ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ( Narendra Modi) ಕುರಿತು ಆಕ್ಷೇಪಾರ್ಹ ವಿಚಾರಗಳಿರುವ ಬಿಬಿಸಿಯ ಇಂಡಿಯಾ: ದಿ ಮೋದಿ ಕ್ವಶ್ಚನ್ (India: The Modi Question) ಡಾಕ್ಯುಮೆಂಟರಿಯನ್ನು (BBC Documentary) ಭಾರತದಲ್ಲಿ ನಿಷೇಧಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದಕ್ಕೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಖಂಡಿಸಿದ್ದಾರೆ.
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ವಕೀಲ ಪ್ರಶಾಂತ್ ಭೂಷಣ್ ಸೇರಿ ಹಲವರು ಬಿಬಿಸಿ ಡಾಕ್ಯುಮೆಂಟರಿ ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದನ್ನು ರಿಜಿಜು ಖಂಡಿಸಿದ್ದು, “ದೇಶದ ಸಾಮಾನ್ಯ ಜನ ನ್ಯಾಯಕ್ಕಾಗಿ ಕಾಯುತ್ತಿದ್ದರೆ, ಇಂತಹ ಅರ್ಜಿಗಳನ್ನು ಸಲ್ಲಿಸಿ ಸುಪ್ರೀಂ ಕೋರ್ಟ್‌ನ ಅಮೂಲ್ಯ ಸಮಯ ಹಾಳು ಮಾಡಲಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ.
ನಿಷೇಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಹಾಗೂ ಜೆ ಬಿ ಪರ್ದಿವಾಲಾ ಅವರಿದ್ದ ಪೀಠವು ಸಮ್ಮತಿ ಸೂಚಿಸಿದೆ. ಆದರೆ, ತ್ವರಿತವಾಗಿ ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಮಾಡಿದ ಮನವಿಯನ್ನು ತಿರಸ್ಕರಿಸಿದ್ದು, ಫೆಬ್ರವರಿ 6ರಂದು ವಿಚಾರಣೆ ಮಾಡಲಾಗುವುದು ಎಂದು ತಿಳಿಸಿದೆ.
ಇದನ್ನೂ ಓದಿ: BBC Documentary on Modi: ಬಿಬಿಸಿ ಸಾಕ್ಷ್ಯ ಚಿತ್ರ ನಿಷೇಧ ಪ್ರಶ್ನಿಸಿ ಪಿಐಎಲ್, ಫೆ.6ಕ್ಕೆ ವಿಚಾರಣೆ ಎಂದ ಸುಪ್ರೀಂ ಕೋರ್ಟ್