Site icon Vistara News

ಸಿಎಂ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ

Mamata Banerjee

Mamata Banerjee Redefines INDIA Bloc, Says Will Provide Outside Support

ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (West Bengal CM Mamata Banerjee) ಯವರು ಪ್ರಯಾಣ ಮಾಡುತ್ತಿದ್ದ ಹೆಲಿಕಾಪ್ಟರ್​, ಉತ್ತರ ಬಂಗಾಳದ ಸೆವೋಕ್ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ ಆಗಿದೆ. ಮಮತಾ ಬ್ಯಾನರ್ಜಿ ಅವರು ಜಲ್ಪೈಗುರಿಯ ಕ್ರಿಂತಿ ಎಂಬಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಬಳಿಕ, ಅಲ್ಲಿಂದ ಬಾಗ್ಡೋಗ್ರಾಕ್ಕೆ ಹೆಲಿಕಾಪ್ಟರ್​ನಲ್ಲಿ ತೆರಳುತ್ತಿದ್ದರು. ಆದರೆ ಕೆಟ್ಟ ವಾತಾವರಣ ಮತ್ತು ಗೋಚರತೆ ಮಟ್ಟ ಅತ್ಯಂತ ಕಡಿಮೆಯಾಗಿದ್ದ ಕಾರಣಕ್ಕೆ ಹೆಲಿಕಾಪ್ಟರ್ ತುರ್ತು ಲ್ಯಾಂಡ್ ಆಗಿದೆ (Mamata Banerjee Helicopter Emergency Landing). ಮಮತಾ ಬ್ಯಾನರ್ಜಿ ಸುರಕ್ಷಿತವಾಗಿದ್ದಾರೆ. ಅವರೀಗ ರಸ್ತೆ ಮಾರ್ಗದಲ್ಲಿ ಪ್ರಯಾಣ ಮುಂದುವರಿಸಿದ್ದಾರೆ’ ಎಂದು ಟಿಎಂಸಿ ನಾಯಕ ರಿಜಬ್ ಬ್ಯಾನರ್ಜಿ ತಿಳಿಸಿದ್ದಾರೆ.

ನೈಋತ್ಯ ಮುಂಗಾರು ದೇಶದಲ್ಲಿ ಮುಂಬಯಿ, ದೆಹಲಿ ಮತ್ತು ಪಶ್ಚಿಮ ಬಂಗಾಳಕ್ಕೆ ಕಾಲಿಟ್ಟಿದ್ದು, ಮೋಡ ಮುಸುಕಿದ ವಾತಾವರಣ ಇದೆ. ಮಾನ್ಸೂನ್ ಕಾರಣಕ್ಕೆ ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಇಂದು ವಾತಾವರಣ ಬದಲಾಯಿತು. ಗೋಚರತೆ ಅಸ್ಪಷ್ಟವಾಯಿತು ಎಂದು ಹೇಳಲಾಗಿದೆ. ಪಶ್ಚಿಮ ಬಂಗಾಳದ ಕರಾವಳಿ ತೀರ, ಒಡಿಶಾ ಮತ್ತು ಜಾರ್ಖಂಡ್​ನ ದಕ್ಷಿಣ ಭಾಗಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆಯಾಗಬಹುದು ಎಂಬ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ನೀಡಿದೆ.

ಇದನ್ನೂ ಓದಿ: ಚುನಾವಣೆ ಎಂದರೆ ಹಿಂಸಾಚಾರಕ್ಕೆ ಲೈಸೆನ್ಸ್​ ಅಲ್ಲ; ಸುಪ್ರೀಂಕೋರ್ಟ್​ ಖಡಕ್​ ಸೂಚನೆ, ಮಮತಾ ಬ್ಯಾನರ್ಜಿಗೆ ಮುಖಭಂಗ

ಪಶ್ಚಿಮ ಬಂಗಾಳದಲ್ಲಿ ಜುಲೈ 8ಕ್ಕೆ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಅದಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿ ರಾಜ್ಯದ ವಿವಿಧೆಡೆ ಪ್ರಚಾರ ನಡೆಸುತ್ತಿದ್ದಾರೆ. ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಜಲ್ಪೈಗುರಿಯ ಕ್ರಿಂತಿಯಲ್ಲಿ ಮಾತನಾಡಿದ ಅವರು ಬಿಜೆಪಿ ವಿರುದ್ಧ ಹರಿಹಾಯ್ದರು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಲಾಬಿ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಹಾಗೇ, ಪಂಚಾಯಿತಿ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದಾದ್ಯಂತ ಹಿಂಸಾಚಾರ ಮಿತಿಮೀರಿದೆ. ಈಗಾಗಲೇ 11 ಮಂದಿಯ ಹತ್ಯೆಯಾಗಿದೆ.

Exit mobile version