Site icon Vistara News

CM Mamata Banerjee: ಕಾರು ಅಪಘಾತದಲ್ಲಿ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಗಾಯ

Mamata Banerjee

Who knows if this government will last even 15 days; Says Mamata Banerjee

ಕೋಲ್ಕೊತಾ: ಪಶ್ಚಿಮ ಬಂಗಾಳ (West Bengal) ಸಿಎಂ ಮಮತಾ ಬ್ಯಾನರ್ಜಿ (CM Mamata Banerjee) ಅವರು ಪ್ರಯಾಣಿಸುತ್ತಿದ್ದ ಕಾರ್ ಲಘು ಅಪಘಾತಕ್ಕೀಡಾಗಿದ್ದು(Car Accident), ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಮತಾ ಅವರ ಹಣೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ(Mamata Injured). ಬುಧವಾರ ಸಿಎಂ ಮಮತಾ ಬ್ಯಾನರ್ಜಿ ಅವರು ಬರ್ಧಮಾನ್‌ನಿಂದ ಕೋಲ್ಕೊತಾಗೆ ಮರಳುವಾಗ ಈ ಅಪಘಾತ ಸಂಭವಿಸಿದೆ.

ಮೂಲಗಳ ಪ್ರಕಾರ, ಸಿಎಂ ಮಮತಾ ಬ್ಯಾನರ್ಜಿ ಕಾರಿನಲ್ಲಿ ಬರ್ಧಮಾನ್‌ನಿಂದ ಕೋಲ್ಕೊತಾಗೆ ಹಿಂತಿರುಗುತ್ತಿದ್ದರು. ಅವರ ಬೆಂಗಾವಲು ವಾಹನದ ಮುಂದೆ ಕಾರೊಂದು ಏಕಾಏಕಿ ಬಂದಿದ್ದರಿಂದ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಅಪಘಾತ ಸಂಭವಿಸಿದೆ ಮತ್ತು ಮುಖ್ಯಮಂತ್ರಿ ಗಾಯಗೊಂಡಿದ್ದಾರೆ. ಅಪಘಾತಕ್ಕೆ ಪ್ರತಿಕೂಲ ಹವಾಮಾನ ಕಾರಣವಾಗಿದೆ. ಮಮತಾ ಬ್ಯಾನರ್ಜಿ ಅವರಿಗೆ ಗಂಭೀರ ಗಾಯಗಳೇನೂ ಆಗಿಲ್ಲ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಜತೆ ಮೈತ್ರಿ ಇಲ್ಲ: ಮಮತಾ ಬ್ಯಾನರ್ಜಿ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ʻಇಂಡಿಯಾ ಮೈತ್ರಿಕೂಟʼ ಒಗ್ಗಟ್ಟಾಗಿ ಬಿಜೆಪಿಯನ್ನು ಎದುರಿಸುವ ಕನಸಿಗೆ ತೃಣಮೂಲ ಕಾಂಗ್ರೆಸ್‌ ಅಧಿನಾಯಕಿ ಮಮತಾ ಬ್ಯಾನರ್ಜಿ (Mamata Banerjee) ದೊಡ್ಡ ಹೊಡೆತ ಕೊಟ್ಟಿದ್ದಾರೆ. ಮಹತ್ವದ ಘೋಷಣೆ ಹೊರಡಿಸಿರುವ ಪಶ್ಚಿಮ ಮಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್‌ (Trinamool Congress) ರಾಜ್ಯದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳುವ ಮೂಲಕ ಇಂಡಿಯಾ ಒಕ್ಕೂಟದಿಂದ ದೂರ ಸರಿದಿದ್ದಾರೆ.

2024ರ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ ಬ್ಯಾನರ್ಜಿ, “ನಾವು ಪಶ್ಚಿಮ ಬಂಗಾಳಕ್ಕೆ ಸಂಬಂಧಿಸಿ ಕಾಂಗ್ರೆಸ್‌ನೊಂದಿಗೆ ಸಂಪರ್ಕದಲ್ಲಿಲ್ಲ. ನಾವು ಯಾವುದೇ ಮೈತ್ರಿ ಮಾಡಿಕೊಳ್ಳುತ್ತಿಲ್ಲ. ಇಲ್ಲಿ ಕಾಂಗ್ರೆಸ್ ಸ್ವಂತ ಬಲದಿಂದ ಹೋರಾಡಲಿ. ನಾವು ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ. ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದುʼʼ ಎಂದು ತಿಳಿಸಿದ್ದಾರೆ.

ಟಿಎಂಸಿ ಭದ್ರಕೋಟೆಯಾದ ಬಿರ್ಭುಮ್ ಜಿಲ್ಲೆಯಲ್ಲಿ ನಡೆದ ಗುಪ್ತ ಸಭೆಯ ಒಂದು ದಿನದ ನಂತರ ಮಮತಾ ಬ್ಯಾನರ್ಜಿ ಈ ಪ್ರಕಟಣೆ ಹೊರಡಿಸಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಗೆ ಮುನ್ನ ಸೀಟು ಹಂಚಿಕೆಯ ಬಗ್ಗೆ ಕಾಂಗ್ರೆಸ್ ಮತ್ತು ಟಿಎಂಸಿ ನಡುವೆ ಬಿರುಕು ಕಂಡುಬಂದಿದೆ. ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ಮಂಗಳವಾರ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿ ಅವರನ್ನು “ಅವಕಾಶವಾದಿ” ಎಂದು ಕರೆದಿದ್ದರು.

“ಈ ಬಾರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವುದಿಲ್ಲ. ಚುನಾವಣೆಯಲ್ಲಿ ಹೇಗೆ ಸ್ಪರ್ಧಿಸಬೇಕೆಂದು ಕಾಂಗ್ರೆಸ್‌ಗೆ ತಿಳಿದಿದೆ. ಮಮತಾ ಬ್ಯಾನರ್ಜಿ ಒಬ್ಬ ಅವಕಾಶವಾದಿ; ಅವರು 2011ರಲ್ಲಿ ಕಾಂಗ್ರೆಸ್‌ನ ಕರುಣೆಯಿಂದ ಅಧಿಕಾರಕ್ಕೆ ಬಂದಿದ್ದರು” ಎಂದು ಚೌಧರಿ ಹೇಳಿಕೆ ನೀಡಿದ್ದರು.

ಈ ಸುದ್ದಿಯನ್ನೂ ಓದಿ: Ayodhya Ram Mandir : ಮಮತಾ ಬ್ಯಾನರ್ಜಿಯನ್ನು ಮುಮ್ತಾಜ್ ಖಾನ್ ಎಂದ ರಾಮ ಮಂದಿರದ ಅರ್ಚಕ

Exit mobile version