Ajit Pawar | ಭಿನ್ನಮತ ವದಂತಿ ಬೆನ್ನಲ್ಲೇ ನಾನು ವಾಷ್‌ರೂಮ್‌ ಹೋಗಿದ್ದೆ ಎಂದು ಅಜಿತ್‌ ಪವಾರ್‌ ಹೇಳಿದ್ದೇಕೆ? - Vistara News

ದೇಶ

Ajit Pawar | ಭಿನ್ನಮತ ವದಂತಿ ಬೆನ್ನಲ್ಲೇ ನಾನು ವಾಷ್‌ರೂಮ್‌ ಹೋಗಿದ್ದೆ ಎಂದು ಅಜಿತ್‌ ಪವಾರ್‌ ಹೇಳಿದ್ದೇಕೆ?

ಎನ್‌ಸಿಪಿಯ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಕ್ಷದ ಅಧ್ಯಕ್ಷರನ್ನಾಗಿ ಶರದ್‌ ಪವಾರ್‌ ಅವರನ್ನೇ ಮುಂದುವರಿಸಲು ತೀರ್ಮಾನಿಸಲಾಯಿತು. ಇನ್ನು ಸಭೆಯ ಮಧ್ಯೆಯೇ ಅಜಿತ್‌ ಪವಾರ್‌ (Ajit Pawar) ಎದ್ದು ಹೋದ ಹಿನ್ನೆಲೆಯಲ್ಲಿ ಭಿನ್ನಮತ ಉಂಟಾಗಿದೆ ಎಂದು ಹೇಳಲಾಗಿತ್ತು. ಹಾಗಾಗಿ ಅಜಿತ್‌ ಪವಾರ್‌ ಸ್ಪಷ್ಟನೆ ನೀಡಿದ್ದಾರೆ.

VISTARANEWS.COM


on

Ajit Pawar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಕಳೆದ ಭಾನುವಾರ ನಡೆದ ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷ (ಎನ್‌ಸಿಪಿ)ದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿರುವಾಗಲೇ ಪಕ್ಷದ ನಾಯಕ ಅಜಿತ್‌ ಪವಾರ್‌‌ (Ajit Pawar) ಅವರು ಎದ್ದುಹೋದ ಕುರಿತು ಹಲವು ವದಂತಿಗಳು ಹಬ್ಬುತ್ತಿರುವ ಬೆನ್ನಲ್ಲೇ, “ನಾನು ಹಾಗೆ ಎದ್ದು ಹೋಗಿದ್ದು ವಾಷ್‌ರೂಮ್‌ಗೆ” ಎಂದು ಅಜಿತ್‌ ಪವಾರ್‌ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ವದಂತಿಗಳಿಗೆ ತಮಾಷೆಯ ಉತ್ತರದ ಮೂಲಕವೇ ಸ್ಪಷ್ಟನೆ ನೀಡಿದ್ದಾರೆ.

“ಎನ್‌ಸಿಪಿ ಜತೆಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾನು ಎದ್ದು ವಾಷ್‌ರೂಮ್‌ಗೆ ಹೋಗಿದ್ದೆ ಅಷ್ಟೆ” ಎಂದಿದ್ದಾರೆ. ನೀವೇಕೆ ಸಭೆಯಲ್ಲಿ ಮಾತನಾಡಲಿಲ್ಲ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ, “ಸಮಯದ ಅಭಾವದಿಂದ ಮಾತನಾಡಲಿಲ್ಲ. ನಾನೊಬ್ಬನೇ ಅಲ್ಲ, ಸುನೀಲ್‌ ತಟ್ಕಾರೆ, ವಂದನಾ ಚೌಹಾಣ್‌ ಸೇರಿ ಹಲವು ನಾಯಕರು ಮಾತನಾಡಲು ಆಗಲಿಲ್ಲ. ಇದಕ್ಕೇ ಬೇರೆ ಅರ್ಥ ಕಲ್ಪಿಸುವುದು ಬೇಡ” ಎಂದು ಹೇಳಿದ್ದಾರೆ.

ಪಕ್ಷದಲ್ಲಿ ನಿರ್ಲಕ್ಷ್ಯಕ್ಕೀಡಾಗುತ್ತಿದ್ದೀರಾ ಎಂಬ ಪ್ರಶ್ನೆಗೆ, “ಪಕ್ಷದಲ್ಲಿ ನನ್ನನ್ನು ನಿರ್ಲಕ್ಷಿಸುತ್ತಿಲ್ಲ. ಭಿನ್ನಾಭಿಪ್ರಾಯದ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನನ್ನನ್ನು ಪಕ್ಷವು ಉಪ ಮುಖ್ಯಮಂತ್ರಿಯನ್ನಾಗಿ ಮಾಡಿದೆ, ಪ್ರತಿಪಕ್ಷ ನಾಯಕನ ಸ್ಥಾನ ನೀಡಿದೆ” ಎಂದು ತಿಳಿಸಿದ್ದಾರೆ. ಕಳೆದ ಭಾನುವಾರ ನಡೆದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಕ್ಷದ ಅಧ್ಯಕ್ಷರನ್ನಾಗಿ ಶರದ್‌ ಪವಾರ್‌ ಅವರನ್ನೇ ಮುಂದುವರಿಸಲು ತೀರ್ಮಾನಿಸಲಾಯಿತು. ಇನ್ನು ಸಭೆಯ ಮಧ್ಯೆಯೇ ಅಜಿತ್‌ ಪವಾರ್‌ ಎದ್ದು ಹೋದ ಹಿನ್ನೆಲೆಯಲ್ಲಿ ಭಿನ್ನಮತ ಉಂಟಾಗಿದೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ | Sharad Pawar | ಎನ್‌ಸಿಪಿಗೆ ಮತ್ತೆ ಶರದ್‌ ಪವಾರ್‌ ಅಧ್ಯಕ್ಷ, ಪಕ್ಷದ ಕಾರ್ಯಕಾರಿಣಿಯಲ್ಲಿ ಅವಿರೋಧವಾಗಿ ಆಯ್ಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Ram Mandir: ರಾಮಮಂದಿರ ಸ್ಫೋಟಿಸುವ ಉಗ್ರರ ಬೆದರಿಕೆ ಆಡಿಯೊ ವೈರಲ್; ಅಯೋಧ್ಯೆಯಲ್ಲಿ ಹೈ ಅಲರ್ಟ್‌

Ram Mandir: ಅಯೋಧ್ಯೆಯಲ್ಲಿರುವ ರಾಮಮಂದಿರವನ್ನು ಸ್ಫೋಟಿಸುವ ಕುರಿತು ಜೈಶೆ ಮೊಹಮ್ಮದ್‌ ಉಗ್ರರು ಬೆದರಿಕೆ ಹಾಕಿದ ಆಡಿಯೊ ವೈರಲ್‌ ಆಗಿದೆ. ಇದರ ಬೆನ್ನಲ್ಲೇ, ರಾಮಮಂದಿರದ ಸುತ್ತಮುತ್ತ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ. ರಾಮನಗರಿಯ ಎಲ್ಲೆಡೆ ವಾಹನಗಳ ತಪಾಸಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

VISTARANEWS.COM


on

Ram Mandir
Koo

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು (Ram Mandir) ಸ್ಫೋಟಿಸಲಾಗುವುದು ಎಂದು ಜೈಶೆ ಮೊಹಮ್ಮದ್‌ ಉಗ್ರ ಸಂಘಟನೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಕಟ್ಟೆಚ್ಚರ ಘೋಷಣೆ ಮಾಡಲಾಗಿದೆ. ರಾಮಮಂದಿರದ ಮೇಲೆ ಬಾಂಬ್‌ ದಾಳಿ‌ (Bomb Threat) ಮಾಡಲಾಗುವುದು ಎಂದು ಜೈಶೆ ಮೊಹಮ್ಮದ್‌ ಉಗ್ರ ಸಂಘಟನೆಯ (Jaish-e-Mohammed) ಆಡಿಯೊ ವೈರಲ್‌ ಆದ ಬೆನ್ನಲ್ಲೇ, ರಾಮಮಂದಿರದ ಸುತ್ತಲೂ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ.

ರಾಮಮಂದಿರ ಸ್ಫೋಟಿಸುವ ಕುರಿತು ಜೈಶೆ ಮೊಹಮ್ಮದ್‌ ಉಗ್ರರು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ರಾಮಮಂದಿರ ಸುತ್ತಮುತ್ತ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಸಿಟಿವಿಗಳ ಮೂಲಕ ಶಂಕಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇರಿಸಲಾಗಿದೆ. ಬಾಂಬ್‌ ನಿಷ್ಕ್ರಿಯ ದಳ, ಶ್ವಾನ ದಳ ಕೂಡ ಅಯೋಧ್ಯೆಯಲ್ಲಿ ಹೆಚ್ಚು ಅಲರ್ಟ್‌ ಆಗಿವೆ. ಅಯೋಧ್ಯೆಯ ಇಂಚಿಂಚೂ ಪ್ರದೇಶದ ಮೇಲೆ ಭದ್ರತಾ ಸಿಬ್ಬಂದಿಯು ನಿಗಾ ಇರಿಸಿದ್ದಾರೆ. ವಾಹನಗಳ ತಪಾಸಣೆಯೂ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರು 2024ರ ಜನವರಿ 22ರಂದು ರಾಮಮಂದಿರದಲ್ಲಿ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪಿಸಿದರು. ಇದಾದ ಬಳಿಕ ದೇಶ-ವಿದೇಶಗಳಿಂದ ರಾಮನ ಭಕ್ತರು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ನಿತ್ಯ ಸರಾಸರಿ ಒಂದು ಲಕ್ಷಕ್ಕೂ ಅಧಿಕ ಮಂದಿ ಅಯೋಧ್ಯೆಗೆ ಭೇಟಿ ನೀಡಿ, ರಾಮಲಲ್ಲಾನ ದರ್ಶನ ಪಡೆಯುತ್ತಿದ್ದಾರೆ. ರಾಮಮಂದಿರ ನಿರ್ಮಾಣದ ಬಳಿಕ ಅಯೋಧ್ಯೆಯು ದೇಶದ ಪ್ರಮುಖ ಯಾತ್ರಾಸ್ಥಳವಾಗಿ ಬದಲಾಗಿದೆ. ಇದರ ಬೆನ್ನಲ್ಲೇ, ರಾಮಮಂದಿರವನ್ನು ಸ್ಫೋಟಿಸುವ ಕುರಿತು ಉಗ್ರರು ಬೆದರಿಕೆ ಹಾಕಿದ್ದಾರೆ.

ಜಮ್ಮು-ಕಾಶ್ಮೀರದ ಮೂರು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಲ್ಲಿಯೇ ಉಗ್ರರು ದಾಳಿ ನಡೆಸಿದ್ದಾರೆ. ರಿಯಾಸಿ ಜಿಲ್ಲೆಯ ಮೂಲಕ ವೈಷ್ಣೋದೇವಿ ಯಾತ್ರೆಗೆ ತೆರಳುತ್ತಿದ್ದ ಹಿಂದು ಯಾತ್ರಿಕರ ವಾಹನದ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಲಷ್ಕರೆ ತಯ್ಬಾ ಉಗ್ರ ಸಂಘಟನೆಯು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ದೋಡಾ ಹಾಗೂ ಕಥುವಾ ಜಿಲ್ಲೆಯಲ್ಲಿಯೂ ಉಗ್ರರು ದಾಳಿ ನಡೆಸಿದ್ದಾರೆ. ಹಾಗಾಗಿ, ಕಾಶ್ಮೀರದಲ್ಲಿಯೂ ಹೈ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ನರೇಂದ್ರ ಮೋದಿ ಅವರೇ ಖುದ್ದಾಗಿ ಸಭೆ ನಡೆಸಿ, ಉಗ್ರರಿಗೆ ತಿರುಗೇಟು ನೀಡಲು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Ram Mandir: ರಾಮಮಂದಿರ ‘ಯೂಸ್‌ಲೆಸ್’ ಎಂದ ಸಮಾಜವಾದಿ ಪಕ್ಷದ ನಾಯಕ; ಬಿಜೆಪಿ ಆಕ್ರೋಶ

Continue Reading

ಟಾಲಿವುಡ್

Pawan Kalyan: ಪವನ್‌ ಕಲ್ಯಾಣ್‌ ಗೆದ್ದ ಬಳಿಕ ತಲೆಗೂದಲಿಗೆ ಕತ್ತರಿ ಹಾಕಿದ ಡೈ ಹಾರ್ಡ್​ ಫ್ಯಾನ್!

Pawan Kalyan: ತೋಟ ನರೇಂದ್ರ ಉರು ತೆನಾಲಿ ಸಮೀಪದ ಕೊಳಕಲೂರು. 2019ನೇ ಚುನಾವಣೆಯಲ್ಲಿ ತಮ್ಮ ನೆಚ್ಚಿನ ನಟ ಪವನ್ ಕಲ್ಯಾಣ್ ಅವರು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋತಿದ್ದರು. ಇದರಿಂದ ನರೇಂದ್ರ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಎರಡು ಕಡೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ನರೇಂದ್ರ ಅವರಿಗೆ ಪವನ್‌ ಕಲ್ಯಾಣ್‌ ಸೋಲು ಭಾರಿ ನೋವುಂಟು ಮಾಡಿತ್ತು.

VISTARANEWS.COM


on

Pawan Kalyan Fan Narendra cut hairs after Five Years
Koo

ಬೆಂಗಳೂರು: ಇತ್ತೀಚೆಗೆ ನಡೆದ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ (Telugu Desam Party), ಬಿಜೆಪಿ ಮತ್ತು ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ ಪಾರ್ಟಿ (Jana Sena Party)ಯ ಎನ್‌ಡಿಎ (NDA) ಒಕ್ಕೂಟ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಇಂದು (ಜೂನ್‌ 12) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ (Pawan Kalyan) ಅಧಿಕಾರ ವಹಿಸಿಕೊಂಡರು. 2019ರ ಚುನಾವಣೆಯಲ್ಲಿ ಪವನ್‌ ಕಲ್ಯಾಣ್‌ ಎರಡೂ ಕ್ಷೇತ್ರಗಳಲ್ಲಿ ಸೋತು ನಗೆಪಾಟಲಿಗೀಡಾಗಿದ್ದರು. ಆ ಸಮಯದಲ್ಲಿ ಪವನ್‌ ಅವರ ಫ್ಯಾನ್‌ ತೋಟ ನರೇಂದ್ರ ಅವರು ಪವನ್ ಗೆದ್ದೇ ಗೆಲ್ಲುತ್ತಾರೆಂದು ಸವಾಲು ಹಾಕಿ, ಪವನ್ ಗೆಲ್ಲುವವರೆಗೂ ತಲೆಗೂದಲು ಕತ್ತರಿವುದಿಲ್ಲ ಎಂದು ಪ್ರಮಾಣ ಮಾಡಿದ್ದರು. ಇದೀಗ ಕೂದಲಿಗೆ ಕತ್ತರಿ ಹಾಕಿದ್ದಾರೆ.

ತೋಟ ನರೇಂದ್ರ ಉರು ತೆನಾಲಿ ಸಮೀಪದ ಕೊಳಕಲೂರು. 2019ನೇ ಚುನಾವಣೆಯಲ್ಲಿ ತಮ್ಮ ನೆಚ್ಚಿನ ನಟ ಪವನ್ ಕಲ್ಯಾಣ್ ಅವರು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋತಿದ್ದರು. ಇದರಿಂದ ನರೇಂದ್ರ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಎರಡು ಕಡೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ನರೇಂದ್ರ ಅವರಿಗೆ ಪವನ್‌ ಕಲ್ಯಾಣ್‌ ಸೋಲು ಭಾರಿ ನೋವುಂಟು ಮಾಡಿತ್ತು. ಹಾಗಾಗಿ ಆ ಸಮಯದಲ್ಲಿ ನರೇಂದ್ರ ಅವರು ಪ್ರಮಾಣ ಮಾಡಿದರು. ಪವನ್ ಕಲ್ಯಾಣ್ ಗೆದ್ದು ವಿಧಾನಸಭೆಗೆ ಕಾಲಿಡುವವರೆಗೂ ಕೂದಲಿಗೆ ಕತ್ತರಿ ಹಾಕಲ್ಲ ಎಂದು. ಇದೀಗ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ (Pawan Kalyan) ಅಧಿಕಾರ ವಹಿಸಿಕೊಂಡಿದ್ದಾರೆ. ಐದು ವರ್ಷಗಳ ಕಾಲ ಕೂದಲು ಬೆಳೆಸುತ್ತಲೇ ಪಕ್ಷಕ್ಕಾಗಿ ದುಡಿದ ನರೇಂದ್ರ ಕೊನೆಗೂ ಕೂದಲಿಗೆ ಕತ್ತರಿ ಹಾಕಿದ್ದಾರೆ.

ಇದನ್ನೂ ಓದಿ: Pawan Kalyan: ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ ಆಯ್ಕೆ; ಇಂದು ಪ್ರಮಾಣ ವಚನ ಸ್ವೀಕಾರ

ಪವನ್ ಕಲ್ಯಾಣ್ ಸೇರಿದಂತೆ ಜನಸೇನಾದ 21 ಅಭ್ಯರ್ಥಿಗಳು ಈ ಬಾರಿ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಪವನ್ ಕಲ್ಯಾಣ್ ಪೀಠಾಪುರಂ ಕ್ಷೇತ್ರದಿಂದ ಚುನಾವಣೆ ಎದುರಿಸಿದ್ದರು. ಎದುರಾಳಿ ವೈಸಿಪಿ ಅಭ್ಯರ್ಥಿ ವಂಗಾ ಗೀತ ವಿರುದ್ಧ ಭಾರಿ ಅಂತರದ ಜಯವನ್ನು ಪವನ್ ಕಲ್ಯಾಣ್ ಪಡೆದಿದ್ದಾರೆ. 

ವಿಜಯವಾಡದಲ್ಲಿರುವ ಮೇಧಾ ಐಟಿ ಪಾರ್ಕ್‌ ಬಳಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಎನ್‌.ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದಾದ ಬಳಿಕ ಮೋದಿ ಅವರು ನಾಯ್ಡು ಅವರಿಗೆ ಶುಭ ಕೋರಿದರು. ನಂತರ ಪವನ್‌ ಕಲ್ಯಾಣ್‌ ಅವರು ತಮ್ಮ ಸಹೋದರ ಚಿರಂಜೀವಿ ಕೂಡ ಇಲ್ಲೇ ಇದ್ದಾರೆ ಎಂದು ಮೋದಿ ಅವರಿಗೆ ಹೇಳಿದರು. ಆಗ ಮೋದಿ ಅವರು ಚಿರಂಜೀವಿ ಬಳಿ ಹೋಗಿ, ಅವರ ಹಾಗೂ ಪವನ್‌ ಕಲ್ಯಾಣ್‌ ಕೈ ಹಿಡಿದು ವೇದಿಕೆಗೆ ಕರೆತಂದರು. ಬಳಿಕ ಮೂವರೂ ಕೈ ಎತ್ತಿದರು. ಆ ಮೂಲಕ ಒಗ್ಗಟ್ಟಿನ ಬಲ ಪ್ರದರ್ಶನ ಮಾಡಿದರು.

Continue Reading

ದೇಶ

Nagastra 1: ಭಾರತೀಯ ಸೇನೆ ಸೇರಿದ ‘ದೇಶೀಯ’ ನಾಗಾಸ್ತ್ರ ಡ್ರೋನ್‌ಗಳು; ಉಗ್ರರಿಗೆ ನಡುಕ, ಏನಿದರ ವಿಶೇಷ?

Nagastra 1: ಸುಮಾರು 30 ಕೆ.ಜಿ ತೂಕ ಹೊಂದಿರುವ ಇವುಗಳು ಒಂದು ಕೆ.ಜಿ ಸ್ಫೋಟಕಗಳನ್ನು ಕೊಂಡೊಯ್ಯಬಲ್ಲ ಸಾಮರ್ಥ್ಯ ಹೊಂದಿವೆ. ರಾತ್ರಿ ಕೂಡ ಶತ್ರುಗಳ ಮೇಲೆ ನಿಗಾ ಇರಿಸುವ ಇವುಗಳನ್ನು ಶತ್ರುಪಡೆಗಳ ಸೇನಾ ನೆಲೆಗಳು, ಉಗ್ರರ ಲಾಂಚ್‌ಪ್ಯಾಡ್‌ಗಳನ್ನು ಹೊಡೆದುರುಳಿಸುವ ಸಾಮರ್ಥ್ಯ ಹೊಂದಿವೆ. ರಕ್ಷಣಾ ಕ್ಷೇತ್ರದಲ್ಲೂ ಮೇಕ್‌ ಇನ್‌ ಇಂಡಿಯಾ ಹಾಗೂ ಆತ್ಮನಿರ್ಭರ ಭಾರತ ಯೋಜನೆಗಳಿಗೆ ಪುಷ್ಟಿ ನೀಡಿದಂತಾಗಿದೆ ಎಂದೇ ರಕ್ಷಣಾ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

VISTARANEWS.COM


on

Nagastra 1
Koo

ನವದೆಹಲಿ: ದೇಶೀಯವಾಗಿ ನಿರ್ಮಿಸಿದ ನಾಗಾಸ್ತ್ರ 1 (Nagastra 1 Drones) ಡ್ರೋನ್‌ಗಳನ್ನು ಮೊದಲ ಹಂತದಲ್ಲಿ ಭಾರತೀಯ ಸೇನೆಗೆ ಹಸ್ತಾಂತರಿಸಲಾಗಿದೆ. ಅತ್ಯಾಧುನಿಕ ಡ್ರೋನ್‌ಗಳ ಅಳವಡಿಕೆಯಿಂದ ಭಾರತೀಯ ಸೇನೆಗೆ (Indian Army) ಆನೆ ಬಲ ಬಂದಂತಾಗಿದ್ದು, ಶತ್ರುಗಳಲ್ಲಿ ನಡುಕ ಶುರುವಾಗಿದೆ. ನಾಗ್ಪುರ ಮೂಲದ ಎಕನಾಮಿಕ್ಸ್‌ ಎಕ್ಸ್‌ಪ್ಲೋಸಿವ್ಸ್‌ ಲಿಮಿಟೆಡ್‌ (Economics Explosives Limited) ಕಂಪನಿಯು ಡ್ರೋನ್‌ಗಳನ್ನು ತಯಾರಿಸಿದ್ದು, ಮೊದಲ ಹಂತದಲ್ಲಿ 120 ಡ್ರೋನ್‌ಗಳನ್ನು ಸೇನೆಗೆ ನೀಡಲಾಗಿದೆ. ಸೇನೆಯು ಡ್ರೋನ್‌ಗಳನ್ನು ಪುಲಗಾಂವ್‌ನಲ್ಲಿ ಡ್ರೋನ್‌ಗಳನ್ನು ಸ್ವೀಕರಿಸಿದೆ ಎಂದು ತಿಳಿದುಬಂದಿದೆ.

ಸುಮಾರು ಶೇ.75ರಷ್ಟು ದೇಶೀಯ ಉಪಕರಣಗಳನ್ನು ಬಳಸಿಕೊಂಡು ನಾಗಾಸ್ತ್ರ 1 ಡ್ರೋನ್‌ಗಳನ್ನು ತಯಾರಿಸಲಾಗಿದೆ. ಇದು ರಕ್ಷಣಾ ಕ್ಷೇತ್ರದಲ್ಲೂ ಮೇಕ್‌ ಇನ್‌ ಇಂಡಿಯಾ ಹಾಗೂ ಆತ್ಮನಿರ್ಭರ ಭಾರತ ಯೋಜನೆಗಳಿಗೆ ಪುಷ್ಟಿ ನೀಡಿದಂತಾಗಿದೆ ಎಂದೇ ರಕ್ಷಣಾ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ. ಇದೇ ಮಾದರಿಯ ಅತ್ಯಾಧುನಿಕ ಡ್ರೋನ್‌ಗಳು ರಷ್ಯಾ, ಉಕ್ರೇನ್‌, ಸೌದಿ ಅರೇಬಿಯಾ, ರಷ್ಯಾ, ಸಿರಿಯಾ, ಅಜರ್‌ಬೈಜಾನ್‌ ಹಾಗೂ ಅರ್ಮೇನಿಯಾ ದೇಶಗಳ ಸೇನೆಗಳಲ್ಲಿ ಇವೆ.

ಏನಿವುಗಳ ವಿಶೇಷ?

ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ನಾಗಾಸ್ತ್ರ ಡ್ರೋನ್‌ಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇವುಗಳನ್ನು ಸೈನಿಕರು ಹೊತ್ತುಕೊಂಡು ಹೋಗಬಹುದಾಗಿದೆ. ಸುಮಾರು 60 ನಿಮಿಷ 4,500 ಮೀಟರ್‌ ಎತ್ತರದಲ್ಲಿ ಹಾರಾಟ ನಡೆಸಬಲ್ಲ ಸಾಮರ್ಥ್ಯ ಹೊಂದಿರುವ ಇವುಗಳು ರಿಮೋಟ್‌ ಕಂಟ್ರೋಲ್‌ ಮೋಡ್‌ನಲ್ಲಿ 15 ಕಿಲೋಮೀಟರ್‌ ಹಾಗೂ ಆಟೋನಾಮಸ್‌ ಮೋಡ್‌ (ಸ್ವಯಂಚಾಲಿತವಾಗಿ ಹಾರಾಟ)ನಲ್ಲಿ ಸುಮಾರು 30 ಕಿಲೋಮೀಟರ್‌ವರೆಗೆ ಹಾರಾಟ ನಡೆಸಲಿವೆ.

ಸುಮಾರು 30 ಕೆ.ಜಿ ತೂಕ ಹೊಂದಿರುವ ಇವುಗಳು ಒಂದು ಕೆ.ಜಿ ಸ್ಫೋಟಕಗಳನ್ನು ಕೊಂಡೊಯ್ಯಬಲ್ಲ ಸಾಮರ್ಥ್ಯ ಹೊಂದಿವೆ. ರಾತ್ರಿ ಕೂಡ ಶತ್ರುಗಳ ಮೇಲೆ ನಿಗಾ ಇರಿಸುವ ಇವುಗಳನ್ನು ಶತ್ರುಪಡೆಗಳ ಸೇನಾ ನೆಲೆಗಳು, ಉಗ್ರರ ಲಾಂಚ್‌ಪ್ಯಾಡ್‌ಗಳನ್ನು ಹೊಡೆದುರುಳಿಸುವ ಸಾಮರ್ಥ್ಯ ಹೊಂದಿವೆ. ಜಿಪಿಎಸ್‌ ಆಧಾರಿತ ಡ್ರೋನ್‌ಗಳಾಗಿರುವ ಇವು ಕ್ಯಾಮೆರಾಗಳ ಸಹಾಯದಿಂದ ಸುಮಾರು 2 ಮೀಟರ್‌ ದೂರದಿಂದ ವೈರಿಗಳ ನೆಲೆಗಳನ್ನು ಹೊಡೆದುರುಳಿಸುತ್ತವೆ. ಗಡಿಯಲ್ಲಿ ಚೀನಾ ಹಾಗೂ ಪಾಕಿಸ್ತಾನದ ಉಪಟಳವನ್ನು ನಿಗ್ರಹಿಸಲು, ತುರ್ತು ಸಂದರ್ಭಗಳಲ್ಲಿ ಕಾರ್ಯಾಚರಣೆ ಕೈಗೊಳ್ಳಲು, ಉಗ್ರರ ನೆಲೆಗಳನ್ನು ಹೊಡೆದುರುಳಿಸಲು ಇವು ನೆರವಾಗಲಿವೆ.

ಇದನ್ನೂ ಓದಿ: MQ-9B Drones: ಅಮೆರಿಕದ ಅತ್ಯಾಧುನಿಕ ಎಂಕ್ಯೂ-9ಬಿ ಡ್ರೋನ್‌ ಖರೀದಿಗೆ ಒಪ್ಪಿಗೆ, ಬಂತು ಭಾರತೀಯ ಸೇನೆಗೆ ಭೀಮ ಬಲ

Continue Reading

ಪ್ರಮುಖ ಸುದ್ದಿ

Baby Death: ಆಟವಾಡುತ್ತ 7ನೇ ಮಹಡಿ ಬಾಲ್ಕನಿಯಿಂದ ಕೆಳಗೆ ಬಿದ್ದ ಮಗು; ವಿಡಿಯೊ ಇದೆ

Baby Death: ಮಕ್ಕಳನ್ನು ಹೆರುವುದಕ್ಕಿಂತ ಅವರನ್ನು ಸಾಕಿ ಬೆಳೆಸುವುದು ಕೆಲವೊಮ್ಮೆ ಸವಾಲಾಗಿ ಕಾಡುತ್ತದೆ. ಈಗಿನ ಮಕ್ಕಳನ್ನು ಕಣ್ಣಿನ ರಪ್ಪೆಯ ಮೇಲಿಟ್ಟುಕೊಂಡು ಸಾಕಿದರೂ ಸಾಲದು! ಜೀವನ ಸಾಗಿಸುವುದಕ್ಕೆಂದು ಮನೆಗೆಲಸ ಮಾಡುತ್ತಿದ್ದ ತಾಯಿಯೊಬ್ಬಳು ತನ್ನ ಕರುಳಕುಡಿಯನ್ನು ಕಳೆದುಕೊಂಡ ಕರುಣಾಜನಕ ಸುದ್ದಿಯೊಂದು ಇಲ್ಲಿದೆ. ಮಹಡಿ ಮನೆಯ ಬಾಲ್ಕನಿಯ ಗ್ರಿಲ್ ನಡುವೆ ಆಡುತ್ತಿದ್ದ ಮಗುವೊಂದು ಅದರ ಒಳಗೆ ನುಸುಳಿ ಏಳನೇ ಮಹಡಿಯಿಂದ ಕೆಳಕ್ಕೆ ಬಿದ್ದು ಪ್ರಾಣ ಬಿಟ್ಟ ಘಟನೆಯೊಂದು ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ.

VISTARANEWS.COM


on

Baby Death
Koo

ಸೂರತ್‌: ಟೆರೇಸ್‌ ಮೇಲೆ ಆಟವಾಡುತ್ತಿದ್ದ ಮಗು ಆಯತಪ್ಪಿ ಕೆಳಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟಿದೆ. ನೀರಿನ ಬಕೆಟ್‌ಗೆ ಮಗು ಬಿದ್ದು ಸಾವು, ಕೊಳವೆ ಬಾವಿಗೆ ಬಿದ್ದು ಮಗು ಸಾವು ಇಂತಹ ಸುದ್ದಿಗಳನ್ನು ದಿನ ಬೆಳಗಾದರೆ ನಾವು ಪತ್ರಿಕೆಯಲ್ಲಿ, ಟಿವಿ ಮಾಧ್ಯಮದಲ್ಲಿ, ಸೋಷಿಯಲ್‌ ಮೀಡಿಯಾದಲ್ಲಿ ನೋಡಿರುತ್ತೇವೆ, ಕೇಳಿರುತ್ತೇವೆ. ಆದರೆ ಮಕ್ಕಳ ಈ ಸಾವಿಗೆ ಮೊದಲು ಹೊಣೆ ಮಾಡುವುದು ಪೋಷಕರ ನಿರ್ಲಕ್ಷ್ಯತನ. ಮಕ್ಕಳಿಗೆ ಜನ್ಮ ಕೊಡುವುದು ಮಾತ್ರ ಪೋಷಕರ ಕರ್ತವ್ಯವಾಗುವುದಿಲ್ಲ. ಜೊತೆಗೆ ಅವರನ್ನು ಕಾಳಜಿಯಿಂದ ನೋಡಿಕೊಳ್ಳುವುದು ಕೂಡ ಅವರ ಕರ್ತವ್ಯವಾಗಿರುತ್ತದೆ. ಆದರೆ ಕೆಲವು ಪೋಷಕರು ಮಕ್ಕಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾರೆ. ಇದರಿಂದ ಜೀವಮಾನವಿಡೀ ಪಶ್ಚಾತ್ತಾಪ ಪಡುವ ಹಾಗೇ ಆಗುತ್ತದೆ. ಇಂತಹದೊಂದು ಘಟನೆ ಇದೀಗ ಗುಜರಾತ್‌ನಲ್ಲಿ ನಡೆದಿದೆ. ಕಟ್ಟಡದ 7ನೇ ಮಹಡಿಯ ಬಾಲ್ಕನಿಯಿಂದ ಬಿದ್ದು ಎರಡು ವರ್ಷದ ಮಗು (Baby Death) ಸಾವನಪ್ಪಿದೆ. ಗುಜರಾತ್‌ನ ಸೂರತ್‌ನಲ್ಲಿ ಈ ಘಟನೆ ನಡೆದಿದೆ.

ಮೃತ ಮಗುವಿನ ತಾಯಿ ಮತ್ತು ಚಿಕ್ಕಮ್ಮ ಆ ಪ್ರದೇಶದ ಮನೆಗಳಲ್ಲಿ ಮನೆಗೆಲಸ ಮಾಡಿ ಜೀವನ ನಡೆಸುತ್ತಿದ್ದರು. ಪ್ರತಿದಿನ ಅವರು ತಮ್ಮ ಜೊತೆ ಮಗುವನ್ನು ಕರೆದೊಯ್ಯುತ್ತಿದ್ದರು. ಅಂದು ಕೂಡ ಮಗುವಿನ ಜೊತೆ ತಾಯಿ ಮನೆಗೆಲಸಕ್ಕೆ ಹೋಗಿದ್ದಳು. ತಾಯಿ ಬಿ-ಬ್ಲಾಕ್ ನ ಎರಡನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಮಗುವಿನ ಚಿಕ್ಕಮ್ಮ ಏಳನೇ ಮಹಡಿಗೆ ಮಗುವನ್ನು ಕರೆದುಕೊಂಡು ಹೋಗಿದ್ದಾಳೆ. ಅಲ್ಲಿ ಅವಳು ಕೆಲಸದಲ್ಲಿ ನಿರತಳಾಗಿದ್ದಾಗ ಮಗು ಬಾಲ್ಕನಿಯ ಗ್ರಿಲ್ ಬಳಿ ಆಟವಾಡುತ್ತಿತ್ತು. ಆಗ ಮಗು ಗ್ರಿಲ್ ಮೂಲಕ ನುಸುಳಿ ಅದರ ಮೇಲೆ ಕುಳಿತುಕೊಳ್ಳಲು ಪ್ರಯತ್ನಿಸಿದ. ಗ್ರಿಲ್ ಅಗಲವಾಗಿರುವುದರಿಂದ ಮಗು ಸುಲಭವಾಗಿ ಅದರಲ್ಲಿ ನುಸುಳಿ ಕೆಳಕ್ಕೆ ಬಿದ್ದಿದೆ.

ಮಗುವನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಘಟನೆಯ ಬಳಿಕ ಪಾಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರೀಶಿಲನೆ ನಡೆಸಿದ್ದಾರೆ. ಹಾಗೂ ಇಂತಹ ಘಟನೆ ಮತ್ತೆ ಆಗದಂತೆ ತಡೆಯಲು ಈ ಗ್ರಿಲ್‌ಗಳನ್ನು ಸರಿಯಾಗಿ ಮರುವಿನ್ಯಾಸ ಮಾಡುವಂತೆ ಸೊಸೈಟಿ ಅಧ್ಯಕ್ಷರಿಗೆ ನೋಟಿಸ್ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: Yogi Adityanath: ರಸ್ತೆಯಲ್ಲಿ ನಮಾಜ್ ಮಾಡಿದರೆ ಹುಷಾರ್! ಬಕ್ರೀದ್ ಹಿನ್ನೆಲೆಯಲ್ಲಿ ಮುಸ್ಲಿಮರಿಗೆ ಯೋಗಿ ವಾರ್ನಿಂಗ್!

ಮೃತ ಮಗುವಿನ ಕುಟುಂಬ ವರಾಚಾ ಪ್ರದೇಶದಲ್ಲಿ ನೆಲೆಸಿತ್ತು ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Continue Reading
Advertisement
Star Saree Fashion
ಫ್ಯಾಷನ್12 mins ago

Star Saree Fashion: ರೇಷ್ಮೆ ಸೀರೆಯಲ್ಲಿ ನಟಿ ಕೀರ್ತಿ ಸುರೇಶ್‌ರಂತೆ ಗ್ಲಾಮರಸ್‌ ಆಗಿ ಕಾಣಿಸಬೇಕೆ? 5 ಟಿಪ್ಸ್ ಫಾಲೋ ಮಾಡಿ!

Sonakshi Sinha
Latest15 mins ago

Sonakshi Sinha: ನಟಿ ಸೋನಾಕ್ಷಿ ಸಿನ್ಹಾ ಐಷಾರಾಮಿ ಅಪಾರ್ಟ್‌ಮೆಂಟ್ ಹೇಗಿದೆ? ವಿಡಿಯೊ ನೋಡಿ!

Karnataka Weather Forecast
ಮಳೆ20 mins ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Gangster Ravi Pujari
ಕರ್ನಾಟಕ23 mins ago

Gangster Ravi Pujari: ಭೂಗತ ಪಾತಕಿ ರವಿ ಪೂಜಾರಿಗೆ ಅನಾರೋಗ್ಯ; ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

BS Yediyurappa
ಕರ್ನಾಟಕ27 mins ago

BS Yediyurappa: ಪೋಕ್ಸೊ ಕೇಸ್;‌ ಮಾಜಿ ಸಿಎಂಗೇ ಹೀಗಾದರೆ ಜನರ ಗತಿ ಏನು? ಸರ್ಕಾರಕ್ಕೆ ಕೋರ್ಟ್‌ ಚಾಟಿ!

Allergic Asthma
ಆರೋಗ್ಯ35 mins ago

Allergic Asthma: ಅಸ್ತಮಾ ಹೊಂದಿರುವ ವ್ಯಕ್ತಿಗಳು ಈ ಅಲರ್ಜಿಗಳಿಂದ ದೂರವಿರಬೇಕು

Due to heavy rain water entered the houses of Tharkas Pet village of Chittapur taluk
ಮಳೆ1 hour ago

Karnataka Rain: ಧಾರಾಕಾರ ಮಳೆ; ಚಿತ್ತಾಪುರ ತಾಲೂಕಿನ ತರ್ಕಸ್‌ಪೇಟೆ ಗ್ರಾಮ ತತ್ತರ

Pawan Kalyan
Latest1 hour ago

Akira Nandan: ಅಕಿರಾ ನಂದನ್‌; ಆರೂವರೆ ಅಡಿ ಎತ್ತರದ ಪವನ್ ಕಲ್ಯಾಣ್ ಪುತ್ರನಿಗೆ ಭಾರಿ ಡಿಮ್ಯಾಂಡ್‌!

Ram Mandir
ದೇಶ1 hour ago

Ram Mandir: ರಾಮಮಂದಿರ ಸ್ಫೋಟಿಸುವ ಉಗ್ರರ ಬೆದರಿಕೆ ಆಡಿಯೊ ವೈರಲ್; ಅಯೋಧ್ಯೆಯಲ್ಲಿ ಹೈ ಅಲರ್ಟ್‌

Celebrity Ethnic Fashion
ಫ್ಯಾಷನ್1 hour ago

Celebrity Ethnic Fashion: ನಟ ಧನುಷ್‌ ಗೌಡರ ಗ್ರ್ಯಾಂಡ್‌ ಎಥ್ನಿಕ್‌ ಜಾಕೆಟ್‌ ವಿಶೇಷತೆ ಏನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ20 mins ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು1 hour ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌