ನಟ ದಿಲೀಪ್​ ಕುಮಾರ್​ಗೆ ಮ್ಯಾಚ್​ ಆಗಬಲ್ಲ ಏಕೈಕ ನಟ ಯಾರು?-ಕಪಿಲ್ ಶರ್ಮಾ ಶೋನಲ್ಲಿ ತಮ್ಮ ಇಷ್ಟ ಬಿಚ್ಚಿಟ್ಟ ಸುಧಾಮೂರ್ತಿ - Vistara News

ದೇಶ

ನಟ ದಿಲೀಪ್​ ಕುಮಾರ್​ಗೆ ಮ್ಯಾಚ್​ ಆಗಬಲ್ಲ ಏಕೈಕ ನಟ ಯಾರು?-ಕಪಿಲ್ ಶರ್ಮಾ ಶೋನಲ್ಲಿ ತಮ್ಮ ಇಷ್ಟ ಬಿಚ್ಚಿಟ್ಟ ಸುಧಾಮೂರ್ತಿ

2004ರಲ್ಲಿ ತಾವು ಶಾರುಖ್ ಅಭಿನಯದ ವೀರ್ ಝಾರಾ ಸಿನಿಮಾ ನೋಡಿದ್ದನ್ನು ನೆನಪಿಸಿಕೊಂಡ ಸುಧಾಮೂರ್ತಿ ‘ವೀರ್​ ಝಾರಾ ಸಿನಿಮಾ ನೋಡಿದ ಬಳಿಕ ನಾನು ದಿಲೀಪ್​ ಕುಮಾರ್ ಅವರನ್ನು ನೆನಪಿಸಿಕೊಂಡಿದ್ದೆ ಎಂದೂ ಸುಧಾಮೂರ್ತಿ ತಿಳಿಸಿದ್ದಾರೆ.

VISTARANEWS.COM


on

Sudha Murthy Why did the British official call Sudha Murthy's UK address a joke
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಿಂದಿಯ ಖ್ಯಾತ ಕಾಮಿಡಿ ಶೋ ‘ದಿ ಕಪಿಲ್​ ಶರ್ಮಾ ಶೋ (The Kapil Sharma Show)’ದಲ್ಲಿ ಕಳೆದವಾರ ಭಾಗವಹಿಸಿದ್ದ, ಇನ್ಫೋಸಿಸ್​ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ (Sudha Murty) ಹಲವು ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಸಿನಿಪ್ರಿಯರಾಗಿರುವ ಸುಧಾಮೂರ್ತಿ ತಮ್ಮ ನೆಚ್ಚಿನ ನಟ ಯಾರು ಎಂಬ ಬಗ್ಗೆಯೂ ತಿಳಿಸಿದ್ದಾರೆ. ‘ನಾನು ನನ್ನ ಯೌವನದ ಕಾಲದಲ್ಲಿ ನಟ ದಿಲೀಪ್ ಕುಮಾರ್​ ಬಗ್ಗೆ, ಅವರ ನಟನೆ ಬಗ್ಗೆ ಸಿಕ್ಕಾಪಟೆ ಅಭಿಮಾನ ಇಟ್ಟುಕೊಂಡಿದ್ದು. ಅವರು ಎಂದಿಗೂ ನನ್ನ ನೆಚ್ಚಿನ ನಟ. ಅವರು ಸರ್ವಶ್ರೇಷ್ಠ ಎಂಬುದರಲ್ಲಿ ಎರಡು ಮಾತೇ ಇಲ್ಲ’ ಎಂದು ಸುಧಾಮೂರ್ತಿ ಹೇಳಿದರು. ಅಷ್ಟೇ ಅಲ್ಲ, ಈಗಿನ ನಟರಲ್ಲಿ ದಿಲೀಪ್​ ಕುಮಾರ್​​ಗೆ ಹೊಂದಾಣಿಕೆಯಾಗಬಲ್ಲ ಏಕೈಕ ನಟ ಶಾರುಖ್​ಖಾನ್​. ತೆರೆಯಮೇಲೆ ಭಾವನೆಗಳನ್ನು ವ್ಯಕ್ತಪಡಿಸಿ, ನಟನೆ ಮಾಡುವಲ್ಲಿ ದಿಲೀಪ್ ಕುಮಾರ್ ಎತ್ತಿದ ಕೈ. ಈ ವಿಚಾರದಲ್ಲಿ ದಿಲೀಪ್ ಅವರ ನಟನೆಗೆ ಮ್ಯಾಚ್ ಮಾಡಲು ಈಗಿನ ಶಾರುಖ್ ಖಾನ್​ ಬಳಿ ಮಾತ್ರ ಸಾಧ್ಯ’ ಎಂದು ಸುಧಾಮೂರ್ತಿ ತಿಳಿಸಿದ್ದಾರೆ.

ಹಾಗೇ, 2004ರಲ್ಲಿ ತಾವು ಶಾರುಖ್ ಅಭಿನಯದ ವೀರ್ ಝಾರಾ ಸಿನಿಮಾ ನೋಡಿದ್ದನ್ನು ನೆನಪಿಸಿಕೊಂಡ ಸುಧಾಮೂರ್ತಿ ‘ವೀರ್​ ಝಾರಾ ಸಿನಿಮಾ ನೋಡಿದ ಬಳಿಕ ನಾನು ದಿಲೀಪ್​ ಕುಮಾರ್ ಅವರನ್ನು ನೆನಪಿಸಿಕೊಂಡಿದ್ದೆ. ದಿಲೀಪ್ ಕುಮಾರ್ ವಯಸ್ಸಿನಲ್ಲಿ ಸಣ್ಣವರಾಗಿದ್ದರೆ, ಅವರೇ ಈ ಸಿನಿಮಾದಲ್ಲಿ ನಟಿಸಬಹುದಿತ್ತು. ಸಿನಿಮಾದಲ್ಲಿ ಶಾರುಖ್ ಖಾನ್ ಮಾಡಿರುವ ಪಾತ್ರವನ್ನು ದಿಲೀಪ್ ಕುಮಾರ್ ಮಾಡಬಹುದಿತ್ತು ಎಂದು ನನ್ನ ಮಗಳ ಬಳಿ ಹೇಳಿಕೊಂಡಿದ್ದೆ’ ಎಂದು ಹೇಳಿದರು. ಹಾಗೇ, ‘ದಿಲೀಪ್ ಕುಮಾರ್​ಗೆ ಪರ್ಯಾಯ ಶಾರುಖ್ ಖಾನ್ ಮಾತ್ರ ಎನ್ನುವುದರಲ್ಲಿ ಅನುಮಾನವೇ ಇಲ್ಲ’ ಎಂದು ತಿಳಿಸಿದರು.

ಶಾರುಖ್​ ಖಾನ್​ಗೆ ವಿಶೇಷವಾದ ವರ್ಚಸ್ಸಿದೆ. ಇದೇ ಕಾರಣಕ್ಕೆ ಅವರು ಕಿಂಗ್ ಆಫ್ ಬಾಲಿವುಡ್​ ಎಂಬ ಹೆಸರನ್ನು ಪಡೆದಿದ್ದಾರೆ ಎಂಬುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಅನೇಕ ದಿಗ್ಗಜ ನಟರ ಪ್ರಭಾವ ಇರುವಾಗಲೇ ಶಾರುಖ್​ ಖಾನ್ ಪ್ರಸಿದ್ಧಿ ಪಡೆದವರು. ಶಾರುಖ್ ಖಾನ್ ಅವರು ಬಾಲಿವುಡ್​ನ ನಿಜವಾದ ಸ್ಟಾರ್ ಎಂದೇ ಅನೇಕರು ಭಾವಿಸುತ್ತಾರೆ ಎಂದು ಸುಧಾಮೂರ್ತಿ ಹೇಳಿದರು. ಈ ಮೂಲಕ ಅವರು ಶಾರುಖ್ ಖಾನ್ ಅವರ ಪ್ರತಿಭೆಯನ್ನು ಹೊಗಳಿದರು.

ಇದನ್ನೂ ಓದಿ: Narayana Murthy : ನಾಯಕರಿಗೆ ಸರಳ ಜೀವನ ಶೈಲಿ ಅಗತ್ಯ, ಕ್ಯಾಪಿಟಲಿಸಂ ಆಕರ್ಷಕವಾಗಬೇಕು: ನಾರಾಯಣ ಮೂರ್ತಿ

ಕಪಿಲ್‌ ಶರ್ಮಾ ಶೋನಲ್ಲಿ ಸುಧಾಮೂರ್ತಿ ಅವರ ಜತೆಗೆ ನಿರ್ಮಾಪಕಿ ಗುನೀತ್‌ ಮೊಂಗಾ ಹಾಗೂ ನಟಿ ರವೀನಾ ಟಂಡನ್‌ ಕೂಡ ಭಾಗವಹಿಸಿದ್ದರು. ಇದೇ ವೇಳೆ ಅವರು ತಾವು ನಾರಾಯಣ ಮೂರ್ತಿಯವರನ್ನು ಭೇಟಿಯಾಗಿದ್ದು ಹೇಗೆ ಎಂಬಿತ್ಯಾದಿ ವಿಷಯಗಳನ್ನೂ ಹೇಳಿದ್ದರು. “ಪ್ರಸನ್ನ ಅಂತ ನನ್ನ ಫ್ರೆಂಡ್‌ ಒಬ್ಬರು ಇದ್ದರು. ಅವರ ಸಹೋದ್ಯೋಗಿಯೇ ನಾರಾಯಣಮೂರ್ತಿ. ಅವರು ಪ್ರತಿದಿನ ಒಂದು ಪುಸ್ತಕ ತೆಗೆದುಕೊಳ್ಳುತ್ತಿದ್ದರು. ನಾರಾಯಣಮೂರ್ತಿ ಇಸ್ತಾಂಬುಲ್‌, ನಾರಾಯಣಮೂರ್ತಿ ಪೇಶಾವರ್‌ ಎಂಬುದಾಗಿ ಹೇಳುತ್ತಿದ್ದರು. ಆಗ, ನಾರಾಯಣಮೂರ್ತಿ ಅವರೇನಾದರೂ ಇಂಟರ್‌ನ್ಯಾಷನಲ್‌ ಬಸ್‌ ಕಂಡಕ್ಟರ್‌ ಇದ್ದಾರಾ ಎಂಬುದಾಗಿ ಭಾವಿಸಿದ್ದೆ ಎಂದು ಸುಧಾಮೂರ್ತಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lalu Prasad Yadav: ಬಿಹಾರದಲ್ಲಿ ಲಾಲೂ ಪ್ರಸಾದ್‌ ಯಾದವ್‌ v/s ಲಾಲೂ ಪುತ್ರಿ

Lalu Prasad Yadav: ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ಅವರ ಹೆಸರನ್ನೇ ಇಟ್ಟುಕೊಂಡಿರುವ ರೈತನೋರ್ವ ಈ ಬಾರಿ ಸಾರನ್‌ ಕ್ಷೇತ್ರದಲ್ಲಿ ರಾಷ್ಟ್ರೀಯ ಜನ ಸಂಭಾವನಾ ಪಕ್ಷದಿಂದ ಸ್ಪರ್ಧಿಸುತ್ತಿದ್ದು, ಇವರ ವಿರುದ್ಧ ಆರ್‌ಜೆಡಿಯಿಂದ ಲಾಲೂ ಪುತ್ರಿ ರೋಹಿಣಿ ಆಚಾರ್ಯ ಕಣಕ್ಕಿಳಿದಿದ್ದಾರೆ.

VISTARANEWS.COM


on

Lalu Prasad Yadav
Koo

ಪಾಟ್ನಾ: ಬಿಹಾರದ ಸಾರನ್‌ ಲೋಕಸಭಾ ಕ್ಷೇತ್ರ(Saran)ದಲ್ಲಿ ಲಾಲೂ ಪ್ರಸಾದ್‌ ಯಾದವ್‌(Lalu Prasad Yadav) ವರ್ಸಸ್‌ ಲಾಲೂ ಪುತ್ರಿ ಪರಸ್ಪರ ಮುಖಾಮುಖಿಯಾಗಿ ಕಣಕ್ಕಿದಿದ್ದಾರೆ. ಅರೆ.. ಇದೇನಿದು ಎಂದೇ ಕ್ಷೇತ್ರದಲ್ಲಿ ಅಪ್ಪ-ಮಗಳು ಇಬ್ಬರು ಪರಸ್ಪರ ಎದುರಾಳಿಗಳಾಗಿ ಕಣಕ್ಕಿಳಿದಿದ್ದಾರಾ ಎಂದು ಅಚ್ಚರಿ ಆಗೋದಂತೂ ನಿಜ. ಆದರೆ ನಿಜಾಂಶ ಏನೆಂದರೆ ಆರ್‌ಜೆಡಿ(RJD) ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ಅವರ ಹೆಸರನ್ನೇ ಇಟ್ಟುಕೊಂಡಿರುವ ರೈತನೋರ್ವ ಈ ಬಾರಿ ಸಾರನ್‌ ಕ್ಷೇತ್ರದಲ್ಲಿ ರಾಷ್ಟ್ರೀಯ ಜನ ಸಂಭಾವನಾ ಪಕ್ಷದಿಂದ(RJP) ಸ್ಪರ್ಧಿಸುತ್ತಿದ್ದು, ಇವರ ವಿರುದ್ಧ ಆರ್‌ಜೆಡಿಯಿಂದ ಲಾಲೂ ಪುತ್ರಿ ರೋಹಿಣಿ ಆಚಾರ್ಯ ಕಣಕ್ಕಿಳಿದಿದ್ದಾರೆ.

ಯಾರು ಈ ಲಾಲೂ ಪ್ರಸಾದ್‌ ಯಾದವ್‌?

ಸ್ಥಳೀಯ ರೈತನಾಗಿರುವ ಲಾಲೂ ಪ್ರಸಾದ್‌ ಯಾದವ್‌, ಸಾರನ್‌ ಜಿಲ್ಲೆಯವರಾಗಿದ್ದು, ಏಪ್ರಿಲ್‌ 26ರಂದು ಆರ್‌ಜೆಪಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. 2022ರಲ್ಲಿ ನಡೆದ ರಾಷ್ಟ್ರಪತಿ ಚುನಾವಣೆಯ ಸಂದರ್ಭದಲ್ಲಿ ಲಾಲೂ ಪ್ರಸಾದ್‌ ಯಾದವ್‌ ಸ್ಪರ್ದಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅದೂ ಅಲ್ಲದೇ 2017ರಲ್ಲಿ ಮಾಜಿ ಲೋಕಸಭಾ ಸ್ಪೀಕರ್‌ ಮೀರಾ ಕುಮಾರ್‌ ಮತ್ತು ರಾಮನಾಥ್‌ ಕೋವಿಂದ್‌ ಕಣದಲ್ಲಿದ್ದ ರಾಷ್ಟ್ರಪತಿ ಚುನಾವಣೆಯಲ್ಲಿ ಅವರು ನಾಮಪತ್ರ ಸಲ್ಲಿಸಿದ್ದರು. ಬಳಿಕ ಅವರ ನಾಮಪತ್ರವನ್ನು ತಿರಸ್ಕರಿಸಲಾಯಿತು.

ಈ ಬಗ್ಗೆ ಅವರು ಪ್ರತಿಕ್ರಿಯಿಸಿದ್ದು, ಸಾರನ್‌ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಅನೇಕ ಬಾರಿ ಸ್ಪರ್ಧಿಸಿದ್ದೇನೆ. ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ವಿರುದ್ಧವೂ ಸ್ಪರ್ಧಿಸಿದ್ದೆ. ಈ ಬಾರಿ ಅವರ ಪುತ್ರಿ ರೋಹಿಣಿ ಆಚಾರ್ಯ ವಿರುದ್ಧ ಸ್ಪರ್ಧಿಸುತ್ತಿದ್ದೇನೆ. ನಾನು ಬದುಕಲು ಕೃಷಿ ಮಾಡುತ್ತಿದ್ದೇನೆ. ಅದರ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತೊಡಗಿಕೊಂಡಿದ್ದೇನೆ. ನಾನು ಪಂಚಾಯತ್‌ನಿಂದ ಅಧ್ಯಕ್ಷೀಯ ಚುನಾವಣೆವರೆಗೂ ಅದೃಷ್ಟಪರೀಕ್ಷೆಗೆ ನಡೆಸಿದ್ದೇನೆ. ನಾನು ಗೆದ್ದೇ ಗೆಲ್ಲುತ್ತೇನೆ. ಸಾರನ್‌ ಕ್ಷೇತ್ರದ ಜನ ನನ್ನ ಜೊತೆಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Lok sabha Election 2024: ರಾಯ್‌ಬರೇಲಿಯಲ್ಲಿ ಕಣಕ್ಕಿಳಿದಿರುವ ದಿನೇಶ್‌ ಪ್ರತಾಪ್‌ ಸಿಂಗ್‌ ಹಿನ್ನೆಲೆ ಏನು?

ಇನ್ನು ಕೇವಲ ಪ್ರಚಾರಕ್ಕಾಗಿ, ಮತ ವಿಭಜನೆಗಾಗಿ ಸ್ಪರ್ಧೆ ಎಂಬ ಟೀಕೆಗೆ ಟಾಂಗ್‌ ಕೊಟ್ಟ ಯಾದವ್‌, ನಾನು ಇಂತಹ ಟೀಕೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಅವರು ನನ್ನ ಪ್ರತಿಸ್ಪರ್ಧಿಗಳು. ಅವರಿಂದ ಇಂತಹ ಹೇಳಿಕೆಗಳು ಬರುವುದು ಸಹಜ. ಇಂತಹ ಟೀಕೆಗಳಿಗೆ ನಾನು ಕುಗ್ಗಲ್ಲ. ನಾನು ಕೇವಲ ನನ್ನ ಮತದಾರರಿಗಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದರು. ಇನ್ನು ಲಾಲೂ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಮ್ಮ ಬಳಿ 5 ಲಕ್ಷ ರೂ ಮತ್ತು ತಮ್ಮ ಪತ್ನಿ ಬಳಿ 2 ಲಕ್ಷ ರೂ. ನಗದು, 17.60 ಲಕ್ಷ ರೂ. ಮೌಲ್ಯದ ಚರಾಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ. ಹಾಗೂ ತಮ್ಮ ಪತ್ನಿ ಬಳಿ 5.20 ಲಕ್ಷ ರೂ ಮೌಲ್ಯದ ಚರಾಸ್ತಿ ಹೊಂದಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

Continue Reading

ವೈರಲ್ ನ್ಯೂಸ್

Viral News: ಶಾಕಿಂಗ್‌ ವಿಡಿಯೊ; ಹಾವು ಕಚ್ಚಿದ್ದ ಯುವಕ ಗುಣಮುಖನಾಗಲೆಂದು ಗಂಗಾ ನದಿಯಲ್ಲಿ ನೇತಾಡಿಸಿದರು!

Viral News: ಆಧುನಿಕ ಯುಗ, ವೈಜ್ಞಾನಿಕ ಯುಗದಲ್ಲಿ ನಾವಿದ್ದೇವೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಇದೇ ವೇಳೆ ಕೆಲವೊಮ್ಮೆ ಮೂಢ ನಂಬಿಕೆ ಆಚರಣೆ ನಾವು ತಲೆ ತಗ್ಗಿಸುವಂತೆ ಮಾಡುತ್ತದೆ. ಅದಕ್ಕೆ ;ಜ್ವಲಂತ ಉದಾಹರಣೆ ಇಲ್ಲಿದೆ. ಹಾವು ಕಚ್ಚಿ ಗಂಭೀರ ಸ್ಥಿತಿಯಲ್ಲಿದ್ದ ಯುವಕ ಗುಣಮುಖನಾಗಲೆಂದು ಆತನ ದೇಹವನ್ನು ಎರಡು ದಿನಗಳ ಕಾಲ ಗಂಗಾ ನದಿಯಲ್ಲಿ ನೇತಾಡಿಸಲಾಗಿದೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Viral News
Koo

ಲಕ್ನೋ: ವೈಜ್ಞಾನಿಕವಾಗಿ ನಮ್ಮ ದೇಶ ಸಾಕಷ್ಟು ಮುಂದುವರಿದಿದೆ. ಕೋಟ್ಯಂತರ ಕಿ.ಮೀ. ದೂರ ಇರುವ ಚಂದ್ರನಲ್ಲಿಗೆ ರಾಕೆಟ್‌ ಕಳಿಸುದ್ದೇವೆ. ಭೂ ಗರ್ಭದಲ್ಲಿ ಏನೇನಿದೆ ಎನ್ನುವುದನ್ನು ಶೋಧಿಸಿದ್ದೇವೆ. ಹಾಗಿದ್ದರೂ ಕೆಲವೆಡೆ ಇನ್ನೂ ಮೂಢ ನಂಬಿಕೆ ಎನ್ನುವುದು ತಾಂಡವವಾಡುತ್ತಿದೆ ಎನ್ನುವುದು ವಿಷಾಧನೀಯ. ನಂಬಿಕೆ ಮತ್ತು ಮೂಢ ನಂಬಿಕೆ ಎನ್ನುವುದರ ನಡುವಿನ ಗೆರೆ ತೀರಾ ತೆಳುವಾದುದು. ಯಾರದೋ ಮಾತು ನಂಬಿ, ಅಸಾಧ್ಯವಾದುದನ್ನು ಸಾಧ್ಯವೆಂದು ನಂಬಿ ಮೌಢ್ಯ ಆಚರಣೆಯಲ್ಲಿ ತೊಡಗಿರುವವರು ಈಗಲೂ ಇದ್ದಾರೆ. ಇಷ್ಟೆಲ್ಲ ಯಾಕೆ ಹೇಳುತ್ತಿದ್ದೇವೆ ಎಂದರೆ ಉತ್ತರ ಪ್ರದೇಶದಲ್ಲಿ ಹಾವು ಕಚ್ಚಿದ ಯುವಕ ಗುಣಮುಖನಾಗಲೆಂದು ಎರಡು ದಿನಗಳ ಕಾಲ ಗಂಗಾ ನದಿಯಲ್ಲಿ ಆತನನ್ನು ನೇತಾಡಿಸಲಾಗಿದೆ. ಶರೀರದಲ್ಲಿರುವ ವಿಷ ಇಳಿದು ಆತ ಜೀವಂತವಾಗಿ ಎದ್ದು ಬರುತ್ತಾನೆ ಎನ್ನುವ ಮೂಢ ನಂಬಿಕೆಯೇ ಇದಕ್ಕೆ ಕಾರಣ (Viral News).

ಘಟನೆ ಹಿನ್ನೆಲೆ

ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯ ಜೈರಾಮ್‌ಪುರ ಕುಡೇನಾ ಗ್ರಾಮದ, 20 ವರ್ಷದ ಮೋಹಿತ್‌ ಕುಮಾರ್‌ಗೆ ವಿಷದ ಹಾವು ಕಚ್ಚಿತ್ತು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿತ್ತು. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವೈದ್ಯರು ಚಿಕಿತ್ಸೆ ಮುಂದುವರಿಸಿದರೂ ಆರೋಗ್ಯ ಸುಧಾರಿಸಿರಲಿಲ್ಲ. ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಲೇ ಇತ್ತು. ವೈದ್ಯರೂ ಕೈ ಚೆಲ್ಲಿದ್ದರು. ಕೊನೆಗೆ ಆತನ ಕುಟುಂಬ ಸ್ಥಳೀಯ ಚಿಕಿತ್ಸಕನ ಮೊರೆ ಹೋಯಿತು. ಆತ ಸೂಚಿಸಿದ ವಿಧಾನವೇ ಈ ಗಂಗಾ ಚಿಕಿತ್ಸೆ.

ಯುವಕನ ಶರೀರವನ್ನು ಹಗ್ಗದಲ್ಲಿ ಕಟ್ಟಿ ಗಂಗಾ ನದಿಯಲ್ಲಿ ನೇತಾಡಿಸುವಂತೆ ಸ್ಥಳೀಯ ಚಿಕಿತ್ಸಕ ಸಲಹೆ ನೀಡಿದ್ದ. ಇದರಿಂದ ಯುವಕನ ಶರೀರದೊಳಕ್ಕೆ ಸೇರಿದ್ದ ವಿಷವೆಲ್ಲ ಇಳಿದು ಹೋಗಿ ಆತ ಮೊದಲಿನಂತಾಗುತ್ತಾನೆ ಎಂದು ತಿಳಿಸಿದ್ದ. ಅದರಂತೆ ಕುಟುಂಬಸ್ಥರು ಹರಿಯುವ ನದಿಯಲ್ಲಿ ಮೋಹಿತ್‌ ಕುಮಾರ್‌ನ ಶರೀರವನ್ನು ಅರ್ಧ ಮುಳುಗುವಂತೆ ನೇತಾಡಿಸಿದ್ದರು. ಸುಮಾರು ಎರಡು ದಿನಗಳ ಕಾಲ ಈ ʼಚಿಕಿತ್ಸೆʼ ಮುಂದುವರಿದಿತ್ತು. ಸದ್ಯ ಆತ ಮೃತಪಟ್ಟಿದ್ದಾನೆ. ಈ ಘಟನೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿದೆ.

ನೆಟ್ಟಿಗರು ಹೇಳಿದ್ದೇನು?

ವಿಡಿಯೊ ನೋಡಿದ ನೆಟ್ಟಿಗರಿಗೆ ತಮ್ಮ ಕಣ್ಣುಗಳನ್ನೇ ನಂಬಲಾಗಲಿಲ್ಲ. ಅನೇಕರು ಈ ಶಾಕ್‌ನಿಂದ ಇನ್ನೂ ಹೊರ ಬಂದಿಲ್ಲ. ಈ ಆಚರಣೆಯ ಹಿಂದಿನ ವೈಜ್ಞಾನಿಕತೆಯನ್ನು ಹಲವರು ಪ್ರಶ್ನಿಸಿದ್ದಾರೆ. ʼʼವಿಜ್ಞಾನಮುಕ್ತ ಭಾರತಕ್ಕೆ ಸ್ವಾಗತʼʼ ಎಂದು ಒಬ್ಬರು ವ್ಯಂಗ್ಯವಾಡಿದ್ದಾರೆ. ʼʼಹಾವಿನ ವಿಷ ಹೇಗೆ ಶರೀರಕ್ಕೆ ಸೇರಿಕೊಳ್ಳುತ್ತದೆ ಮತ್ತು ಯಾವ ರೀತಿ ಪರಿಣಾಮ ಬೀರುತ್ತದೆ ಎನ್ನುವುದನ್ನು ಶಾಲೆಗಳ ಪಠ್ಯದಲ್ಲಿ ಸೇರಿಸಬೇಕು. ಇದರಿಂದ ಇಂತಹ ಅನಾಚಾರಗಳನ್ನು ನಿಯಂತ್ರಿಸಬಹುದುʼʼ ಎಂದು ಇನ್ನೊಬ್ಬರು ಹೇಳಿದ್ದಾರೆ. ʼʼಅತ್ಯಂತ ನಾಚೆಕೆಗೇಡಿನ ಸಂಗತಿ. ಇದನ್ನು ಸೂಚಿಸಿದ ಸ್ಥಳೀಯ ಚಿಕಿತ್ಸಿಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕುʼʼ ಎಂದು ಮತ್ತೊಬ್ಬರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕ್ಯಾನ್ಸರ್‌ ತೊಲಗಲಿ ಎಂದು ಮಗನನ್ನು ಗಂಗಾ ನದಿಯಲ್ಲಿ ಮುಳುಗಿಸಿದ ತಾಯಿ, ಬಾಲಕ ಸಾವು; Video ಇದೆ

ಕೆಲವು ದಿನಗಳ ಹಿಂದೆಯೂ ಇಂತಹದ್ದೆ ಘಟನೆ ನಡೆದಿತ್ತು. ಮಹಿಳೆಯೊಬ್ಬಳು ತನ್ನ ಕ್ಯಾನ್ಸರ್‌ ಪೀಡಿತ 4 ವರ್ಷದ ಮಗ ಗುಣಮುಖನಾಗಲೆಂದು ಗಂಗಾ ನದಿಯಲ್ಲಿ ಮುಳುಗಿಸಿದ್ದಳು. ಈ ವೇಳೆ ಬಾಲಕ ಉಸಿರುಗಟ್ಟಿ ಮೃತಪಟ್ಟಿದ್ದ.

Continue Reading

ದೇಶ

West Bengal Governor: ರಾಜ್ಯಪಾಲರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ; TMC ಆಕ್ರೋಶ

West Bengal Governor: ಮಹಿಳೆಯೊಬ್ಬರು ರಾಜ್ಯಪಾಲ ಆನಂದ ಬೋಸ್‌ ವಿರುದ್ಧ ಕೋಲ್ಕತಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ದಿನೇ ದಿನೇ ರಾಜಭವನದಲ್ಲಿ ಹೆಚ್ಚು ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದೆ ಎಂಬುದನ್ನು ಸಂತ್ರಸ್ತೆ ತನ್ನ ದೂರಿನಲ್ಲಿ ಹೇಳಿದ್ದಾಳೆ.

VISTARANEWS.COM


on

West Bengal Governor
Koo

ಕೋಲ್ಕತಾ: ಪಶ್ಚಿಮ ಬಂಗಾಳದ ರಾಜ್ಯಪಾಲ(West Bengal Governor)ರ ವಿರುದ್ಧ ಲೈಂಗಿಕ ಕಿರುಕುಳ(Sexual Harassment)ದ ಆರೋಪ ಕೇಳಿಬಂದಿದೆ. ರಾಜ್ಯಪಾಲ ಸಿ.ವಿ. ಆನಂದ ಬೋಸ್‌(C V Anand Bose) ರಾಜಭವನದಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್‌(TMC) ಮುಖಂಡರು ಆರೋಪಿಸಿದ್ದಾರೆ. ಈ ಸುದ್ದಿ ರಾಜ್ಯಾದ್ಯಂತ ಬಹಳ ಸುದ್ದಿಯಾಗುತ್ತಿದ್ದು, ಇದೊಂದು ತೇಜೋವಧೆ ಮಾಡುವ ಉದ್ದೇಶದಿಂದ ಮಾಡಿರುವ ಆರೋಪ ಎಂದು ಸಿ.ವಿ. ಆನಂದ್‌ ಬೋಸ್‌ ಹೇಳಿದ್ದಾರೆ.

TMC ಆರೋಪ ಏನು?

ಟಿಎಂಸಿ ಮುಖಂಡರ ಆರೋಪದ ಪ್ರಕಾರ, ಮಹಿಳೆಯೊಬ್ಬರು ರಾಜ್ಯಪಾಲ ಆನಂದ ಬೋಸ್‌ ವಿರುದ್ಧ ಕೋಲ್ಕತಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ರಾಜಭವನದಲ್ಲೇ ಲೈಂಗಿಕ ಕಿರುಕುಳದ ಆರೋಪ ಕೇಳಿ ಬರುತ್ತಿದೆ. ದಿನೇ ದಿನೇ ರಾಜಭವನದಲ್ಲಿ ಹೆಚ್ಚು ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದೆ ಎಂಬುದನ್ನು ಸಂತ್ರಸ್ತೆ ತನ್ನ ದೂರಿನಲ್ಲಿ ಹೇಳಿದ್ದಾಳೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಈ ಬಗ್ಗೆ ಗಮನ ಹರಿಸಬೇಕಾಗಿದೆ. ನಾರಿಯರಿಗೆ ಗೌರವ ಎಂಬ ಪರಿಕಲ್ಪನೆ ಮೇಲೆ ನಿಜವಾಗಿಯೂ ನಂಬಿಕೆ ಇದ್ದರೆ ಸಂತ್ರಸ್ತರಿಗೆ ಸೂಕ್ತ ನ್ಯಾಯ ಒದಗಿಸಿಕೊಡಬೇಕು. ಹಾಗೂ ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಟಿಎಂಸಿ ತನ್ನ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿದೆ.

ಆರೋಪಗಳನ್ನು ತಳ್ಳಿ ಹಾಕಿದ ರಾಜ್ಯಪಾಲ

ರಾಜ್ಯಪಾಲ ಸಿ ವಿ ಆನಂದ್‌ ಬೋಸ್‌ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳನ್ನ್ ತಳ್ಳಿ ಹಾಕಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಸತ್ಯ ಎಂದಿಗೂ ಗೆದ್ದೇ ಗೆಲ್ಲುತ್ತದೆ. ಇಂತಹ ಕಟ್ಟು ಕಥೆಗಳನ್ನು ನಿಜ ಎಂದು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ನನ್ನ ಗೌರವಕ್ಕೆ ಚ್ಯುತಿ ತಂದು ತೇಜೋವಧೆ ಮಾಡುವ ಉದ್ದೇಶದಿಂದ ಟಿಎಂಸಿ ಈ ರೀತಿ ಮಾಡುತ್ತಿದೆ. ಬಂಗಾಳದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ನನ್ನ ಹೋರಾಟ ನಿಲ್ಲಿಸಲು ಇದೊಂದು ಪಿತೂರಿ ಅಷ್ಟೇ. ಆದರೆ ನನ್ನ ಈ ಹೋರಾಟ ಎಂದಿಗೂ ನಿಲ್ಲುವುದಿಲ್ಲ. ನನ್ನ‌ ವಿರುದ್ಧ ಆರೋಪ ಮಾಡಿರುವ ಮಹಿಳೆಯರು ಕಾಂಗ್ರೆಸ್‌ನ ಏಜೆಂಟ್‌ಗಳು ಎಂದು ಅವರು ತಿರುಗೇಟು ಕೊಟ್ಟಿದ್ದಾರೆ.

ಪೊಲೀಸರು ಹೇಳೋದೇನು?

ಇನ್ನು ಈ ಪ್ರಕರಣದ ಬಗ್ಗೆ ಕೋಲ್ಕತಾ ಪೊಲೀಸ್‌ ಅಧಿಕಾರಿ ಇಂದಿರಾ ಮುಖರ್ಜಿ ಪ್ರತಿಕ್ರಿಯಿಸಿದ್ದು, ಸಂಜೆ 5ಗಂಟೆ ಹೊತ್ತಿಗೆ ನಮಗೆ ರಾಜ್ಯಪಾಲರ ವಿರುದ್ಧ ಲೈಂಗಿಕ ಕಿರುಕುಳದ ದೂರು ಬಂದಿತ್ತು. ಈ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ. ಈ ಘಟನೆ ರಾಜಭವನದ ಒಳಗೆ ನಡೆದಿದೆ. ಅನೇಕ ಬಾರಿ ಈ ರೀತಿ ಕಿರುಕುಳ ಅನುಭವಿಸಿದ್ದಾಗಿ ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾಳೆ ಎಂದು ಮಾಹಿತಿ ನೀಡಿದರು.

Continue Reading

Lok Sabha Election 2024

Amit Shah: ಅಮಿತ್‌ ಶಾ ವಿಡಿಯೊ ತಿರುಚಿದ ಪ್ರಕರಣ; ಕಾಂಗ್ರೆಸ್ ಐಟಿ ಸೆಲ್‌ನ ಐವರು ಸದಸ್ಯರ ಬಂಧನ

Amit Shah: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಕಲಿ ವಿಡಿಯೊಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಗುರುವಾರ ರಾಜ್ಯ ಕಾಂಗ್ರೆಸ್ ಐಟಿ ಸೆಲ್‌ ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಈ ಹಿಂದೆ ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ ಅವರಿಗೆ ಸಮನ್ಸ್ ನೀಡಿದ್ದರು.

VISTARANEWS.COM


on

Amith Shah
Koo

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ನಕಲಿ ವಿಡಿಯೊಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಗುರುವಾರ ರಾಜ್ಯ ಕಾಂಗ್ರೆಸ್ ಐಟಿ ಸೆಲ್‌ (Congress IT Cell)ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ತಂಡವೂ ಈ ತೆಲಂಗಾಣದಲ್ಲಿದೆ. ಈ ಹಿಂದೆ ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ (Revanth Reddy) ಅವರಿಗೆ ಸಮನ್ಸ್ ನೀಡಿದ್ದರು.

ರೇವಂತ್ ರೆಡ್ಡಿ ಪರ ವಕೀಲರು ಬುಧವಾರ ದೆಹಲಿ ಪೊಲೀಸರ ಮುಂದೆ ಹಾಜರಾಗಿ, ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊ ರಚಿಸುವಲ್ಲಿ ಅಥವಾ ಪೋಸ್ಟ್ ಮಾಡುವುದರ ಹಿಂದೆ ರೇವಂತ್ ರೆಡ್ಡಿ ಅವರ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದರು. ವಿಡಿಯೊವನ್ನು ಹಂಚಿಕೊಂಡ ಆರೋಪದ ಮೇಲೆ ವಿವಿಧ ವಿರೋಧ ಪಕ್ಷಗಳ ಇನ್ನೂ ಐದು ಮಂದಿಗೂ ನೋಟಿಸ್ ನೀಡಲಾಗಿದೆ.

ರೇವಂತ್ ರೆಡ್ಡಿ ಮತ್ತು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ)ಯ ನಾಲ್ವರು ಸದಸ್ಯರಾದ ಶಿವಕುಮಾರ್ ಅಂಬಾಲಾ, ಅಸ್ಮಾ ತಸ್ಲೀಮ್, ಸತೀಶ್ ಮನ್ನೆ ಮತ್ತು ನವೀನ್ ಪೆಟ್ಟೆಮ್ ಅವರಿಗೆ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 91 ಮತ್ತು 160ರ ಅಡಿಯಲ್ಲಿ ಸಮನ್ಸ್ ನೀಡಲಾಗಿದೆ. ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರಿಗೂ ದೆಹಲಿ ಪೊಲೀಸರು ಮೇ 2ರಂದು ಸಮನ್ಸ್ ಜಾರಿ ಮಾಡಿದ್ದಾರೆ. “ನನಗೆ ಮಂಗಳವಾರ ದೆಹಲಿ ಪೊಲೀಸರಿಂದ ನೋಟಿಸ್ ಬಂದಿದೆ. ಆದರೆ ಏಕೆ ನೋಟಿಸ್ ನೀಡಲಾಯಿತು ಎಂಬುದು ನನಗೆ ಅರ್ಥವಾಗುತ್ತಿಲ್ಲ. ಇದು ಅರಾಜಕತೆಯಲ್ಲದೆ ಬೇರೇನೂ ಅಲ್ಲ” ಎಂದು ಠಾಕೂರ್ ಹೇಳಿದ್ದಾರೆ.

ಏನಿದು ಪ್ರಕರಣ?

ಮುಸ್ಲಿಮರಿಗೆ ನೀಡಲಾದ ಶೇ. 4ರಷ್ಟು ‘ಅಸಾಂವಿಧಾನಿಕ’ ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಅಮಿತ್ ಶಾ ತೆಲಂಗಾಣದಲ್ಲಿ ಮಾತನಾಡುತ್ತಿರುವ ಹಳೆಯ ವಿಡಿಯೊವನ್ನು ಬಳಸಿಕೊಂಡು ಅವರು ಎಸ್​ಸಿ ಮತ್ತು ಎಸ್​ಟಿ ಮೀಸಲಾತಿ ತೆಗೆಯಬೇಕು ಎಂದು ಹೇಳಿದ್ದಾರೆ ಎನ್ನುವಂತೆ ಬದಲಾಯಿಸಲಾಗಿತ್ತು. ಇದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿಯಬಿಡಲಾಗಿತ್ತು. ಇದಾದ ಬಳಿಕ ಗೃಹ ಸಚಿವಾಲಯ ಮತ್ತು ಬಿಜೆಪಿ ದೂರು ನೀಡಿತ್ತು.

ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ವಿಶೇಷ ಸೆಲ್ ಎಫ್ಐಆರ್ ದಾಖಲಿಸಿತ್ತು. ಸಮುದಾಯಗಳ ನಡುವೆ ಜಗಳ ಸೃಷ್ಟಿಸುವ ಉದ್ದೇಶದಿಂದ ಕೆಲವು ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಇದು ಸಾರ್ವಜನಿಕ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ʼʼತೆಲಂಗಾಣ ಕಾಂಗ್ರೆಸ್​​​ ಅಧಿಕೃತ ಎಕ್ಸ್ ಹ್ಯಾಂಡಲ್ ಈ ವೀಡಿಯೊವನ್ನು ಹಂಚಿಕೊಂಡಿದೆ. ತರುವಾಯ, ಪಕ್ಷದ ಹಲವಾರು ನಾಯಕರು ಅದನ್ನು ಮರು ಪೋಸ್ಟ್ ಮಾಡಿದ್ದಾರೆʼʼ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Continue Reading
Advertisement
Kavya Maran
ಕ್ರೀಡೆ4 mins ago

Kavya Maran: ರೋಚಕ ಗೆಲುವು ಕಂಡು ಆಕಾಶಕ್ಕೆ ಜಿಗಿದಂತೆ ಕುಣಿದು ಸಂಭ್ರಮಿಸಿದ ಕಾವ್ಯಾ ಮಾರನ್; ವಿಡಿಯೊ ವೈರಲ್​

murder case stabbing bengaluru
ಕ್ರೈಂ6 mins ago

Murder Case: ಎಣ್ಣೆ ಪಾರ್ಟಿ ನಂತರ ರಿಕ್ಷಾ ಚಾಲಕನ ಇರಿದು ಕೊಂದ ರೌಡಿ ಶೀಟರ್‌

Elephant attack in Shivamogga
ಶಿವಮೊಗ್ಗ18 mins ago

Elephant attack : ನಿಲ್ಲದ ಕಾಡು ಪ್ರಾಣಿಗಳ ಹಾವಳಿ; ಶಿವಮೊಗ್ಗದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ

Lalu Prasad Yadav
ದೇಶ21 mins ago

Lalu Prasad Yadav: ಬಿಹಾರದಲ್ಲಿ ಲಾಲೂ ಪ್ರಸಾದ್‌ ಯಾದವ್‌ v/s ಲಾಲೂ ಪುತ್ರಿ

Kiccha Sudeep jailer fame kevin has composed stunt in max
ಸ್ಯಾಂಡಲ್ ವುಡ್24 mins ago

Kiccha Sudeep: ಕಿಚ್ಚ ಸುದೀಪ್ ಸಿನಿಮಾಗೆ ‘ಜೈಲರ್’ ಸ್ಟಂಟ್ ಮಾಸ್ಟರ್ ಎಂಟ್ರಿ!

prajwal revanna case hd revanna farm house
ಕ್ರೈಂ29 mins ago

Prajwal Revanna Case: ಪ್ರಜ್ವಲ್‌ ರೇವಣ್ಣ, ರೇವಣ್ಣ ಮನೆ ಇಂಚಿಂಚೂ ತಲಾಶ್, ಸಿಗ್ತಾ ಮಹತ್ವದ ಕ್ಲೂ?

Thomas Cup 2024
ಕ್ರೀಡೆ1 hour ago

Thomas Cup 2024: ಉಬೆರ್‌ ಕಪ್‌ ಬಳಿಕ ಥಾಮಸ್‌ ಕಪ್​ನಲ್ಲಿಯೂ ಮುಗ್ಗರಿಸಿದ ಭಾರತ

ACTOR DHANUSH Nagarjuna mysterious first look from Kubera
ಕಾಲಿವುಡ್1 hour ago

Actor Dhanush: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ನಾಗಾರ್ಜುನ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

Viral News
ವೈರಲ್ ನ್ಯೂಸ್1 hour ago

Viral News: ಶಾಕಿಂಗ್‌ ವಿಡಿಯೊ; ಹಾವು ಕಚ್ಚಿದ್ದ ಯುವಕ ಗುಣಮುಖನಾಗಲೆಂದು ಗಂಗಾ ನದಿಯಲ್ಲಿ ನೇತಾಡಿಸಿದರು!

T20 World Cup 2024
ಕ್ರಿಕೆಟ್2 hours ago

T20 World Cup 2024: ಟಿ20 ವಿಶ್ವಕಪ್​ನ ಅಧಿಕೃತ ಹಾಡು ಬಿಡುಗಡೆ; ಕುಣಿದು ಕುಪ್ಪಳಿಸಿದ ಕ್ರಿಸ್​ ಗೇಲ್​, ಉಸೇನ್‌ ಬೋಲ್ಟ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ16 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌