Congress Protest: 2ನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯಕ್ಕೆ ಯಾಕೀ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ - Vistara News

ದೇಶ

Congress Protest: 2ನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯಕ್ಕೆ ಯಾಕೀ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

Congress Protest: ಕರ್ನಾಟಕ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

VISTARANEWS.COM


on

CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ನಿರಂತರ ದ್ರೋಹ, ವಂಚನೆಯಾಗುತ್ತಿದೆ ಎಂದು ಆರೋಪಿಸಿ ನಗರದ ಜಂತರ್ ಮಂತರ್‌ನಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವತಿಯಿಂದ (Congress Protest) ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಚಿನ್ನದ ಮೊಟ್ಟೆ ಇಡುವ ಕೋಳಿಯನ್ನೇ ಕೊಂದು ಹಾಕಬೇಡಿ, ಹಾಲು ಕೊಡುವ ಕೆಚ್ಚಲು ಕತ್ತರಿಸಬೇಡಿ ಎಂದು ಒತ್ತಾಯಿಸಲು ಪ್ರತಿಭಟನೆ ಮಾಡುತ್ತಿದ್ದೇವೆ. ಮೋದಿ ಅವರು ಪ್ರಧಾನಿ ಆದ ಬಳಿಕ ರಚಿಸಲಾದ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ ಆಯಿತು. ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿಗೆ ಅನುದಾನ ಕೊಡುವ ಬಗ್ಗೆ ನಮಗೆ ತಕರಾರುಗಳಿಲ್ಲ. ಆದರೆ ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎನ್ನುವುದು ನಮ್ಮ ಆಗ್ರಹವಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಅಂಕಿ ಅಂಶಗಳೇ ನಮ್ಮ‌ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಹೇಳುತ್ತಿವೆ. ಎರಡನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ಕರ್ನಾಟಕ. ನಮಗೇ ಏಕೆ ಈ ಮಟ್ಟದ ಅನ್ಯಾಯ ಎಂದು ಪ್ರಶ್ನಿಸಿದ ಸಿಎಂ, 4,30,000 ಕೋಟಿ ರೂ.ಗಳನ್ನು ನಾವು ಕನ್ನಡಿಗರು ತೆರಿಗೆ ಕಟ್ಟುತ್ತೇವೆ. ನಮಗೆ ವಾಪಸ್ ಬರುವುದು ಕೇವಲ 50,000 ಕೋಟಿ ಮಾತ್ರ. ಅಂದರೆ ನಾವು ಕೊಡುವ ಪ್ರತಿ 100 ರೂ. ನಲ್ಲಿ 13 ರೂ ಮಾತ್ರ ನಮಗೆ ವಾಪಾಸ್ ಬರುತ್ತದೆ. ಇದಕ್ಕಿಂತ ಭೀಕರ ಅನ್ಯಾಯ ಏನಿದೆ? ಈ ಅನ್ಯಾಯವನ್ನು ನಾವು ಸಹಿಸಬೇಕಾ? 15ನೇ ಹಣಕಾಸು ಆಯೋಗದಿಂದಾಗಿ ತೆರಿಗೆಯೊಂದರಲ್ಲೇ ನಮಗೆ 62,098 ಕೋಟಿ ರೂ. ಅನ್ಯಾಯ ಆಗಿದೆ. ಇದನ್ನು ನಾವು ಪ್ರಶ್ನಿಸಬಾರದಾ ಎಂದು ಕಿಡಿಕಾರಿದರು.

ಇದನ್ನೂ ಓದಿ | Congress Protest: ಕಿವಿ ಇಲ್ಲದ ಕೇಂದ್ರಕ್ಕೆ ಧ್ವನಿ ಕೇಳಿಸಲು ದೆಹಲಿಗೆ ಬಂದು ಕೂಗುತ್ತಿದ್ದೇವೆ: ಡಿ.ಕೆ. ಶಿವಕುಮಾರ್

ತೆರಿಗೆಯಲ್ಲಿ ರಾಜ್ಯದ ಪಾಲು ನಿರಂತರ ಕಡಿಮೆಯಾಗುತ್ತಿದೆ

ಬಿಜೆಪಿ ನಿರಂತರ ಸುಳ್ಳುಗಳ ಮೂಲಕ ತಮ್ಮ ದ್ರೋಹವನ್ನು ಮರೆ ಮಾಚಲು ನೋಡುತ್ತಿದೆ. ಕೇಂದ್ರದ ಬಜೆಟ್ ಗಾತ್ರ ಹೆಚ್ಚಾದ ಹಾಗೆ ರಾಜ್ಯದ ತೆರಿಗೆ ಪಾಲು ಹೆಚ್ಚಾಗಬೇಕಿತ್ತು. ಆದರೆ ಈ ಪ್ರಮಾಣದಲ್ಲೂ ನಮಗೆ ಹಂಚಿಕೆ ಆಗಿಲ್ಲ. ಇದನ್ನು ಕೇಂದ್ರದ ಅಂಕಿ ಅಂಶಗಳೇ ಹೇಳುತ್ತಿವೆ. ಕಳೆದ 10 ವರ್ಷಗಳಿಂದ ಹಂತ ಹಂತವಾಗಿ ರಾಜ್ಯದ ಪಾಲಿನ ತೆರಿಗೆ ಪಾಲು, ಕೇಂದ್ರದ ಅನುದಾನದ ಪಾಲು ನಿರಂತರವಾಗಿ ಕಡಿಮೆ ಆಗುತ್ತಿರುವುದನ್ನು ಮುಖ್ಯಮಂತ್ರಿಗಳು ಪ್ರತೀ ವರ್ಷದ ಅಂಕಿ ಅಂಶಗಳೊಂದಿಗೆ ವಿವರಿಸಿದರು.

ಕೇಂದ್ರದ ಬಜೆಟ್ ಗಾತ್ರ ದುಪ್ಪಟ್ಟಾಗಿದೆ. ಆದರೆ ರಾಜ್ಯದ ಪಾಲಿನ ತೆರಿಗೆ ಪಾಲು ಅರ್ಧಕ್ಕಿಂತ ಕಡಿಮೆ ಆಗಿದೆ. ನಮ್ಮ ಪಾಲು ದುಪ್ಪಟ್ಟಾಗಬೇಕಾದ ಜಾಗದಲ್ಲಿ ಅರ್ಧಕ್ಕಿಂತ ಕಡಿಮೆ ಆಗಿರುವುದು ಅನ್ಯಾಯ ಅಲ್ಲವೇ? GST ಯಲ್ಲಿ ನಮ್ಮ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಇನ್ನೂ ಬೃಹತ್ತಾಗಿದೆ. GST ಯಲ್ಲಿ ಆಗುವ ಅನ್ಯಾಯವನ್ನು ವಿಶೇಷ ಪರಿಹಾರ ಕೊಟ್ಟು ಸರಿದೂಗಿಸುವುದಾಗಿ ಹೇಳಿದರು. ಈಗ ಪರಿಹಾರ ಕೊಡುತ್ತಿಲ್ಲ. ಇದರಿಂದ 59000 ಕೋಟಿಗೂ ಅಧಿಕ ಅನ್ಯಾಯ, ವಂಚನೆ ಆಯಿತು.

ಕೇಂದ್ರದ ನಿರಂತರ ದ್ರೋಹ, ವಂಚನೆಯಿಂದ ರಾಜ್ಯದ ತೆರಿಗೆ ಸಂಗ್ರಹ ಪ್ರಮಾಣ 15% ನಿಂದ ಕೆಳಗೆ ಜಾರಿ 9% ಗೆ ಕುಸಿದಿದೆ. ಈ ದೊಡ್ಡ ಕುಸಿತಕ್ಕೆ ಕೇಂದ್ರದ ಮಲತಾಯಿ ಧೋರಣೆ ಮತ್ತು ವಂಚನೆಯೇ ಕಾರಣ. ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರು ಕೋಲೆ ಬಸವನ ರೀತಿಯಲ್ಲಿ ಮೋದಿ ಅವರ ಎದುರಿಗೆ ತಲೆ ಅಲ್ಲಾಡಿಸುವುದು ಬಿಟ್ಟರೆ ರಾಜ್ಯದ ಪಾಲನ್ನು ಬಾಯಿ ಬಿಟ್ಟು ಕೇಳಲೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಹಣ ಕೊಡಬೇಡಿ ಎಂದು ತಡೆ ಹಿಡಿದವರೇ ನಿರ್ಮಲಾ ಸೀತಾರಾಮನ್

ನಾನು ವಿಧಾನಸಭಾ ಅಧಿವೇಶನದಲ್ಲಿ ಮೇಲಿಂದ ಮೇಲೆ ಒತ್ತಾಯಿಸಿದೆ. ಯಡಿಯೂರಪ್ಪ, ಬೊಮ್ಮಾಯಿ ಅವರಿಗೆ ಒತ್ತಾಯಿಸಿ ಕೇಂದ್ರದ ಮುಂದೆ ರಾಜ್ಯದ ಹಕ್ಕು ಮಂಡಿಸಿ ಎಂದು ಆಗ್ರಹಿಸಿದೆ. ಅವರು ಕೇಳಲಿಲ್ಲ. ಇವರು ಕೊಡಲಿಲ್ಲ. ನಮಗೆ ಅನ್ಯಾಯ ಸರಿಪಡಿಸಲು ವಿಶೇಷ ಅನುದಾನದವಾಗಿ 11495 ಕೋಟಿ ಕೊಡ್ತೀವಿ ಎಂದು ಘೋಷಿಸಿದರು. ಆದರೆ ಈ ಹಣ ಕೊಡಬೇಡಿ ಎಂದು ತಡೆ ಹಿಡಿದವರೇ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಅವರು. ಆದರೆ ಈಗೇಕೆ ಸುಳ್ಳು ಹೇಳ್ತಿದ್ದೀರಿ ಮೇಡಂ ಸಿಎಂ ವ್ಯಂಗ್ಯವಾಡಿದರು.

ರಾಜ್ಯದಿಂದ ಆಯ್ಕೆ ಆದ ನಿರ್ಮಲಾ ಸೀತಾರಾಮನ್ ಅವರೇ ಈ ಮಟ್ಟದ ದ್ರೋಹ ಮಾಡಿದ ಬಳಿಕವೂ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಮೋದಿ ಸರ್ಕಾರ ರಚಿಸಿದ 15 ನೇ ಹಣಕಾಸು ಆಯೋಗದಲ್ಲಿ ದಕ್ಷಿಣ ಭಾರತ ರಾಜ್ಯಗಳಿಂದ ಒಬ್ಬೇ ಒಬ್ಬ ಸದಸ್ಯನೂ ಇರಲಿಲ್ಲ. ಇದರಿಂದ ನಮ್ಮ ರಾಜ್ಯಗಳಿಗೆ ಅನ್ಯಾಯ ಆಗಿದೆ. ಇದಕ್ಕೆ ಕಾರಣ ಮೋದಿಯವರೇ. ನೀವು ಎಷ್ಟೇ ಸುಳ್ಳುಗಳನ್ನು ಹೇಳಿದರೂ ಸತ್ಯ ಮುಚ್ಚಿ ಹಾಕಲು ಸಾಧ್ಯವಿಲ್ಲ ಯಡಿಯೂರಪ್ಪ, ಬೊಮ್ಮಾಯಿ, ಮೋದಿಯವರೇ ಎಂದರು.

ಕೇಂದ್ರ ಸರ್ಕಾರದ ಬಜೆಟ್ ದಾಖಲೆಗಳನ್ನೇ ಪರಿಶೀಲಿಸಿ ನೋಡಿ, ನಮಗಾಗಿರುವ ವಂಚನೆಯ ಪ್ರಮಾಣ ಅದರಲ್ಲಿ ದಾಖಲಾಗಿದೆ. 15 ನೇ ಹಣಕಾಸು ಆಯೋಗ ಒಂದರಿಂದಲೇ ಇದುವರೆಗೂ 1,87,000 ಕೋಟಿ ಒಟ್ಟು ರಾಜ್ಯಕ್ಕೆ ಅನ್ಯಾಯ ಆಗಿದೆ. ರಾಜ್ಯಕ್ಕೆ ಭೀಕರ ಬರಗಾಲ ಬಂತು. ಸೆಪ್ಟೆಂಬರ್ ನಿಂದ ನಿರಂತರವಾಗಿ ರಾಜ್ಯದ ಪಾಲಿನ ಬರ ಪರಿಹಾರ ಕೊಡಿ ಎಂದು ಒತ್ತಾಯಿಸುತ್ತಲೇ ಇದ್ದೇವೆ. ಆದರೆ ಇದುವರೆಗೂ ಒಂದೇ ಒಂದು ರೂಪಾಯಿ ಬರಪರಿಹಾರ ಕೊಟ್ಟಿಲ್ಲ.

ಈವರೆಗೂ ಬರ ಪರಿಹಾರ ಒಂದು ಪೈಸೆ ಬಂದಿಲ್ಲ

ನಾನೇ ಡಿ. 19ರಂದು ರಂದು ಪ್ರಧಾನಿ ಮೋದೀಜಿ ಮತ್ತು ಅಮಿತ್ ಶಾ ಅವರನ್ನು ಖುದ್ದಾಗಿ ಭೇಟಿ ಮಾಡಿ ವಿನಂತಿಸಿದೆ. ಆದರೂ ಇವತ್ತಿಗೂ ಒಂದು ಪೈಸೆ ಬಂದಿಲ್ಲ. ಈ ಬಗ್ಗೆ ಇನ್ನೂ ಒಂದೂ ಸಭೆಯನ್ನೂ ನೆಪಕ್ಕೂ ಕರೆದಿಲ್ಲ. ಇದರಿಂದ ಒಂದು ರೂಪಾಯಿ ಕೂಡ ಬಂದಿಲ್ಲ. ಆದರೂ ಬರದಿಂದ ರಾಜ್ಯದ ಜನತೆ ಕಂಗಾಲಾಗದಂತೆ ರಾಜ್ಯ ಸರ್ಕಾರವೇ ಪರಿಹಾರ ನೀಡಿದೆ. 31 ಲಕ್ಷ ರೈತರಿಗೆ 650 ಕೋಟಿ ಬರ ಪರಿಹಾರವನ್ನು ರಾಜ್ಯದ ಬೊಕ್ಕಸದಿಂದಲೇ ಕೊಟ್ಟಿದ್ದೇವೆ. ಇನ್ನೂ ಲಕ್ಷ ಲಕ್ಷ ರೈತರಿಗೆ ಪರಿಹಾರ ಕೊಡುವವರಿದ್ದೇವೆ.

ಕೇಂದ್ರ ತನ್ನ ಕೈಯಿಂದ ಪರಿಹಾರ ಕೊಡುವುದಲ್ಲ. ನಮ್ಮ ಹಣ ಅವರ ಬಳಿ ಇದೆ. ಅದರಲ್ಲಿ ರಾಜ್ಯದ ಪಾಲನ್ನು ವಾಪಸ್ ಕೊಡಬೇಕಿತ್ತು. ಇದರಲ್ಲೂ ಒಂದೇ ಒಂದು ರೂಪಾಯಿ ಕೊಡಲಿಲ್ಲ. ನಾವು ಇನ್ನೂ NDRF ನಿಧಿಗಾಗಿ ಕಾಯುತ್ಯಲೇ ಇದ್ದೇವೆ. ಈ ಹಣ ಕೊಡಿಸಿ ಯಡಿಯೂರಪ್ಪ, ಅಶೋಕ್, ನಿರ್ಮಲಾ ಸೀತಾರಾಮನ್ ಅವರೇ ಎಂದು ಕೇಳಿದರು.

ಪಾರ್ಲಿಮೆಂಟಲ್ಲಿ ರಾಜ್ಯದ ಪರವಾಗಿ ಬಾಯಿ ಬಿಡಲು ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರಿಗೆ ಭಯ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ ಕೊಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ಪಾರ್ಲಿಮೆಂಟಲ್ಲಿ ಬಜೆಟ್‌ನಲ್ಲೇ ಘೋಷಿಸಿದರು. ಇದರಲ್ಲೂ ಒಂದು ರೂಪಾಯಿ ಕೂಡ ಬಂದಿಲ್ಲ. ಅವರೇ ಘೋಷಿಸಿ ಅವರೇ ಕೈ ಎತ್ತಿಬಿಟ್ಟರು. ಒಂದೇ ಒಂದು ರೂಪಾಯಿ ಕೂಡ ಇವತ್ತಿನವರೆಗೂ ಕೊಡಲಿಲ್ಲ ಎಂದು ಬಜೆಟ್ ಪ್ರತಿ ತೋರಿಸಿ ಪ್ರಶ್ನಿಸಿದರು.

ಮಹದಾಯಿ ಯೋಜನೆಗೆ ಇವತ್ತಿನವರೆಗೂ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿಲ್ಲ. ಕೃಷ್ಣಾ ಮೇಲ್ದಂಡೆ ಬಗ್ಗೆ ಇವತ್ತಿನವರೆಗೂ ಗೆಜೆಟ್ ನೋಟಿಫಿಕೇಷನ್ ಆಗಲಿಲ್ಲ. ಇದರಿಂದ ಕೆಲಸವೇ ಶುರು ಆಗಿಲ್ಲ. ಯಾಕಿಂಥಾ ಅನ್ಯಾಯ ಎಂದು ಸಿಎಂ ಪ್ರಶ್ನಿಸಿದರು.

ದೇವೇಗೌಡರು ಮೇಕೆದಾಟು, ಕೃಷ್ಣ ಮೇಲ್ದಂಡೆ ಯೋಜನೆಗೆ ಅನುಮತಿ ಕೊಡಿಸಲಿ

ಈಗ ಮಾಜಿ ಪ್ರಧಾನಿ ದೇವೇಗೌಡರು ಮೋದಿಯವರನ್ನು ಹೊಗಳುತ್ತಾ ಕುಳಿತಿದ್ದಾರೆ. ಹಾಗಿದ್ರೆ ಮೇಕೆದಾಟು, ಕೃಷ್ಣ ಮೇಲ್ದಂಡೆಗೆ ಅನುಮತಿ ಕೊಡಿಸಲಿ. ರಾಜ್ಯಕ್ಕೆ ಬರಬೇಕಾದ ಹಣ ವಾಪಾಸ್ ಕೊಡಿಸಲಿ ಎಂದು ಕರೆ ನೀಡಿದರು. ರಾಯಚೂರು ಏಮ್ಸ್ ಕೊಡ್ತೀವಿ ಎಂದರು. ನಾನು CM ಆಗಿ ಮೂರು ಪತ್ರ ಬರೆದೆ. ಆದರೆ, ಇವತ್ತಿನವರೆಗೂ ಏಮ್ಸ್ ಬರಲಿಲ್ಲ. ಪತ್ರಗಳಿಗೆ ಉತ್ತರ ವೂ ಬರಲಿಲ್ಲ. ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಬರೆದ ಪತ್ರಕ್ಕೆ ಕೇಂದ್ರ ಉತ್ತರ ಕೊಡಲಿಲ್ಲ. ಇದು 7.5 ಕೋಟಿ ಕನ್ನಡಿಗರಿಗೆ ಮಾಡಿದ ಅವಮಾನ ಎಂದರು.

ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ನಾವು ಅನ್ನಭಾಗ್ಯ ಯೋಜನೆ ಜಾರಿ ಮಾಡಿದೆವು. ದುಡ್ಡು ಕೊಡ್ತೀವಿ ಅಕ್ಕಿ ಕೊಡಿ ಎಂದರೂ ಅಕ್ಕಿ ಕೊಡಲಿಲ್ಲ. ಇದರಿಂದ ನಾವು ನೇರವಾಗಿ ಜನರಿಗೇ ಹಣ ಕೊಟ್ಟೆವು. ಇಷ್ಟೆಲ್ಲಾ ರಾಜ್ಯದ ಜನರಿಗೆ ದ್ರೋಹ ಮಾಡಿ ಈಗ ನಮ್ಮ ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿಭಾಗ್ಯ ಎನ್ನುತ್ತಿದ್ದಾರೆ. ಬಡವರು, ಮಧ್ಯಮ ವರ್ಗದವರಿಗೆ ನೆರವು ನೀಡುವುದು ಬಿಟ್ಟಿಭಾಗ್ಯ ಎಂದು ಅಹಂಕಾರ ಮೆರೆದರು ಎಂದು ಟೀಕಿಸಿದರು.

ಇದನ್ನೂ ಓದಿ | Congress Protest: ‘ಅಮ್ಮಾ, ತಾಯಿ ನಿರ್ಮಲಾ ನಮ್ಮ ದುಡ್ಡು ಕೊಡಮ್ಮಾ’ ಎಂದ ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ ಬಂದಾಗಿನಿಂದ ದೇಶದ ಸಾಲ 2014ರ ವರೆಗೂ 54 ಲಕ್ಷ ಕೋಟಿ ಮಾತ್ರ ಇತ್ತು. ಈಗ 180 ಲಕ್ಷ ಕೋಟಿಗೆ ಭಾರತದ ಸಾಲ ಏರಿಕೆ ಆಗಿದೆ. ಮೋದಿ ಅವಧಿ ಒಂದರಲ್ಲೇ 130 ಲಕ್ಷ ಕೋಟಿ ಸಾಲ ಮಾಡಿದ್ದಾರೆ. 130 ಕೋಟಿ ಸಾಲ ಒಬ್ಬರೇ ಮಾಡಿದ್ದಾರಲ್ಲಾ ಇದು ಸಾಧನೆಯಾ? ಸೆಸ್, ಸರ್ಚಾರ್ಜ್ ಮೂಲಕವೂ ರಾಜ್ಯಕ್ಕೆ ನಿರಂತರ ದ್ರೋಹ, ಅನ್ಯಾಯ ಆಗುತ್ತಿದೆ ಎಂದು ಆರೋಪಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Parliament Flashback: ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ ಮತ್ತು ಸುಷ್ಮಾ ಸ್ವರಾಜ್‌ ಮಧ್ಯೆ ನಡೆದಿತ್ತು ಐತಿಹಾಸಿಕ ಕದನ!

Parliament Flashback: ಆಗಷ್ಟೇ ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್‌ ಅಧ್ಯಕ್ಷ ಪಟ್ಟಕ್ಕೆ ಏರಿಸಲಾಗಿತ್ತು. ಅವರನ್ನು ಲೋಕಸಭೆಗೆ ಕಳುಹಿಸುವ ತೀರ್ಮಾನವಾಗಿತ್ತು. ತಮ್ಮ ಪತಿ ರಾಜೀವ್‌ ಗಾಂಧಿ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶದ ಅಮೇಠಿ ಲೋಕಸಭೆ ಕ್ಷೇತ್ರ ಸೋನಿಯಾ ಅವರ ಮೊದಲ ಆಯ್ಕೆಯಾಗಿತ್ತು. ಅಲ್ಲಿ ಅವರು ನಾಮಪತ್ರ ಸಲ್ಲಿಸಿದರು. ಆದರೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಅಮೇಠಿಯಲ್ಲಿ 1998ರ ಲೋಕಸಭೆ ಚುನಾವಣೆಯಲ್ಲಿ ಮೊಟ್ಟ ಮೊದಲ ಬಾರಿ ಕಾಂಗ್ರೆಸ್‌ಗೆ ಸೋಲಾಗಿತ್ತು. ಹಾಗಾಗಿ ಅಲ್ಲಿ ಸೋಲುವ ಭಯದಿಂದ ಬಳ್ಳಾರಿಗೆ ಬಂದು ಸ್ಪರ್ಧಿಸಿದ್ದರು.

VISTARANEWS.COM


on

Parliament Flashback
Koo

ಬೆಂಗಳೂರು: 1999ರ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿತ್ತು. ಇದಕ್ಕೆ ಕಾರಣ ಕಾಂಗ್ರೆಸ್‌ ವರಿಷ್ಠ ನಾಯಕಿ ಸೋನಿಯಾ ಗಾಂಧಿ (Sonia Gandhi) ಮತ್ತು ಬಿಜೆಪಿಯ ಫೈರ್‌ ಬ್ರಾಂಡ್‌ ನಾಯಕಿ, ದಿಲ್ಲಿಯ ಮುಖ್ಯಮಂತ್ರಿಯೂ ಆಗಿದ್ದ ಸುಷ್ಮಾ ಸ್ವರಾಜ್‌ (Sushma Swaraj) ನಡುವಿನ ಮುಖಾಮುಖಿ (Parliament Flashback).

ಆಗಷ್ಟೇ ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್‌ ಅಧ್ಯಕ್ಷ ಪಟ್ಟಕ್ಕೆ ಏರಿಸಲಾಗಿತ್ತು. ಅವರನ್ನು ಲೋಕಸಭೆಗೆ ಕಳುಹಿಸುವ ತೀರ್ಮಾನವಾಗಿತ್ತು. ತಮ್ಮ ಪತಿ ರಾಜೀವ್‌ ಗಾಂಧಿ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶದ ಅಮೇಠಿ ಲೋಕಸಭೆ ಕ್ಷೇತ್ರ ಸೋನಿಯಾ ಅವರ ಮೊದಲ ಆಯ್ಕೆಯಾಗಿತ್ತು. ಅಲ್ಲಿ ಅವರು ನಾಮಪತ್ರ ಸಲ್ಲಿಸಿದರು. ಆದರೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಅಮೇಠಿಯಲ್ಲಿ 1998ರ ಲೋಕಸಭೆ ಚುನಾವಣೆಯಲ್ಲಿ ಮೊಟ್ಟ ಮೊದಲ ಬಾರಿ ಕಾಂಗ್ರೆಸ್‌ಗೆ ಸೋಲಾಗಿತ್ತು. ರಾಜೀವ್‌ ಗಾಂಧಿ ಅವರ ಪರಮಾಪ್ತರಾಗಿದ್ದ ಕ್ಯಾಪ್ಟನ್‌ ಸತೀಶ್‌ ಶರ್ಮಾ ಅವರನ್ನು ಬಿಜೆಪಿ ಅಭ್ಯರ್ಥಿ ಡಾ. ಸಂಜಯ್‌ ಸಿಂಗ್‌ ಸೋಲಿಸಿದ್ದರು. ಹಾಗಾಗಿ ಅಲ್ಲಿ ಸುಲಭವಾಗಿ ಗೆಲ್ಲುವ ವಿಶ್ವಾಸ ಸೋನಿಯಾಗಿರಲಿಲ್ಲ. ಹಾಗಾಗಿ ಸೋನಿಯಾ ಗಾಂಧಿ ಹಿತೈಷಿಗಳೆಲ್ಲ ಸೇರಿ ಲೆಕ್ಕಾಚಾರ ಹಾಕಿ ಆರಿಸಿದ ಮತ್ತೊಂದು ಕ್ಷೇತ್ರವೇ ಬಳ್ಳಾರಿ.

ಏಕೆಂದರೆ 1952ರಿಂದ 1999ರವರೆಗೆ ನಡೆದ 12 ಚುನಾವಣೆಗಳಲ್ಲೂ ಕಾಂಗ್ರೆಸ್‌ ಬಳ್ಳಾರಿಯಲ್ಲಿ ಜಯ ಸಾಧಿಸಿತ್ತು.
ಹೈದರಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಬಳ್ಳಾರಿಗೆ ಬಂದ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದರು. ಸೋನಿಯಾ ನಾಮಪತ್ರದ ಬೆನ್ನಿಗೇ ಸುಷ್ಮಾ ಸ್ವರಾಜ್‌ ಅವರನ್ನು ಕಣಕ್ಕಿಳಿಸಿ ಕಾಂಗ್ರೆಸ್‌ಗೆ ಬಿಜೆಪಿ ನಡುಕ ಹುಟ್ಟಿಸಿತು. ಸೋನಿಯಾ ಗಾಂಧಿ ಮತ್ತು ಸುಷ್ಮಾ ಸ್ವರಾಜ್‌ ಅವರ ಚುನಾವಣಾ ಪ್ರಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿತು. ವಿದೇಶಿ ಸೊಸೆ ಮತ್ತು ಸ್ವದೇಶಿ ಮಗಳ ನಡುವಿನ ಸ್ಪರ್ಧೆ ಎಂದೇ ಮಾಧ್ಯಮಗಳು ಬಣ್ಣಿಸಿದವು. ಸುಷ್ಮಾ ಸ್ವರಾಜ್‌ ಅವರು ಕನ್ನಡದಲ್ಲೇ ಭಾಷಣ ಮಾಡಿ ಅಚ್ಚರಿ ಮೂಡಿಸಿದರು. ಕಾಂಗ್ರೆಸ್‌ ಮತ್ತು ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಇಲ್ಲಿಗೆ ಬಂದು ಪ್ರಚಾರ ಮಾಡಿದರು. ಆದರೆ ಅಂತಿಮವಾಗಿ ಸೋನಿಯಾ ಗಾಂಧಿ ಅವರು 56,100 ಮತಗಳ ಅಂತರದಿಂದ ಗೆಲುವು ಸಾಧಿಸಿದರು.

ಅತ್ತ ಅಮೇಠಿಯಲ್ಲಿ ಸುಮಾರು 3 ಲಕ್ಷ ಮತಗಳ ಅಂತರದಿಂದ ಗೆದ್ದ ಸೋನಿಯಾ ಗಾಂಧಿ ಬಳ್ಳಾರಿ ಕ್ಷೇತ್ರ ತೊರೆದರು. ಸುಷ್ಮಾ ಸ್ವರಾಜ್‌ ಇಲ್ಲಿ ಸೋತರು. ಆದರೆ ಪ್ರತಿವರ್ಷ ವರ ಮಹಾಲಕ್ಷ್ಮೀ ಹಬ್ಬದ ದಿನ ಬಳ್ಳಾರಿಗೆ ಬಂದು ಪೂಜೆಯಲ್ಲಿ ಭಾಗಿಯಾಗುತ್ತಿದ್ದರು. ಅವರ ಸ್ಪರ್ಧೆ ಬಳ್ಳಾರಿಯಲ್ಲಿ ಬಿಜೆಪಿಯನ್ನು ಬಲಿಷ್ಠಗೊಳಿಸಿತು. ಮುಂದೆ 2004, 2009, 20014 ಮತ್ತು 20019ರ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಜಯ ದಾಖಲಿಸಿದ್ದೇ ಇದಕ್ಕೆ ಸಾಕ್ಷಿ.

ಗುರುವಿಗೇ ಸೋಲಿನ ರುಚಿ ತೋರಿಸಿದ ಆಸ್ಕರ್‌ ಫೆರ್ನಾಂಡಿಸ್‌!

ಡಾ. ಟಿ.ಎ.ಪೈ ಅವರು ಖ್ಯಾತ ವೈದ್ಯ, ಶಿಕ್ಷಣ ತಜ್ಞ ಮತ್ತು ಅರ್ಥ ಶಾಸ್ತ್ರಜ್ಞರೆಂದು ಖ್ಯಾತಿ ಪಡೆದವರು. ಆಧುನಿಕ ಮಣಿಪಾಲದ ನಿರ್ಮಾತೃರು. ಇಂದು ಮಣಿಪಾಲ ಆರೋಗ್ಯ ಮತ್ತು ಶಿಕ್ಷಣದಲ್ಲಿ ವಿಶ್ವ ಪ್ರಸಿದ್ಧಿ ಪಡೆಯಲು ಡಾ. ಟಿ.ಎ. ಪೈ ಅವರೇ ಕಾರಣರು. ಇಂಥ ಶ್ರೇಯಸ್ಸಿನ ಪೈ ಅವರು 1977ರಲ್ಲಿ ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಪ್ರಚಂಡ ಜಯ ದಾಖಲಿಸಿದರು. ಆದರೆ ಇವರ ಬಗ್ಗೆ ವೈಯಕ್ತಿಕ ಕಾರಣಕ್ಕೆ ಮುನಿಸು ಹೊಂದಿದ್ದ ಇಂದಿರಾ ಗಾಂಧಿ ಅವರು 1980ರ ಚುನಾವಣೆಯಲ್ಲಿ ಟಿಕೆಟ್‌ ನಿರಾಕರಿಸಿದರು. ಅಷ್ಟೇ ಅಲ್ಲ ಇವರ ಶಿಷ್ಯರಾಗಿದ್ದ ಆಸ್ಕರ್‌ ಫೆರ್ನಾಂಡಿಸ್‌ ಅವರಿಗೆ ಟಿಕೆಟ್‌ ನೀಡಿ ಅಚ್ಚರಿ ಮೂಡಿಸಿದರು.

ಪುರಸಭೆ ಸದಸ್ಯರಾಗಿ ಉಡುಪಿಗೆ ಸೀಮಿತರಾಗಿ ಓಡಾಡಿಕೊಂಡಿದ್ದ, ಲೋಕಸಭೆಯ ಕನಸೂ ಕಾಣದಿದ್ದ ಯುವಕ ಆಸ್ಕರ್‌ ಫೆರ್ನಾಂಡಿಸ್‌ ರಾತ್ರಿ ಬೆಳಗಾಗುವಷ್ಟರಲ್ಲಿ ಫೇಮಸ್‌ ಆಗಿ ಬಿಟ್ಟರು. ಟಿ.ಎ. ಪೈ ಅವರು ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ (ಯು) ಪಕ್ಷದಿಂದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಅಂದ ಹಾಗೆ ಈ ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ (ಯು) ಎನ್ನುವುದು ಇಂದಿರಾ ಗಾಂಧಿ ಅವರ ವಿರುದ್ಧ ಬಂಡೆದ್ದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ಸ್ಥಾಪಿಸಿದ ಪಕ್ಷವಾಗಿತ್ತು.

ಅಂದಿನ ಚುನಾವಣೆಯಲ್ಲಿ ಟಿ.ಎ.ಪೈ ಅವರು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು! ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿ.ಎಸ್‌. ಆಚಾರ್ಯ ಎರಡನೇ ಸ್ಥಾನ ಪಡೆದರು. ಆಸ್ಕರ್‌ ಫೆರ್ನಾಂಡಿಸ್‌ ಸಂಸದರಾಗಿ ಆಯ್ಕೆಯಾದರು.
ಮುಂದಿನ 1984ರ ಚುನಾವಣೆಯಲ್ಲಿ ಆಸ್ಕರ್‌ ಫರ್ನಾಂಡಿಸ್‌ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನ್ಯಾ. ಕೆ.ಎಸ್‌. ಹೆಗ್ಡೆ ಅವರನ್ನೇ ಸೋಲಿಸಿದರು. ನ್ಯಾ. ಹೆಗ್ಡೆ ಅವರು 1977ರಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಜನತಾ ಪರಿವಾರದ ಅಭ್ಯರ್ಥಿಯಾಗಿ ಗೆದ್ದಿದ್ದರು. ಹೀಗೆ ಆಸ್ಕರ್‌ ಫರ್ನಾಂಡಿಸ್‌ ನಿರಂತರ ನಾಲ್ಕು ಬಾರಿ ಉಡುಪಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು.

ಇದನ್ನೂ ಓದಿ: Parliament Flashback: ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿದ್ದ ಕಾಂಗ್ರೆಸ್‌ ಕಿರುಕುಳದಿಂದಾಗಿ ಪ್ರಧಾನಿ ಹುದ್ದೆ ತೊರೆದಿದ್ದ ದೇವೇಗೌಡರು!

ಆದರೆ 1998ರಲ್ಲಿ ಬಿಜೆಪಿಯ ಐ.ಎಂ. ಜಯರಾಂ ಶೆಟ್ಟಿ ಅವರೆದುರು ಆಸ್ಕರ್‌ ಫೆರ್ನಾಂಡಿಸ್‌ ಸೋತು ಹೋದರು. ಮತ್ತೆಂದೂ ಅವರು ಲೋಕಸಭೆಗೆ ಸ್ಪರ್ಧಿಸಲು ಹೋಗಲಿಲ್ಲ. ಬದಲಿಗೆ ನಾಲ್ಕು ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾದರು. ಇಂದಿರಾ ಗಾಂಧಿ, ರಾಜೀವ್‌ ಗಾಂಧಿ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಆಪ್ತರಾಗಿದ್ದ ಆಸ್ಕರ್‌, ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಪ್ರಮುಖ ಖಾತೆಯನ್ನು ನಿರ್ವಹಿಸಿದ್ದರು. 2021ರಲ್ಲಿ ಆಸ್ಕರ್‌ ಫೆರ್ನಾಂಡಿಸ್‌ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದರು.

Continue Reading

ದೇಶ

Drugs Smuggling: ಗುಜರಾತ್‌ನಲ್ಲಿ ಪಾಕ್‌ನ 14 ಜನರ ಬಂಧನ, 600 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ!

Drugs Smuggling: ಗುಜರಾತ್‌ ಕರಾವಳಿ ಪ್ರದೇಶದಲ್ಲಿ ಕರಾವಳಿ ರಕ್ಷಣಾ ಪಡೆ, ಭ್ರಷ್ಟಾಚಾರ ನಿಗ್ರಹ ದಳ (ATS) ಹಾಗೂ ಮಾದಕವಸ್ತು ನಿಯಂತ್ರಣ ಬ್ಯೂರೋ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಹಡಗನ್ನು ವಶಪಡಿಸಿಕೊಳ್ಳಲಾಗಿದೆ. 600 ಕೋಟಿ ರೂ. ಮೌಲ್ಯದ ಮಾದಕವಸ್ತುವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

VISTARANEWS.COM


on

Drugs Smuggling
Koo

ಗಾಂಧಿನಗರ: ಗುಜರಾತ್‌ ಬಳಿಯ ಸಾಗರ ಪ್ರದೇಶದಲ್ಲಿ (Gujarat) ಮಹತ್ವದ ಕಾರ್ಯಾಚರಣೆಯೊಂದನ್ನು ನಡೆಸಲಾಗಿದ್ದು, ಪಾಕಿಸ್ತಾನದ ಹಡಗನ್ನು ತಡೆಯಲಾಗಿದೆ. ಹಡಗಿನಲ್ಲಿ 600 ಕೋಟಿ ರೂ. ಮೌಲ್ಯದ 14 ಕೆ.ಜಿ ಮಾದಕವಸ್ತು ಸಿಕ್ಕಿದ್ದು, ಅಕ್ರಮ ಸಾಗಣೆ ಹಿನ್ನೆಲೆಯಲ್ಲಿ ಪಾಕಿಸ್ತಾನದ (Pakistan) 14 ಜನರನ್ನು ಬಂಧಿಸಲಾಗಿದೆ. ಪಾಕಿಸ್ತಾನದಿಂದ ಭಾರತಕ್ಕೆ ಅಕ್ರಮವಾಗಿ ಮಾದಕವಸ್ತು ಸಾಗಣೆ (Drugs Smuggling) ಮಾಡಲಾಗುತ್ತಿರುವ ಕುರಿತು ನಿಖರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ, ಡ್ರಗ್ಸ್‌ಅನ್ನು ವಶಪಡಿಸಿಕೊಳ್ಳಲಾಗಿದೆ.

ನಿಖರ ಮಾಹಿತಿ ಮೇರೆಗೆ ಕರಾವಳಿ ರಕ್ಷಣಾ ಪಡೆ, ಭ್ರಷ್ಟಾಚಾರ ನಿಗ್ರಹ ದಳ (ATS) ಹಾಗೂ ಮಾದಕವಸ್ತು ನಿಯಂತ್ರಣ ಬ್ಯೂರೋದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. “ಪಾಕಿಸ್ತಾನದ 14 ನಾಗರಿಕರನ್ನು ಬಂಧಿಸಲಾಗಿದ್ದು, ಮಾದಕವಸ್ತುವನ್ನು ಜಪ್ತಿ ಮಾಡಲಾಗಿದೆ. ಪ್ರಕರಣದ ಕುರಿತು ಇನ್ನಷ್ಟು ತನಿಖೆ ನಡೆಸಲಾಗುತ್ತಿದೆ” ಎಂಬುದಾಗಿ ಕರಾವಳಿ ರಕ್ಷಣಾ ಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ಮಾದಕವಸ್ತು ಸಾಗಣೆ ಮಾಡುತ್ತಿದ್ದ ಹಡಗನ್ನು ವಶಪಡಿಸಿಕೊಳ್ಳಲು ಅಧಿಕಾರಿಗಳು ಕರಾವಳಿ ರಕ್ಷಣಾ ಪಡೆಯ ಒಂದು ನೌಕೆ ಹಾಗೂ ವಿಮಾನವನ್ನು ಬಳಸಿಕೊಳ್ಳಲಾಗಿದೆ. ರಾಜರತನ್‌ ಎಂಬ ನೌಕೆಯ ಮೂಲಕ ಅಧಿಕಾರಿಗಳು ಬೆನ್ನತ್ತಿ ಪಾಕಿಸ್ತಾನದ ನೌಕೆಯನ್ನು ಹಿಡಿಯಲಾಗಿದೆ. ಗುಪ್ತಚರ ಮೂಲಗಳಿಂದ ನಿಖರ ಮಾಹಿತಿ ಮೇರೆಗೆ ಶಂಕಾಸ್ಪದ ಹಡಗನ್ನು ತಡೆದ, ಪರಿಶೀಲನೆ ನಡೆಸಿದಾಗ ಡ್ರಗ್ಸ್‌ ಜಾಲ ಬಯಲಾಗಿದೆ” ಎಂದು ತಿಳಿಸಿದ್ದಾರೆ.

ಎರಡು ತಿಂಗಳ ಹಿಂದಷ್ಟೇ ಗುಜರಾತ್‌ ಸಾಗರ ಪ್ರದೇಶದಲ್ಲಿ ಇರಾನ್‌ನಿಂದ ಸಾಗಿಸಲಾಗುತ್ತಿದ್ದ ಸುಮಾರು 3 ಸಾವಿರ ಕೆ.ಜಿ ಡ್ರಗ್ಸ್‌ಅನ್ನು ವಶಪಡಿಸಿಕೊಳ್ಳಲಾಗಿತ್ತು. ನೌಕಾಪಡೆಯ ಪ್ರಕಾರ 3,089 ಕಿಲೋಗ್ರಾಂಗಳಷ್ಟು ಚರಸ್, 158 ಕೆಜಿ ಮೆಥಾಂಫೆಟಮೈನ್ ಮತ್ತು 25 ಕೆಜಿ ಮಾರ್ಫಿನ್ ಅನ್ನು ಒಳಗೊಂಡಿರುವ ಈ ಮಾದಕವಸ್ತು ವಶಪಡಿಸಿಕೊಳ್ಳುವಿಕೆಯು ಇತ್ತೀಚಿನ ದಿನಗಳಲ್ಲಿ ಬೃಹತ್‌ ಪ್ರಮಾಣದ್ದಾಗಿದೆ. ಪೋರಬಂದರ್‌ನ ಬಂದರಿನಲ್ಲಿ ನಡೆಸಿದ ಕಾರ್ಯಾಚರಣೆಯ ನಂತರ ಐವರು ವಿದೇಶಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿತ್ತು.

ಫೆಬ್ರವರಿ 27ರಂದು ಬಂಧಿತ ದೋಣಿ, ಸಿಬ್ಬಂದಿ ಮತ್ತು ನಿಷಿದ್ಧ ಮಾದಕ ವಸ್ತುಗಳನ್ನು ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲಾಯಿತು. ಕಣ್ಗಾವಲು ಕಾರ್ಯಾಚರಣೆಯ ಸಮಯದಲ್ಲಿ P8I LRMR ವಿಮಾನವು ಮಾಹಿತಿ ಸಂಗ್ರಹಿಸಿದ್ದು, ನಂತರ ಪ್ರತಿಕ್ರಿಯೆಯಾಗಿ ಕಾರ್ಯಾಚರಣೆಯನ್ನು ನಡೆಸಲಾಯಿತು. ಅನುಮಾನಾಸ್ಪದ ದೋಣಿಯನ್ನು ಯಶಸ್ವಿಯಾಗಿ ಪ್ರತಿಬಂಧಿಸಿ ಸೆರೆಹಿಡಿಯಲಾಯಿತು.

ಇದನ್ನೂ ಓದಿ: Student Death: ಅಮೆರಿಕದಲ್ಲಿ ಡ್ರಗ್ಸ್‌ ಗ್ಯಾಂಗ್‌ನಿಂದ ಅಪಹೃತನಾದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆ

Continue Reading

ದೇಶ

Trinmool Congress: ಟಿಎಂಸಿ ಕಾರ್ಯಕರ್ತನ ಭೀಕರ ಹತ್ಯೆ; ಬಿಜೆಪಿ ನಾಯಕಿ ಮೇಲೆ ಡೆಡ್ಲಿ ಅಟ್ಯಾಕ್‌!

Trinmool Congress:ಪಶ್ಚಿಮ ಬಂಗಾಳದ ರಾಜ್ಯ ರಾಜಧಾನಿ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್‌ನ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಟಿಎಂಸಿಯ ಕಾರ್ಯಕರ್ತನ ಬರ್ಬರ ಕೊಲೆಯಾಗಿದೆ. ಪ್ರತ್ಯೇಕ ಘಟನೆಯಲ್ಲಿ ಬಿಜೆಪಿ ನಾಯಕಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

VISTARANEWS.COM


on

Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜ್ಯ ರಾಜಧಾನಿ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್‌ (Trinmool Congress)ನ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಟಿಎಂಸಿ(TMC)ಯ ಕಾರ್ಯಕರ್ತನ ಬರ್ಬರ ಕೊಲೆಯಾಗಿದೆ. ಪ್ರತ್ಯೇಕ ಘಟನೆಯಲ್ಲಿ ಬಿಜೆಪಿ ನಾಯಕಿ(BJP Leader)ಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಬಾಗುಯಾಟಿ ಜಿಲ್ಲೆಯಲ್ಲಿ ಟಿಎಂಸಿಯ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತು. ಈ ಘಟನೆಯಲ್ಲಿ ಪೋಟ್ಲಾ ಎಂದೇ ಜನಪ್ರಿಯತೆ ಪಡೆದಿದ್ದ ಟಿಎಂಸಿ ಕಾರ್ಯಕರ್ತ ಸಂಜೀವ್‌ ದಾಸ್‌(Sanjeev Das) ಹತ್ಯೆಯಾಗಿದ್ದಾರೆ.

ನಿನ್ನೆ ತಡರಾತ್ರಿ ಅರ್ಜುನ್‌ಪುರದ ಪಶ್ಚಿಮ್‌ಪುರ ಪ್ರದೇಶದಲ್ಲಿ ಟಿಎಂಸಿಯ ಒಂದು ಬಣ ಕರೆಂಟ್‌ ಕಟ್‌ ಮಾಡಿದ ವಿಚಾರಕ್ಕೆ ಜಗಳ ಶುರುವಾಗಿತ್ತು. ಎರಡೂ ತಂಡಗಳ ಜಗಳ ತಾರಕಕ್ಕೇರಿ ಮಾರಾಮಾರಿ ನಡೆದಿದೆ. ಪರಸ್ಪರ ದೊಣ್ಣೆ, ಕಲ್ಲಿನಿಂದ ಬಡಿದಾಟ ನಡೆದಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸಂಜೀವ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಾಗುವ ಮೊದಲೇ ಆತ ಕೊನೆಯುಸಿರೆಳೆದಿದ್ದ. ಇನ್ನು ಘಟನೆಗೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಕಾಯ್ದೆಯಲ್ಲಿ ಒಟ್ಟು 11 ಕೇಸ್‌ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಲ್ಲೇಟು ಬಿದ್ದು ಕೆಳಗೆ ಬಿದ್ದಿದ್ದ ಸಂಜೀವ್‌ ಮೇಲೆ ದುಷ್ಕರ್ಮಿಗಳು ರಾಡ್‌ನಿಂದ ದಾಳಿ ನಡೆಸಿದ್ದರು ಎನ್ನಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 13 ಜನರ ವಿರುದ್ಧ ಕೇಸ್‌ ದಾಖಲಾಗಿದ್ದು, ಅವರನ್ನು ಅರೆಸ್ಟ್‌ ಮಾಡಲಾಗಿದೆ. ಘಟನೆ ಸಂಬಂಧ ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಸಂಜೀವ್‌ ದಾಸ್‌ ಹತ್ಯೆಗೆ ಖಂಡನೆ ವ್ಯಕ್ತಪಡಿಸಿರುವ ಅವರ ಕುಟುಂಬಸ್ಥರು ದುರ್ಘಟನೆಗೆ ಟಿಎಂಸಿಯನ್ನೇ ಹೊಣೆಯನ್ನಾಗಿದೆ.

ಬಿಜೆಪಿ ನಾಯಕಿ ಮೇಲೆ ಮಾರಣಾಂತಿಕ ಹಲ್ಲೆ

ಮತ್ತೊಂದೆಡೆ ದಕ್ಷಿಣ ಕೋಲ್ಕತಾದ ಆನಂದಪುರದಲ್ಲಿ ಬಿಜೆಪಿ ನಾಯಕಿ ಸರಸ್ವತಿ ಸರ್ಕಾರ್‌ ಮೇಲೆಯೂ ಮಾರಣಾಂತಿಕ ಹಲ್ಲೆ ನಡೆದಿದೆ. ಟಿಎಂಸಿ ಕಾರ್ಯಕರ್ತರು ಸರಸ್ವತಿ ಮೇಲೆ ಹರಿತವಾದ ಆಯುಧದಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಚುನಾವಣಾ ಬ್ಯಾನರ್‌ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಟಿಎಂಸಿ ನಾಯಕರ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ಆಕೆಯ ತಲೆಗೆ ಗಂಭೀರ ಗಾಯಗಳಾಗಿವೆ. ಆಕೆ ಪೊಲೀಸರಿಗೆ ದೂರು ನೀಡಿದ್ದಾರೆ. ಇನ್ನು ಈ ವಿಡಿಯೋವನ್ನು ಬಿಜೆಪಿ ಐಟಿ ಸೆಲ್‌ ನಿರ್ವಾಹಕ ಅಮಿತ್‌ ಮಾಳವಿಯಾ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ಪಶ್ಚಿಮ ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತರಾಗಿಲ್ಲ. ಬಿಜೆಪಿ ಕಸ್ಬಾ ಮಂಡಲ ಅಧ್ಯಕ್ಷೆ ಸರಸ್ವತಿ ಸರ್ಕಾರ್‌ ಮೇಲೆ ಟಿಎಂಸಿ ಗೂಂಡಾಗಳು ಹಲ್ಲೆ ಮಾಡಿದ್ದಾರೆ. ಬಂಗಾಳದ ಜನತೆ ಇದಕ್ಕೆ ತಕ್ಕ ಪಾಠ ಕಲಿಸೇ ಕಲಿಸುತ್ತಾರೆ.

ಇದನ್ನೂ ಓದಿ:Amit Shah: ಬಿಜೆಪಿ ಗೆದ್ದರೆ ಮುಸ್ಲಿಮರ ಮೀಸಲಾತಿ ಒಬಿಸಿಗೆ; ಅಮಿತ್‌ ಶಾ ಘೋಷಣೆ

ಸರಸ್ವತಿ ಗಂಭೀರವಾಗಿ ಗಾಯಗೊಂಡು ಪೊಲೀಸ್‌ ಠಾಣೆಯಲ್ಲಿ ಕುಳಿತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಬ್ಯಾನರ್‌ ಕಟ್ಟುತಿದ್ದ ಬಿಜೆಪಿಯ ಇಬ್ಬರು ಕಾರ್ಯಕರ್ತರ ಮೇಲೆ ಗೂಂಡಾಗಳು ದಾಳಿ ಮಾಡಿದ್ದರು, ಅದನ್ನು ತಡೆಯಲು ಮುಂದಾದ ಸರಸ್ವತಿ ಮೇಲೆ ದಾಳಿ ನಡೆದಿದೆ. ಇನ್ನು ಟಿಎಂಸಿ ಗೂಂಡಾ ವರ್ತನೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.

 
    
  


  

   

Continue Reading

ದೇಶ

Amit Shah: ಬಿಜೆಪಿ ಗೆದ್ದರೆ ಮುಸ್ಲಿಮರ ಮೀಸಲಾತಿ ಒಬಿಸಿಗೆ; ಅಮಿತ್‌ ಶಾ ಘೋಷಣೆ

Amit Shah: ಉತ್ತರ ಪ್ರದೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸುತ್ತದೆ ಎಂಬುದಾಗಿ ಅವರು ಸುಳ್ಳು ಹೇಳುತ್ತಿದ್ದಾರೆ. ಮೋದಿ ಅವರು ಮೀಸಲಾತಿಯ ಬೆಂಬಲಿಗರಾಗಿದ್ದಾರೆ ಎಂದು ಅಮಿತ್‌ ಶಾ ಹೇಳಿದ್ದಾರೆ.

VISTARANEWS.COM


on

Amit Shah
Koo

ಲಖನೌ:‌ ಕರ್ನಾಟಕ, ತೆಲಂಗಾಣದಲ್ಲಿ ಒಬಿಸಿ ಮೀಸಲಾತಿಯನ್ನು ಮುಸ್ಲಿಮರಿಗೆ (Muslims Reservation) ನೀಡಿರುವ ವಿಚಾರವು ಲೋಕಸಭೆ ಚುನಾವಣೆಯ ಪ್ರಮುಖ ವಿಷಯವಾಗಿದೆ. ಮೀಸಲಾತಿ ವಿಷಯವು ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ಮಧ್ಯೆ ತೀವ್ರ ವಾಗ್ವಾದ, ಟೀಕೆ, ಆಕ್ರೋಶಗಳಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ, “ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ನೀಡಿರುವ ಶೇ.4ರಷ್ಟು ಒಬಿಸಿ ಮೀಸಲಾತಿಯನ್ನು (OBC Reservation) ಮತ್ತೆ ಒಬಿಸಿಗೇ ನೀಡಲಾಗುವುದು” ಎಂದು ಅಮಿತ್‌ ಶಾ (Amit Shah) ಪುನರುಚ್ಚರಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ ಅವರು, “ಬಿಜೆಪಿಯು ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸುತ್ತದೆ ಎಂಬುದಾಗಿ ರಾಹುಲ್‌ ಗಾಂಧಿ ಅವರು ಸುಳ್ಳು ಹಬ್ಬಿಸುತ್ತಿದ್ದಾರೆ. ಸುಳ್ಳುಗಳಲ್ಲೇ ರಾಹುಲ್‌ ಗಾಂಧಿ ಅವರು ಚುನಾವಣೆ ಮುಗಿಸುತ್ತಿದ್ದಾರೆ. ಆದರೆ, ಒಂದು ನೆನಪಿರಲಿ, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಅಷ್ಟೇ ಅಲ್ಲ, ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸಲ್ಲ ಹಾಗೂ ಬೇರೆಯವರಿಗೂ ಬಿಡಲ್ಲ. ಇದು ಮೋದಿ ಅವರ ಗ್ಯಾರಂಟಿಯಾಗಿದೆ” ಎಂಬುದಾಗಿ ಅಮಿತ್‌ ಶಾ ಹೇಳಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರು ಮೀಸಲಾತಿಯನ್ನು ಬೆಂಬಲಿಸುತ್ತಾರೆ. ನರೇಂದ್ರ ಮೋದಿ ಸರ್ಕಾರ 400 ಕ್ಷೇತ್ರಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ನೀಡಿರುವ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಗೆ ನೀಡಲಾಗುತ್ತದೆ. ಇದು ಮೋದಿ ಅವರ ಗ್ಯಾರಂಟಿಯಾಗಿದೆ. ರಾಹುಲ್‌ ಗಾಂಧಿ ಅವರಿಗೆ ವಾಸ್ತವದ ಅರಿವಿಲ್ಲ. ಕೇಂದ್ರದಲ್ಲಿ ಎರಡು ಅವಧಿಯಲ್ಲಿ ಬಿಜೆಪಿಯೇ ಬಹುಮತದ ಸರ್ಕಾರ ರಚಿಸಿ, ಆಡಳಿತ ನಡೆಸಿದೆ ಎಂಬುದರ ಅರಿವಿಲ್ಲ. ಎರಡು ಅವಧಿ ಆಡಳಿತ ನಡೆಸಿದರು ಬಿಜೆಪಿಯು ಮೀಸಲಾತಿಯನ್ನು ತೆಗೆದಿಲ್ಲ” ಎಂದು ತಿಳಿಸಿದರು.

ಮೀಸಲಾತಿ ಕುರಿತ ಚರ್ಚೆಯ ಮಧ್ಯೆಯೇ, ಆರ್‌ಎಸ್‌ಎಸ್‌ ಮೀಸಲಾತಿಯನ್ನು ಬೆಂಬಲಿಸುತ್ತದೆ ಎಂದು ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಆರ್‌ಎಸ್‌ಎಸ್‌ ಮೀಸಲಾತಿಯನ್ನು ವಿರೋಧಿಸುತ್ತದೆ ಎಂದು ಹೇಳಿರುವ ವಿಡಿಯೊ ಹರಿದಾಡುತ್ತಿದೆ. ಆದರೆ, ಸಂಘ ಪರಿವಾರವು ಮೊದಲಿನಿಂದಲೂ ಮೀಸಲಾತಿಯನ್ನು ಬೆಂಬಲಿಸುತ್ತಲೇ ಬಂದಿದೆ. ಮುಂದಿನ ದಿನಗಳಲ್ಲೂ ಆರ್‌ಎಸ್‌ಎಸ್‌ ಮೀಸಲಾತಿಯನ್ನು ಬೆಂಬಲಿಸುತ್ತದೆ. ಸಮುದಾಯಗಳಿಗೆ ಎಲ್ಲಿಯವರೆಗೆ ಮೀಸಲಾತಿಯ ಅವಶ್ಯಕತೆ ಇದೆಯೋ, ಅಲ್ಲಿಯವರೆಗೆ ಮೀಸಲಾತಿಯನ್ನು ಮುಂದುವರಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: Mohan Bhagwat: ಆರ್‌ಎಸ್‌ಎಸ್‌ ಮೀಸಲಾತಿ ಪರ; ಮೋಹನ್‌ ಭಾಗವತ್‌ ದಿಢೀರನೆ ಹೀಗೆ ಹೇಳಿದ್ದೇಕೆ?

Continue Reading
Advertisement
Hassan Pen Drive Case
ಕರ್ನಾಟಕ1 min ago

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾದ ಸೆಕ್ಷನ್‌ಗಳು ಏನು ಹೇಳುತ್ತವೆ? ಆರೋಪ ಸಾಬೀತಾದ್ರೆ ಶಿಕ್ಷೆ ಏನು?

KKR vs DC
ಕ್ರಿಕೆಟ್20 mins ago

KKR vs DC: ಮೊದಲ ಸೋಲಿಗೆ ಸೇಡು ತೀರಿಸಿಕೊಂಡೀತೇ ಡೆಲ್ಲಿ?; ಕೆಕೆಆರ್​ ಎದುರಾಳಿ

Karnataka Drought Relief HDK accuses Congress government of lying says HD Kumarswamy
ರಾಜಕೀಯ23 mins ago

Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ

Parliament Flashback
Lok Sabha Election 202423 mins ago

Parliament Flashback: ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ ಮತ್ತು ಸುಷ್ಮಾ ಸ್ವರಾಜ್‌ ಮಧ್ಯೆ ನಡೆದಿತ್ತು ಐತಿಹಾಸಿಕ ಕದನ!

Hassan Pen Drive Case
ಕರ್ನಾಟಕ44 mins ago

Hassan Pen Drive Case: ಪ್ರಜ್ವಲ್‌ ಜತೆಗೆ ಎಚ್‌.ಡಿ.ರೇವಣ್ಣ ಮೇಲೂ ಎಫ್‌ಐಆರ್‌; ದೂರಿನಲ್ಲಿದೆ ಭಯಾನಕ ಡಿಟೇಲ್ಸ್‌!

Delivery Boy
ಕರ್ನಾಟಕ49 mins ago

Delivery Boy: ಬೆಂಗಳೂರಲ್ಲಿ ವ್ಯಕ್ತಿಯ ಗುಪ್ತಾಂಗ ಮುಟ್ಟಿ ದುರ್ವರ್ತನೆ ತೋರಿದ ಡೆಲಿವರಿ ಬಾಯ್‌ ಅಹ್ಮದ್!

Job Alert
ಉದ್ಯೋಗ49 mins ago

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆ ಖಾಲಿ ಇದೆ; ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

POCSO Case 7 year old girl attempted to rape on pretext of giving her chocolates
ಕರ್ನಾಟಕ54 mins ago

POCSO Case: ಚಾಕೋಲೆಟ್‌ ಕೊಡೋದಾಗಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಇಬ್ಬರು ಯುವಕರಿಗೆ ಧರ್ಮದೇಟು

Ishan Kishan
ಕ್ರೀಡೆ1 hour ago

Ishan Kishan: ಐಪಿಎಲ್​ ನೀತಿ ಸಂಹಿತೆ ಉಲ್ಲಂಘನೆ; ಇಶಾನ್​ ಕಿಶನ್​ಗೆ ಬಿತ್ತು ದಂಡದ ಬರೆ

5 PM for 5 years if Congress comes to power says PM Narendra Modi
Lok Sabha Election 20241 hour ago

PM Narendra Modi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ; ಕರ್ನಾಟಕದಲ್ಲಿ ಶಿಕ್ಷಣ ನೀತಿಯಲ್ಲೂ ರಾಜಕೀಯ: ಮೋದಿ ಕಿಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20242 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20246 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20247 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ9 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌