ವಿಸ್ತಾರ TOP 10 NEWS | ಕರಾವಳಿಯ ರಣಮಳೆಯಿಂದ ಬುಮ್ರಾ ರನ್‌ ಮಳೆವರೆಗೆ ಪ್ರಮುಖ ಸುದ್ದಿಗಳಿವು - Vistara News

ಟಾಪ್ 10 ನ್ಯೂಸ್

ವಿಸ್ತಾರ TOP 10 NEWS | ಕರಾವಳಿಯ ರಣಮಳೆಯಿಂದ ಬುಮ್ರಾ ರನ್‌ ಮಳೆವರೆಗೆ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara top 10 news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕರ್ನಾಟಕದಂತೆಯೇ ದಕ್ಷಿಣದ ಇನ್ನಿತರ ರಾಜ್ಯಗಳಲ್ಲೂ ತನ್ನ ಬಲವರ್ಧನೆಗೆ ಹೈದರಾಬಾದ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಆಯೋಜಿಸಿದೆ ಎನ್ನುತ್ತಿರುವಾಗಲೇ, ವಿರೋಧ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್‌ ಸಿನ್ಹಾ ಅವರ ಕಾರ್ಯಕ್ರಮದ ಮೂಲಕ ತೆಲಂಗಾಣ ಸಿಎಂ ಶಕ್ತಿಪ್ರದರ್ಶನ ಮಾಡಿದ್ದಾರೆ. ರಾಜ್ಯದ ಕರಾವಳಿಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದರೆ ಅತ್ತ ಕ್ರಿಕೆಟ್‌ನಲ್ಲಿ ಬೌಲರ್‌ ಜಸ್‌ಪ್ರಿತ್‌ ಬುಮ್ರಾ ಒಂದೇ ಓವರ್‌ನಲ್ಲಿ 35 ರನ್‌ ಸುರಿಮಳೆಗೈದಿದ್ದಾರೆ ಎಂಬುದರ ಜತೆಗೆ ದೇಶದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. ಬಿಜೆಪಿ ಕಾರ್ಯಕಾರಿಣಿಗೆ ಕೆಸಿಆರ್‌ ಕೌಂಟರ್‌; ಬಲ ಪ್ರದರ್ಶನಕ್ಕಾಗಿ ಯಶವಂತ್‌ ಸಿನ್ಹಾರನ್ನು ಕರೆಸಿದ ಸಿಎಂ
ತೆಲಂಗಾಣದಲ್ಲಿ ಶನಿವಾರ ಹಾಗೂ ಭಾನುವಾರ ಬಿಜೆಪಿ ಕಾರ್ಯಕಾರಿಣಿ ದೊಡ್ಡ ಉತ್ಸವದ ರೂಪದಲ್ಲಿ ನಡೆಯಲಿದೆ. ಈಗಾಗಲೇ ನಗರದ ಬಹುತೇಕ ಮಾರ್ಗಗಳೆಲ್ಲ ಕೇಸರಿಮಯವಾಗಿ ಬಿಜೆಪಿ ಬಾವುಟಗಳು, ಪ್ರಧಾನಿ ಮೋದಿ, ಅಮಿತ್‌ ಶಾ, ಜೆ.ಪಿ. ನಡ್ಡಾರ ಪೋಸ್ಟರ್‌ಗಳಿಂದ ರಾರಾಜಿಸುತ್ತಿವೆ. ತೆಲಂಗಾಣ ಕೇಸರಿಯಾಗಿದ್ದು, ಸಹಜವಾಗಿಯೇ ಅಲ್ಲಿನ ಆಡಳಿತ ಪಕ್ಷ ಟಿಆರ್‌ಎಸ್‌ಗೆ ಉರಿ ಮುಟ್ಟಿಸಿದೆ. ಕೆ. ಚಂದ್ರಶೇಖರ್‌ ರಾವ್‌ ಸದಾ ಬಿಜೆಪಿ ವಿರುದ್ಧ ಕಿಡಿಕಾರುತ್ತಾರೆ. ಅವರು ಬಿಜೆಪಿಗೆ ಕೌಂಟರ್‌ ಕೊಡುತ್ತಿದ್ದು, ಮೋದಿ ಆಗಮಿಸಿದ ದಿನವೇ ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ ಸಿನ್ಹಾ ಅವರ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ನಗರವನ್ನು ಗುಲಾಬಿಮಯವಾಗಿಸಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)
ವಿಸ್ತಾರ Explainer: ಬಿಜೆಪಿ ಕಾರ್ಯಕಾರಿಣಿ, ಟಿಆರ್‌ಎಸ್‌ ಜತೆ ಫೈನಲ್‌ ಫೈಟ್‌ಗೆ ಮುಹೂರ್ತ?

2. Rain News | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅವಾಂತರ: ತೋಟ, ಮನೆಗಳಿಗೆ ನುಗ್ಗಿದ ನೀರು
ರಾಜ್ಯಾದ್ಯಂತ ಮುಂಗಾರು ಅಬ್ಬರ ದಿನೇದಿನೆ ತೀವ್ರತೆಯನ್ನು ಪಡೆದುಕೊಳ್ಳುತ್ತಿದ್ದು, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಶುಕ್ರವಾರ (ಜು.1) ರಾತ್ರಿಯಿಂದ ಭಾರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ವರ್ಷ ದಾಖಲೆಯ ಮಳೆಯಾಗಿದ್ದು, 2005 ರಲ್ಲಿ 106 ಮಿ.ಮೀ. ಮಳೆ ದಾಖಲಾಗಿತ್ತು. ಲಭ್ಯ ಮಾಹಿತಿ ಪ್ರಕಾರ 47 ವರ್ಷದಲ್ಲಿ ಎರಡನೇ ಬಾರಿ ಧಾರಾಕಾರ ಮಳೆಯಾಗಿದೆ. ಸುಳ್ಯ ನಗರದಲ್ಲಿ 136 ಮಿ.ಮೀ. ಮಳೆಯಾಗಿದೆ ಎಂದು ಮಳೆ ದಾಖಲುಕಾರರಾದ ಎಂದು ಪಿ.ಜಿ.ಎಸ್.ಎನ್.ಪ್ರಸಾದ್ ಹಾಗೂ ಶ್ರೀಧರ್‌ ರಾವ್ ಮಾಹಿತಿ ನೀಡಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

3. Rajasthan murder: ಬಿಜೆಪಿಯೊಳಗೆ ನುಸುಳಲು ಸಂಚು ನಡೆಸಿದ್ದ ಕನ್ಹಯ್ಯ ಲಾಲ್‌ ಹಂತಕರು!
ರಾಜಸ್ಥಾನದ ಉದಯಪುರದಲ್ಲಿ ಟೇಲರ್‌ ಕನ್ಹಯ್ಯ ಲಾಲ್‌ ಅವರನ್ನು ಬರ್ಬರವಾಗಿ ಕೊಲೆ ಮಾಡಿದ ಮೊಹಮ್ಮದ್‌ ರಿಯಾಜ್‌ ಅಟ್ಟಾರಿ ಮತ್ತು ಮಹಮ್ಮದ್‌ ಗೌಸ್‌ ಎಂಬ ದುಷ್ಟರು ಬಿಜೆಪಿ ಜತೆ ಸಂಪರ್ಕ ಹೊಂದಿದ್ದರೇ ಎಂಬ ಚರ್ಚೆ ಜೋರಾಗಿದೆ. ಈ ನಡುವೆ, ಅವರಿಬ್ಬರೂ ಬಿಜೆಪಿಯೊಳಗೆ ನುಸುಳಿ ಪಕ್ಷದ ಸ್ಥಳೀಯ ನಾಯಕರನ್ನು ಕೊಲ್ಲಲು ಸಂಚು ನಡೆಸುತ್ತಿದ್ದರು ಎಂಬ ಟ್ವಿಸ್ಟ್‌ ಸಿಕ್ಕಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

೪. IBPS Clerk Recruitment 2022 | ಬ್ಯಾಂಕ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕನ್ನಡದಲ್ಲಿಯೇ ನಡೆಯಲಿದೆ ಎಕ್ಸಾಮ್
ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) 11 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳ (IBPS Clerk Recruitment 2022) ನೇಮಕಕ್ಕಾಗಿ ‘ಸಾಮಾನ್ಯ ಪ್ರವೇಶ ಪರೀಕ್ಷೆ’ ನಡೆಸಲಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಜುಲೈ ೨೧ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

೫. ಒಂದೇ ಓವರ್‌ನಲ್ಲಿ 35 ರನ್‌, ಬುಮ್ರಾ World Record
ಭಾರತ ಕ್ರಿಕೆಟ್‌ ತಂಡದ ವೇಗದ ಬೌಲರ್‌ ಹಾಗೂ ಟೆಸ್ಟ್‌ ತಂಡದ ಹಂಗಾಮಿ ನಾಯಕ ಜಸ್‌ಪ್ರಿತ್‌ ಬುಮ್ರಾ ಟೆಸ್ಟ್‌ ಮಾದರಿಯಲ್ಲಿ ಹೊಸ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ. ಆದರೆ ಅದು ಬೌಲಿಂಗ್‌ನಲ್ಲಿ ಅಲ್ಲ, ಬ್ಯಾಟಿಂಗ್‌ನಲ್ಲಿ. ಓವರ್‌ ಒಂದರಲ್ಲಿ ಗರಿಷ್ಠ (೩೫ ರನ್‌) ಬಾರಿಸುವ ಮೂಲಕ ಅವರು world record ಮಾಡಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)
ವಿದೇಶಿ ನೆಲದಲ್ಲಿ ಮೊದಲ Century ಬಾರಿಸಿದ ಜಡೇಜಾ

೬. ವರುಷ ಎಂಟು, ಅವಾಂತರಗಳು ನೂರೆಂಟು: ನರೇಂದ್ರ ಮೋದಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಪುಸ್ತಕ
ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಅಸ್ತಿತ್ವಕ್ಕೆ ಬಂದು ಎಂಟು ವರ್ಷದ ತುಂಬಿದ ಹಿನ್ನೆಲೆಯಲ್ಲಿ ಸರ್ಕಾರ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಇತ್ತ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ʻವರುಷ ಎಂಟು, ಅವಾಂತರಗಳು ನೂರೆಂಟುʼ ಎಂಬ ೪೦ ಪುಟದ ಕಿರುಪುಸ್ತಕ ಸಿದ್ಧಪಡಿಸಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಈ ಎಂಟು ವರ್ಷಗಳ ಸಂಭ್ರಮಾಚರಣೆ, ಸುಳ್ಳಿನ ಆಚರಣೆ. ಜನತೆಗೆ ಕೊಟ್ಟ ಭರವಸೆಗಳನ್ನು ಈಡೇರಿಸಲಾಗದೆ ಜನದ್ರೋಹದ ಕೆಲಸ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

7. ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ: ವಿದ್ಯುತ್‌ ಸಂಪರ್ಕ ಪಡೆಯಲು ʻಒಸಿʼ ಬೇಡ
ಬೆಂಗಳೂರಿನ ಸುಮಾರು ಐದು ಲಕ್ಷಕ್ಕೂ ಹೆಚ್ಚು ಹಾಗೂ ರಾಜ್ಯದ ವಿವಿಧ ನಗರ ಪ್ರದೇಶದ ಲಕ್ಷಾಂತರ ಕಟ್ಟಡ ಮಾಲೀಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಗೃಹ, ವಾಣಿಜ್ಯ ಬಳಕೆ ಉದ್ದೇಶಕ್ಕೆ ವಿದ್ಯುತ್‌ ಸಂಪರ್ಕ ಪಡೆಯಲು ಸ್ಥಳೀಯ ಸಂಸ್ಥೆಗಳಿಂದ ಪಡೆಯಬೇಕಿದ್ದ ಸ್ವಾಧೀನಾನುಭವ ಪ್ರಮಾಣಪತ್ರ(ಒಸಿ) ಪಡೆಯುವ ಅಗತ್ಯ ಇಲ್ಲ ಎಂದು ತಿಳಿಸಿದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಡಿ.ಕೆ. ಶಿವಕುಮಾರ್‌ ಇಂಧನ ಸಚಿವರಾಗಿದ್ದಾಗ ಜಾರಿಗೆ ತಂದಿದ್ದ ನಿಯಮವನ್ನು ಇದೀಗ ಸಿಎಂ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಇಂಧನ ಸಚಿವ ವಿ. ಸುನಿಲ್‌ ಕುಮಾರ್‌ ತೆಗೆದುಹಾಕಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

8. ಕಾಂಗ್ರೆಸ್‌ ಮಾಜಿ ನಾಯಕ ಕ್ಯಾ. ಅಮರಿಂದರ್‌ ಸಿಂಗ್‌ ಎನ್‌ಡಿಎ ಒಕ್ಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ?
ಕಾಂಗ್ರೆಸ್‌ ಮಾಜಿ ನಾಯಕ, ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರು ಎನ್‌ಡಿಎ ಒಕ್ಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಆಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಅವರ ಕಚೇರಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಕಳೆದ ವರ್ಷ ಕಾಂಗ್ರೆಸ್‌ ಬಿಟ್ಟ ನಂತರ, ಪಂಜಾಬ್‌ ಲೋಕ್‌ ಕಾಂಗ್ರೆಸ್‌ ಪಾರ್ಟಿ ಕಟ್ಟಿರುವ ಅವರು, ಏಪ್ರಿಲ್‌ನಲ್ಲಿ ವಿಧಾನಸಭೆ ಚುನಾವಣೆಯನ್ನು ಬಿಜೆಪಿಯೊಂದಿಗೆ ಮೈತ್ರಿಮಾಡಿಕೊಂಡು ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಪಟಿಯಾಲಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಅವರೀಗ ಲಂಡನ್‌ನಲ್ಲಿ, ಬೆನ್ನುನೋವಿನ ಸರ್ಜರಿಗೆ ಒಳಗಾಗಿದ್ದಾರೆ. ಅಲ್ಲಿಂದ ವಾಪಸಾದ ತಕ್ಷಣ ಬಿಜೆಪಿ ಸೇರಲಿದ್ದಾರೆ. ತಮ್ಮ ಪಕ್ಷವನ್ನು ಅದರೊಂದಿಗೆ ವಿಲೀನ ಮಾಡಲಿದ್ದಾರೆ ಎಂದು ಹೇಳಲಾಗಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

9. ಸಿಎಂ ಏಕನಾಥ ಶಿಂಧೆಯನ್ನು ಶಿವಸೇನೆಯ ಎಲ್ಲ ಹುದ್ದೆಗಳಿಂದ ವಜಾಗೊಳಿಸಿದ ಉದ್ಧವ್‌ ಠಾಕ್ರೆ
ಬಂಡಾಯ ಶಾಸಕ ಏಕನಾಥ್‌ ಶಿಂಧೆ ಅವರನ್ನು ಶಿವಸೇನೆ ಪಕ್ಷದ ಎಲ್ಲ ಹುದ್ದೆಗಳಿಂದಲೂ ವಜಾಗೊಳಿಸಿ ಉದ್ಧವ್‌ ಠಾಕ್ರೆ ಆದೇಶ ಹೊರಡಿಸಿದ್ದಾರೆ. ಏಕನಾಥ ಶಿಂಧೆ ಶಿವಸೇನೆಯಿಂದ ಬಂಡಾಯ ಹೋಗಿ ಈಗ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದಾರೆ. ʻನೀವು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದೀರಿ. ಈ ಮೂಲಕ ಶಿವಸೇನೆಯ ಸದಸ್ಯತ್ವನ್ನೂ ನೀವೇ ಬಿಟ್ಟಿದ್ದೀರಿ. ಹೀಗಾಗಿ ಶಿವಸೇನೆಯ ಪ್ರಮುಖ್‌ ಆಗಿರುವ ನಾನು ನನ್ನ ಅಧಿಕಾರ ಬಳಸಿಕೊಂಡು, ನಿಮ್ಮನ್ನು ಪಕ್ಷದ ಎಲ್ಲ ಹುದ್ದೆಗಳಿಂದಲೂ ತೆಗೆದುಹಾಕುತ್ತಿದ್ದೇನೆʼ ಎಂದು ಉದ್ಧವ್‌ ಠಾಕ್ರೆ ಆದೇಶ ಪತ್ರದಲ್ಲಿ ಬರೆದಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

10. ಸ್ಪೈಸ್‌ಜೆಟ್‌ ವಿಮಾನದಲ್ಲಿ ಹೊಗೆ ಕಂಡ ಬಳಿಕ ತುರ್ತು ಭೂಸ್ಪರ್ಶ, 2 ತಿಂಗಳಲ್ಲಿ 4ನೇ ಅವಘಡ
ನವ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಪ್ರದೇಶದ ಜಬಲ್ಪುರಕ್ಕೆ ಹೊರಟಿದ್ದ ಸ್ಪೈಸ್‌ಜೆಟ್‌ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತಾಗಿ ಮರಳಿ ದಿಲ್ಲಿ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಲಾಗಿದೆ. ಸ್ಪೈಸ್‌ಜೆಟ್‌ ವಿಮಾನ ಈ ರೀತಿ ಸಮಸ್ಯೆಗೆ ಸಿಲುಕುತ್ತಿರುವುದು ಕಳೆದ ಎರಡು ತಿಂಗಳ ಅವಧಿಯಲ್ಲಿ ಇದು ಮೂರನೇ ಬಾರಿ. ದಿಲ್ಲಿಯಿಂದ ಹೊರಟ ಈ ವಿಮಾನದಲ್ಲಿ ೫೦ ಪ್ರಯಾಣಿಕರು ಇದ್ದರು. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

bigbreaking

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

VISTARANEWS.COM


on

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Continue Reading

Latest

ಅಕ್ಷಯ ತೃತೀಯದ ದಿನ ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌

VISTARANEWS.COM


on

ಬೆಂಗಳೂರು: ಅಕ್ಷಯ ತೃತೀಯದ ಈ ವಿಶೇಷ ಸಂದರ್ಭದಲ್ಲಿ ಚಿನ್ನ ಖರೀದಿಸುವವರಿಗೆ ಮಾರುಕಟ್ಟೆ ಸಿಹಿ ಸುದ್ದಿ ನೀಡಿದೆ. ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಹಾಗೂ ಮಧ್ಯಪ್ರಾಚ್ಯದ ಯುದ್ಧದ ಭೀತಿಯ ನಡುವೆಯೂ ಚಿನ್ನದ ಬೆಲೆ ಇಳಿಕೆ ಹಾದಿ ಹಿಡಿದಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಹಬ್ಬದ ದಿನದಂದು ಬಂಗಾರ ಖರೀದಿಸಿದರೆ ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆ ಇರುವ ಕಾರಣ, ಬೆಲೆ ಇಳಿಕೆಯು ಜನ ಸಾಮಾನ್ಯರಿಗೆ ತುಸು ನಿರಾಳ ತಂದಿದೆ.

ಬೆಂಗಳೂರಿನ ಇಂದಿನ ಮಾರುಕಟ್ಟೆ ದರದಂತೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 490 ರೂ. ಇಳಿಕೆಯಾಗಿದ್ದು, 1,55,290 ರೂಪಾಯಿಗೆ ತಲುಪಿದೆ. ಇನ್ನು ಆಭರಣ ಚಿನ್ನ ಅಂದರೆ 22 ಕ್ಯಾರೆಟ್‌ನ 10 ಗ್ರಾಂ ಬೆಲೆಯು 450 ರೂ. ಕಡಿಮೆಯಾಗಿ 1,42,350 ರೂಪಾಯಿ ದಾಖಲಾಗಿದೆ. ಈ ಇಳಿಕೆಯು ಅಕ್ಷಯ ತೃತೀಯದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದ್ದು, ಜ್ಯುವೆಲ್ಲರಿ ಶಾಪ್‌ಗಳಲ್ಲಿ ಇಂದು ಗ್ರಾಹಕರ ಸಂಖ್ಯೆ ಏರುವ ಸಾಧ್ಯತೆಯಿದೆ.

ಚಿನ್ನದ ಬೆಲೆ ಇಳಿಕೆಯಾಗಿದ್ದರೂ, ಬೆಳ್ಳಿಯ ದರದಲ್ಲಿ ಇಂದು ಯಾವುದೇ ಬದಲಾವಣೆ ಕಂಡುಬಂದಿಲ್ಲ. ಬೆಳ್ಳಿ ಬೆಲೆ ತಟಸ್ಥವಾಗಿದ್ದು, ಒಂದು ಕೆಜಿಗೆ 2,75,000 ರೂಪಾಯಿ ಹಾಗೂ ಒಂದು ಗ್ರಾಂಗೆ 275 ರೂಪಾಯಿ ನಿಗದಿಯಾಗಿದೆ. ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಡಾಲರ್ ಮೌಲ್ಯದ ಏರಿಳಿತದ ನಡುವೆಯೂ ಬಂಗಾರದ ದರ ಇಳಿಕೆಯಾಗಿರುವುದು ಈ ಬಾರಿ ಅಕ್ಷಯ ತೃತೀಯದ ವಿಶೇಷ ಆಕರ್ಷಣೆಯಾಗಿದೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಜಿಡಿಪಿಯಲ್ಲಿ ನಿರೀಕ್ಷೆ ಮೀರಿದ ಬೆಳವಣಿಗೆ ಹರ್ಷದಾಯಕ

ಪ್ರತಿ ತ್ರೈಮಾಸಿಕದಲ್ಲೂ ದೇಶದ ಜಿಡಿಪಿಯನ್ನು ಅಂದಾಜಿಸಲಾಗುತ್ತದೆ. ಏರಿಳಿತ ಇರುವುದೇ ಆಗಿರುತ್ತದೆ. ಸಾಮಾನ್ಯವಾಗಿ ಒಂದು ವರ್ಷದಿಂದ ಇನ್ನೊಂದಕ್ಕೆ 1-2ಕ್ಕಿಂತ ಅಧಿಕ ಜಿಡಿಪಿ ವ್ಯತ್ಯಾಸ ಆಗುವುದು ಅಪರೂಪ. ಆದರೆ ಭಾರತದ ಆರ್ಥಿಕ ಕ್ಷೇತ್ರದ ಬೆಳವಣಿಗೆ ಬಹಳಷ್ಟು ವೇಗವಾಗಿದೆ. ಹೀಗಾಗಿ ಕ್ಷಿಪ್ರಗತಿಯ ಜಿಡಿಪಿ ಬೆಳವಣಿಗೆ ಕಾಣಿಸಿದೆ.

VISTARANEWS.COM


on

GDP Growth

ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ (GDP Growth) ಶೇಕಡಾ 8.4ಕ್ಕೆ ಏರಿಕೆಯಾಗಿದೆ ಎಂದು ಸಾಂಖ್ಯಿಕ ಮತ್ತು ಯೋಜನೆ ಅನುಷ್ಠಾನ ಸಚಿವಾಲಯ ಗುರುವಾರ ಹೇಳಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಶೇ.4.3ರಷ್ಟಿತ್ತು. ಹೀಗಾಗಿ ನಿರೀಕ್ಷೆ ಮೀರಿದ ಬೆಳವಣಿಗೆಯಾಗಿದೆ. “2023-24ರ ಮೂರನೇ ತ್ರೈಮಾಸಿಕದಲ್ಲಿ 8.4% ಜಿಡಿಪಿ ಬೆಳವಣಿಗೆಯು ಭಾರತೀಯ ಆರ್ಥಿಕತೆಯ ಶಕ್ತಿ ಮತ್ತು ಅದರ ಸಾಮರ್ಥ್ಯವನ್ನು ಎತ್ತಿ ತೋರಿಸುತ್ತದೆ. ತ್ವರಿತ ಆರ್ಥಿಕ ಬೆಳವಣಿಗೆಯನ್ನು ಕಾಣಲು ನಮ್ಮ ಪ್ರಯತ್ನಗಳು ಮುಂದುವರಿಯಲಿದೆ. ಇದು 140 ಕೋಟಿ ಭಾರತೀಯರಿಗೆ ಉತ್ತಮ ಜೀವನವನ್ನು ನಡೆಸಲು, ವಿಕಸಿತ​ ಭಾರತದ ಬೆಳವಣಿಗೆಗೆ ಸಹಾಯ ಮಾಡುತ್ತದೆ” ಎಂದು ಪ್ರಧಾನಿ ಹೇಳಿದ್ದಾರೆ.

2023-24ರ ಮೂರನೇ ತ್ರೈಮಾಸಿಕದಲ್ಲಿ ಸ್ಥಿರ (2011-12) ದರಗಳಲ್ಲಿ ಜಿಡಿಪಿ 43.72 ಲಕ್ಷ ಕೋಟಿ ರೂ.ಗೆ ಅಂದಾಜಿಸಲಾಗಿದೆ. ಇದು 2022-23ರ ಮೂರನೇ ತ್ರೈಮಾಸಿಕದಲ್ಲಿ 40.35 ಲಕ್ಷ ಕೋಟಿ ರೂ ಆಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ 8.4ರಷ್ಟು ಬೆಳವಣಿಗೆಯ ದರವನ್ನು ತೋರಿಸಿದೆ. ವಿಶ್ಲೇಷಕರು ಮೂರನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಕಡಾ 7ಕ್ಕಿಂತ ಕಡಿಮೆ ಎಂದು ಅಂದಾಜಿಸಿದ್ದರು. ಆದರೆ, ಸರ್ಕಾರ ಬಿಡುಗಡೆ ಮಾಡಿದ ಅಂಕಿ ಅಂಶವು ಭಾರತೀಯ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದೆ ಎಂದು ತೋರಿಸಿದೆ. ನಿರ್ಮಾಣ ಕ್ಷೇತ್ರದ ಎರಡಂಕಿ ಬೆಳವಣಿಗೆ ದರ (ಶೇ.10.7), ಉತ್ಪಾದನಾ ವಲಯದ ಬೆಳವಣಿಗೆ ದರ (ಶೇ.8.5) 2024ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯನ್ನು ಹೆಚ್ಚಿಸಿದೆ ಎಂದು ಸರಕಾರ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಶೇಕಡಾ 8.4ರಷ್ಟು ಬೆಳವಣಿಗೆಯ ಹಿಂದಿನ ಪ್ರಮುಖ ಕಾರಣವೇ ಈ ಕ್ಷೇತ್ರಗಳಲ್ಲಿನ ಬೆಳವಣಿಗೆಯಾಗಿದೆ. ಹೀಗಾಗಿ, ಈಗ ಪೂರ್ಣ ವರ್ಷದ ಜಿಡಿಪಿ ಬೆಳವಣಿಗೆ ಅಂದಾಜು ಶೇಕಡಾ 7.3ಕ್ಕಿಂತ ಹೆಚ್ಚಾಗುತ್ತದೆ ಎಂದು ಸಾಂಖ್ಯಿಕ ಸಚಿವಾಲಯ ನಿರೀಕ್ಷಿಸಿದೆ. ಇದು ವಿಶ್ವದ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿ ಭಾರತದ ಸ್ಥಾನಮಾನವನ್ನು ದೃಢಪಡಿಸಿದೆ.

ಪ್ರತಿ ತ್ರೈಮಾಸಿಕದಲ್ಲೂ ದೇಶದ ಜಿಡಿಪಿಯನ್ನು ಅಂದಾಜಿಸಲಾಗುತ್ತದೆ. ಏರಿಳಿತ ಇರುವುದೇ ಆಗಿರುತ್ತದೆ. ಸಾಮಾನ್ಯವಾಗಿ ಒಂದು ವರ್ಷದಿಂದ ಇನ್ನೊಂದಕ್ಕೆ 1-2ಕ್ಕಿಂತ ಅಧಿಕ ಜಿಡಿಪಿ ವ್ಯತ್ಯಾಸ ಆಗುವುದು ಅಪರೂಪ. ಆದರೆ ಭಾರತದ ಆರ್ಥಿಕ ಕ್ಷೇತ್ರದ ಬೆಳವಣಿಗೆ ಬಹಳಷ್ಟು ವೇಗವಾಗಿದೆ. ಹೀಗಾಗಿ ಕ್ಷಿಪ್ರಗತಿಯ ಜಿಡಿಪಿ ಬೆಳವಣಿಗೆ ಕಾಣಿಸಿದೆ. ಇದನ್ನೇ ಷೇರು ಮಾರುಕಟ್ಟೆಯಲ್ಲೂ ಕಾಣಬಹುದು. ಕಳೆದ ಒಂದು ವರ್ಷದಿಂದ ದೇಶದ ಷೇರು ಮಾರುಕಟ್ಟೆ ಗಣನೀಯವಾಗಿ ಕುಸಿದಿಲ್ಲ. ಆದರೆ ಗಣನೀಯ ಹೆಚ್ಚಳಗಳು ಆಗಿವೆ. ಇದು ದೇಶದ ವಾಣಿಜ್ಯ ವಹಿವಾಟಿನಲ್ಲಿ, ಕೈಗಾರಿಕಾ ವಲಯದ ಮೇಲೆ ಬಂಡವಾಳೋದ್ಯಮಿಗಳು ಹಾಗೂ ಷೇರುದಾರರು ಇಟ್ಟಿರುವ ಭರವಸೆಯನ್ನು ತೋರಿಸುತ್ತದೆ. ಹಣದುಬ್ಬರದ ಕಾಲದಲ್ಲೂ ದೇಶ ತನ್ನ ಜಿಡಿಪಿಯ ಗತಿಯನ್ನು ಕಾಯ್ದುಕೊಂಡಿದೆ. ಇದು ಶ್ಲಾಘನೀಯ. ಜಿಡಿಪಿ ಸತತವಾಗಿ ಏರುತ್ತಿದ್ದಾಗ, ಸಾಮಾನ್ಯ ಮನುಷ್ಯನ ಕೈಗೂ ಸಾಕಷ್ಟು ಹಣದ ಹರಿವು ಇರುತ್ತದೆ. ಹೀಗಾಗಿ ಹಣದುಬ್ಬರದ ದುಷ್ಪರಿಣಾಮ ಅಷ್ಟಾಗಿ ತಟ್ಟುವುದಿಲ್ಲ.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ವಿದ್ಯುತ್‌ ದರ ಇಳಿಕೆ ಶ್ಲಾಘನೀಯ ಕ್ರಮ

ಒಂದು ದೇಶದ ಮಾರುಕಟ್ಟೆಯಲ್ಲಿ ಈ ಪ್ರಮಾಣದ ಬೆಳವಣಿಗೆಯಾಗುವುದು, ಜಿಡಿಪಿ ನಿರಂತರವಾಗಿ ಪ್ರಗತಿ ತೋರಿಸುವುದು ಯಾವಾಗ ಎಂದರೆ, ಆ ದೇಶದ ಮಾರುಕಟ್ಟೆಯಲ್ಲಿ ಒಳಗಿನ ಹಾಗೂ ಹೊರಗಿನ ಹೂಡಿಕೆದಾರರ ವಿಶ್ವಾಸ ಹೆಚ್ಚಿದಾಗ. ಅಂದರೆ ಇಲ್ಲಿ ಒಳ್ಳೆಯ ಹೂಡಿಕೆ ಮಾಡಬಹುದು, ಸುರಕ್ಷಿತ ವಾತಾವರಣವಿದೆ, ಇಲ್ಲಿ ಪ್ರಗತಿಯ ಸಾಧ್ಯತೆಯಿದೆ ಎಂದು ತೋರಿದಾಗ ಮಾತ್ರ ಅಂಥಲ್ಲಿ ಹಣ ಹೂಡಲಾಗುತ್ತದೆ. ಇಂತಹ ಆತ್ಮವಿಶ್ವಾಸದ ಪರಿಣಾಮವಾಗಿಯೇ ದೇಶದ ಜಿಡಿಪಿ ಏರಿಕೆಯಾಗಿದೆ ಹಾಗೂ ಈಕ್ವಿಟಿ ಮಾರುಕಟ್ಟೆ ಉತ್ತುಂಗ ಮುಟ್ಟಿದೆ. ನಾವು ವಿಶ್ವದ ದೊಡ್ಡ ದೇಶಗಳನ್ನು ಮಿತ್ರರನ್ನಾಗಿಸಿಕೊಂಡು ಬಹುರಾಷ್ಟ್ರೀಯ ಕಂಪನಿಗಳನ್ನು ನಮ್ಮ ದೇಶದ ಮಾರುಕಟ್ಟೆಗೆ ಬೇಕಾದಂತೆ ಕುಣಿಸುತ್ತಿದ್ದೇವೆ. ನಮ್ಮ ಜನಸಂಖ್ಯಾ ಬಂಡವಾಳ, ದುಡಿಯುವ ವರ್ಗ ನಮ್ಮ ಮಾರುಕಟ್ಟೆಗೆ ಪೂರಕವಾಗಿದೆ. ಇಲ್ಲಿನ ಪ್ರತಿಭೆಗಳು ಯುಎಸ್‌, ಯುಕೆಯ ಆರ್ಥಿಕತೆಗಳನ್ನು ಕಟ್ಟುತ್ತಿವೆ. ಜಿಡಿಪಿ ಏರಿಕೆಯ ಪರಿಣಾಮವು, ಪ್ರಧಾನಿಯವರು ಹೇಳಿದಂತೆ ನಮ್ಮ ಜನತೆಯ ಬಡತನದ ತ್ವರಿತ ನಿರ್ಮೂಲನೆ ಮತ್ತು ಬದುಕಿನ ಸ್ಥಿತಿಗತಿ ಸುಧಾರಣೆಗೂ ಮೂಲವಾಗಬೇಕು. ಆಗ ಜಿಡಿಪಿ ಬೆಳವಣಿಗೆಗೆ ಹೆಚ್ಚಿನ ಅರ್ಥ ಬರುತ್ತದೆ.

Continue Reading

ಪ್ರಮುಖ ಸುದ್ದಿ

Vistara Top 10 News : ವಿಧಾನಸೌಧದೊಳಗೇ ಕಾಂಗ್ರೆಸ್‌ ಬೆಂಬಲಿಗರಿಂದ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಮತ್ತಿತರ ಪ್ರಮುಖ ಸುದ್ದಿಗಳು

Vistara Top 10 News : ಇಡೀ ದಿನ ದೇಶ, ವಿದೇಶಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತು ನೋಟವೇ ವಿಸ್ತಾರ ಟಾಪ್‌ 10 ನ್ಯೂಸ್‌

VISTARANEWS.COM


on

Top 10 news

1.ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ
ಬೆಂಗಳೂರು: ರಾಜ್ಯಸಭಾ ಚುನಾವಣೆಯ (Rajya Sabha Election) ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್‌ ಕಾರ್ಯಕರ್ತರ ಸಂತಸ ಮುಗಿಲು ಮುಟ್ಟಿತ್ತು. ಗೆಲುವು ಸಾಧಿಸಿದ ಕಾಂಗ್ರೆಸ್‌ನ ಮೂವರು ಸದಸ್ಯರ ಪೈಕಿ ನಾಸಿರ್ ಹುಸೇನ್ ಬೆಂಬಲಿಗರು ಶತ್ರು ರಾಷ್ಟ್ರ ಪಾಕಿಸ್ತಾನ ಪರ ಜೈಕಾರ ಕೂಗಿ ಉದ್ಧಟತನ ಮೆರೆದಿದ್ದಾರೆ. ನಮ್ಮ ಭಾರತದ ಸೌರ್ವಭೌಮತ್ವವನ್ನು ಧಿಕ್ಕರಿಸಿ ಪಾಕ್‌ ಪರ ಘೋಷಣೆ ಕೂಗಿರುವ ಬಗ್ಗೆ ರಾಜ್ಯ ಸೇರಿ ದೇಶಾದ್ಯಂತ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇಂಥದ್ದೊಂದು ಪಾಪಿ ಕೃತ್ಯ, ಅಕ್ಷಮ್ಯ ಅಪರಾಧವನ್ನು ವಿಧಾನಸೌಧದೊಳಗೆ ಮಾಡಿರುವುದು ಮತ್ತೊಂದು ದುರಂತವಾಗಿದೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.

2. Rajya Sabha Election: ರಾಜ್ಯಸಭೆಯಲ್ಲಿ 3 ಸೀಟು ಗೆದ್ದು ಬೀಗಿದ ಕಾಂಗ್ರೆಸ್‌; 1 ಸ್ಥಾನ ಬಿಜೆಪಿಗೆ; ಮೈತ್ರಿಗೆ ಮುಖಭಂಗ!
ಬೆಂಗಳೂರು: ರಾಜ್ಯಸಭಾ ಚುನಾವಣೆಗೆ (Rajya Sabha Election) ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ. ಒಟ್ಟು ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯಗಳಿಸಿದ್ದಾರೆ. ಬಿಜೆಪಿ – ಜೆಡಿಎಸ್‌ ಮೈತ್ರಿಯಿಂದ (BJP JDS Alliance) ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ ರೆಡ್ಡಿ (Kupendra Reddy) ಸೋಲು ಕಂಡಿದ್ದಾರೆ. ಈ ಮೂಲಕ ಮೈತ್ರಿಗೆ ಮುಖಭಂಗವಾದಂತೆ ಆಗಿದೆ. ಒಟ್ಟು 222 ಶಾಸಕರಿಂದ ಮತದಾನ ಮಾಡಿದ್ದಾರೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.
ಈ ಸುದ್ದಿಯನ್ನೂ ಓದಿ : Rajya sabha Election: ಎಸ್‌.ಟಿ. ಸೋಮಶೇಖರ್‌ ಅಡ್ಡಮತ; ಬಿಜೆಪಿಯಿಂದ ಏನು ಕ್ರಮ? ಶಾಸಕತ್ವ ಉಳಿಯುತ್ತಾ?
ಈ ಸುದ್ದಿಯನ್ನೂ ಓದಿ : Rajyasabha Election : ದ್ರೋಹ ಎಸಗಿದ ಸೋಮಶೇಖರ್‌ ವಿರುದ್ಧ ಸಿಡಿದ ಬಿಜೆಪಿ; ಪ್ರತಿಕೃತಿಗೆ ಬೆಂಕಿ, ಚಪ್ಪಲಿ ಏಟು

3. 7ನೇ ವೇತನ ಆಯೋಗದ ವರದಿ ಬಂದ ನಂತರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌: ಸಿಎಂ ಭರವಸೆ
ಬೆಂಗಳೂರು: ಪಂಚ ಗ್ಯಾರಂಟಿಗಳ ಜಾರಿಯಿಂದ ಉಂಟಾದ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರ ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭರವಸೆ ನೀಡಿದ್ದಾರೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.
ಈ ಸುದ್ದಿಯನ್ನೂ ಓದಿ : ರಾಜ್ಯ ಸರ್ಕಾರಿ ನೌಕರರಿಗೆ ಜುಲೈನಿಂದ ಶೇ.23 ವೇತನ ಹೆಚ್ಚಳ ಮಾಡಿ: ಸಿ.ಎಸ್‌.ಷಡಾಕ್ಷರಿ ಒತ್ತಾಯ

4. ಗಗನಯಾನ ಯಾತ್ರಿಗಳ ಹೆಸರು ರಿವೀಲ್‌ ಮಾಡಿದ ಮೋದಿ; ಇವರೇ ಸಾರಥಿಗಳು
ತಿರುವನಂತಪುರಂ: ಭಾರತದ ಮಹತ್ವಾಕಾಂಕ್ಷೆಯ, ಮೊದಲ ಮಾನವಸಹಿತ ಗಗನಯಾತ್ರೆಯಾದ ‘ಗಗನಯಾನ’ಕ್ಕೆ (Gaganyaan Mission) ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ (ISRO) ಸಕಲ ಸಿದ್ಧತೆ ಕೈಗೊಳ್ಳುತ್ತಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಾನವ ಸಹಿತ ಗಗನಯಾನ ಕೈಗೊಳ್ಳುವ ಗಗನಯಾತ್ರಿಗಳ ಹೆಸರುಗಳನ್ನು ಘೋಷಿಸಿದ್ದಾರೆ. ಇದರೊಂದಿಗೆ ಮುಂದಿನ ವರ್ಷ ಕೈಗೊಳ್ಳುವ ಇಸ್ರೋ ಮಿಷನ್‌ಗೆ ಗಗನಯಾತ್ರಿಗಳನ್ನು ಅಂತಿಮಗೊಳಿಸಿದಂತಾಗಿದೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.
ಈ ಸುದ್ದಿಯನ್ನೂ ಓದಿ : ವಿಸ್ತಾರ Explainer: Gaganyaan: ನಾಲ್ವರು ಗಗನಯಾನಿಗಳಲ್ಲಿ ಮಹಿಳೆ ಏಕಿಲ್ಲ?

5. Money Guide: ಗುಡ್‌ನ್ಯೂಸ್‌: ಕಿಸಾನ್‌ ಸಮ್ಮಾನ್‌ ನಿಧಿಯ 16ನೇ ಕಂತು ಬಿಡುಗಡೆಗೆ ದಿನಗಣನೆ; ನಗದು ಯಾವಾಗ ಸಿಗಲಿದೆ?
ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯನ್ನು 2೦19ರಲ್ಲಿ ಜಾರಿಗೆ ತಂದಿದೆ. ಈ ಯೋಜನೆ ಮೂಲಕ ಪ್ರತಿ ವರ್ಷ ರೈತರ ಖಾತೆಗೆ 6,000 ರೂ. ಜಮೆ ಮಾಡಲಾಗುತ್ತದೆ. ಸದ್ಯ ಈ ಯೋಜನೆಯ 16ನೇ ಕಂತು ಬಿಡುಗಡೆ ದಿನ ನಿಗದಿ ಪಡಿಸಲಾಗಿದೆ. ಹಾಗಾದರೆ ಯಾವಾಗ ಹಣ ಜಮೆ ಆಗಲಿದೆ ಎನ್ನುವ ವಿವರ ಇಂದಿನ ಮನಿಗೈಡ್‌ (Money Guide)ನಲ್ಲಿದೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.

6. IPL 2024 : ಐಪಿಎಲ್​ ಟಿಕೆಟ್​ ಖರೀದಿ ಹೇಗೆ ಮತ್ತು ಎಲ್ಲಿ? ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ರ 17 ನೇ ಆವೃತ್ತಿಯ ಭಾಗಶಃ ವೇಳಾಪಟ್ಟಿ ಬಿಸಿಸಿಐ ಫೆಬ್ರವರಿ 22 ರಂದು ಬಹಿರಂಗಪಡಿಸಿದೆ. ಮುಂಬರುವ ಆವೃತ್ತಿಯು ಮಾರ್ಚ್ 22 ರಿಂದ ಪ್ರಾರಂಭವಾಗಲಿದ್ದು, ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ 7 ರವರೆಗಿನ ಪಂದ್ಯಗಳ ವೇಳಾಪಟ್ಟಿ ಬಿಡುಗಡೆಗೊಂಡಿದೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.

7. RBI Fine: ಎಸ್‌ಬಿಐ ಸೇರಿ 3 ಬ್ಯಾಂಕ್‌ಗಳಿಗೆ 3 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಇದು
ಮುಂಬೈ: ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಾರ್ಚ್‌ 15ರಿಂದ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ವಹಿವಾಟು ಸ್ಥಗಿತಗೊಳಿಸಿ ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ, ದೇಶದ 3 ಬ್ಯಾಂಕ್‌ಗಳಿಗೆ ಆರ್‌ಬಿಐ ಸುಮಾರು 3 ಕೋಟಿ ರೂ. ದಂಡ ವಿಧಿಸಿದೆ. ಭಾರತೀಯ ಸ್ಟೇಟ್‌ ಬ್ಯಾಂಕ್‌ (SBI), ಕೆನರಾ ಬ್ಯಾಂಕ್‌ ಹಾಗೂ ಸಿಟಿ ಯೂನಿಯನ್‌ ಬ್ಯಾಂಕ್‌ಗಳಿಗೆ (City Union Bank) ಸುಮಾರು 3 ಕೋಟಿ ರೂ. ದಂಡ ವಿಧಿಸಲಾಗಿದೆ. ಆರ್‌ಬಿಐ ನಿಬಂಧನೆಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.

8. Actor Rajinikanth: ಬಾಲಿವುಡ್‌ ಖ್ಯಾತ ನಿರ್ಮಾಪಕರೊಂದಿಗೆ ಕೈ ಜೋಡಿಸಿದ ರಜನಿಕಾಂತ್‌; ತಲೈವಾ ಹೊಸ ಚಿತ್ರ ಯಾವಾಗ?
ಮುಂಬೈ: ದಕ್ಷಿಣ ಭಾರತದ ಸೂಪರ್‌ ಸ್ಟಾರ್‌ ರಜನಿಕಾಂತ್‌ (Rajinikanth) ಈ ಇಳಿವಯಸ್ಸಿನಲ್ಲಿಯೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಒಂದರ ಹಿಂದೆ ಒಂದರಂತೆ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಇನ್ನೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ ಎನ್ನುವ ಸುದ್ದಿ ಜೋರಾಗಿ ಹಬ್ಬಿದೆ. ಬಾಲಿವುಡ್‌ ನಿರ್ಮಾಪಕ ಸಾಜಿದ್‌ ನಾಡಿಯಾವಾಲ (Sajid Nadiadwala) ಅವರೊಂದಿಗೆ ತಲೈವಾ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ವತಃ ಸಾಜಿದ್‌ ನಾಡಿಯಾವಾಲ ಮಾಹಿತಿ ನೀಡಿದ್ದಾರೆ. ಆದರೆ ಯಾವ ಚಿತ್ರ, ಯಾವಾಗ ಸೆಟ್ಟೇರಲಿದೆ ಮುಂತಾದ ವಿವರ ಇನ್ನೂ ಬಹಿರಂಗವಾಗಿಲ್ಲ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.

9 .PM Narendra Modi: ಕೇರಳದಲ್ಲಿ ಲಾಠಿ ಚಾರ್ಜ್‌, ದಿಲ್ಲಿಯಲ್ಲಿ ಚಾಯ್-‌ ಸಮೋಸಾ: ಮೋದಿ ಹೀಗೆ ಹೇಳಿದ್ದೇಕೆ?
ತಿರುವನಂತಪುರಂ: ಕಾಂಗ್ರೆಸ್ (congress) ಮತ್ತು ಎಡಪಕ್ಷಗಳು (left parties) ಇತರ ರಾಜ್ಯಗಳಲ್ಲಿ ಬಿಎಫ್‌ಎಫ್ (Best friends forever- ಬೆಸ್ಟ್‌ ಫ್ರೆಂಡ್ಸ್‌ ಫಾರೆವರ್-‌ ಶಾಶ್ವತ ಸ್ನೇಹಿತರು) ಆಗಿದ್ದಾರೆ. ಆದರೆ ಕೇರಳದಲ್ಲಿ ಬದ್ಧ ವೈರಿಗಳು (enemies) ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಂಗಳವಾರ ವ್ಯಂಗ್ಯವಾಡಿದ್ದಾರೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.

10. ವಿಮೆ ದುಡ್ಡಿನ ಆಸೆಗೆ ತನ್ನ ಕಾಲನ್ನೇ ಕತ್ತರಿಸಿಕೊಂಡ; ಈಗ ಕಾಸೂ ಸಿಗಲಿಲ್ಲ, ಕಾಲೂ ಇಲ್ಲ!
ಮಿಸ್ಸೌರಿ: ಅಮೆರಿಕದ ವ್ಯಕ್ತಿಯೊಬ್ಬರು ವಿಮೆಯ ದುಡ್ಡಿಗಾಗಿ ತನ್ನ ಕಾಲನ್ನೇ ಕತ್ತರಿಸಿಕೊಂಡ ಪ್ರಸಂಗ (Shocking News) ಬೆಳಕಿಗೆ ಬಂದಿದೆ. ಆತನ ಮೋಸ ಬಯಲಿಗೆ ಬಂದ ಬಳಿಕ ದುಡ್ಡೂ ಸಿಗಲಿಲ್ಲ, ಕೈಕಾಲು ಕೂಡ ಇಲ್ಲ ಎಂಬ ಪರಿಸ್ಥಿತಿ ಎದುರಾಗಿದೆ. ವಿಲ್ಲೋ ಸ್ಪ್ರಿಂಗ್ಸ್​ ಎಂಬ 60 ವರ್ಷದ ವ್ಯಕ್ತಿ ಮೋಸ ಮಾಡಲು ಹೋಗಿ ಅಂಗಾಂಗಗಳನ್ನೇ ಕಳೆದುಕೊಂಡಿದ್ದಾನೆ. ಆತ ತನ್ನ ಕಾಲುಗಳನ್ನು ಬೇರೆಯವರಿಂದ ಕತ್ತರಿಸಿಕೊಂಡು ಬಕೆಟ್​ ಒಂದರಲ್ಲಿ ಅಡಗಿಸಿಟ್ಟಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

Continue Reading
Advertisement
Latest10 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest1 day ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest1 day ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest1 day ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest1 day ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest1 day ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest1 day ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest1 day ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest1 day ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest2 days ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌