ವಿಸ್ತಾರ ಸಂಪಾದಕೀಯ: ವಿಪಕ್ಷ ಮೈತ್ರಿಕೂಟ ಚೂರು, ಅಧಿಕಾರದಾಟ ಜೋರು! - Vistara News

ದೇಶ

ವಿಸ್ತಾರ ಸಂಪಾದಕೀಯ: ವಿಪಕ್ಷ ಮೈತ್ರಿಕೂಟ ಚೂರು, ಅಧಿಕಾರದಾಟ ಜೋರು!

ವಿಪಕ್ಷಗಳು ಪ್ರಜಾಪ್ರಭುತ್ವದ ಕಾವಲುಶ್ವಾನಗಳು. ಇಂಡಿಯಾ ಬ್ಲಾಕ್‌ ಗಟ್ಟಿಯಾಗಲಿ; ಸರ್ಕಾರದ ನಡೆಗಳನ್ನು ಸಕಾರಣವಾಗಿ, ವಿಮರ್ಶಾತ್ಮಕವಾಗಿ ಪ್ರಶ್ನಿಸುವ ಧ್ವನಿ ಹಾಗೂ ಸ್ಥಾನಬಲ ಉಳಿಸಿಕೊಳ್ಳಲಿ.

VISTARANEWS.COM


on

India bloc Leaders
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂಡಿಯಾ ಮೈತ್ರಿಕೂಟ (INDIA Bloc) ಎಂಬ ಹೆಸರಿನಿಂದ ಒಗ್ಗೂಡಲು ಉದ್ದೇಶಿಸಿದ್ದ ವಿಪಕ್ಷಗಳೆಲ್ಲ ಒಂದೊಂದಾಗಿ ದೂರ ಸರಿಯುತ್ತಿವೆ. ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವಂತೆ ಇವರ ಒಗ್ಗಟ್ಟು ಹೆಚ್ಚಾಗಬಹುದು ಎಂದು ನಿರೀಕ್ಷಿಸಿದವರಗೆಲ್ಲಾ ನಿರಾಸೆಯಾಗಿದೆ. ʼಎಲ್ಲರೂ ಒಂದಾಗಿ ಬಿಜೆಪಿಯನ್ನು, ಅದು ಮಾಡುತ್ತಿರುವ ಕೋಮುವಾದಿ ರಾಜಕೀಯವನ್ನು ವಿರೋಧಿಸೋಣʼ ಎಂಬುದು ಇವರೆಲ್ಲರ ಒಕ್ಕೊರಲಿನ ನಿರ್ಧಾರವಾಗಿತ್ತು. ಆದರೆ ಚುನಾವಣೆಗೆ ಇನ್ನೆರಡು ತಿಂಗಳು ಇರುವಾಗ ಒಬ್ಬೊಬ್ಬರೂ ಒಂದೊಂದು ದಿಕ್ಕಿಗೆ ಮುಖ ತಿರುಗಿಸಿದ್ದಾರೆ. ಮುಖ್ಯವಾಗಿ ಕಾಂಗ್ರೆಸ್‌ ಜೊತೆಗೆ ಸಮಾನ ವೇದಿಕೆ ಹಂಚಿಕೊಳ್ಳಲಾಗದ ಸ್ವಾಭಿಮಾನ, ಸೀಟು ಹಂಚಿಕೆಯಲ್ಲಿ ಅನ್ಯಾಯಕ್ಕೊಳಗಾಗುವ ಭಾವನೆ, ಮೈತ್ರಿಯಿಂದ ಸ್ವತಂತ್ರ ನೆಲೆ ಕಳೆದುಕೊಳ್ಳುವ ಆತಂಕ, ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬಂದರೆ ಮತ್ತೆ ಐದು ವರ್ಷ ವಿಪಕ್ಷವಾಗಿಯೇ ಇರಬೇಕಾದೀತು ಎಂಬ ಭಯ ಎಲ್ಲವೂ ಇವರಲ್ಲಿ ಸೇರಿದಂತಿದೆ.

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಅಧಿನಾಯಕಿ ಮಮತಾ ಬ್ಯಾನರ್ಜಿಯವರು ತಾವು ರಾಜ್ಯದಲ್ಲಿ ಕಾಂಗ್ರೆಸ್‌ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕಟುವಾಗಿ ಮುಖ ತಿರುಗಿಸಿದ್ದಾರೆ. ಮಾತುಕತೆಗೆ ಬಂದಾಗಲೂ ಬಂಗಾಳದಲ್ಲಿ ಕೇವಲ ಎರಡು ಸೀಟು ಕೊಡುವುದಾಗಿ ಹೇಳಿ ಕಾಂಗ್ರೆಸ್‌ಗೆ ಮುಖಭಂಗ ಮಾಡಿದ್ದರು. ಪಂಜಾಬ್‌ನಲ್ಲೂ ಕಾಂಗ್ರೆಸ್‌ಗೆ ಇದೇ ʼಸ್ವಾಗತʼವೇ ದೊರೆತಿದೆ. ಅಲ್ಲಿನ ಮುಖ್ಯಮಂತ್ರಿ ಭಗವಂತ ಮಾನ್‌ ಅವರು, ಕಾಂಗ್ರೆಸ್‌ಗೆ ʼನೀವಿಲ್ಲಿಂದ ದಯಮಾಡಿಸಿʼ ಎಂದು ಹೇಳಿದ್ದಾರೆ. ದಿಲ್ಲಿಯಲ್ಲಂತೂ ಆಪ್‌ ಸ್ವತಂತ್ರವಾಗಿ ಸ್ಪರ್ಧಿಸುವುದು ಖಚಿತ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಹಾಗೂ ಪಂಜಾಬ್‌ನಲ್ಲಿ ಆಪ್‌ಗೆ ಇರುವ ಭದ್ರ ಹಿಡಿತವೇ ಇದಕ್ಕೆ ಕಾರಣ. ಈ ಅಧಿಕಾರದ ನೆಲೆಯಲ್ಲಿ ಪಾಲು ಮಾಡಿಕೊಳ್ಳಲು ಅವುಗಳಿಗೆ ಇಷ್ಟವಿಲ್ಲ.

ಹೊಸ ಬೆಳವಣಿಗೆ ಎಂದರೆ ಬಿಹಾರದಲ್ಲಿ ಮಹಾಘಟಬಂಧನ್‌ನ ಭಾಗವಾಗಿದ್ದ ನಿತೀಶ್‌ ಕುಮಾರ್‌ ಅವರು ಅಲ್ಲಿಂದ ಮೈತ್ರಿ ಮುರಿದುಕೊಂಡು ಎನ್‌ಡಿಎಯತ್ತ ಕುಡಿಗಣ್ಣಿನ ನೋಟ ಬೀರುತ್ತಿರುವುದು. ನಿತೀಶ್‌ ಕುಮಾರ್‌ ಅವರಿಗೆ ʼರಾಷ್ಟ್ರ ರಾಜಕೀಯದ ಭವಿಷ್ಯಕಾರʼ ಎಂಬ ಅಡ್ಡಹೆಸರಿದೆ. ಗಾಳಿ ಯಾವ ಕಡೆಗೆ ಬೀಸುತ್ತಿದೆ ಎಂಬುದನ್ನು ಬಲು ಬೇಗನೆ ಅರ್ಥ ಮಾಡಿಕೊಂಡು ಆ ಕಡೆಗೆ ಜಿಗಿಯಬಲ್ಲ ಚತುರರಾದ ಅವರು ಮುತ್ಸದ್ದಿಯೂ ಹೌದು. ಒಂದು ವೇಳೆ ಇಂಡಿಯಾ ಬ್ಲಾಕ್‌ ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆ ಇದ್ದಿದ್ದರೆ ಖಂಡಿತವಾಗಿಯೂ ಅವರು ಪ್ರಧಾನಿ ಅಭ್ಯರ್ಥಿಯೇ ಆಗುವ ಅರ್ಹತೆ ಹೊಂದಿದವರು. ಇಂಡಿಯಾ ಬ್ಲಾಕ್‌ನಿಂದ ಅವರ ನಿರ್ಗಮನ ಹಾಗೂ ಎನ್‌ಡಿಎಗೆ ಆಗಮನ ಲೋಕಸಭೆ ಚುನಾವಣೆಯ ದಿಕ್ಸೂಚಿಯೇ ಹೌದು. ಪ್ರಬಲ ಪಕ್ಷವಾದ ಜೆಡಿಯು ಎನ್‌ಡಿಎಗೆ ಖಂಡಿತವಾಗಿಯೂ ನಂಬರ್‌ ಗೇಮ್‌ನಲ್ಲಿ ಬಹಳ ನೆರವಾಗಲಿದೆ.

ಇನ್ನೊಂದು ಕಡೆ ಕರ್ನಾಟಕದಲ್ಲಿ, ಜಾತ್ಯತೀತ ಜನತಾ ದಳದ ನಾಯಕರು ಅದಾಗಲೇ ಬಿಜೆಪಿಯ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಈ ಸಲದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಜೊತೆ ಸಿಕ್ಕಿದಷ್ಟು ಲೋಕಸಭೆ ಕ್ಷೇತ್ರಗಳನ್ನು ಹಂಚಿಕೊಂಡು ಜೆಡಿಎಸ್‌ ಬದುಕುಳಿಯುವ ರಾಜಕಾರಣ ಮಾಡಲಿದೆ. ಕಾಂಗ್ರೆಸ್‌ ಒಕ್ಕಲಿಗ ಬೆಲ್ಟ್‌ನಲ್ಲಿ ತಮ್ಮ ಪಕ್ಷವನ್ನು ಮುಗಿಸಲಿದೆ ಎಂಬ ಆತಂಕವನ್ನು ಹೊಂದಿರುವ ದೇವೇಗೌಡರು ಹಾಗೂ ಕುಮಾರಸ್ವಾಮಿಯವರು ಬಿಜೆಪಿ ಮಡಿಲಿಗೆ ಹೋದುದು, ಬಿಜೆಪಿಗೆ ರಾಜ್ಯದ ಮಟ್ಟಿಗೆ ವರವೇ ಆಗಲಿದೆ. ಆದರೆ ಇದರಿಂದ, ರಾಜ್ಯದಲ್ಲಿ ಇದ್ದ ಒಂದೇ ಒಂದು ಬಲಿಷ್ಠ ಪ್ರಾದೇಶಿಕ ಎನ್ನಬಹುದಾದ ಪಕ್ಷವೂ ಎನ್‌ಡಿಎ ಸೇರಿದಂತಾಗಿದೆ. ಅದೂ ವಿಪಕ್ಷಕ್ಕೆ ನಷ್ಟ, ಬಿಜೆಪಿಗೆ ಲಾಭ.

ಇನ್ನೊಂದು ಬೆಳವಣಿಗೆ, ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದ ಜಗದೀಶ್‌ ಶೆಟ್ಟರ್‌ ಅವರು ಮರಳಿ ಮಾತೃಪಕ್ಷದ ಮಡಿಲು ಸೇರಿದ್ದಾರೆ. ಶೆಟ್ಟರ್‌ ನಿರ್ಗಮನದಿಂದ ಲಿಂಗಾಯತರ ಬಲು ದೊಡ್ಡ ಮತ ಬ್ಯಾಂಕ್‌ ಕಳೆದುಕೊಂಡೆವು ಎಂದು ಹತಾಶರಾಗಿದ್ದ ಬಿಜೆಪಿಯ ನಾಯಕರು ಈಗ ನಿರಾಳರಾಗಿರಬಹುದು. ಆದರೆ ಕಾಂಗ್ರೆಸ್‌ಗಂತೂ ಇದು ಮತ್ತೊಂದು ಏಟು. ಪ್ರಬಲ ಕೋಮುವೊಂದರ ನಾಯಕನನ್ನು ತನ್ನಲ್ಲಿ ಉಳಿಸಿಕೊಳ್ಳಲು ಅದು ವಿಫಲವಾಗಿದೆ. ಸ್ವತಃ ಶೆಟ್ಟರ್‌ ಅವರು ಈ ಬಗ್ಗೆ ಯಾವುದೇ ದೂರು ಹೇಳದೇ ಇದ್ದರೂ ಕೂಡ ಇದು ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ನಕಾರಾತ್ಮಕ ಆಗಲಿದೆ.

ಇನ್ನು ದಕ್ಷಿಣ ರಾಜ್ಯಗಳಲ್ಲಿ ತೆಲಂಗಾಣದಲ್ಲಿ ಬಿಆರ್‌ಎಸ್‌ ಈಗಾಗಲೇ ಕಾಂಗ್ರೆಸ್‌ನಿಂದ ದೂರ ಸರಿದಿದೆ. ತೆಲಂಗಾಣದಲ್ಲಿ ಬಿಆರ್‌ಎಸ್‌ ಅನ್ನು ಹಿಂದಿಕ್ಕಿ ಕಾಂಗ್ರೆಸ್‌ ಸಾಧಿಸಿದ ವಿಜಯವೇ ಇದಕ್ಕೆ ಕಾರಣ. ತಮಿಳುನಾಡಿನಲ್ಲಿ ಡಿಎಂಕೆ ಸದ್ಯಕ್ಕೆ ಇಂಡಿಯಾ ಬ್ಲಾಕ್‌ ಜೊತೆಗೆ ನಿಂತಿದೆಯಾದರೂ ಕಾಂಗ್ರೆಸ್‌ ಜೊತೆಗೆ ತಗಾದೆ ಅದಕ್ಕೂ ಇದೆ. ಇವೆಲ್ಲವನ್ನೂ ಗಮನಿಸಿದರೆ, ಇಂಡಿಯಾ ಬ್ಲಾಕ್‌ನ ಮೈತ್ರಿ ಪಕ್ಷಗಳಿಗೆ ಕಾಂಗ್ರೆಸ್ಸೇ ದೊಡ್ಡ ತಲೆನೋವಾಗಿರುವುದು ಖಚಿತ. ಕಾಂಗ್ರೆಸ್‌ ಯಾವುದೇ ರೀತಿಯ ರಾಜಿ, ಅಧಿಕಾರ ಹೊಂದಾಣಿಕೆಗೆ ಸಿದ್ಧವಿಲ್ಲದಿರುವುದು, ರಾಹುಲ್‌ ಗಾಂಧಿ ಅವರ ನಾಯಕತ್ವದ ಬಗ್ಗೆ ಇನ್ನೂ ಇತರ ಪಕ್ಷಗಳ ನಾಯಕರು ಭರವಸೆ ಹೊಂದಿಲ್ಲದಿರುವುದು ಇದೆಲ್ಲದಕ್ಕೆ ಕಾರಣ.

ಇದನ್ನೂ ಓದಿ: India Bloc: ನಿತೀಶ್‌ ವಿದಾಯ ವದಂತಿ ಬೆನ್ನಲ್ಲೇ ಇಂಡಿಯಾ ಒಕ್ಕೂಟದಲ್ಲಿ ಸೀಟು ಹಂಚಿಕೆ ಕಗ್ಗಂಟು

ಇದೆಲ್ಲದರಿಂದ ಆಗುತ್ತಿರುವುದೇನೆಂದರೆ, ಈ ಸಲದ ಲೋಕಸಭೆ ಚುನಾವಣೆಯಲ್ಲೂ ಎನ್‌ಡಿಎ ಭಾರಿ ಬಹುಮತದಿಂದ ಗೆದ್ದು ಬರಬಹುದು. ಆದರೆ ಸದೃಢ ವಿರೋಧಪಕ್ಷವೊಂದು ಅಥವಾ ವಿಪಕ್ಷಗಳ ಒಕ್ಕೂಟವೊಂದು ಪ್ರಜಾಪ್ರಭುತ್ವದಲ್ಲಿ ಅತೀ ಅಗತ್ಯ. ಇಲ್ಲವಾದರೆ ಅಧಿಕಾರದಲ್ಲಿರುವ ಪಕ್ಷ ನಿಶೃಂಕಲವಾಗುತ್ತದೆ. ವಿಪಕ್ಷಗಳು ಪ್ರಜಾಪ್ರಭುತ್ವದ ಕಾವಲುಶ್ವಾನಗಳು. ಇಂಡಿಯಾ ಬ್ಲಾಕ್‌ ಗಟ್ಟಿಯಾಗಲಿ; ಸರ್ಕಾರದ ನಡೆಗಳನ್ನು ಸಕಾರಣವಾಗಿ, ವಿಮರ್ಶಾತ್ಮಕವಾಗಿ ಪ್ರಶ್ನಿಸುವ ಧ್ವನಿ ಹಾಗೂ ಸ್ಥಾನಬಲ ಉಳಿಸಿಕೊಳ್ಳಲಿ.‌

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

PM Narendra Modi: ಇಂದು ಸಂಜೆ ನರೇಂದ್ರ ಮೋದಿ ಸಂಪುಟ ಮೊದಲ ಸಭೆ; ಏನು ಅಜೆಂಡಾ?

PM Narendra Modi: ಮೋದಿ 3.0 ಸರ್ಕಾರದ ಮೊದಲ ಸಂಪುಟ ಸಭೆ ಇದಾಗಿದೆ. ಇದೇ ಸಂದರ್ಭದಲ್ಲಿ ನೂತನ ಸಚಿವರಿಗೆ ಔತಣಕೂಟವನ್ನೂ ಮೋದಿ ಏರ್ಪಡಿಸಿದ್ದಾರೆ. ಇದೇ ಸಭೆಯಲ್ಲಿ ಖಾತೆ ಹಂಚಿಕೆ ಸಂಬಂಧ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಮಿತ್ರ ಪಕ್ಷಗಳು ನಿರ್ದಿಷ್ಟ ಖಾತೆಗೆ ಡಿಮ್ಯಾಂಡ್ ಮಾಡಿವೆ.

VISTARANEWS.COM


on

pm narendra Modi Cabinet
Koo

ಹೊಸದಿಲ್ಲಿ: ಇಂದು ಸಂಜೆ 5 ಗಂಟೆಗೆ ನರೇಂದ್ರ ಮೋದಿ (PM Narendra Modi) ಅವರ ಮೂರನೇ ಅವಧಿಯ ಸರ್ಕಾರದ (Modi 3.0) ಮೊದಲ ಸಂಪುಟ ಸಭೆ (Cabinet meeting) ನಡೆಯಲಿದೆ. ಪ್ರಧಾನಿಯವರ ಲೋಕ ಕಲ್ಯಾಣ ಮಾರ್ಗದ ನಿವಾಸದಲ್ಲಿ ಸಭೆ ಆಯೋಜನೆಗೊಂಡಿದೆ.

ನಿನ್ನೆ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಪ್ರಧಾನಿಯಾಗಿ ಮೋದಿ ಇನ್ನಿತರ 72 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರಿಂದ ಪ್ರಮಾಣ ವಚನ ಸ್ವೀಕರಿಸಿದವರಲ್ಲಿ ಕರ್ನಾಟಕದ ಐವರೂ ಸೇರಿದ್ದಾರೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರೊಂದಿಗೆ ಇಂದು ಮೋದಿ ಸಭೆ ನಡೆಸಲಿದ್ದಾರೆ.

ಮೋದಿ 3.0 ಸರ್ಕಾರದ ಮೊದಲ ಸಂಪುಟ ಸಭೆ ಇದಾಗಿದೆ. ಇದೇ ಸಂದರ್ಭದಲ್ಲಿ ನೂತನ ಸಚಿವರಿಗೆ ಔತಣಕೂಟವನ್ನೂ ಮೋದಿ ಏರ್ಪಡಿಸಿದ್ದಾರೆ. ಇದೇ ಸಭೆಯಲ್ಲಿ ಖಾತೆ ಹಂಚಿಕೆ ಸಂಬಂಧ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಮಿತ್ರ ಪಕ್ಷಗಳು ನಿರ್ದಿಷ್ಟ ಖಾತೆಗೆ ಡಿಮ್ಯಾಂಡ್ ಮಾಡಿವೆ.

ಬಿಹಾರದ ನಿತೀಶ್‌ ಕುಮಾರ್‌ ಅವರು ಜೆಡಿಯುಗೆ ಕೃಷಿ ಖಾತೆ ನೀಡುವಂತೆ ಡಿಮ್ಯಾಂಡ್‌ ಮಾಡಿದ್ದಾರೆ. ಆದರೆ ಕರ್ನಾಟಕದ ಎಚ್‌.ಡಿ ಕುಮಾರಸ್ವಾಮಿ ಅವರೂ ಕೃಷಿ ಖಾತೆ ನೀಡಿದರೆ ನಿರ್ವಹಿಸಲು ತಾನು ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ. ತೆಲುಗು ದೇಶಂನ ಚಂದ್ರಬಾಬು ನಾಯ್ಡು ಅವರೂ ಮಹತ್ವದ ಖಾತೆಗಳನ್ನು ಕೇಳಿದ್ದಾರೆ.

ಆದರೆ ಈಗ ಪ್ರಮಾಣ ವಚನ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ನೋಡಿದರೆ, ಕ್ಯಾಬಿನೆಟ್‌ ದರ್ಜೆಯ 11 ಸ್ಥಾನಗಳನ್ನು ಬಿಜೆಪಿ ತನ್ನ ಜೊತೆಗೇ ಇಟ್ಟುಕೊಂಡಿದೆ. ಟಿಡಿಪಿಗೆ 2, ಜೆಡಿಯುಗೆ 2, ಜೆಡಿಎಸ್‌, ಶಿವಸೇನೆ, ಎಲ್‌ಜೆಪಿ, ಆರ್‌ಎಲ್‌ಡಿ ಮುಂತಾದ ಪಕ್ಷಗಳಿಗೆ ತಲಾ ಒಂದೊಂದು ಸ್ಥಾನಗಳನ್ನು ನೀಡಿದೆ. ಈಗ ಯಾವ ಖಾತೆ ಯಾರಿಗೆ ಎಂಬ ನಿರ್ಣಯ ಇನ್ನು ಆಗಬೇಕಿದೆ. ಮಿತ್ರಪಕ್ಷಗಳು ಮಹತ್ವದ ಖಾತೆಗಾಗಿ ಪಟ್ಟು ಹಿಡಿಯುತ್ತವೆಯೇ ಅಥವಾ ಕೊಟ್ಟದ್ದಕ್ಕೆ ತೃಪ್ತವಾಗುತ್ತವೆಯೇ ಎಂದು ನೋಡಬೇಕಿದೆ.

“ಒಕ್ಕೂಟ ವ್ಯವಸ್ಥೆಯ ಆಶಯ…” ನೂತನ ಪ್ರಧಾನಿ ಮೋದಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನ ಮಂತ್ರಿಯಾಗಿ (Prime minister) ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ (Narendra Modi) ಅವರಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ (CM Siddaramaiah) ಸಾಮಾಜಿಕ ಜಾಲತಾಣ X ಖಾತೆ ಮೂಲಕ ಶುಭ ಕೋರಿದ್ದಾರೆ.

“3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ @narendramodi ಅವರಿಗೆ ಅಭಿನಂದನೆಗಳು. ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ. ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜೊತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ” ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ.

ಇದನ್ನೂ ಓದಿ: Narendra Modi: 3ನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ; ಇಲ್ಲಿದೆ ಬಾಲ್ಯದಿಂದ ವಿಶ್ವನಾಯಕತನಕದ ಜೀವನ ಚಿತ್ರಣ

Continue Reading

ಸಿನಿಮಾ

Narendra Modi: ಪ್ರಧಾನಿ ಮೋದಿಗೆ ಸೆಲೆಬ್ರಿಟಿಗಳಿಂದ ಅಭಿನಂದನೆಗಳ ಮಹಾಪೂರ !

Narendra Modi: ಮೋದಿ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಾಲಿವುಡ್ ಸೆಲೆಬ್ರಿಟಿಗಳಾದ ಶಾರುಖ್ ಖಾನ್, ಅಕ್ಷಯ್ ಕುಮಾರ್, ಕಂಗನಾ ರಣಾವತ್‌, ವಿಕ್ರಾಂತ್ ಮಾಸ್ಸೆ ಮತ್ತು ಇತರ ಸೆಲೆಬ್ರಿಟಿಗಳು ಇದ್ದರು. ನರೇಂದ್ರ ಮೋದಿ ಅವರ ಜತೆಗೆ ಹಲವು ಸಂಸದರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶದಲ್ಲಿ 10 ವರ್ಷಗಳ ಬಳಿಕ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ಟಿಡಿಪಿ, ಜೆಡಿಯು, ಜೆಡಿಎಸ್‌ ಹಾಗೂ ಎಲ್‌ಜೆಪಿ ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

VISTARANEWS.COM


on

Narendra Modi Oath Ceremony Celebs Congratulate PM Modi
Koo

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಎನ್‌ಡಿಎ ಮೈತ್ರಿಕೂಟವು ಸ್ಪಷ್ಟ ಬಹುಮತ ಪಡೆದ ಬೆನ್ನಲ್ಲೇ ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ (Narendra Modi Oath) ಸ್ವೀಕರಿಸಿದ್ದಾರೆ. ದೆಹಲಿಯಲ್ಲಿರುವ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಪ್ರಮಾಣವಚನ ಬೋಧಿಸಿದಿರು. ಮೋದಿ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಾಲಿವುಡ್ ಸೆಲೆಬ್ರಿಟಿಗಳಾದ ಶಾರುಖ್ ಖಾನ್, ಅಕ್ಷಯ್ ಕುಮಾರ್, ಕಂಗನಾ ರಣಾವತ್‌, ವಿಕ್ರಾಂತ್ ಮಾಸ್ಸೆ ಮತ್ತು ಇತರ ಸೆಲೆಬ್ರಿಟಿಗಳು ಇದ್ದರು. ಸೆಲೆಬ್ರಿಟಿಗಳು ಮೋದಿ ಅವರಿಗೆ ವಿಶ್‌ ಮಾಡಿದ್ದು ಹೀಗೆ.

“3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು… ಕೌಶಲ್ಯ, ಅಭಿವೃದ್ಧಿ, ಶಿಕ್ಷಣ ಮತ್ತು ದೇಶದ ಸುರಕ್ಷತೆಯ ಕಡೆಗಿನ ನಿಮ್ಮ ಬದ್ಧತೆಗೆ ನಾವು ಧನ್ಯರು’…”ಎಂದು ನಟ ರಿಷಬ್‌ ಶೆಟ್ಟಿ ಎಕ್ಸ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: PM Narendra Modi: “ಒಕ್ಕೂಟ ವ್ಯವಸ್ಥೆಯ ಆಶಯ…” ಪ್ರಧಾನಿ ಮೋದಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ನಟ ಅಜಯ್ ದೇವಗನ್ “ಪ್ರಧಾನಿ ನರೇಂದ್ರಮೋದಿ ಜಿ ಅವರ ಮರು ಆಯ್ಕೆಯಾಗಿದ್ದಕ್ಕೆ ಅಭಿನಂದನೆಗಳು! ಅವರ ಬುದ್ಧಿವಂತಿಕೆ ಮತ್ತು ಸಹಾನುಭೂತಿಯಿಂದ ಸಮೃದ್ಧಿ ಮತ್ತು ಶ್ರೇಷ್ಠತೆಯ ಕಡೆಗೆ ಭಾರತವನ್ನು ಮಾರ್ಗದರ್ಶನ ಮಾಡುವಲ್ಲಿ ನಿರಂತರ ಯಶಸ್ಸನ್ನು ಬಯಸುತ್ತೇವೆ, ”ಎಂದು ಬರೆದುಕೊಂಡಿದ್ದಾರೆ.


ರಾಜ್‌ಕುಮಾರ್ ರಾವ್ ಅವರು ಎಕ್ಸ್‌ನಲ್ಲಿ “ಈ ಐತಿಹಾಸಿಕ ಮೂರನೇ ಸತತ ಗೆಲುವಿಗಾಗಿ ನಮ್ಮ ಗೌರವಾನ್ವಿತ ಪ್ರಧಾನಿ ಮೋದಿ ಜೀ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ನಾಯಕತ್ವದಲ್ಲಿ ನಮ್ಮ ದೇಶವು ಅಭಿವೃದ್ಧಿಗೆ ಬರಲಿ. ದೇವರು ನಿಮ್ಮನ್ನು ಆಶೀರ್ವದಿಸಲಿ ಸರ್ʼʼಎಂದು ಬರೆದುಕೊಂಡಿದ್ದಾರೆ.


ಅನುಪಮ್ ಖೇರ್ ಹೀಗೆ ಬರೆದುಕೊಂಡಿದ್ದಾರೆ “ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ. ಇಂದು ನಿಮ್ಮನ್ನು ಭೇಟಿಯಾಗಲು ನನಗೆ ತುಂಬಾ ಸಂತೋಷವಾಗಿದೆ. ದೇಶವಾಸಿಗಳಿಗಾಗಿ ನೀವು ಹಗಲಿರುಳು ಮಾಡುತ್ತಿರುವ ಶ್ರಮ ಸ್ಪೂರ್ತಿದಾಯಕ! ನಿಮ್ಮ ರಕ್ಷಣೆಗಾಗಿ ನನ್ನ ತಾಯಿ ಕಳುಹಿಸಿದ ರುದ್ರಾಕ್ಷಿ ಮಾಲೆಯನ್ನು ನೀವು ಸ್ವೀಕರಿಸಿದ ಗೌರವವನ್ನು ನಾವು ಯಾವಾಗಲೂ ಸ್ಮರಿಸುತ್ತೇವೆ. ಜೈ ಹೋ. ಜೈ ಹಿಂದ್!” ಎಂದು ಬರೆದುಕೊಂಡಿದ್ದಾರೆ.

“ಹೃತ್ಪೂರ್ವಕ ಅಭಿನಂದನೆಗಳು ನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ ಅವರಿಗೆ. ವಸುಧೈವ ಕುಟುಂಬಕಮ್‌ನ ತತ್ತ್ವಚಿಂತನೆಗಳಲ್ಲಿ ಪ್ರೀತಿ ಮತ್ತು ದಯೆಯಿಂದಾಗಿ ನೀವು ಕರುಣೆಯಿಂದ ನಮ್ಮನ್ನು ಅದ್ಭುತವಾದ ಬೆಳವಣಿಗೆ, ಪ್ರಗತಿ, ಸಮೃದ್ಧಿಯ ಯುಗಕ್ಕೆ ಕೊಂಡೊಯ್ಯುತ್ತೀರಿ. ಮತ್ತು ಜಗತ್ತು ವಿಸ್ಮಯದಿಂದ ನೋಡುವ ವೈಭವಯುತ ರಾಷ್ಟ್ರವನ್ನಾಗಿ ಮಾಡುತ್ತೀರಿ ಎಂದು ನಮಗೆ ತಿಳಿದಿದೆ. ನಿಮಗೆ ದೇವರು ಒಳ್ಳೆಯ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಆರ್ ಮಾಧವನ್ ಬರೆದಿದ್ದಾರೆ.

ಇದನ್ನೂ ಓದಿ: Niveditha Gowda: ಚಂದನ್‌ ಶೆಟ್ಟಿ-ನಿವೇದಿತಾ ನಡುವಿನ ವಯಸ್ಸಿನ ಅಂತರವೆಷ್ಟು?

ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಸೆಲೆಬ್ರಿಟಿಗಳು ಭಾಗಿ

ಸಮಾರಂಭದಲ್ಲಿ ರಜನಿಕಾಂತ್ ಅವರು ಭಾಗಿಯಾಗಿದ್ದರು. ಚೆನ್ನೈನಿಂದ ದೆಹಲಿಗೆ ತೆರಳುತ್ತಿದ್ದಾಗ ಸುದ್ದಿಗಾರರೊಂದಿಗೆ ನಟ ಮಾತನಾಡಿ ʻʻನಾನು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದೇನೆ. ಇದು ಅತ್ಯಂತ ಐತಿಹಾಸಿಕ ಕಾರ್ಯಕ್ರಮ. ಸತತ ಮೂರನೇ ಅವಧಿಗೆ ಮೋದಿ ಅವರು ಅಧಿಕಾರ ಸ್ವೀಕರಿಸುತ್ತಿದ್ದಾರೆ. ನರೇಂದ್ರ ಮೋದಿಯವರ ದೊಡ್ಡ ಸಾಧನೆಯಾಗಿದೆ, ಅವರಿಗೆ ನನ್ನ ಹೃತ್ಪೂರ್ವಕ ನಮಸ್ಕಾರಗಳು. ಇದು ಪ್ರಜಾಪ್ರಭುತ್ವದ ಆರೋಗ್ಯಕರ ಸಂಕೇತವಾಗಿದೆʼʼಎಂದರು.ವಿಶೇಷವೆಂದರೆ ತಮಿಳುನಾಡಿನಲ್ಲಿ ಬಿಜೆಪಿಗೆ ಒಂದು ಸೀಟು ಸಹ ಬಂದಿಲ್ಲ.

ನರೇಂದ್ರ ಮೋದಿ ಅವರ ಜತೆಗೆ ಹಲವು ಸಂಸದರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶದಲ್ಲಿ 10 ವರ್ಷಗಳ ಬಳಿಕ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ಟಿಡಿಪಿ, ಜೆಡಿಯು, ಜೆಡಿಎಸ್‌ ಹಾಗೂ ಎಲ್‌ಜೆಪಿ ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮದ ಲೈವ್‌ ವೀಕ್ಷಣೆಗೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಎಲ್‌ಇಡಿ ಪರದೆ, ಟಿವಿಗಳ ವ್ಯವಸ್ಥೆ ಮಾಡಿದ್ದರು. ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುತ್ತಲೇ ಭಾರತ್‌ ಮಾತಾ ಕೀ ಜೈ, ಮೋದಿ ಮೋದಿ ಎಂಬ ಘೋಷಣೆಗಳು ಮೊಳಗಿದವು.

Continue Reading

ಪ್ರಮುಖ ಸುದ್ದಿ

PM Narendra Modi: “ಒಕ್ಕೂಟ ವ್ಯವಸ್ಥೆಯ ಆಶಯ…” ಪ್ರಧಾನಿ ಮೋದಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ನೂತನ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಕ್ಕೂಟ ವ್ಯವಸ್ಥೆಯನ್ನು ನೆನಪಿಸುತ್ತಲೇ ಶುಭ ಕೋರಿದ್ದಾರೆ.

VISTARANEWS.COM


on

PM Narendra Modi and Siddaramaiah
Koo

ಬೆಂಗಳೂರು: ಪ್ರಧಾನ ಮಂತ್ರಿಯಾಗಿ (Prime minister) ಮೂರನೇ ಬಾರಿಗೆ ಪ್ರಮಾಣ ವಚನ (Oath) ಸ್ವೀಕರಿಸಿದ ನರೇಂದ್ರ ಮೋದಿ (Narendra Modi) ಅವರಿಗೆ ಕರ್ನಾಟಕ (Karnataka) ಸಿಎಂ ಸಿದ್ದರಾಮಯ್ಯ (CM Siddaramaiah) ಸಾಮಾಜಿಕ ಜಾಲತಾಣ X ಖಾತೆ ಮೂಲಕ ಶುಭ ಕೋರಿದ್ದಾರೆ.

“3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ @narendramodi ಅವರಿಗೆ ಅಭಿನಂದನೆಗಳು. ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ. ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜೊತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ” ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ.

ಬೆಂಗಳೂರು: ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ(NDA) ಅಧಿಕಾರಕ್ಕೆ ಬಂದಿದೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ (Narendra Modi) ಇಂದು (ಜೂನ್‌ 9) ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದು, ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇದಕ್ಕಾಗಿ ಸಿದ್ಧತೆ ಪೂರ್ಣಗೊಂಡಿದೆ. ಈ ಬಾರಿ ಬಿಜೆಪಿಗೆ ಜೆಡಿಎಸ್‌ ಕೂಡ ಬೆಂಬಲ ಸೂಚಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ಆದರೆ ಅನಾರೋಗ್ಯ ಕಾರಣದಿಂದ ಮಾಜಿ ಪ್ರಧಾನ ಮಂತ್ರಿ ಎಚ್‌.ಡಿ.ದೇವೇಗೌಡ (HD Deve Gowda) ಅವರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅಭಿನಂದನೆ ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ದೇವೇಗೌಡ ಅವರು ಅದನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ʼʼನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾನ ವಚನ ಸ್ವೀಕರಿಸುತ್ತಿದ್ದಾರೆ. ಈ ಐತಿಹಾಸಿಕ ಸಂದರ್ಭದಲ್ಲಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತಿದ್ದೇನೆ. ಅನಾರೋಗ್ಯದ ಕಾರಣದಿಂದ ನನಗೆ ಈ ಕಾರ್ಯಕ್ರಮದಲ್ಲಿ ಭಾವಹಿಸಲು ಸಾಧ್ಯವಾಗುತ್ತಿಲ್ಲ. ಆದರೆ ಖಂಡಿತವಾಗಿಯೂ ನಾನು ಟಿವಿಯಲ್ಲಿ ಲೈವ್‌ನಲ್ಲೇ ಕಾರ್ಯಕ್ರಮವನ್ನು ವೀಕ್ಷಿಸುತ್ತೇನೆ. ಕಾಂಗ್ರೆಸ್ ಏನೇ ಹೇಳಲಿ, ಭಾರತೀಯ ಪ್ರಜಾಪ್ರಭುತ್ವವು ದೃಢವಾಗಿದೆʼʼ ಎಂದು ದೇವೇಗೌಡ ಅವರು ಬರೆದುಕೊಂಡಿದ್ದಾರೆ.

ಬಿಜೆಪಿ ಗೆದ್ದಿದ್ದಕ್ಕೆ ತನ್ನ ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ ಮೋದಿ ‘ಭಕ್ತ’!

ರಾಯ್‌ಪುರ: ದೇಶದಲ್ಲಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ, ಆರಾಧಿಸುವ, ಅವರ ಪರವಾಗಿ ವಾದ ಮಾಡುವ, ಸಮಯ ಬಂದರೆ ಜಗಳಕ್ಕೂ ನಿಲ್ಲುವ ‘ಭಕ್ತರು’ ಇದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಛತ್ತೀಸ್‌ಗಢದಲ್ಲಿ (Chhattisgarh) ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ದೇವರಿಗೆ ತನ್ನ ಬೆರಳನ್ನೇ ಅರ್ಪಿಸಿದ್ದಾನೆ. ಆ ಮೂಲಕ ಆತ ಅಭಿಮಾನ ಮೆರೆದಿದ್ದಾನೆ.

ಹೌದು, ಛತ್ತೀಸ್‌ಗಢದ ಬಲರಾಮ್‌ಪುರದಲ್ಲಿ ದುರ್ಗೇಶ್‌ ಪಾಂಡೆ ಎಂಬ 30 ವರ್ಷದ ವ್ಯಕ್ತಿಯು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಬಹುಮತ ಪಡೆದ ಹಿನ್ನೆಲೆಯಲ್ಲಿ ದೇವಾಲಯ ತೆರಳಿ, ಕಾಳಿ ದೇವಿಗೆ ತನ್ನ ಬೆರಳನ್ನೇ ಅರ್ಪಿಸಿದ್ದಾನೆ. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಜೂನ್‌ 4ರಂದೇ ಆತನು ಕಾಳಿ ದೇವಸ್ಥಾನಕ್ಕೆ ತೆರಳಿ, ತನ್ನ ಎಡಗೈ ಬೆರಳನ್ನು ಕತ್ತರಿಸಿ ದೇವತೆಗೆ ಅರ್ಪಿಸಿದ್ದಾನೆ. ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು 290 ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇದರ ಖುಷಿ ತಾಳದೆ ಆತ ಬೆರಳು ಕತ್ತರಿಸಿಕೊಳ್ಳುವ ಸಾಹಸಕ್ಕೆ ಕೈ ಹಾಕಿದ್ದಾನೆ ಎಂದು ತಿಳಿದುಬಂದಿದೆ.

ದೇವಸ್ಥಾನದಲ್ಲಿ ಬೆರಳು ಕತ್ತರಿಸಿಕೊಂಡ ಬಳಿಕ ವಿಪರೀತ ರಕ್ತಸ್ರಾವ ಉಂಟಾಗಿದೆ. ಇದರಿಂದ ಆತಂಕಕ್ಕೀಡಾದ ಕುಟುಂಬಸ್ಥರು ವ್ಯಕ್ತಿಯನ್ನು ಸಮಾರಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಕೂಡಲೇ ಅಂಬಿಕಾಪುರ ಮೆಡಿಕಲ್‌ ಕಾಲೇಜಿಗೆ ಹೋಗಿ ಎಂದು ಸೂಚಿಸಿದ್ದಾರೆ. ಅದರಂತೆ, ದುರ್ಗೇಶ್‌ ಪಾಂಡೆ ಅವರನ್ನು ಅಂಬಿಕಾಪುರ ಮೆಡಿಕಲ್‌ ಕಾಲೇಜಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ, ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ರಕ್ತಸ್ರಾವವನ್ನು ನಿಲ್ಲಿಸಿದ್ದಾರೆ. ಸದ್ಯ, ದುರ್ಗೇಶ್‌ ಪಾಂಡೆ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Mamata Banerjee: 15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: 3ನೇ ಬಾರಿಯ ‘ವಿಸ್ತೃತ’ ಸರ್ಕಾರವು ‘ವಿಕಸಿತ ಭಾರತ’ಕ್ಕೆ ಶ್ರಮಿಸಲಿ

ಲೋಕಸಭೆ ಚುನಾವಣೆ ಫಲಿತಾಂಶವು ಹಲವು ಬದಲಾವಣೆಗಳಿಗೆ ಕಾರಣವಾಗಿದೆ. ಬಿಜೆಪಿಗೆ ಇದ್ದ ಬಹುಮತ ಈಗ ಇಲ್ಲದ ಕಾರಣ ಮೈತ್ರಿಪಕ್ಷಗಳ ಮರ್ಜಿಗೆ ಕಾಯಬೇಕಿದೆ. ಅತ್ತ, ಕಾಂಗ್ರೆಸ್‌ ಮುಂದಾಳತ್ವದ ಇಂಡಿಯಾ ಒಕ್ಕೂಟವೂ ಬಲಿಷ್ಠವಾಗಿದೆ. ಹಾಗಾಗಿ, 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ನರೇಂದ್ರ ಮೋದಿ ಅವರು ಮೈತ್ರಿಪಕ್ಷಗಳ ಜತೆ ಸಮನ್ವಯ ಸಾಧಿಸುವ ಜತೆಗೆ ಪ್ರತಿಪಕ್ಷಗಳನ್ನೂ ಎದುರಿಸಬೇಕಿದೆ. ಇದರ ಮಧ್ಯೆ, ವಿಕಸಿತ ಭಾರತದ ಕನಸು ಸಾಕಾರಗೊಳ್ಳಲು ಕೂಡ ನೂತನ ಸರ್ಕಾರ ಹೆಚ್ಚು ಶ್ರಮ ವಹಿಸಬೇಕಿದೆ.

VISTARANEWS.COM


on

pm narendra Modi Cabinet
Koo

ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಬಹುಮತ ಸಾಧಿಸಿದ್ದು, ನರೇಂದ್ರ ಮೋದಿ (Narendra Modi) ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರ ಜತೆಗೆ ಅನುಭವಿಗಳು, ಮೈತ್ರಿ ಪಕ್ಷಗಳ ಸಂಸದರು, ಯುವ ಸಂಸದರು ಸೇರಿ ಹಲವು ಮಾನದಂಡಗಳನ್ನು ಆಧರಿಸಿ ಆಯ್ಕೆ ಮಾಡಿದ 72 ಸಂಸದರು ಸಚಿವರಾಗಿ (Modi 3.0 Cabinet) ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ಸುಮಾರು 80 ದಿನಗಳಿಗೂ ಅಧಿಕ ಅವಧಿವರೆಗೆ 7 ಹಂತಗಳಲ್ಲಿ ಮತದಾನ ನಡೆದು, ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ, ಈಗ ನರೇಂದ್ರ ಮೋದಿ ಅವರ ನೇತೃತ್ವದಲ್ಲಿಯೇ ಸತತ ಮೂರನೇ ಬಾರಿಗೆ ಎನ್‌ಡಿಎ ಸರ್ಕಾರವೇ ಅಧಿಕಾರಕ್ಕೆ ಬಂದಿದೆ. ಹಾಗಾಗಿ, ಚುನಾವಣೆ ಸಮಯದ ರಾಜಕೀಯ ಮೇಲಾಟ, ಆರೋಪ, ಪ್ರತ್ಯಾರೋಪ, ಟೀಕೆ, ವ್ಯಂಗ್ಯ, ತಿರುಗೇಟುಗಳನ್ನು ಬಿಟ್ಟು, ಆಡಳಿತ ಪಕ್ಷದವರು ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ ನಿರ್ಮಾಣದ ಕನಸನ್ನು ನನಸಾಗಿಸಲು ಶ್ರಮಿಸಬೇಕಿದೆ. ಚುನಾವಣೆ ನೀತಿ ಸಂಹಿತೆ, ಫಲಿತಾಂಶದ ಹಿನ್ನೆಲೆಯಲ್ಲಿ ನಿಂತ ನೀರಾಗಿದ್ದ ಆಡಳಿತ ಯಂತ್ರಕ್ಕೆ ಈಗ ವೇಗ ನೀಡಬೇಕಿದೆ.

ಹಾಗೆ ನೋಡಿದರೆ, ವಿಕಸಿತ ಭಾರತದ ಕಲ್ಪನೆ ಸಾಕಾರಗೊಳಿಸಲು ದೇಶದಲ್ಲಿ ಸಕಾರಾತ್ಮಕ ವಾತಾವರಣವೇ ಇದೆ. ದೇಶದ ಜಿಡಿಪಿ ಬೆಳವಣಿಗೆಯ ಕುರಿತು ಅಂದಾಜಿಸಲಾಗಿದೆ. ಹಣದುಬ್ಬರವೂ ನಿಯಂತ್ರಣಕ್ಕೆ ಬರುತ್ತಿದೆ. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರವು ಮೂಲ ಸೌಕರ್ಯ ಯೋಜನೆಗಳಿಗೆ ಒತ್ತು ನೀಡಿರುವುದು, ರೈಲು, ರೈಲು ನಿಲ್ದಾಣಗಳ ಆಧುನೀಕರಣ, ದಾಖಲೆ ವೇಗದಲ್ಲಿ ರಸ್ತೆ ನಿರ್ಮಾಣ, ಅತ್ಯಾಧುನಿಕ ವಿಮಾನ ನಿಲ್ದಾಣಗಳು ತಲೆ ಎತ್ತಿರುವುದು, ಇಸ್ರೋ ಬಾಹ್ಯಾಕಾಶ ಯೋಜನೆಗಳಿಗೆ ಉತ್ತೇಜನ ನೀಡಿರುವುದು ಸೇರಿ ಹಲವು ಕಾರ್ಯಕ್ರಮಗಳು ದೇಶದ ಅಭಿವೃದ್ದಿ ಮಾನದಂಡವನ್ನು ದುಪ್ಪಟ್ಟುಗೊಳಿಸಿವೆ. ಇದರಿಂದಾಗಿ ಸರ್ಕಾರದ ಸಚಿವರು, ಸಂಸದರು ವಿಕಸಿತ ಭಾರತದ ಕಲ್ಪನೆಯ ಸಾಕಾರಗೊಳಿಸಲು ಹೆಚ್ಚಿನ ಶ್ರಮ ವಹಿಸಬೇಕು. ಹೊಸ ಹೊಸ ಯೋಜನೆಗಳು, ಯೋಜನೆಗಳ ಸಮರ್ಪಕ ಜಾರಿ ಮೂಲಕ ದೇಶದ ಏಳಿಗೆಗೆ ಇನ್ನಷ್ಟು ಕೊಡುಗೆ ನೀಡಬೇಕು.

ಕೇಂದ್ರದಲ್ಲಿ 10 ವರ್ಷಗಳಿಂದ ಇದ್ದ ಬಹುಮತದ ಸರ್ಕಾರ ಈಗಿಲ್ಲ. ಬಿಜೆಪಿಯು 240 ಸೀಟುಗಳಿಗೆ ಸೀಮಿತವಾಗಿದ್ದು, ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹಾಗಾಗಿ, ಮೋದಿ ಸರ್ಕಾರವು ಸುಸ್ಥಿರ ಆಡಳಿತ ನೀಡಬೇಕು ಎಂದರೆ ಮೈತ್ರಿಕೂಟದಲ್ಲಿ ಸ್ಥಿರತೆ ಕಾಪಾಡಬೇಕು, ಸಮನ್ವಯತೆ ಸಾಧಿಸಬೇಕು. ಪ್ರಾದೇಶಿಕ ಪಕ್ಷಗಳಿಗೆ, ಪ್ರಾದೇಶಿಕ ಪಕ್ಷಗಳ ರಾಜ್ಯಗಳಿಗೆ ಹೆಚ್ಚಿನ ಮನ್ನಣೆ ನೀಡಬೇಕು. ಧರ್ಮ, ಜಾತಿಯ ವಿಷಯಗಳಿಗೆ ಪ್ರಾಮುಖ್ಯತೆ ಕೊಡದೆ, ಎಲ್ಲ ಮೈತ್ರಿ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರವನ್ನು ಮುನ್ನಡೆಸಬೇಕು. ಮೋದಿ ಸರ್ಕಾರವು ಉದ್ಯಮಿಗಳ ಪರವಾದ ಸರ್ಕಾರ ಎಂಬ ಕುಖ್ಯಾತಿ ಇತ್ತೀಚಿನ ವರ್ಷಗಳಲ್ಲಿ ಜಾಸ್ತಿಯಾಗಿದೆ. ಅಡುಗೆ ಅನಿಲ, ಪೆಟ್ರೋಲ್-ಡೀಸೆಲ್‌ ಸೇರಿ ಅಗತ್ಯ ವಸ್ತುಗಳ ಬೆಲೆಯೇರಿಕೆಯು ಬಡ ಹಾಗೂ ಮಧ್ಯಮ ವರ್ಗದವರನ್ನು ಹೈರಾಣಾಗಿಸಿದೆ. ಇಂತಹ ವಿಷಯಗಳ ಕುರಿತು ಮೋದಿ ಹಾಗೂ ಟೀಮ್‌ ಗಮನ ಹರಿಸಬೇಕು. ಬಜೆಟ್‌ನಲ್ಲಿ ಬಡವರು ಹಾಗೂ ಮಧ್ಯಮ ವರ್ಗದವರಿಗೆ ನೇರವಾಗಿ ಅನುಕೂಲವಾಗುವ (ಕಿಸಾನ್‌ ಸಮ್ಮಾನ್‌, ಅಡುಗೆ ಅನಿಲ ಸಿಲಿಂಡರ್‌ಗಳಿಗೆ ಸಬ್ಸಿಡಿ ಹೆಚ್ಚಳ ಇತ್ಯಾದಿ) ಯೋಜನೆಗಳನ್ನು ಘೋಷಿಸಬೇಕು.

ಕಳೆದ 10 ವರ್ಷಗಳಲ್ಲಿ ಲೋಕಸಭೆಯಲ್ಲಿ ಬಲಿಷ್ಠ ಪ್ರತಿಪಕ್ಷವೇ ಇರಲಿಲ್ಲ. ಕಾಂಗ್ರೆಸ್‌ ಸೇರಿ ಯಾವೊಂದು ಪಕ್ಷವೂ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆಯುವಷ್ಟು ಸಮರ್ಥವಾಗಿರಲಿಲ್ಲ. ಇದು ಕೂಡ ಮೋದಿ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟಿತ್ತು. ಆದರೆ, ಫಲಿತಾಂಶದ ಬಳಿಕ ಚಿತ್ರಣ ಬದಲಾಗಿದೆ. ಕಾಂಗ್ರೆಸ್‌ 52 ಕ್ಷೇತ್ರಗಳಿಂದ 99 ಕ್ಷೇತ್ರಗಳಿಗೆ ತನ್ನ ಸದಸ್ಯ ಬಲವನ್ನು ಹೆಚ್ಚಿಸಿಕೊಂಡಿದೆ. ಇಂಡಿಯಾ ಒಕ್ಕೂಟವು ಒಗ್ಗಟ್ಟಾಗಿ 232 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಹಾಗಾಗಿ, ಸಮ್ಮಿಶ್ರ ಸರ್ಕಾರಕ್ಕೆ ಆಡಳಿತ ನಡೆಸುವುದು ಹಗ್ಗದ ಮೇಲಿನ ನಡಿಗೆಯೇ ಆಗಿದೆ. ಇನ್ನು, ಕಳೆದ 10 ವರ್ಷಗಳಿಂದ ಬಲಿಷ್ಠವಾಗಿ, ಸಮರ್ಥವಾಗಿ ಕಾರ್ಯನಿರ್ವಹಿಸದ ಪ್ರತಿಪಕ್ಷಗಳು ಇನ್ನಾದರೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಬೇಕು. ಸರ್ಕಾರ ಲಯ ತಪ್ಪಿದಾಗ ಸರಿದಾರಿಗೆ ತರಬೇಕು. ಸರ್ಕಾರಕ್ಕೆ ಆಗಾಗ ಎಚ್ಚರಿಕೆ ನೀಡುವ ಜತೆಗೆ ಚಾಟಿ ಬೀಸಬೇಕು. ಒಟ್ಟಿನಲ್ಲಿ, ಸಬಲ ಸಮ್ಮಿಶ್ರ ಸರ್ಕಾರ ಹಾಗೂ ಪ್ರಬಲ ಪ್ರತಿಪಕ್ಷಗಳು ಕೂಡಿ ದೇಶದ ಏಳಿಗೆಗೆ, ವಿಕಸಿತ ಭಾರತ ಕಲ್ಪನೆಯ ಸಾಕಾರಕ್ಕೆ ಶ್ರಮಿಸಬೇಕು ಎಂಬುದೇ ಎಲ್ಲರ ಆಶಯವಾಗಿದೆ.

ಇದನ್ನೂ ಓದಿ: Modi 3.0 Cabinet: ನಡ್ಡಾ To ಎಚ್‌ಡಿಕೆ ;‌ ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಹೊಸ ಮುಖಗಳಿವು

Continue Reading
Advertisement
Vastu Tips
ಧಾರ್ಮಿಕ4 mins ago

Vastu Tips: ನೆಮ್ಮದಿಯಿಂದ ನಿದ್ದೆ ಮಾಡಬೇಕೆ? ಈ ವಾಸ್ತು ನಿಯಮ ಪಾಲಿಸಿ

pm narendra Modi Cabinet
ಪ್ರಮುಖ ಸುದ್ದಿ4 mins ago

PM Narendra Modi: ಇಂದು ಸಂಜೆ ನರೇಂದ್ರ ಮೋದಿ ಸಂಪುಟ ಮೊದಲ ಸಭೆ; ಏನು ಅಜೆಂಡಾ?

Narendra Modi Oath Ceremony Celebs Congratulate PM Modi
ಸಿನಿಮಾ21 mins ago

Narendra Modi: ಪ್ರಧಾನಿ ಮೋದಿಗೆ ಸೆಲೆಬ್ರಿಟಿಗಳಿಂದ ಅಭಿನಂದನೆಗಳ ಮಹಾಪೂರ !

IND vs PAK
ಪ್ರಮುಖ ಸುದ್ದಿ23 mins ago

IND vs PAK : ಭಾರತ ಪರ ಬೆಟ್ಟಿಂಗ್ ಕಟ್ಟಿ 5.4 ಕೋಟಿ ರೂಪಾಯಿ ಗೆದ್ದ ಕೆನಡಾದ ರ್ಯಾಪರ್ ಡ್ರೇಕ್!

IND vs PAK
ಕ್ರೀಡೆ50 mins ago

IND vs PAK : ಪಾಕಿಸ್ತಾನದ ಆಟಗಾರನಿಗೆ ಕಣ್ಣೀರು ಹಾಕಿಸಿದ ಭಾರತ ತಂಡ!

PM Narendra Modi and Siddaramaiah
ಪ್ರಮುಖ ಸುದ್ದಿ1 hour ago

PM Narendra Modi: “ಒಕ್ಕೂಟ ವ್ಯವಸ್ಥೆಯ ಆಶಯ…” ಪ್ರಧಾನಿ ಮೋದಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

IND vs PAK
ಕ್ರೀಡೆ1 hour ago

IND vs PAK : ‘ಗೆಲುವಿಗೆ ಮೊದಲೇ ಸಂಭ್ರಮಿಸಬೇಡಿ, ವಿಶ್ವ ಕಪ್​ನಲ್ಲಿ ನಮ್ದೇ ಹವಾ’; ಪಾಕಿಸ್ತಾನಕ್ಕೆ ತಿರುಗೇಟು ಕೊಟ್ಟ ಭಾರತದ ಅಭಿಮಾನಿಗಳು

road rage assault case
ಕ್ರೈಂ2 hours ago

Assault Case: ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ತಡೆಗಟ್ಟಿ ಹಲ್ಲೆ ಮಾಡಿದ ಕ್ರೂರಿಗಳು!

IND vs PAK
ಪ್ರಮುಖ ಸುದ್ದಿ2 hours ago

IND vs PAK : ಸಿರಾಜ್​ ಚೆಂಡಿನ ಹೊಡೆತಕ್ಕೆ ಪಿಚ್​ನಲ್ಲೇ ಅಡ್ಡಡ್ಡ ಮಲಗಿದ​ ರಿಜ್ವಾನ್​; ಇಲ್ಲಿದೆ ವಿಡಿಯೊ

Shikakai For Hair
ಆರೋಗ್ಯ2 hours ago

Shikakai For Hair: ತಲೆ ಕೂದಲಿಗೆ ಶ್ಯಾಂಪೂ ಒಳ್ಳೆಯದೋ ಸೀಗೆಕಾಯಿ ಸೂಕ್ತವೋ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌