Site icon Vistara News

Budget 2024: 300 ಯೂನಿಟ್‌ ಉಚಿತ ವಿದ್ಯುತ್;‌ ಬಜೆಟ್‌ನಲ್ಲಿ ಜನಸಾಮಾನ್ಯರಿಗೆ ಇನ್ನೇನು ಕೊಡುಗೆ?

Nirmala Sitharaman

What Will Poor, Women, Farmers Get From Nirmala Sitharaman's Budget 2024

ನವದೆಹಲಿ: ಲೋಕಸಭೆ ಚುನಾವಣೆಗೆ (Lok Sabha Election 2024) ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಬಜೆಟ್‌ (Budget 2024) ಮಂಡಿಸಿದ್ದಾರೆ. ಬಜೆಟ್‌ ಕುರಿತು ತೀವ್ರ ಚರ್ಚೆಗಳೂ ನಡೆಯುತ್ತಿವೆ. ಹಾಗಾದರೆ, ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಎಲ್ಲ ಕ್ಷೇತ್ರಗಳ ಜತೆಗೆ ಜನಸಾಮಾನ್ಯರಿಗೆ ಏನೆಲ್ಲ ಅನುಕೂಲಗಳು ಸಿಗಲಿವೆ? ಯಾವ ವರ್ಗದ ಜನರಿಗೆ ಅನುಕೂಲವಾಗಲಿವೆ? ಬಜೆಟ್‌ ಎಷ್ಟರಮಟ್ಟಿಗೆ ಬಡವರ ಪರವಾಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

2 ಕೋಟಿ ಬಡವರಿಗೆ ಮನೆ

ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ ಬಡವರಿಗೆ 2 ಕೋಟಿ ಮನೆ ನಿರ್ಮಿಸಿಕೊಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. “ಪಿಎಂ ಆವಾಸ್‌ ಯೋಜನೆ ಅಡಿಯಲ್ಲಿ ಈಗಾಗಲೇ 3 ಕೋಟಿ ಮನೆಗಳನ್ನು ನಿರ್ಮಿಸಲಾಗಿದೆ. ಮುಂದಿನ 5 ವರ್ಷದಲ್ಲಿ ಇನ್ನೂ 2 ಕೋಟಿ ಮನೆ ನಿರ್ಮಿಸಲಾಗುತ್ತದೆ” ಎಂದು ನಿರ್ಮಲಾ ಸೀತಾರಾಮನ್‌ ಹೇಳಿದರು.

ಕೃಷಿ ಕ್ಷೇತ್ರಕ್ಕೆ ಕೊಡುಗೆ

ಸುಗ್ಗಿಯ ನಂತರದ ಚಟುವಟಿಕೆಯಲ್ಲಿ ಖಾಸಗಿ ಮತ್ತು ಸರ್ಕಾರಿ ಹೂಡಿಕೆ, ಹೈನುಗಾರರಿಗೆ ಹೆಚ್ಚಿನ ಉತ್ತೇಜನ ನೀಡಲು ಕೇಂದ್ರ ಸರ್ಕಾರ ತಿಳಿಸಿದೆ. ಕಾಲು ಬಾಯಿ ರೋಗವನ್ನು ನಿಯಂತ್ರಿಸಲು ಹೆಚ್ಚಿನ ಪ್ರಯತ್ನ, ಪಿಎಂ ಫಸಲ್ ಬಿಮಾ ಅಡಿಯಲ್ಲಿ 4 ಕೋಟಿ ರೈತರಿಗೆ ಬೆಳೆ ವಿಮೆ, ಐದು ಇಂಟಿಗ್ರೇಟೆಡ್ ಆಕ್ವಾ ಪಾರ್ಕ್ ಸ್ಥಾಪನೆ, ಜಲಕೃಷಿಯನ್ನು ಉತ್ತೇಜಿಸಲು ಬ್ಲೂ ಎಕಾನಮಿ 2.0 ಅನ್ನು ಪ್ರಾರಂಭಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೋಟಿ ಮನೆಗಳಿಗೆ ವಿದ್ಯುತ್‌ ಉಚಿತ


ದೇಶದ ಒಂದು ಕೋಟಿ ಮನೆಗಳ ಚಾವಣಿ ಮೇಲೆ ಉಚಿತವಾಗಿ ಸೋಲಾರ್‌ ಅಳವಡಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಇದರಿಂದ ಮಾಸಿಕ 300 ಯುನಿಟ್‌ ವಿದ್ಯುತ್‌ ಉತ್ಪಾದನೆ ಮಾಡಬಹುದಾಗಿದ್ದು, ಜನರಿಗೆ ಉಚಿತವಾಗಿ ವಿದ್ಯುತ್‌ ಲಭ್ಯವಾಗಿದೆ. ಹಾಗೆಯೇ, “ಬಳಕೆಯಾಗದ ವಿದ್ಯುತ್‌ಅನ್ನು ಸರ್ಕಾರಕ್ಕೆ ಮಾರಾಟ ಮಾಡಿ ಹಣ ಗಳಿಸಬಹುದು” ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಬಾಲಕಿಯರಿಗೆ ಉಚಿತ ಲಸಿಕೆ

ಗರ್ಭಕಂಠ ಕ್ಯಾನ್ಸರ್‌ ತಡೆಗಾಗಿ ದೇಶಾದ್ಯಂತ 9-14 ವರ್ಷದೊಳಗಿನ ಬಾಲಕಿಯರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈಗ ಗರ್ಭಕಂಠ ಕ್ಯಾನ್ಸರ್‌ ನಿರೋಧಕ ವ್ಯಾಕ್ಸಿನ್‌ಗೆ 3 ಸಾವಿರ ರೂ. ಇದೆ. ಇನ್ನುಮುಂದೆ ಶಾಲೆಗಳ ಮೂಲಕವೇ ಬಾಲಕಿಯರಿಗೆ ಉಚಿತವಾಗಿ ಕ್ಯಾನ್ಸರ್‌ ನಿರೋಧಕ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದೆ. ಕೇಂದ್ರ ಸರ್ಕಾರ ನೀಡುವ ಲಸಿಕೆಯು ಶೇ.70ರಷ್ಟು ಪರಿಣಾಮಕಾರಿಯಾಗಿದ್ದು, ಹೆಣ್ಣುಮಕ್ಕಳು ಗರ್ಭಕಂಠ ಕ್ಯಾನ್ಸರ್‌ಗೆ ತುತ್ತಾಗುವುದರಿಂದ ತಡೆಗಟ್ಟುತ್ತದೆ.

ಇದನ್ನೂ ಓದಿ: Budget 2024: ಬಡವರು ಸೇರಿ ಎಲ್ಲರ ಏಳಿಗೆಗೆ ಬಜೆಟ್‌ ಏಣಿ; ಪ್ರಧಾನಿ ಮೋದಿ ಬಣ್ಣನೆ

ಜನಸಾಮಾನ್ಯರಿಗೆ ಅನ್ವಯಿಸುವ ಮತ್ತಷ್ಟು ಯೋಜನೆಗಳು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version