Site icon Vistara News

Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?

Weather Update and Monsoon starts withdrawing from India

ನವದೆಹಲಿ: ವಾಡಿಕೆಗಿಂತ ಎಂಟು ದಿನಗಳಷ್ಟು ತಡವಾಗಿ ಭಾರತದಲ್ಲಿ (India) ಮುಂಗಾರು ಕ್ಷೀಣಿಸುತ್ತಿದೆ (Monsoon Withdrawing) ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ಸೋಮವಾರ ಹೇಳಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ವಾಡಿಕೆಯಂತೆ ಸೆಪ್ಟೆಂಬರ್ 17ರಿಂದಲೇ ಮುಂಗಾರು ದುರ್ಬಲವಾಗಬೇಕಿತ್ತು. ಆದರೆ, ಸೆಪ್ಟೆಂಬರ್ 25ರಿಂದ ಮುಂಗಾರು ಕ್ಷೀಣವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ(Weather Update).

ನೈಋತ್ಯ ರಾಜಸ್ಥಾನದ ಭಾಗಗಳಿಂದ ನೈಋತ್ಯ ಮಾನ್ಸೂನ್ ಸೆಪ್ಟೆಂಬರ್ 25ರಿಂದಲೇ ಕ್ಷೀಣಿಸಲಾರಂಭಿಸಿದೆ. ರಾಜಸ್ಥಾನದಲ್ಲಿ ಸಾಮಾನ್ಯವವಾಗಿ ಸೆಪ್ಟೆಂಬರ್ 17ರಿಂದಲೇ ಮುಂಗಾರು ಹಿಂತೆಗೆಯಲಾರಂಭಿಸುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ವಾಯುವ್ಯ ಭಾರತದಲ್ಲಿ ಮುಂಗಾರು ಕ್ಷೀಣವಾಗಲಾರಂಭಿಸಿದರೆ ಭಾರತದಲ್ಲಿ ಒಟ್ಟಾರೆ ಮಳೆಗಾಲ ಅಂತ್ಯವಾಗುವ ಕಾಲ ಸನ್ನಿಹಿತವಾದಂತೆಯೇ ಎನ್ನಲಾಗುತ್ತದೆ. ಪ್ರಸಕ್ತ ಮುಂಗಾರಿನಲ್ಲಿ ಭಾರತದಲ್ಲಿ 780.3 ಮಿಲಿ ಮೀಟರ್ ಮಳೆಯಾಗಿದೆ. ಆದರೆ, ವಾಡಿಕೆಯಂತೆ 832.4 ಮಿಲಿ ಮೀಟರ್ ಮಳೆಯಾಗಬೇಕಿತ್ತು. ಅಂದರೆ, ಈ ವರ್ಷ ಮಳೆ ಕೊರತೆಯಾಗಿದೆ.

ವಾಯುವ್ಯ ಭಾರತದಿಂದ ಮಾನ್ಸೂನ್ ಹಿಂದೆ ಸರಿಯುವ ಪ್ರಕ್ರಿಯೆಯು ಭಾರತೀಯ ಉಪಖಂಡದಿಂದ ಮಳೆಗಾಲ ಅಂತ್ಯವಾಗುವುದನ್ನು ಸೂಚಿಸುತ್ತದೆ. ಮಾನ್ಸೂನ್ ಹಿಂದೆ ಸರಿಯುವುದು ಯಾವುದೇ ವಿಳಂಬವು ದೀರ್ಘವಾದ ಮಳೆಗಾಲವನ್ನು ಅರ್ಥೈಸುತ್ತದೆ. ಇದು ಕೃಷಿ ಉತ್ಪಾದನೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಲಿದೆ. ವಿಶೇಷವಾಗಿ ವಾಯುವ್ಯ ಭಾರತದಲ್ಲಿ ಮಾನ್ಸೂನ್ ಮಳೆಯು ರಾಬಿ ಬೆಳೆ ಉತ್ಪಾದನೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.

ಈ ಸುದ್ದಿಯನ್ನೂ ಓದಿ: Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಭಾರತದಲ್ಲಿ ಮುಂಗಾರು ಮಳೆಯ ಜೂನ್ 1ರಂದು ಕೇರಳದ ಮೂಲಕ ಪ್ರವೇಶಿಸುತ್ತದೆ. ಜುಲೈ 8ರ ವೇಳೆಗೆ ಇಡೀ ದೇಶವನ್ನು ಮುಂಗಾರು ಆವರಿಸುತ್ತದೆ. ಸೆಪ್ಟೆಂಬರ್ 17ರ ಹೊತ್ತಿಗೆ ಕ್ಷೀಣವಾಗಲಾರಂಭಿಸುತ್ತದೆ. ಅಕ್ಟೋಬರ್ 15ರ ವೇಳೆ ಮಾನ್ಸೂನ್ ಸಂಪೂರ್ಣವಾಗಿ ದೇಶದಿಂದ ಮಾಯವಾಗುತ್ತದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ.

ಮುಂಗಾರಿನಲ್ಲಿ ಭಾರತವು ಇಲ್ಲಿಯವರೆಗೆ 796.4 ಮಿಮೀ ಮಳೆಯನ್ನು ಪಡೆದಿದೆ. ಇದು, ವಾಡಿಕೆ ಮಳೆ 843.2 ಮಿಮೀಗೆ ಹೋಲಿಸಿದರೆ, ಶೇ.6ರಷ್ಟು ಕೊರತೆಯಾಗಿದೆ. ಸಾಮಾನ್ಯವಾಗಿ, ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ನಾಲ್ಕು ತಿಂಗಳ ಅವಧಿಯಲ್ಲಿ ದೇಶವು ಸರಾಸರಿ 870 ಮಿಮೀ ಮಳೆಯನ್ನು ಪಡೆಯುತ್ತದೆ. ಆದರೆ, ಪ್ರಸಕ್ತ ಮಳೆಗಾಲದಲ್ಲಿ ಕೊರತೆ ಎದುರಾಗಿದ್ದು, ಬರಗಾಲದ ಛಾಯೆ ಆವರಿಸಿದೆ. ಈಗಾಗಲೇ, ಕರ್ನಾಟಕದಲ್ಲಿ ಬರಗಾಲಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version