Site icon Vistara News

Ram Mandir: ಬಾಲ ರಾಮನ ವಿಗ್ರಹಕ್ಕೆ ಕೃಷ್ಣ ಶಿಲೆಯನ್ನೇ ಏಕೆ ಬಳಸಿದ್ದು?

Ram Lalla Face

Ram Lalla Idol Viral Photo Is Not Original: Says Ram Mandir chief priest Acharya Satyendra Das

ನವದೆಹಲಿ: ರಾಮ ಮಂದಿರ (Ram Mandir) ಉದ್ಘಾಟನೆ ಸಮಾರಂಭವು ಭಾರೀ ಅದ್ಧೂರಿಯಿಂದ ನಡೆದಿದೆ. ರಾಮ ಲಲ್ಲಾ (Ram Lalla) ವಿಗ್ರಹವನ್ನು ಭಕ್ತರು ಕಣ್ತುಂಬಿಕೊಳ್ಳುತ್ತಿದ್ದಾರೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿರುವ ಈ ರಾಮ ಲಲ್ಲಾ ವಿಗ್ರಹದಲ್ಲಿನ ದೈವಿ ಕಳೆ ಭಕ್ತರನ್ನು ಮನಸೂರೆಗೊಳ್ಳುತ್ತಿದೆ. ಈ ಮಧ್ಯೆ, ರಾಮ ಲಲ್ಲಾ ವಿಗ್ರಹಕ್ಕೆ ಕಪ್ಪು ಶಿಲೆ ಅಥವಾ ಕೃಷ್ಣ ಶಿಲೆಯನ್ನು (Krishna Shila) ಯಾಕೆ ಬಳಸಲಾಗಿದೆ ಎಂಬ ಪ್ರಶ್ನೆ ಭಕ್ತರಲ್ಲಿ ಎದುರಾಗಿದೆ. ಈ ಶಿಲೆ ಬಳಸುವುದಕ್ಕೂ ಕಾರಣವಿದೆ.

ರಾಮಲಲ್ಲಾ ವಿಗ್ರಹಕ್ಕೆ ಚಾಮರಾಜನಗರ ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಬುಜ್ಜೆಗೌಡನಪುರ ಗ್ರಾಮದ ಕೃಷ್ಣ ಶಿಲೆ ಬಳಕೆ ಮಾಡಲಾಗಿದೆ. ಕೃಷ್ಣ ಶಿಲೆ ಅತ್ಯಂತ ಶಕ್ತಿಶಾಲಿಯಾಗಿದ್ದು ಆಸಿಡ್‌ ಹಾಕಿದರೂ ಏನೂ ಆಗುವುದಿಲ್ಲ. ಇದಕ್ಕೆ ಬೆಂಕಿ ತಗುಲುವುದಿಲ್ಲ, ತುಕ್ಕು ಹಿಡಿಯುವುದಿಲ್ಲ. ಮಳೆ, ಗಾಳಿ, ಬಿಸಿಲನ್ನೂ ತಡೆದುಕೊಳ್ಳುವ ಶಕ್ತಿಯ ಕಲ್ಲು ಇದು. ಹಿಂದೆ ಶಂಕರಾಚಾರ್ಯರ ಮೂರ್ತಿಯನ್ನು ಮಾಡಿದ ಎಚ್.ಡಿ.ಕೋಟೆಯ ಕೃಷ್ಣ ಶಿಲೆಯಲ್ಲೇ ಇದನ್ನು ರಚಿಸಲಾಗಿದೆ. ಈ ಎಲ್ಲ ಕಾರಣದಿಂದ ರಾಮಲಲ್ಲಾ ವಿಗ್ರಹಕ್ಕೆ ಕೃಷ್ಣ ಶಿಲೆಯನ್ನು ಬಳಸಲಾಗಿದೆ.

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೆತ್ತನೆಯ ರಾಮ ಲಲ್ಲಾ ವಿಗ್ರಹವು ಆಯ್ಕೆಯಾಗಲು ಕಾರಣವಿದೆ. ಈ ವಿಗ್ರಹದ ಮುಖದಲ್ಲಿನ ತೇಜಸ್ಸು ಮುಖ್ಯ ಕಾರಣವಾಗಿದೆ. ಅದರಲ್ಲಿ ಹೆಚ್ಚು ದೈವಿಕ ಭಾವವಿದೆ ಎಂಬುದನ್ನು ತೀರ್ಪುಗಾರರು ಮನಗಂಡಿದ್ದಾರೆ. ಪ್ರಾಣಪ್ರತಿಷ್ಠೆಯಾಗಿರುವ ವಿಗ್ರಹವು ಬಾಲ ರಾಮನಾಗಿದೆ ಎಂಬುದು ಇಲ್ಲಿ ಗಮನಾರ್ಹ. ಅಂತೆಯೇ ಅರುಣ್ ಅವರ ಕೆತ್ತನೆಯ ವಿಗ್ರಹದಲ್ಲಿ ಮುಗ್ಧ ಮಗುವಿನ ಸುಂದರ ನೋಟವಿದೆ. ಬಾಲ ರಾಮದೇವರು ಸಾಕ್ಷಾತ್ ಮಂದೆ ನಿಂತಿರುವಂತೆ ಕಾಣುವ ಮೂರ್ತಿಯನ್ನು ಅವರು ಕೆತ್ತಿದ್ದಾರೆ. ಅಲ್ಲದೆ ಹೆಚ್ಚು ನೈಜತೆಯಿಂದ ಕೂಡಿದೆ.

ಅರುಣ್​ ಅವರು ಕೆತ್ತಿರುವ ಐದು ವರ್ಷದ ಬಾಲ ರಾಮನ ಮೂರ್ತಿಯ ಕೈಯಲ್ಲಿ ಧನಸ್ಸು ಹಾಗೂ ಬಾಣವಿದೆ. ರಾಮನ ಮೂರ್ತಿಯು 51 ಇಂಚು ಎತ್ತರವಿದ್ದರೆ ಪ್ರಭಾವಳಿ ಸೇರಿದಂತೆ ಒಟ್ಟು ವಿಗ್ರಹ 8 ಅಡಿ ಎತ್ತರ ಹಾಗೂ ಮೂರುವರೆ ಅಡಿ ಅಗಲವಿದೆ. ಇದು ತೇಜಸ್ಸಿನಿಂದ ಕಂಗೊಳಿಸುತ್ತಿದೆ. ಒಟ್ಟಾರೆಯಾಗಿ ಕೋಟ್ಯಂತರ ರಾಮಭಕ್ತರ ಪೂಜೆಗೆ ಅರ್ಹವಾಗಿದೆ ಎಂದು ತೀರ್ಪುಗಾರರು ಅದನ್ನೇ ಆಯ್ಕೆ ಮಾಡಿದ್ದಾರೆ.

ಅಯೋಧ್ಯೆಯಲ್ಲಿ ಉಮಾ ಭಾರತಿ- ಸಾಧ್ವಿ ರಿತಂಬರಾ ಸಮಾಗಮ, ಹರಿದ ಆನಂದಭಾಷ್ಪ!

ಅಯೋಧ್ಯೆಯ ರಾಮ ಮಂದಿರ (Ayodhya Ram Mandir) ಉದ್ಘಾಟನೆಯು ಹಲವು ಭಾವನಾತ್ಮಕ ಕ್ಷಣಗಳಿಗೂ ಸಾಕ್ಷಿಯಾಯಿತು. ರಾಮ ಜನ್ಮಭೂಮಿ ಹೋರಾಟದಲ್ಲಿ (Ram Janmahbumi Andolan) ಮುಂಚೂಣಿಯಲ್ಲಿದ್ದ ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ (Uma Bharti) ಮತ್ತು ಸಾಧ್ವಿ ರಿತಂಭರಾ (Sadhvi Rithambhara) ಅವರು ಸಂತೋಷದ ಕಣ್ಣೀರಿಟ್ಟರು. ಇಬ್ಬರು ನಾಯಕಿಯರೂ ಪರಸ್ಪರ ಆಲಿಂಗಿಸಿಕೊಂಡು, ಆನಂದಭಾಷ್ಪ ಸುರಿಸಿದರು.

ಸೋಮವಾರ ನಡೆದ ಬಹುನಿರೀಕ್ಷಿತ ರಾಮ ಮಂದಿರ ಉದ್ಘಾಟನೆಯ ಸಂತೋಷ ಮತ್ತು ಸಂಭ್ರಮವನ್ನು ಆಚರಿಸುತ್ತಾ, ಸಾಧ್ವಿಗಳಿಬ್ಬರೂ ಪರಸ್ಪರ ಅಭಿನಂದಿಸಿದರು. ಇಬ್ಬರು ಕಣ್ಣೀರನ್ನು ತಡೆಯುವ ಪ್ರಯತ್ನ ಮಾಡಿದರು. ಆದರೂ ಅದರಲ್ಲಿ ಅವರು ಸೋತರು.

ರಾಮ ಜನ್ಮಭೂಮಿ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿ ಉಮಾ ಭಾರತಿ ಅವರು, ನಾನು ಅಯೋಧ್ಯೆಯ ರಾಮ ಮಂದಿರದ ಮುಂದೆ ಇದ್ದೇನೆ, ನಾವು ರಾಮ್ ಲಲ್ಲಾಗಾಗಿ ಕಾಯುತ್ತಿದ್ದೇವೆ ಎಂದು ಫೋಟೋದೊಂದಿಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ‘ಪ್ರಾಣ ಪ್ರತಿಷ್ಠಾಪನೆ’ ವಿಧಿವಿಧಾನಗಳಿಗಾಗಿ ಭವ್ಯ ಮಂದಿರದ ಮೆಟ್ಟಿಲುಗಳನ್ನು ಏರುವ ನಿಮಿಷಗಳ ಮೊದಲು ಅವರು ಈ ಫೋಟೋವನ್ನು ಷೇರ್ ಮಾಡಿದ್ದರು.

ಈ ಸುದ್ದಿಯನ್ನೂ ಓದಿ: Ram Mandir: ರಾಜ್ಯದೆಲ್ಲೆಡೆ ಬೆಳಗಿದ ರಾಮ ಜ್ಯೋತಿ; ದೀಪೋತ್ಸವ ಸಂಭ್ರಮದ ಕ್ಷಣಗಳು ಇಲ್ಲಿವೆ

Exit mobile version