿಗೆ ಮರಳಬಹುದು. ಆಗ, ಎಲ್ಲ ಪಕ್ಷಗಳು ಸೇರಿಕೊಂಡು, ಮತ್ತೊಮ್ಮೆ ಇಂಥ ಮಹಾಪೂರ ಸ್ಥಿತಿ ಎದುರಾದರೆ ಏನು ಮಾಡಬೇಕು, ಪ್ರವಾಹವನ್ನು ನಿಯಂತ್ರಿಸುವುದು ಹೇಗೆ, ಒಂದೊಮ್ಮೆ ಸಾಧ್ಯವಾಗದೇ ಹೋದರೆ ಪರಿಹಾರ ಕಾರ್ಯಾಚರಣೆಯನ್ನು ಯಾವ ರೀತಿ ಕೈಗೊಳ್ಳಬೇಕು ಎಂಬಿತ್ಯಾದಿ ವಿಷಯಗಳು ಕುರಿತು ಚರ್ಚಿಸಬೇಕು. ಸಂಭಾವ್ಯ ಪರಿಹಾರಗಳನ್ನು ಒಟ್ಟಾಗಿ ಕಂಡುಕೊಳ್ಳಬೇಕು. ಯಾವುದೇ ರಾಜಕೀಯ ಪಕ್ಷಕ್ಕೆ ಜನರ ಒಳಿತೇ ಅಂತಿಮ ಧ್ಯೇಯವಾಗಿರಬೇಕು. ಹೊರತು ತಮ್ಮ ಒಣ ಪ್ರತಿಷ್ಠೆಯ ರಾಜಕಾರಣ ಅಥವಾ ಸಿದ್ಧಾಂತವೇ ಮುಖ್ಯವಾಗಬಾರದು. ಕನಿಷ್ಠ ಈ ಪ್ರವಾಹದಿಂದಲಾದರೂ ರಾಜಕೀಯ ಪಕ್ಷಗಳು ಪಾಠವನ್ನು ಕಲಿಯಲಿ.

ಇನ್ನಷ್ಟು ಸಂಪಾದಕೀಯಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ED Raid: ಇಡಿ ಭರ್ಜರಿ ಬೇಟೆ; ಕಾಂಗ್ರೆಸ್‌ ಮುಖಂಡನ ಆಪ್ತ ಕಾರ್ಯದರ್ಶಿ ಮನೆಯಿಂದ 25 ಕೋಟಿ ರೂ. ವಶ

ED Raid: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ ಜಾರ್ಖಂಡ್‌ನ ರಾಜಧಾನಿ ರಾಂಚಿಯ ಅನೇಕ ಸ್ಥಳಗಳಲ್ಲಿ ಸರಣಿ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದಾರೆ. ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ಮುಖಂಡ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯಲ್ಲಿ ಲೆಕ್ಕವಿಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ಶೆಲ್ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

VISTARANEWS.COM


on

ED Raid
Koo

ರಾಂಚಿ: ಜಾರಿ ನಿರ್ದೇಶನಾಲಯ (Enforcement Directorate)ದ ಅಧಿಕಾರಿಗಳು ಸೋಮವಾರ ಜಾರ್ಖಂಡ್‌ನ ರಾಜಧಾನಿ ರಾಂಚಿಯ ಅನೇಕ ಸ್ಥಳಗಳಲ್ಲಿ ಸರಣಿ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದಾರೆ (ED Raid). ಈ ವೇಳೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ಮುಖಂಡ ಅಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ (Sanjiv Lal) ಮನೆಯಲ್ಲಿ ಲೆಕ್ಕವಿಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿದೆ.

2023ರಲ್ಲಿ ಕೆಲವು ಯೋಜನೆಗಳ ಅನುಷ್ಠಾನಕ್ಕಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಇಡಿ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಎಂಜಿನಿಯರ್ ವೀರೇಂದ್ರ ರಾಮ್ ಎಂಬವರು ಬಂಧಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಮೇಲೆಯೂ ದಾಳಿ ಮಾಡಿದೆ. ಸದ್ಯ ನೋಟಿನ ಕಂತೆ ನೋಡಿ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ಶೆಲ್ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

ಸದ್ಯ ನೋಟಿನ ರಾಶಿಯನ್ನು ತೋರಿಸುವ ವಿಡಿಯೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ವೈರಲ್‌ ಆಗಿದೆ. ಈ ದಾಳಿಯ ಬಗ್ಗೆ ಮಾತನಾಡಿದ ಜಾರ್ಖಂಡ್ ಬಿಜೆಪಿ ವಕ್ತಾರ ಪ್ರತುಲ್ ಶಾಹದೇವ್, ”ಜಾರ್ಖಂಡ್‌ನಲ್ಲಿ ಭ್ರಷ್ಟಾಚಾರ ಕೊನೆಗೊಳ್ಳುತ್ತಿಲ್ಲ. ಈ ಹಣಗಳನ್ನು ಇವರು (ಕಾಂಗ್ರೆಸ್‌) ಚುನಾವಣೆಗಾಗಿ ಬಳಸಿಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕುʼʼ ಎಂದು ಆಗ್ರಹಿಸಿದ್ದಾರೆ.

ಜಾರ್ಖಂಡ್‌ನ ಮತ್ತೋರ್ವ ಬಿಜೆಪಿ ಸಂಸದ ದೀಪಕ್ ಪ್ರಕಾಶ್ ಮಾತನಾಡಿ, “ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕಾಂಗ್ರೆಸ್ ಮತ್ತು ಆರ್‌ಜೆಡಿ ಜಾರ್ಖಂಡ್ ಅನ್ನು ‘ಲೂಟ್‌ಖಂಡ್‌ʼ ಆಗಿ ಪರಿವರ್ತಿಸುವ ಕೆಲಸವನ್ನು ಮಾಡುತ್ತಿವೆ. ಇಂದು ಮತ್ತೆ 25 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತವನ್ನು ವಶಪಡಿಸಿಕೊಳ್ಳಲಾಗಿದ್ದು, ಅದು ಆಡಳಿತ ಪಕ್ಷದ ಸಚಿವರಿಗೆ ಸೇರಿದೆ. ಇದು ಜಾರ್ಖಂಡ್‌ನ ಜನರಿಗೆ ಮಾಡಿದ ಅವಮಾನ” ಎಂದು ವಾಗ್ದಾಳಿ ನಡೆಸಿದ್ದಾರೆ.

ವಿವಿಧ ಕಡೆ ದಾಳಿ

ರಾಂಚಿಯ ಸೈಲ್ ಸಿಟಿ ಸೇರಿದಂತೆ ಒಂಬತ್ತು ಸ್ಥಳಗಳಲ್ಲಿ ತನಿಖಾ ಸಂಸ್ಥೆ ಏಕಕಾಲದಲ್ಲಿ ದಾಳಿ ಕೈಗೊಂಡಿದೆ. ಇಡಿಯ ಒಂದು ತಂಡ ಸೋಮವಾರ ಬೆಳಗ್ಗೆ, ರಸ್ತೆ ನಿರ್ಮಾಣ ವಿಭಾಗದ ಇಂಜಿನಿಯರ್ ವಿಕಾಸ್ ಕುಮಾರ್ ಅವರ ಮನೆ ಮೇಲೂ ದಾಳಿ ನಡೆಸಿತ್ತು. ಇನ್ನೊಂದು ತಂಡ ಬರಿಯಾತು, ಮೊರಬದಿ ಮತ್ತು ಬೋಡಿಯಾ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.

ಇದನ್ನೂ ಓದಿ: Shiv Sena : ಇಡಿ ದಾಳಿಗೆ ಒಳಗಾಗಿದ್ದ ಉದ್ಧವ್​ ಬಣದ ಶಾಸಕ, ಶಿಂಧೆ ಬಣಕ್ಕೆ ಸೇರ್ಪಡೆ

ಕಳೆದ ವರ್ಷ ಬಂಧಿತರಾದ ವೀರೇಂದ್ರ ರಾಮ್‌ ಅಕ್ಮವಾಗಿ 100 ಕೋಟಿ ರೂ. ಮೌಲ್ಯದ ಆಸ್ತಿ ಗಳಿಸಿದ ಆರೋಪ ಹೊತ್ತಿದ್ದಾರೆ. ಜತೆಗೆ ಜಾರ್ಖಂಡ್‌ನ ಕೆಲವು ರಾಜಕಾರಣಿಗಳೊಂದಿಗಿನ ವಹಿವಾಟಿನ ವಿವರಗಳನ್ನು ಅವರಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ.

Continue Reading

ದೇಶ

Amethi Unrest: ಕಾಂಗ್ರೆಸ್‌ ಕಚೇರಿ ಮೇಲೆ ಕಿಡಿಗೇಡಿಗಳಿಂದ ಅಟ್ಯಾಕ್‌; ಬಿಜೆಪಿಯ ದುಷ್ಕೃತ್ಯ ಎಂದು ಆರೋಪ

Amethi Unrest: ಉತ್ತರಪ್ರದೇಶದ ಅಮೇಥಿಯಲ್ಲಿ ಸ್ಮೃತಿ ಇರಾನಿ ಮತ್ತಿ ಬಿಜೆಪಿ ಕಾರ್ಯಕರ್ತರು ಭಯಬಿದ್ದಿದ್ದಾರೆ. ಸೋಲಿನ ಭೀತಿಗೊಳಗಾಗಿರುವ ಬಿಜೆಪಿ ಪುಂಡಾಟಕ್ಕೆ ಮುಂದಾಗಿದೆ. ಅಮೇಥಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಸಾಮಾನ್ಯ ಜನರ ಮೇಲೆ ಬಿಜೆಪಿ ಗೂಂಡಾಗಳು ಕೋಲು ದೊಣ್ಣೆಗಳಿಂದ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಜೆಪಿ ಈ ಬಾರಿ ಚುನಾವಣೆಯಲ್ಲಿ ಹೀನಾಯವಾಗಿ ಸೋಲುತ್ತದೆ ಎಂಬುದನ್ನು ಈ ಘಟನೆ ತೋರಿಸುತ್ತದೆ. ಇಷ್ಟು ದೊಡ್ಡ ಘಟನೆ ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

VISTARANEWS.COM


on

amethi unrest
Koo

ಅಮೇಥಿ: ಉತ್ತರಪ್ರದೇಶ ಅಮೇಥಿ(Amethi Unrest)ಯಲ್ಲಿ ಕಾಂಗ್ರೆಸ್‌ ಕಚೇರಿ(Congress Office)ಯ ಎದುರು ನಿಲ್ಲಿಸಿದ್ದ ಕಾರುಗಳನ್ನು ಕಿಡಿಗೇಡಿಗಳು ಭಾನುವಾರ ತಡರಾತ್ರಿ ಧ್ವಂಸಗೊಳಿಸಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರ(BJP workers) ದುಷ್ಕೃತ್ಯ ಎಂದು ಕಾಂಗ್ರೆಸ್‌ ಆರೋಪಿಸಿದೆ. ಬಿಜೆಪಿ ಕಾರ್ಯಕರ್ತರ ಪುಂಡಾಟಿಕೆ ಮತ್ತೆ ಮುಂದುವರೆದಿದ್ದು, ದಾಳಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಎಕ್ಸ್‌ನಲ್ಲಿ ಟ್ವೀಟ್‌ ಮಾಡಿ ಮಾಡಿದೆ. ಈ ಬಗ್ಗೆ ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನಾಥ್‌(Supriya Shrinathe) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಪುಂಡಾಟ ಮೆರೆಯುತ್ತಿದ್ದರೂ ಪೊಲೀಸರು ಮೌನವಹಿಸಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಉತ್ತರಪ್ರದೇಶದ ಅಮೇಥಿಯಲ್ಲಿ ಸ್ಮೃತಿ ಇರಾನಿ ಮತ್ತಿ ಬಿಜೆಪಿ ಕಾರ್ಯಕರ್ತರು ಭಯಬಿದ್ದಿದ್ದಾರೆ. ಸೋಲಿನ ಭೀತಿಗೊಳಗಾಗಿರುವ ಬಿಜೆಪಿ ಪುಂಡಾಟಕ್ಕೆ ಮುಂದಾಗಿದೆ. ಅಮೇಥಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಸಾಮಾನ್ಯ ಜನರ ಮೇಲೆ ಬಿಜೆಪಿ ಗೂಂಡಾಗಳು ಕೋಲು ದೊಣ್ಣೆಗಳಿಂದ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಜೆಪಿ ಈ ಬಾರಿ ಚುನಾವಣೆಯಲ್ಲಿ ಹೀನಾಯವಾಗಿ ಸೋಲುತ್ತದೆ ಎಂಬುದನ್ನು ಈ ಘಟನೆ ತೋರಿಸುತ್ತದೆ. ಇಷ್ಟು ದೊಡ್ಡ ಘಟನೆ ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಬಿಜೆಪಿಗರೇ ಬದಲಾವಣೆ ಗಾಳಿ ಬೀಸುತ್ತಿದೆ. ವಾಹನಗಳನ್ನು ಧ್ವಂಸಗೊಳಿಸುವುದೊಂದೇ ಸಮಸ್ಯೆಗ ಪರಿಹಾರ ಅಲ್ಲ ಎಂದು ಅವರು ಟಾಂಗ್‌ ಕೊಟ್ಟಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರತಿಕ್ರಿಯಿಸಿದ್ದು, ಘಟನೆ ಕುರಿತು ಗೌರಿಗಂಜ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Boat Capsizes: ಜಲಾವೃತ ಸೇತುವೆಗೆ ದೋಣಿ ಡಿಕ್ಕಿ; ಶಾಕಿಂಗ್‌ ವಿಡಿಯೋ ವೈರಲ್‌

ಅಮೇಥಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ ಆಪ್ತ ಕಿಶೋರಿ ಲಾಲ್‌ ಶರ್ಮಾ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ಮೊದಲಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಹಾಗೂ ಅಮೇಥಿಯಿಂದ ರಾಹುಲ್‌ ಗಾಂಧಿ ಕಣಕ್ಕಿಳಿಯುತ್ತಾರೆ ಎಂಬ ವಿಚಾರ ಬಹಳ ಚರ್ಚೆಯಾಗಿತ್ತು. ಅಮೇಥಿಯಲ್ಲಿ 2004, 2009, 2014ರವರೆಗೆ ರಾಹುಲ್‌ ಗಾಂಧಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2019ರಲ್ಲಿ ಬಿಜೆಪಿ ಸ್ಮೃತಿ ಇರಾನಿ ವಿರುದ್ಧ ಸೋಲನ್ನು ಅನುಭವಿಸಿದ್ದರು. ಈ ಬಾರಿ ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್‌ ಅವರನ್ನು ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಕಣಕ್ಕಿಳಿಸಿ ಪಕ್ಷ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.

Continue Reading

ದೇಶ

Terrorist attack: ʼಮಗನ ಬರ್ತ್‌ ಡೇ ಪಾರ್ಟಿಗೆ ಪ್ಲ್ಯಾನ್‌ ಮಾಡಿದ್ದ, ಆದರೆ ಈಗ…ʼ ಕಣ್ಣೀರಿಟ್ಟ ಹುತಾತ್ಮ ಯೋಧನ ಕುಟುಂಬ

Terrorist attack: ಮಗನ ಹುಟ್ಟುಹಬ್ಬಕ್ಕೆಂದು ಜೂ.7ರಂದು ವಾಪಾಸಾಗುತ್ತಾರೆಂದು ಆಸೆಯಿಂದ ಕಾಯುತ್ತಿದ್ದ ಪಹಾದೆ ಅವರ ಸಾವು ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ. ಈ ಕುರಿತು ಅವರು ಸೋದರ ಸಂಬಂಧಿ ಪ್ರತಿಕ್ರಿಯಿಸಿದ್ದು, ಇಡೀ ಕುಟುಂಬ ಪದಾದೆ ಅವರ ಬರುವಿಕೆಗೆ ಕಾಯುತ್ತಿತ್ತು. ಆದರೆ ಅವರು ಹುತಾತ್ಮರಾಗಿರುವ ಸುದ್ದಿ ಕೇಳಿ ಇಡೀ ಕುಟುಂಬ ಆಘಾತದಲ್ಲಿದೆ. ಇಂದು ಪದಾದೆ ಅವರ ಪಾರ್ಥೀವ ಶರೀರ ಸ್ವಗ್ರಾಮಕ್ಕೆ ತರಲಾಗುತ್ತಿದ್ದು, ಅಲ್ಲೇ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿಸಿದರು.

VISTARANEWS.COM


on

Terrorist Attack
Koo

ಮಧ್ಯಪ್ರದೇಶ: ಜಮ್ಮು-ಕಾಶ್ಮೀರ(Jammu and Kashmir)ದ ಪೂಂಚ್‌ನಲ್ಲಿ ನಡೆದ ಉಗ್ರರ ದಾಳಿ(Terrorist attack)ಯಲ್ಲಿ ಹುತಾತ್ಮರಾದ ಭಾರತೀಯ ವಾಯುಪಡೆ(IAF)ಯ ಅಧಿಕಾರಿ ವಿಕ್ಕಿ ಪಹಾದೆ(Vikky Pahade) ಮುಂದಿನ ತಿಂಗಳು ತಮ್ಮ ಐದು ವರ್ಷದ ಮಗನ ಹುಟ್ಟುಹಬ್ಬ ಆಚರಣೆಗೆ ಸಕಲ ಸಿದ್ದತೆ ಮಾಡಿದ್ದರಂತೆ. ಮಧ್ಯಪ್ರದೇಶದ ಚಿಂದ್‌ವಾರ ಜಿಲ್ಲೆಯ ಪಹಾದೆ ಉದಾಮ್‌ಪುರದ ಕಮಾಂಡೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಇವರ ಜೊತೆ ನಾಲ್ವರು IAF ಯೋಧರು ಗಂಭೀರವಾಗಿ ಗಾಯಗೊಂಡಿದ್ದರು.

ಮಗನ ಹುಟ್ಟುಹಬ್ಬಕ್ಕೆಂದು ಜೂ.7ರಂದು ವಾಪಾಸಾಗುತ್ತಾರೆಂದು ಆಸೆಯಿಂದ ಕಾಯುತ್ತಿದ್ದ ಪಹಾದೆ ಅವರ ಸಾವು ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ. ಈ ಕುರಿತು ಅವರು ಸೋದರ ಸಂಬಂಧಿ ಪ್ರತಿಕ್ರಿಯಿಸಿದ್ದು, ಇಡೀ ಕುಟುಂಬ ಪದಾದೆ ಅವರ ಬರುವಿಕೆಗೆ ಕಾಯುತ್ತಿತ್ತು. ಆದರೆ ಅವರು ಹುತಾತ್ಮರಾಗಿರುವ ಸುದ್ದಿ ಕೇಳಿ ಇಡೀ ಕುಟುಂಬ ಆಘಾತದಲ್ಲಿದೆ. ಇಂದು ಪದಾದೆ ಅವರ ಪಾರ್ಥೀವ ಶರೀರ ಸ್ವಗ್ರಾಮಕ್ಕೆ ತರಲಾಗುತ್ತಿದ್ದು, ಅಲ್ಲೇ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಪಹಾದೆ ಅವರು 2011ರಲ್ಲಿ ತಂದೆ ಆಸೆಯಂತೆ ವಾಯುಸೇನೆಗೆ ಸೇರಿದ್ದರು. ತನ್ನ ಚಿಕ್ಕ ವಯಸ್ಸಿನಲ್ಲೇ ತಂದೆಯನ್ನು ಕಳೆದುಕೊಂಡಿದ್ದ ಪಹಾದೆ ಸಹೋದರನ ಸಹಾಯದಿಂದ ವಿದ್ಯಾಭ್ಯಾಸ ಮುಗಿಸಿ ಕಷ್ಟಪಟ್ಟು ವಾಯುಸೇಗೆ ನೇಮಕಗೊಂಡಿದ್ದ. ನಾವು ಕೆಲವು ವರ್ಷಗಳಿಂದ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದೆವು. ಆದರೆ ಇದೀಗ ಪಹಾದೆ ವಿಧಿವಶರಾಗಿರುವುದು ಇಡೀ ಕುಟುಂಬಕ್ಕೆ ಬಹುದೊಡ್ಡ ಶಾಕ್‌. ಈ ಸಂದರ್ಭದಲ್ಲಿ ಸರ್ಕಾರದ ಬೆಂಬಲ ನಮಗೆ ಅತ್ಯಗತ್ಯ. ದೇಶಕ್ಕಾಗಿ ತನ್ನ ಪ್ರಾಣವನ್ನೇ ಅರ್ಪಿಸಿದ ನಮ್ಮ ಸಹೋದರನ ಬಗ್ಗೆ ನಮಗೆ ಹೆಮ್ಮೆ ಇದೆ. ಅವರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಸಹಾಯ ಸಿಗಲೆಂದು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Terrorist Attack: “ಉಗ್ರರ ದಾಳಿ ಬಿಜೆಪಿ ಚುನಾವಣಾ ಪೂರ್ವ ಸ್ಟಂಟ್‌”; ನಾಲಿಗೆ ಹರಿಬಿಟ್ಟ ಪ್ರತಿಪಕ್ಷದ ಇಬ್ಬರು ನಾಯಕರು

ಇನ್ನು ಘಟನೆ ಬಗ್ಗೆ IAF ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ಪೂಂಚ್‌ ಸೆಕ್ಟರ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ನಮ್ಮ ವೀರ ಯೋಧ ವಿಕ್ಕಿ ಪಹಾದೆ ಹುತಾತ್ಮರಾಗಿದ್ದಾರೆ. ಅವರ ಶೌರ್ಯ, ಪರಾಕ್ರಮ ಮತ್ತು ಬಲಿದಾನಕ್ಕೆ ಸೆಲ್ಯೂಟ್‌ ಮಾಡುತ್ತೇವೆ. ಅವರ ಕುಟುಂಬದ ಜೊತೆ ನಾವಿದ್ದೇವೆ ಎಂದು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದೆ. ಪಹಾದೆ ಅವರ ಪಾರ್ಥೀವ ಶರೀರವನ್ನು IAF ವಿಮಾನದಲ್ಲಿ ನೆರೆಯ ಮಹಾರಾಷ್ಟ್ರದ ನಾಗ್ಪುರಕ್ಕೆ ಕರೆತರಲಾಗುತ್ತದೆ. ಅಲ್ಲಿಂದ ರಸ್ತೆ ಮೂಲಕ ಚಿಂದ್‌ವಾರಕ್ಕೆ ಕರೆ ತರಲಾಗುತ್ತದೆ. ಬಳಿಕ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಸಂಸ್ಕಾರ ನಡೆಸಲಾಗುತ್ತದೆ ಎಂದು ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆ(IAF)ಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯಲ್ಲಿ ಪಹಾದೇ ಸೇರಿದಂತೆ ಐವರು ಐಎಎಫ್‌ ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಕಮಾಂಡೋ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದರು.

Continue Reading

ದೇಶ

Terrorist Attack: “ಉಗ್ರರ ದಾಳಿ ಬಿಜೆಪಿ ಚುನಾವಣಾ ಪೂರ್ವ ಸ್ಟಂಟ್‌”; ನಾಲಿಗೆ ಹರಿಬಿಟ್ಟ ಪ್ರತಿಪಕ್ಷದ ಇಬ್ಬರು ನಾಯಕರು

Terrorist Attack: ಪೂಂಚ್‌ನಲ್ಲಿ ನಡೆದ ದಾಳಿ ಬಗ್ಗೆ ಜಲಂಧರ್‌ ಕ್ಷೇತ್ರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಚರಣ್‌ ಪ್ರಿತ್‌ ಸಿಂಗ್‌ ಚನ್ನಿ, ಚುನಾವಣೆ ಬಂದಾಗ ಬಿಜೆಪಿಯವರು ನಡೆಸುವ ಸ್ಟಂಟ್‌ ಇದು. ಇದು ಉದ್ದೇಶಪೂರ್ವವಾಗಿ ನಡೆಸುತ್ತಿರುವ ದಾಳಿ. ಬಿಜೆಪಿಯನ್ನು ಗೆಲ್ಲಿಸಲು ಮಾಡುತ್ತಿರುವ ಸ್ಟಂಟ್‌. ಇದರಲ್ಲಿ ಯಾವುದೇ ನಿಜಾಂಶ ಇಲ್ಲ. ಜನರ ಶವದ ಮೇಲೆ ಬಿಜೆಪಿ ಅಧಿಕಾರಕ್ಕೆ ಬರಲು ಬಿಜೆಪಿ ಯತ್ನಿಸುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮತ್ತೊಂದೆಡೆ ಬಿಹಾರದಲ್ಲಿ ಆರ್‌ಜೆಡಿ ಮುಖಂಡ ತೇಜ್‌ ಪ್ರತಾಪ್‌ ಯಾದವ್‌ ಕೂಡ ಇಂತಹದ್ದೇ ಹೇಳಿಕೆ ನೀಡಿದ್ದಾರೆ

VISTARANEWS.COM


on

Terrorist attack
Koo

ಚಂಡೀಗಡ: ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಪೂಂಚ್‌ನಲ್ಲಿ ಎರಡು ದಿನಗಳ ಹಿಂದೆ ಭಾರತೀಯ ವಾಯುಪಡೆ(IAF) ಯೋಧರ ಮೇಲೆ ನಡೆದಿದ್ದ ಭಯೋತ್ಪಾದನಾ ದಾಳಿ(Terrorist Attack)ಯನ್ನು ಪ್ರತಿಪಕ್ಷದ ಇಬ್ಬರು ನಾಯಕರು ಇದೊಂದು ಬಿಜೆಪಿಯ ಚುನಾವಣಾ ಪೂರ್ವ ಸ್ಟಂಟ್‌(Poll Stunt) ಎಂದು ಕರೆಯುವ ಮೂಲಕ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಪಂಜಾಬ್‌ನ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ಮುಖಂಡ ಚರಣ್‌ಪ್ರಿತ್‌ ಸಿಂಗ್‌ ಚನ್ನಿ(Charanprit Singh Channi) ಮತ್ತು ರಾಷ್ಟ್ರೀಯ ಜನತಾದಳದ ತೇಜ್‌ ಪ್ರತಾಪ್‌ ಯಾದವ್‌ ಈ ದಾಳಿ ಯನ್ನು 2019ರಲ್ಲಿ ನಡೆದಿದ್ದ ಪುಲ್ವಾಮಾ ಭಯೋತ್ಪಾದನಾ ದಾಳಿಯ ಜೊತೆ ಹೋಲಿಸಿ ಇದೊಂದು ಬಿಜೆಪಿ ನಡೆಸುತ್ತಿರುವ ಚುನಾವಣಾ ಪೂರ್ವ ಸ್ಟಂಟ್‌ ಆಗಿದ್ದು ಬಿಜೆಪಿ ಇದನ್ನು ತನ್ನ ಗೆಲುವಿಗಾಗಿ ಬಳಸಿಕೊಳ್ಳುತ್ತದೆ ಎಂದು ಟೀಕಿಸಿದ್ದಾರೆ.

ಪ್ರತಿಪಕ್ಷ ನಾಯಕರು ಹೇಳಿದ್ದೇನು?

ಪೂಂಚ್‌ನಲ್ಲಿ ನಡೆದ ದಾಳಿ ಬಗ್ಗೆ ಜಲಂಧರ್‌ ಕ್ಷೇತ್ರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಚರಣ್‌ ಪ್ರಿತ್‌ ಸಿಂಗ್‌ ಚನ್ನಿ, ಚುನಾವಣೆ ಬಂದಾಗ ಬಿಜೆಪಿಯವರು ನಡೆಸುವ ಸ್ಟಂಟ್‌ ಇದು. ಇದು ಉದ್ದೇಶಪೂರ್ವವಾಗಿ ನಡೆಸುತ್ತಿರುವ ದಾಳಿ. ಬಿಜೆಪಿಯನ್ನು ಗೆಲ್ಲಿಸಲು ಮಾಡುತ್ತಿರುವ ಸ್ಟಂಟ್‌. ಇದರಲ್ಲಿ ಯಾವುದೇ ನಿಜಾಂಶ ಇಲ್ಲ. ಜನರ ಶವದ ಮೇಲೆ ಬಿಜೆಪಿ ಅಧಿಕಾರಕ್ಕೆ ಬರಲು ಬಿಜೆಪಿ ಯತ್ನಿಸುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮತ್ತೊಂದೆಡೆ ಬಿಹಾರದಲ್ಲಿ ಆರ್‌ಜೆಡಿ ಮುಖಂಡ ತೇಜ್‌ ಪ್ರತಾಪ್‌ ಯಾದವ್‌ ಕೂಡ ಇಂತಹದ್ದೇ ಹೇಳಿಕೆ ನೀಡಿದ್ದು, ಪುಲ್ವಾಮಾ ದಾಳಿಯಯನ್ನೂ ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದೆ. ಚುನಾವಣೆ ಬಂದಾಗಲೆಲ್ಲಾ ಭಯೋತ್ಪಾದನಾ ದಾಳಿ ನಡೆದೇ ನಡೆಯುತ್ತದೆ

ಬಿಜೆಪಿ ನಾಯಕರು ಕಿಡಿ

ಪ್ರತಿಪಕ್ಷ ನಾಯಕರ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಬಿಜೆಪಿ ಕೆಂಡಾಮಂಡಲವಾಗಿದ್ದು, ವಾಗ್ದಾಳಿ ನಡೆಸಿದೆ. ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಪ್ರತಿಕ್ರಿಯಿಸಿದ್ದು, ಇದು ಕಾಂಗ್ರೆಸ್‌ ಮತ್ತು ಅದರ ಜೊತೆಗಿರುವ ಪಕ್ಷಗಳ ಮನಸ್ಥಿತಿಯನ್ನು ತೋರಿಸುತ್ತಿದೆ. ಕಳೆದ 70 ವರ್ಷಗಳಲ್ಲಿ ಸೇನೆಯನ್ನು ಬಲಪಡಿಸುವ ಬದಲು ಅದರ ಬಲವನ್ನು ಕುಗ್ಗಿಸುವ ಕೆಲಸವನ್ನೇ ಕಾಂಗ್ರೆಸ್‌ ಮಾಡಿತ್ತು. ನಾವು ಕಳೆದ 10ವರ್ಷಗಳಲ್ಲಿ ಸೇನೆಗೆ ಬಲ ತುಂಬಿದ್ದೇವೆ. ಪುಲ್ವಾಮಾದ ಬಳಿಕ ನಾವು ಸರ್ಜಿಕಲ್‌ ಸ್ಟ್ರೈಕ್‌ ಮಾಡಿದ್ದೇವೆ. ಆದರೆ ಇವರು ಸಂಸತ್‌ ದಾಳಿಕೋರನ ಗಲ್ಲುಶಿಕ್ಷೆಯನ್ನು ತಪ್ಪಿಸಲು ಹಲವು ರೀತಿಯಲ್ಲಿ ಪ್ರಯತ್ನಿಸಿದವರು ಜನ ಇದನ್ನು ಎಂದಿಗೂ ಮರೆಯಲ್ಲ ಎಂದು ಟಾಂಗ್‌ ಕೊಟ್ಟಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆ(IAF)ಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದರು.

Continue Reading
Advertisement
Karan Johar upset with Kettan Singh's poor mimicry of him
ಸಿನಿಮಾ2 mins ago

Karan Johar: ‘ಕಳಪೆ’ ಮಿಮಿಕ್ರಿ ಕಂಡು ಕರಣ್ ಜೋಹರ್ ಗರಂ; ಕ್ಷಮೆಯಾಚಿಸಿದ ಹಾಸ್ಯನಟ!

Drowned in water mysuru
ಮೈಸೂರು5 mins ago

Drowned In water : ಈಜಲು 20 ಅಡಿ ಎತ್ತರದಿಂದ ನೀರಿನ ಬುಗ್ಗೆಗೆ ಜಿಗಿದವನು ಮತ್ತೆ ಏಳಲೇ ಇಲ್ಲ!

Drowned in water
ದಕ್ಷಿಣ ಕನ್ನಡ26 mins ago

Drowned In water : ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

ED Raid
ದೇಶ39 mins ago

ED Raid: ಇಡಿ ಭರ್ಜರಿ ಬೇಟೆ; ಕಾಂಗ್ರೆಸ್‌ ಮುಖಂಡನ ಆಪ್ತ ಕಾರ್ಯದರ್ಶಿ ಮನೆಯಿಂದ 25 ಕೋಟಿ ರೂ. ವಶ

Mahanati Show Gagana Comedy About Rishi actor
ಕಿರುತೆರೆ49 mins ago

Mahanati Show: ‘ಮಹಾನಟಿʼ ವೇದಿಕೆಯಲ್ಲಿ ನಟ ರಿಷಿ ಫೋನ್‌ ನಂಬರ್‌ ಕೇಳಿದ ಚಿತ್ರದುರ್ಗದ ಗಗನಾ!

amethi unrest
ದೇಶ1 hour ago

Amethi Unrest: ಕಾಂಗ್ರೆಸ್‌ ಕಚೇರಿ ಮೇಲೆ ಕಿಡಿಗೇಡಿಗಳಿಂದ ಅಟ್ಯಾಕ್‌; ಬಿಜೆಪಿಯ ದುಷ್ಕೃತ್ಯ ಎಂದು ಆರೋಪ

Paris Olympics
ಕ್ರೀಡೆ2 hours ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ​ಭಾರತದ ಪುರುಷರ & ಮಹಿಳೆಯರ ರಿಲೇ ತಂಡ

Prajwal Revanna Case
ಕರ್ನಾಟಕ2 hours ago

Prajwal Revanna Case: ಗಂಡ, ಮಗನ ಕೇಸ್‌ನಿಂದ ಭವಾನಿ ರೇವಣ್ಣಗೂ ಕಾನೂನು ಕಂಟಕ?

Boat Capsize
ವೈರಲ್ ನ್ಯೂಸ್2 hours ago

Boat Capsizes: ಜಲಾವೃತ ಸೇತುವೆಗೆ ದೋಣಿ ಡಿಕ್ಕಿ; ಶಾಕಿಂಗ್‌ ವಿಡಿಯೋ ವೈರಲ್‌

T20 World Cup 2024
ಕ್ರೀಡೆ2 hours ago

T20 World Cup 2024: ಟಿ20 ವಿಶ್ವಕಪ್​ಗೆ ಪಾಕ್​ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ16 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ18 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ18 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌