Site icon Vistara News

Hate Speech | ಧರ್ಮದ ಹೆಸರಿನಲ್ಲಿ ನಾವು ಎಂತಹ ಸ್ಥಿತಿಗೆ ಬಂದು ತಲುಪಿದ್ದೇವೆ? ಸುಪ್ರೀಂ ಬೇಸರ

Supreme Court

ನವದೆಹಲಿ: ದೇಶದಲ್ಲಿ ದ್ವೇಷ ಭಾಷಣದ (Hate Speech) ಕುರಿತು ಆಗಾಗ ತೀವ್ರ ಚರ್ಚೆಗಳು ನಡೆಯುತ್ತವೆ. ದ್ವೇಷ ಭಾಷಣ ಮಾಡುವ ರಾಜಕಾರಣಿಗಳು ಸೇರಿ ಹಲವರ ವಿರುದ್ಧ ಸಾರ್ವಜನಿಕವಾಗಿಯೂ ಆಕ್ರೋಶ ವ್ಯಕ್ತವಾಗುತ್ತದೆ. ಹೀಗಿದ್ದರೂ ದ್ವೇಷಣ ಮಾಡುವವರ ಸಂಖ್ಯೆ ಇಳಿಕೆಯಾಗಿಲ್ಲ. ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ, “ಧರ್ಮದ ಹೆಸರಿನಲ್ಲಿ ನಾವು ಎಂತಹ ಸ್ಥಿತಿಗೆ ಬಂದು ತಲುಪಿದ್ದೇವೆ” ಎಂದು ಸುಪ್ರೀಂ ಕೋರ್ಟ್‌ ಬೇಸರ ವ್ಯಕ್ತಪಡಿಸಿದೆ.

ದೇಶಾದ್ಯಂತ ದ್ವೇಷ ಭಾಷಣ ಮಾಡಿದವರ ವಿರುದ್ಧ ಪಾರದರ್ಶಕವಾಗಿ ತನಿಖೆ ನಡೆದು, ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಚಿಸಬೇಕು ಎಂದು ಶಹೀನ್‌ ಅಬ್ದುಲ್ಲಾ ಎಂಬುವರು ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ಕೋರ್ಟ್‌ ಬೇಸರ ವ್ಯಕ್ತಪಡಿಸಿದೆ. “ನಾವೀಗ 21ನೇ ಶತಮಾನದಲ್ಲಿ ಜೀವಿಸುತ್ತಿದ್ದೇವೆ. ಆದರೂ, ಧರ್ಮದ ಹೆಸರಿನಲ್ಲಿ ಯಾವ ಸ್ಥಿತಿಗೆ ತಲುಪಿದ್ದೇವೆ” ಎಂದಿದೆ.

ಕ್ರಮಕ್ಕೆ ಸೂಚನೆ

ದ್ವೇಷ ಭಾಷಣ ಮಾಡುವವರ ವಿರುದ್ಧ ಜಾತಿ, ಧರ್ಮವನ್ನು ಲೆಕ್ಕಿಸದೆ ಕ್ರಮ ತೆಗೆದುಕೊಳ್ಳಬೇಕು ಎಂದು ಹಲವು ರಾಜ್ಯಗಳಿಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ಹಾಗೆಯೇ, ಉತ್ತರ ಪ್ರದೇಶ, ಉತ್ತರಾಖಂಡ ಹಾಗೂ ದೆಹಲಿಯಲ್ಲಿ ದ್ವೇಷ ಭಾಷಣ ಕುರಿತಂತೆ ದಾಖಲಾದ ಪ್ರಕರಣಗಳಲ್ಲಿ ಯಾವ ಕ್ರಮ ತೆಗೆದುಕೊಳ್ಳಲಾಗಿದೆ ಎಂಬುದರ ಕುರಿತು ವರದಿ ನೀಡುವಂತೆ ಸೂಚಿಸಿದೆ.

ಇದನ್ನೂ ಓದಿ | ಆರೆಸ್ಸೆಸ್‌ ಧರ್ಮ ಜಾಗರಣ ಮುಖಂಡನ ಕಾರಿನ ಮೇಲೆ KILL YOU, JIHAD ಬರಹ, ಚಕ್ರದ ಗಾಳಿ ತೆಗೆದು ಬೆದರಿಕೆ

Exit mobile version