Site icon Vistara News

Sonia Gandhi | ಸೋನಿಯಾ ಗಾಂಧಿ ಒಡೆತನದ 2 ಎನ್‌ಜಿಒಗಳ ಲೈಸೆನ್ಸ್ ರದ್ದುಗೊಳಿಸಿದ ಕೇಂದ್ರ, ಕಾರಣ ಏನು?

Sonia Gandhi

Sonia Gandhi shifts to Jaipur To avoid air pollution In Delhi

ನವದೆಹಲಿ: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ (Sonia Gandhi) ಒಡೆತನದ ಎರಡು ಸರ್ಕಾರೇತರ ಸಂಘ-ಸಂಸ್ಥೆ (NGO)ಗಳ ಪರವಾನಗಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (FCRA) ಅಡಿಯಲ್ಲಿ ರಾಜೀವ್‌ ಗಾಂಧಿ ಫೌಂಡೇಷನ್‌ (RGF) ಹಾಗೂ ರಾಜೀವ್‌ ಗಾಂಧಿ ಚಾರಿಟೆಬಲ್‌ ಟ್ರಸ್ಟ್‌ (RGCT)ಗಳ ಪರವಾನಗಿಯನ್ನು ಕೇಂದ್ರ ಗೃಹ ಸಚಿವಾಲಯ ರದ್ದುಗೊಳಿಸಿದೆ.

ಸೋನಿಯಾ ಗಾಂಧಿ ಹಾಗೂ ಅವರ ಕುಟುಂಬಸ್ಥರಿಗೆ ಸೇರಿದ ಎನ್‌ಜಿಒಗಳು ವಿದೇಶಿ ದೇಣಿಗೆ ಪಡೆಯುವಾಗ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ 2020ರಿಂದಲೂ ತನಿಖೆ ನಡೆಸಲಾಗುತ್ತಿತ್ತು. ಎರಡೂ ಎನ್‌ಜಿಒಗಳ ವಿರುದ್ಧ ತನಿಖೆ ನಡೆಸಲು ಕೇಂದ್ರ ಗೃಹ ಸಚಿವಾಲಯವು ಅಂತರ್‌-ಸಚಿವಾಲಯ ಸಮಿತಿ (Inter-Ministerial Committee) ರಚಿಸಿತ್ತು. ಈಗ ತನಿಖೆ ಮುಗಿದಿದ್ದು, ನಿಯಮಗಳ ಉಲ್ಲಂಘನೆ ಮಾಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಪರವಾನಗಿ ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಮೊದಲೇ ನೋಟಿಸ್‌ ರವಾನೆ

“ಎರಡೂ ಎನ್‌ಜಿಒಗಳ ಎಫ್‌ಸಿಆರ್‌ಎ ಪರವಾನಗಿ ರದ್ದುಗೊಳಿಸುವ ಕುರಿತು ಅವುಗಳ ಕಚೇರಿ ಅಧಿಕಾರಿಗಳಿಗೆ ನೋಟಿಸ್‌ ನೀಡಲಾಗಿತ್ತು” ಎಂದು ಗೃಹ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎರಡೂ ಎನ್‌ಜಿಒಗಳಿಗೆ ಸೋನಿಯಾ ಗಾಂಧಿ ಅಧ್ಯಕ್ಷೆಯಾಗಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌, ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ, ಪಕ್ಷದ ನಾಯಕ, ಸೋನಿಯಾ ಪುತ್ರ ರಾಹುಲ್‌ ಗಾಂಧಿ, ಪುತ್ರಿ ಪ್ರಿಯಾಂಕಾ ವಾದ್ರಾ ಸೇರಿ ಹಲವರು ಟ್ರಸ್ಟಿಗಳಾಗಿದ್ದಾರೆ.

ಸುಬ್ರಮಣಿಯನ್‌ ಸ್ವಾಮಿ ದೂರು

ರಾಜೀವ್‌ ಗಾಂಧಿ ಫೌಂಡೇಷನ್‌ನಿಂದ ಅಕ್ರಮವಾಗಿ ಭೂಮಿ ವಶಪಡಿಸಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್‌ ಸ್ವಾಮಿ ಅವರು 2015ರಲ್ಲಿಯೇ ನಗರಾಭಿವೃದ್ಧಿ ಸಚಿವಾಲಯಕ್ಕೆ ದೂರು ದಾಖಲಿಸಿದ್ದರು. ದೆಹಲಿಯಲ್ಲಿ ಎಐಸಿಸಿ ಕೇಂದ್ರ ಕಚೇರಿ ನಿರ್ಮಿಸಲು 1988ರಲ್ಲಿಯೇ ಪ್ರಮುಖ ಜಾಗ ನೀಡಲಾಗಿತ್ತು. ಆದರೆ, ಸೋನಿಯಾ ಗಾಂಧಿ ಅವರು 1991ರಲ್ಲಿ ರಾಜೀವ್‌ ಗಾಂಧಿ ಫೌಂಡೇಷನ್‌ ಸ್ಥಾಪಿಸಿ, ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಇದರ ಕುರಿತು ಸಹ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ | ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದ ಎನ್‌ಜಿಒ ವರದಿ ತಿರಸ್ಕರಿಸಿದ ಭಾರತ

Exit mobile version